‘ನಮ್ ಪೈಕಿ ಒಬ್ಬ ಹೋಗ್ಬುಟ..​’ ಕುಲದಲ್ಲಿ ಕೀಳ್ಯಾವುದೊ ಚಿತ್ರಕ್ಕೆ ವಿಶೇಷ ಹಾಡು ಬರೆದ ವಿಕಟ ಕವಿ ಯೋಗರಾಜ್‌ ಭಟ್‌
ಕನ್ನಡ ಸುದ್ದಿ  /  ಮನರಂಜನೆ  /  ‘ನಮ್ ಪೈಕಿ ಒಬ್ಬ ಹೋಗ್ಬುಟ..​’ ಕುಲದಲ್ಲಿ ಕೀಳ್ಯಾವುದೊ ಚಿತ್ರಕ್ಕೆ ವಿಶೇಷ ಹಾಡು ಬರೆದ ವಿಕಟ ಕವಿ ಯೋಗರಾಜ್‌ ಭಟ್‌

‘ನಮ್ ಪೈಕಿ ಒಬ್ಬ ಹೋಗ್ಬುಟ..​’ ಕುಲದಲ್ಲಿ ಕೀಳ್ಯಾವುದೊ ಚಿತ್ರಕ್ಕೆ ವಿಶೇಷ ಹಾಡು ಬರೆದ ವಿಕಟ ಕವಿ ಯೋಗರಾಜ್‌ ಭಟ್‌

ಕಾಮಿಡಿ ಕಿಲಾಡಿಗಳು ಖ್ಯಾತಿಯ ಮಡೆನೂರ್ ಮನು ನಾಯಕನಾಗಿ ನಟಿಸಿರುವ ಕುಲದಲ್ಲಿ ಕೀಳ್ಯಾವುದೊ ಚಿತ್ರದ ‘ನಮ್ ಪೈಕಿ ಒಬ್ಬ ಹೋಗ್ಬುಟ..​’ ಹಾಡು ಇತ್ತೀಚೆಗೆ ಬಿಡುಗಡೆ ಆಗಿದೆ. ಈ ಹಾಡಿಗೆ ಯೋಗರಾಜ್‌ ಭಟ್‌ ಸಾಹಿತ್ಯ ಬರೆದಿದ್ದಾರೆ.

ಕುಲದಲ್ಲಿ ಕೀಳ್ಯಾವುದೊ ಚಿತ್ರಕ್ಕೆ ವಿಶೇಷ ಹಾಡು ಬರೆದ ವಿಕಟ ಕವಿ ಯೋಗರಾಜ್‌ ಭಟ್‌
ಕುಲದಲ್ಲಿ ಕೀಳ್ಯಾವುದೊ ಚಿತ್ರಕ್ಕೆ ವಿಶೇಷ ಹಾಡು ಬರೆದ ವಿಕಟ ಕವಿ ಯೋಗರಾಜ್‌ ಭಟ್‌

Kuladalli Keelyavudo Song: ಸ್ಯಾಂಡಲ್‌ವುಡ್‌ ವಿಕಟ ಕವಿ ಯೋಗರಾಜ್‌ ಭಟ್‌ ಬರೀ ಸಿನಿಮಾ ನಿರ್ದೇಶನದಿಂದಷ್ಟೇ ಅಲ್ಲ, ಹಾಡುಗಳಿಗೆ ಸಾಹಿತ್ಯ ಬರೆಯುವ ಮೂಲಕವೂ ಹೆಚ್ಚು ಜನಪ್ರಿಯತೆ ಗಿಟ್ಟಿಸಿಕೊಂಡಿದ್ದಾರೆ. ಹಾಡುಗಳ ಸಾಹಿತ್ಯದಲ್ಲಿ ಯಾರೂ ಮಾಡದ ಒಂದಷ್ಟು ಪ್ರಯೋಗಗಳನ್ನು ಮಾಡಿದ್ದಾರವರು. ಇದೀಗ, ಇದೇ ಭಟ್ಟರು ಮತ್ತೊಂದು ಹೊಸ ಹಾಡಿನ ಮೂಲಕ ಆಗಮಿಸಿದ್ದಾರೆ. ಕುಲದಲ್ಲಿ ಕೀಳ್ಯಾವುದೋ ಚಿತ್ರಕ್ಕೆ ಕ್ಯಾಚಿ ಲಿರಿಕ್ಸ್‌ವುಳ್ಳ ಹಾಡನ್ನು ಬರೆದಿದ್ದಾರೆ.

ಪ್ರಸ್ತುತ ಯೋಗರಾಜ್ ಭಟ್ ಅವರು "ಕಾಮಿಡಿ ಕಿಲಾಡಿಗಳು" ಖ್ಯಾತಿಯ ಮಡೆನೂರ್ ಮನು ನಾಯಕನಾಗಿ ನಟಿಸಿರುವ ಕುಲದಲ್ಲಿ ಕೀಳ್ಯಾವುದೊ ಚಿತ್ರಕ್ಕೆ "ನಮ್ ಪೈಕಿ ಒಬ್ಬ ಹೋಗ್ಬುಟ.." ಎಂಬ ಹಾಡನ್ನು ಬರೆದಿದ್ದಾರೆ. ಮನೋಮೂರ್ತಿ ಅವರು ಸಂಗೀತ ನೀಡಿದ್ದಾರೆ. ಖ್ಯಾತ ಗಾಯಕ ಆಂಥೋನಿ ದಾಸ್ ಅವರ ಕಂಠಸಿರಿಯಲ್ಲಿ‌ ಈ ಹಾಡು ಮೂಡಿಬಂದಿದೆ. ಇತ್ತೀಚೆಗೆ ಈ ಹಾಡು ಬಿಡುಗಡೆ ಸಮಾರಂಭ ನಡೆಯಿತು. ನಾಯಕ ನಟ ಮನು ಬ್ಯಾಂಡ್ ಬಾರಿಸಿಕೊಂಡು ಬ್ಯಾಂಡ್ ಸೆಟ್ ಅವರ ಹಾಗೂ ಅರ್ಕೆಸ್ಟ್ರಾ ಕಲಾವಿದರ ಜೊತೆಗೆ ವೇದಿಕೆಗೆ ಬಂದು ಈ‌ ಹಾಡನ್ನು ಬಿಡುಗಡೆ ಮಾಡಿದ್ದು ವಿಶೇಷವಾಗಿತ್ತು. ಹಾಡು ಬಿಡುಗಡೆ ನಂತರ ಚಿತ್ರತಂಡದ ಸದಸ್ಯರು ಮಾತನಾಡಿದರು.

ಹಾಡಿನ ಬಗ್ಗೆ ಭಟ್ಟರು ಹೇಳಿದ್ದೇನು?

ನನಗೆ ಕಾಮಿಡಿ ಕಿಲಾಡಿಗಳು ಸಮಯದಲ್ಲಿ ಮನು ನಟನೆ ನೋಡಿ ನೀನು ಇಲ್ಲಿ ಮಾತ್ರ ಅಲ್ಲ. ಸಿನಿಮಾಗೂ ಸಲ್ಲುವವನು ಅಂತ ಹೇಳಿದ್ದೆ. ಈ ಚಿತ್ರದ ಕಥೆ ನಾನು ಹಾಗೂ ಇಸ್ಲಾಮುದ್ದೀನ್ ಸೇರಿ ಬರೆದಿದ್ದೇವೆ‌. ಈ ಕಥೆಗೆ ಮನು ಸೂಕ್ತ ನಾಯಕ. ಯೋಗರಾಜ್ ಸಿನಿಮಾಸ್ ಅರ್ಪಿಸುತ್ತಿರುವ ಈ ಚಿತ್ರವನ್ನು ಪರ್ಲ್ ಸಿನಿ ಕ್ರಿಯೇಷನ್ಸ್ ಬ್ಯಾನರ್‌ನಲ್ಲಿ ಸಂತೋಷ್ ಹಾಗೂ ವಿದ್ಯಾ ದಂಪತಿ ನಿರ್ಮಾಣ ಮಾಡುತ್ತಿದ್ದಾರೆ. ರಾಮ್ ನಾರಾಯಣ್ ನಿರ್ದೇಶಿಸುತ್ತಿದ್ದಾರೆ. ಮನೋಮೂರ್ತಿ ಸಂಗೀತ ನೀಡಿದ್ದಾರೆ. ಇನ್ನು ಇಂದು ಬಿಡುಗಡೆಯಾಗಿರುವ ಈ ಹಾಡನ್ನು ನಾನು ಬರೆಯಲು ಮನೋಮೂರ್ತಿ ಅವರ ಕಾರು ಚಾಲಕ ಸ್ಪೂರ್ತಿ‌. ಆತ ಇಂದು ನಮ್ಮೊಂದಿಗಿಲ್ಲ. ಆತನ ಸಾವು ಹಾಗೂ ಆನಂತರ ನಡೆದ ಸನ್ನಿವೇಶಗಳೇ ನಾನು ಹಾಡು ಬರೆಯಲು ಕಾರಣ ಎಂದರು ಯೋಗರಾಜ್ ಭಟ್.

ನಾನು ನನ್ನ ಜಾನರ್ ಹೊರತು ಪಡಿಸಿ ಸಂಗೀತ ನೀಡಿರುವ ಎರಡನೇ ಚಿತ್ರ ಇದು. ಇಂದು ಬಿಡುಗಡೆಯಾಗಿರುವ ಈ ಹಾಡನ್ನು ಯೋಗರಾಜ್ ಭಟ್ ಮನಮುಟ್ಟುವ ಹಾಗೆ ಬರೆದಿದ್ದಾರೆ ಎಂದು ಸಂಗೀತ ನಿರ್ದೇಶಕ ಮನೋಮೂರ್ತಿ ಹೇಳಿದರು.

ದೊಡ್ಡ ಕನಸು ಈಡೇರಿದೆ..

ನನಗೆ ಒಂದು ದೊಡ್ದ ಬ್ಯಾನರ್‌ನಲ್ಲಿ ನಟಿಸುವ ಆಸೆ ಇತ್ತು. ಅದು ಈ ಚಿತ್ರದ ಮೂಲಕ ಈಡೇರಿದೆ ಎಂದು ಮಾತು ಆರಂಭಿಸಿದ ನಾಯಕ ಮಡೆನೂರ್ ಮನು, ಈ ಚಿತ್ರದಲ್ಲಿ ನಟಿಸಲು ಅವಕಾಶ ನೀಡಿದ ನಿರ್ಮಾಪಕರಿಗೆ ಹಾಗೂ ಯೋಗರಾಜ್ ಭಟ್ ಅವರಿಗೆ ಧನ್ಯವಾದ. ನಾನು ಮೂಲತಃ ಆರ್ಕೇಸ್ಟ್ರಾ ಕಲಾವಿದ. ಈ ಚಿತ್ರದಲ್ಲೂ ನನ್ನದು ಅದೇ ಪಾತ್ರ ಎಂದರು ಮಡೆನೂರ್‌ ಮನು.

ನಿರ್ದೇಶಕರ ಮಾತು

ಬಾಬು ಎಂಬ ನನ್ನ ಸ್ನೇಹಿತನಿಂದ ನನಗೆ ಈ ಚಿತ್ರತಂಡದ ಪರಿಚಯವಾಯಿತು ಎಂದು ಮಾತನಾಡಿದ ನಿರ್ದೇಶಕ ರಾಮ್ ನಾರಾಯಣ್, ತಾವೇ ಒಬ್ಬ‌ ನಿರ್ದೇಶಕನಾಗಿದರೂ ನನಗೆ ಸಿನಿಮಾ ನಿರ್ದೇಶನಕ್ಕೆ ಅವಕಾಶ ಕೊಟ್ಟಿದ್ದು ಅವರ ದೊಡ್ಡ ಗುಣ. ಇನ್ನೂ ಮನೋಮೂರ್ತಿ ಅವರ ಸಂಗೀತ ನಿರ್ದೇಶನದಲ್ಲಿ ಈ ಚಿತ್ರದ ಎಲ್ಲಾ ಹಾಡುಗಳು ಚೆನ್ನಾಗಿ ಬಂದಿದೆ. ಇಂದು ಮೊದಲ ಹಾಡು ಬಿಡುಗಡೆಯಾಗಿದೆ ಎಂದರು. ಚಿತ್ರದಲ್ಲಿ ಮಡೆನೂರ್ ಮನು, ಮೌನ ಗುಡ್ಡೆಮನೆ, ಶರತ್ ಲೋಹಿತಾಶ್ವ, ತಬಲನಾಣಿ, ಸೋನಾಲ್ ಮೊಂತೆರೊ, ಕರಿಸುಬ್ಬು, ಡ್ಯಾಗನ್ ಮಂಜು, ಸೀನ ಮುಂತಾದವರು ನಟಿಸಿದ್ದಾರೆ.

Whats_app_banner