ಕನ್ನಡ ಸುದ್ದಿ  /  ಮನರಂಜನೆ  /  ಟರ್ಬೊ ಟ್ರೇಲರ್‌ ಬಿಡುಗಡೆ: ಮಮ್ಮುಟ್ಟಿ ಜತೆ ರಾಜ್‌ ಬಿ ಶೆಟ್ಟಿ ನಟಿಸಿರುವ ಪ್ಯಾನ್‌ ಇಂಡಿಯಾ ಚಿತ್ರ ಮುಂದಿನ ವಾರ ರಿಲೀಸ್‌

ಟರ್ಬೊ ಟ್ರೇಲರ್‌ ಬಿಡುಗಡೆ: ಮಮ್ಮುಟ್ಟಿ ಜತೆ ರಾಜ್‌ ಬಿ ಶೆಟ್ಟಿ ನಟಿಸಿರುವ ಪ್ಯಾನ್‌ ಇಂಡಿಯಾ ಚಿತ್ರ ಮುಂದಿನ ವಾರ ರಿಲೀಸ್‌

Turbo Movie: ಕನ್ನಡದ ಖ್ಯಾತ ನಟ ರಾಜ್‌ ಬಿ ಶೆಟ್ಟಿ ನಟಿಸಿರುವ ಮಲಯಾಳಂ ಸಿನಿಮಾ ಟರ್ಬೊ ಮುಂದಿನ ವಾರ ಬಿಡುಗಡೆಯಾಗಲಿದೆ. ಮಮ್ಮುಟ್ಟಿ ಪ್ರಮುಖ ಪಾತ್ರದಲ್ಲಿ ನಟಿಸಿರುವ ಈ ಚಿತ್ರದ ಟ್ರೇಲರ್‌ ಬಿಡುಗಡೆಯಾಗಿದೆ.

ಟರ್ಬೊ ಟ್ರೇಲರ್‌ ಬಿಡುಗಡೆ: ಮಮ್ಮುಟ್ಟಿ ಜತೆ ರಾಜ್‌ ಬಿ ಶೆಟ್ಟಿ ನಟಿಸಿರುವ ಪ್ಯಾನ್‌ ಇಂಡಿಯಾ ಚಿತ್ರ ಮುಂದಿನ ವಾರ ರಿಲೀಸ್‌
ಟರ್ಬೊ ಟ್ರೇಲರ್‌ ಬಿಡುಗಡೆ: ಮಮ್ಮುಟ್ಟಿ ಜತೆ ರಾಜ್‌ ಬಿ ಶೆಟ್ಟಿ ನಟಿಸಿರುವ ಪ್ಯಾನ್‌ ಇಂಡಿಯಾ ಚಿತ್ರ ಮುಂದಿನ ವಾರ ರಿಲೀಸ್‌

ಬೆಂಗಳೂರು: ಸ್ಯಾಂಡಲ್‌ವುಡ್‌ನಲ್ಲಿ ಒಂದು ಮೊಟ್ಟೆಯ ಕಥೆಯ ಬಳಿಕ ಜನಪ್ರಿಯತೆ ಗಳಿಸಿದ ರಾಜ್‌ ಬಿ ಶೆಟ್ಟಿ ಅವರು ಮಲಯಾಳಂ (ಪ್ಯಾನ್‌ ಇಂಡಿಯಾ) ಸಿನಿಮಾದಲ್ಲಿ ನಟಿಸುತ್ತಿರುವ ಸಂಗತಿ ಎಲ್ಲರಿಗೂ ಗೊತ್ತು. ಮಮ್ಮುಟ್ಟಿ ಪ್ರಮುಖ ಪಾತ್ರದಲ್ಲಿ ನಟಿಸಿರುವ ಈ "ಟರ್ಬೊ" ಸಿನಿಮಾ ಇದೀಗ ಬಿಡುಗಡೆ ಹಂತದಲ್ಲಿದೆ. ಟರ್ಬೊ ಸಿನಿಮಾದ ಟ್ರೇಲರ್‌ ಬಿಡುಗಡೆಯಾಗಿದ್ದು, ಮುಂದಿನ ವಾರ ಚಿತ್ರಮಂದಿರಗಳಲ್ಲಿ ಈ ಚಿತ್ರ ಬಿಡುಗಡೆಯಾಗಲಿದೆ. ಈ ಟ್ರೇಲರ್‌ನಲ್ಲಿ ರಾಜ್‌ ಬಿ ಶೆಟ್ಟಿಯವರು ಗರುಡ ಗಮನ ವೃಷಭ ವಾಹನದಲ್ಲಿರುವಂತಹ ಒಂದು ದೃಶ್ಯದ ತುಣುಕನ್ನು ತೋರಿಸಲಾಗಿದೆ.

ಟ್ರೆಂಡಿಂಗ್​ ಸುದ್ದಿ

ಟರ್ಬೊ ಟ್ರೇಲರ್‌ ಬಿಡುಗಡೆ

ಕನ್ನಡದ ಖ್ಯಾತ ನಟ - ನಿರ್ದೇಶಕ ರಾಜ್ ಬಿ ಶೆಟ್ಟಿಯವರು ಗರುಡ ಗಮನ ವೃಷಭ ವಾಹನದಂತಹ ಮಾಸ್ ಚಿತ್ರ ಮತ್ತು ಸ್ವಾತಿ ಮುತ್ತಿನ ಮಳೆ ಹನಿಯೇ ಎಂಬ ಕ್ಲಾಸ್ ಚಿತ್ರಗಳನ್ನು ನೀಡಿದ್ದಾರೆ. ಇದೀಗ ಮಲಯಾಳಂ ಚಿತ್ರದಲ್ಲಿ ಒಂದು ಪ್ರಮುಖ ಪಾತ್ರದಲ್ಲಿ ನಟಿಸುತ್ತಿದ್ದಾರೆ. ಇತ್ತೀಚೆಗೆ ದುಬೈನಲ್ಲಿ ಈ ಚಿತ್ರದ ಟ್ರೇಲರ್‌ ಬಿಡುಗಡೆ ಕಾರ್ಯಕ್ರಮ ನಡೆದಿದೆ. ಈ ಕಾರ್ಯಕ್ರಮದಲ್ಲಿ ರಾಜ್‌ ಬಿ ಶೆಟ್ಟಿಯವರು ಭಾಗವಹಿಸಿದ್ದಾರೆ. ಮಲಯಾಳಂ ಭಾಷೆಯಲ್ಲಿ ಪುಲಿಮುರುಗನ್, ಮಧುರೈ ರಾಜದಂತಹ ಬ್ಲಾಕ್‌ಬಸ್ಟರ್‌ ಚಿತ್ರಗಳನ್ನು ನೀಡಿದ ನಿರ್ದೇಶಕರಾದ ವೈಶಾಕ್ ಈ ಚಿತ್ರಕ್ಕೆ ಆಕ್ಷನ್‌ ಕಟ್‌ ಹೇಳಿದ್ದಾರೆ.

ಖ್ಯಾತ ಬರಹಗಾರರಾಂತ ಮಿಥುನ್ ಮ್ಯಾನುವಲ್ ಥಾಮಸ್ ಅವರು ಬರೆದಿದ್ದಾರೆ. ಮಮ್ಮುಟ್ಟಿಯವರ ಒಡೆತನದ 'ಮಮ್ಮುಟ್ಟಿ ಕಂಪನಿ' ನಿರ್ಮಿಸುತ್ತಿರುವ ಈ ಚಿತ್ರದಲ್ಲಿ ರಾಜ್ ಬಿ ಶೆಟ್ಟಿ ಜೊತೆಗೆ ಅಂಜನ ಜಯಪ್ರಕಾಶ್, ತೆಲುಗಿನ ಸುನಿಲ್, ಶಬರೀಶ್ ವರ್ಮಾ, ದಿಲೀಶ್ ಪೋತನ್ ಇನ್ನಿತರರ ದೊಡ್ಡ ತಾರಾಗಣವೇ ಇರಲಿದೆ. ಈ ಚಿತ್ರವನ್ನು ಕನ್ನಡದಲ್ಲಿ ರಾಜ್ ಬಿ ಶೆಟ್ಟಿ ಅವರ ನಿರ್ಮಾಣ ಸಂಸ್ಥೆಯಾದ ' ಲೈಟರ್ ಬುದ್ಧ ಫಿಲಂಸ್' ಹಂಚಿಕೆ ಮಾಡುತ್ತಿದೆ. ಮೇ 23ರಂದು ಚಿತ್ರಮಂದಿರಗಳಲ್ಲಿ ಟರ್ಬೊ ಸಿನಿಮಾ ಬಿಡುಗಡೆಯಾಗಲಿದೆ.

ರಾಜ್‌ ಬಿ ಶೆಟ್ಟಿ ಈಗಾಗಲೇ ತನ್ನ ವಿಶಿಷ್ಟ ಪ್ರತಿಭೆ ಮೂಲಕ ಸಿನಿಪ್ರೇಕ್ಷಕರ ಗಮನ ಸೆಳೆದಿದ್ದಾರೆ. ಇವರು ನಿರ್ದೇಶಿಸಿ ನಟಿಸಿದ ಒಂದು ಮೊಟ್ಟೆಯ ಕಥೆಯಂತೂ ಹಲವು ಭಾಷೆಗಳಲ್ಲಿ ಬೇರೆಬೇರೆ ರೂಪದಲ್ಲಿ ರಿಲೀಸ್‌ ಆಗಿತ್ತು. ಗರುಡ ಗಮನ ವೃಷಭ ವಾಹನ ಚಿತ್ರದಲ್ಲಿ ಇವರ ರಗಡ್‌ ಪಾತ್ರ ಸಾಕಷ್ಟು ಫೇಮಸ್‌ ಆಗಿತ್ತು. ಟೋಬಿ ಚಿತ್ರವು ಅಷ್ಟೇನೂ ಜನಪ್ರಿಯತೆ ಪಡೆಯದೆ ಇದ್ದರೂ ಇವರ ಲುಕ್‌ ಮತ್ತು ಮೌನ ಪಾತ್ರ ಸಾಕಷ್ಟು ಕುತೂಹಲ ಕೆರಳಿಸಿತ್ತು. ಟರ್ಬೊ ಚಿತ್ರದಲ್ಲಿ ರಾಜ್‌ ಬಿ ಶೆಟ್ಟಿ ವಿಲನ್‌ ಪಾತ್ರದಲ್ಲಿ ಮಿಂಚಲಿದ್ದಾರೆ. ಸದ್ಯ ಟ್ರೇಲರ್‌ನಲ್ಲಿರುವ ಸಣ್ಣ ತುಣುಕು ಗಮನಿಸಿದರೆ ಗರುಡ ಗಮನ ವೃಷಭ ವಾಹನದಲ್ಲಿದ್ದಂತಹ ಪಾತ್ರವೇ ಇಲ್ಲೂ ಇರುವ ಸಾಧ್ಯತೆ ಇದೆ.

ಇನ್ನಷ್ಟು ಮನರಂಜನೆ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್‌ ಮಾಡಿ

IPL_Entry_Point