Chandan Shetty New Movie: 'ಎಲ್ರ ಕಾಲೆಳೆದ..' ಚಂದನ್ ಶೆಟ್ಟಿ ಇದೀಗ ನಿರ್ಮಾಪಕ ನವರಸನ್ ಜತೆಗೂ ಕೈ ಜೋಡಿಸಿದ್ದಾರೆ.. ದಶಮಿಗೆ ಸರ್ಪ್ರೈಸ್
ನಿರ್ಮಾಪಕ, ನಿರ್ದೇಶಕ, ಇವೆಂಟ್ ಮ್ಯಾನೇಜ್ ಮಾಡುವ ನವರಸನ್ ನಿರ್ಮಾಣದ ಚಿತ್ರದಲ್ಲಿ ಸಂಗೀತ ನಿರ್ದೇಶಕ ಚಂದನ್ ಶೆಟ್ಟಿ ನಾಯಕನಾಗಿ ನಟಿಸಲಿದ್ದಾರೆ.
ಬೆಂಗಳೂರು: ಗಾಯಕ, ಸಂಗೀತ ನಿರ್ದೇಶಕ ಚಂದನ್ ಶೆಟ್ಟಿ ಸದ್ಯ ಸ್ಯಾಂಡಲ್‌ವುಡ್‌ನ ಬೇಡಿಕೆಯ ಮ್ಯೂಸಿಕ್ ಕಂಪೋಸರ್. ಹೀಗಿರುವಾಗಲೇ ಇದೇ ಚಂದನ್, ಇತ್ತೀಚೆಗಷ್ಟೇ ನಾಯಕ ನಟನಾಗಿಯೂ ಚಂದನವನಕ್ಕೆ ಎಂಟ್ರಿ ಕೊಟ್ಟಿದ್ದರು. "ಎಲ್ರ ಕಾಲೆಳಿಯುತ್ತೆ ಕಾಲ" ಸಿನಿಮಾ ಮೂಲಕ ಪೂರ್ಣ ಪ್ರಮಾಣದ ಹೀರೋ ಆಗಿದ್ದರು. ಇದೀಗ ಇದೇ ಗ್ಯಾಪಲ್ಲಿ ಮತ್ತೊಂದು ಸಿನಿಮಾ ಒಪ್ಪಿಕೊಂಡಿದ್ದಾರೆ. ಹೌದು, ಆ ಸಿನಿಮಾ ಇದೇ ವಿಜಯದಶಮಿ ಹಬ್ಬದಂದು ಘೋಷಣೆ ಆಗಲಿದೆ.
ಕನ್ನಡ ಚಿತ್ರರಂಗದಲ್ಲಿ ಇತ್ತೀಚಿಗೆ ಹಾಡುಗಳ ಬಿಡುಗಡೆ, ಪ್ರೀ ರಿಲೀಸ್ ಇವೆಂಟ್ ಸೇರಿದಂತೆ ಸಾಕಷ್ಟು ಸಮಾರಂಭಗಳನ್ನು ಆಯೋಜಿಸುವುದರಲ್ಲಿ ಮುಂಚೂಣಿಯಲ್ಲಿರುವ ಮೈ ಮೂವೀ ಬಜಾರ್ ಹಾಗೂ ಶ್ರೇಯಸ್ ಮೀಡಿಯಾ ದ ಪ್ರಮುಖ ನವರಸನ್ ಈ ಚಿತ್ರವನ್ನು ನಿರ್ಮಾಣ ಮಾಡುತ್ತಿದ್ದಾರೆ. ಈ ಹಿಂದೆ ರಾಧಿಕಾ ಕುಮಾರಸ್ವಾಮಿ ನಟನೆಯ "ದಮಯಂತಿ" ಸೇರಿ ನಾಲ್ಕು ಚಿತ್ರಗಳನ್ನು ನಿರ್ಮಾಣ ಮಾಡಿರುವ ನವರಸನ್, ಇದೀಗ ಚಂದನ್ ಶೆಟ್ಟಿ ಸಿನಿಮಾ ನಿರ್ಮಾಣಕ್ಕೆ ಮುಂದಾಗಿದ್ದಾರೆ. ನಿರ್ಮಾಣದೊಂದಿಗೆ ಕ್ರಿಯೇಟಿವ್ ನಿರ್ದೇಶಕನಾಗಿಯೂ ಕಾರ್ಯ ನಿರ್ವಹಿಸಲಿದ್ದಾರೆ.
ಈ ಸಲ ಕ್ರೈಂ ಥ್ರಿಲ್ಲರ್..
ಕ್ರೈಮ್ ಥ್ರಿಲ್ಲರ್ ಕಥಾಹಂದರ ಹೊಂದಿರುವ ಈ ಚಿತ್ರವನ್ನು ಕಿರಣ್ ಕುಮಾರ್ ನಿರ್ದೇಶಿಸಲಿದ್ದಾರೆ. ಇದು ಅವರಿಗೆ ಮೊದಲ ಚಿತ್ರ. ನಾಯಕನಾಗಿ ನಟಿಸುವುದರ ಜತೆಗೆ ಸ್ವತಃ ಚಂದನ್ ಶೆಟ್ಟಿ ಅವರೇ ತಮ್ಮ ಚಿತ್ರಕ್ಕೆ ತಾವೇ ಸಂಗೀತ ಸಂಯೋಜಿಸಲಿದ್ದಾರೆ. ಪಿ.ಕೆ.ಹೆಚ್ ದಾಸ್ ಛಾಯಾಗ್ರಾಹಕರಾಗಿ ಕಾರ್ಯ ನಿರ್ವಹಿಸಲಿದ್ದಾರೆ. ತಬಲ ನಾಣಿ ಸೇರಿ ಅನೇಕ ಹಿರಿಯ ಕಲಾವಿದರು ಇದರಲ್ಲಿ ನಟಿಸುತ್ತಿದ್ದಾರೆ. ನಾಯಕಿಯ ಆಯ್ಕೆ ನಡೆಯುತ್ತಿದೆ.
ಎಲ್ರ ಕಾಲೆಳಿಯುತ್ತೆ ಕಾಲ ಚಿತ್ರ ಬಿಡುಗಡೆ ರೆಡಿ..
ಸುಜಯ್ ಶಾಸ್ತ್ರಿ ನಿರ್ದೇಶನದಲ್ಲಿ ಸಿದ್ಧವಾಗಿರುವ "ಎಲ್ರ ಕಾಲೆಳಿಯುತ್ತೆ ಕಾಲ" ಸಿನಿಮಾ ಬಿಡುಗಡೆಗೆ ರೆಡಿಯಾಗಿದೆ. 80ರ ಕಾಲಘಟ್ಟದಲ್ಲಿ ನಡೆಯುವ ಕಥೆ ಇದಾಗಿದ್ದು, ಚಂದನ್ ಶೆಟ್ಟಿಗೆ ಜೋಡಿಯಾಗಿ ಅರ್ಚನಾ ಕೊಟ್ಟಿಗೆ ನಟಿಸಿದ್ದಾರೆ. ಸುಜಯ್ ಶಾಸ್ತ್ರಿ ನಿರ್ದೇಶನ, ರಾಜಗುರು ಹೊಸಕೋಟೆ ಕಥೆ-ಚಿತ್ರಕಥೆ ಮತ್ತು ಸಂಭಾಷಣೆ ಬರೆದಿದ್ದಾರೆ. ಪ್ರವೀಣ್- ಪ್ರದೀಪ್ ಅವರ ಸಂಗೀತ ನಿರ್ದೇಶನ ಈ ಚಿತ್ರಕ್ಕಿದೆ. ಇನ್ನೇನು ಶೀಘ್ರದಲ್ಲಿ ಚಿತ್ರ ಬಿಡುಗಡೆ ಆಗಲಿದೆ.