Ondanke Kadu Release Update: ಕನ್ನಡ ನಿರ್ದೇಶಕನ ದ್ವಿಭಾಷಾ ಸಿನಿಮಾ ತೆರೆಗೆ ಬರಲು ರೆಡಿ; ಮಾರ್ಚ್ 3ಕ್ಕೆ ‘ಒಂದಂಕೆ ಕಾಡು’
ಕನ್ನಡ ಸುದ್ದಿ  /  ಮನರಂಜನೆ  /  Ondanke Kadu Release Update: ಕನ್ನಡ ನಿರ್ದೇಶಕನ ದ್ವಿಭಾಷಾ ಸಿನಿಮಾ ತೆರೆಗೆ ಬರಲು ರೆಡಿ; ಮಾರ್ಚ್ 3ಕ್ಕೆ ‘ಒಂದಂಕೆ ಕಾಡು’

Ondanke Kadu Release Update: ಕನ್ನಡ ನಿರ್ದೇಶಕನ ದ್ವಿಭಾಷಾ ಸಿನಿಮಾ ತೆರೆಗೆ ಬರಲು ರೆಡಿ; ಮಾರ್ಚ್ 3ಕ್ಕೆ ‘ಒಂದಂಕೆ ಕಾಡು’

ಕಿರುತೆರೆಯ ನಿರ್ದೇಶನದ ವಿಭಾಗದಲ್ಲಿ ಗುರುತಿಸಿಕೊಂಡ ನಿರ್ದೇಶಕ ರಾಮಚಂದ್ರ ವೈದ್ಯ ಇದೀಗ 'ಒಂದಂಕೆ ಕಾಡು' ಸಿನಿಮಾ ಮೂಲಕ ಅದೃಷ್ಟ ಪರೀಕ್ಷೆಗಿಳಿದಿದ್ದಾರೆ.

ಕನ್ನಡ ನಿರ್ದೇಶಕನ ದ್ವಿಭಾಷಾ ಸಿನಿಮಾ ತೆರೆಗೆ ಬರಲು ರೆಡಿ; ಮಾರ್ಚ್ 3ಕ್ಕೆ ‘ಒಂದಂಕೆ ಕಾಡು’
ಕನ್ನಡ ನಿರ್ದೇಶಕನ ದ್ವಿಭಾಷಾ ಸಿನಿಮಾ ತೆರೆಗೆ ಬರಲು ರೆಡಿ; ಮಾರ್ಚ್ 3ಕ್ಕೆ ‘ಒಂದಂಕೆ ಕಾಡು’

Ondanke Kadu Release Update: ಕಿರುತೆರೆಯಲ್ಲಿ ಅನುಭವ ಗಳಿಸಿದ ರಾಮಚಂದ್ರ ವೈದ್ಯ 'ಒಂದಂಕೆ ಕಾಡು' ಚಿತ್ರದ ಮೂಲಕ ಅದೃಷ್ಟ ಪರೀಕ್ಷೆಗೆ ಇಳಿದಿದ್ದಾರೆ. ದಟ್ಟ ಕಾನನ, ಬಗೆದಷ್ಟು ನಿಗೂಢವೆನಿಸುವ ಸೃಷ್ಟಿ. ಮೇಲ್ನೋಟಕ್ಕೆ ತಣ್ಣಗೆ, ಹಸಿರಾಗಿ ಕಾಣುವ ಕಾಡಿನ ಒಳ ಹೊಕ್ಕರೆ ಊಹೆಗೂ ಮೀರಿದ ವಿಷಯಗಳು, ವಿವರಗಳು ಕಾಣಸಿಗುತ್ತದೆ. ಇದೇ ವಿಚಾರವನ್ನು ಮುಂದಿಟ್ಟುಕೊಂಡು ಸಸ್ಪೆನ್ಸ್ ಥ್ರಿಲ್ಲರ್ ಸಿನಿಮಾವನ್ನು ನಿರ್ದೇಶಿಸಿದ್ದಾರೆ.

ಇದೀಗ ಈ ಸಿನಿಮಾ ಮಾರ್ಚ್ 3ರಂದು ಬಿಡುಗಡೆಯಾಗುತ್ತಿದೆ. ರಥರ್ವ, ಸೋನಿ, ಮಧು ಹೆಗ್ಡೆ, ಸುಮಂತ್ ಭಟ್, ಪ್ರೇರಣಾ ಕಂಬಂ ಮುಖ್ಯ ಭೂಮಿಕೆಯಲ್ಲಿರುವ ಈ ಚಿತ್ರ ಟ್ರೇಲರ್, ಹಾಡುಗಳ ಮೂಲಕ ಗಮನ ಸೆಳೆದಿದೆ. ಬಿಡುಗಡೆಯ ಸಂತಸದಲ್ಲಿರುವ ಸಿನಿಮಾ ತಂಡ ಚಿತ್ರದ ಬಗ್ಗೆ ಒಂದಿಷ್ಟು ಮಾಹಿತಿ ಹಂಚಿಕೊಂಡಿದೆ.

"ಇದು ನನ್ನ ನಿರ್ದೇಶನದ ಮೊದಲ ಸಿನಿಮಾ. ಕನ್ನಡ ಹಾಗೂ ತೆಲುಗು ಭಾಷೆಯಲ್ಲಿ ಸಿನಿಮಾ ನಿರ್ಮಾಣವಾಗಿದೆ. ತೆಲುಗಿನಲ್ಲಿ ‘ಅನಗನಗಾ ಒಕ ಅಡವಿ’ ಹೆಸರಲ್ಲಿ ಸಿನಿಮಾ ಮೂಡಿ ಬಂದಿದೆ. ಚಿತ್ರಕ್ಕೆ ‘ಒಂದಂಕೆ ಕಾಡು’ ಎಂದು ಟೈಟಲ್ ಇಡಲು ಕಾರಣವಿದೆ. ಉತ್ತರ ಕನ್ನಡದಲ್ಲಿ ವಿಶಿಷ್ಟ ಕಾಡಿದೆ. ಮರಗಳ ಬೇರು ನೆಲದ ಒಳಗೆ ಹೋಗುತ್ತದೆ ಆದ್ರೆ ಈ ಭಾಗದ ಕಾಡಲ್ಲಿ ಎಲ್ಲಾ ಮರದ ಬೇರುಗಳು ಕನ್ನಡದ ಒಂದಂಕೆ ಹಾಗೆ ಇರುತ್ತೆ. ಹಾಗಾಗಿ ಅದಕ್ಕೆ ಒಂದಂಕೆ ಕಾಡು ಎಂದು ಇಡಲಾಗಿದೆ. ಕಾಡಿನ ಮಧ್ಯೆ ಚಿತ್ರೀಕರಣ ನಡೆಸಲಾಗಿದೆ. ಕಾರವಾರ, ದಾಂಡೇಲಿ, ಶಿರಸಿ, ಯಲ್ಲಾಪುರ, ಗೋವಾ ಬಾರ್ಡರ್ ನಲ್ಲಿ ಸುಮಾರು 35 ದಿನಗಳ ಕಾಲ ಚಿತ್ರೀಕರಣ ನಡೆಸಲಾಗಿದೆ. ಸಸ್ಪೆನ್ಸ್, ಥ್ರಿಲ್ಲರ್ ಕಥಾಹಂದರ ಒಳಗೊಂಡ ಈ ಚಿತ್ರ ಮಾರ್ಚ್ 3ರಂದು ಬಿಡುಗಡೆಯಾಗುತ್ತಿದೆ ಎಂದು ನಿರ್ದೇಶಕ ರಾಮಚಂದ್ರ ವೈದ್ಯ ಸಿನಿಮಾ ಬಗ್ಗೆ ಮಾಹಿತಿ ನೀಡಿದರು.

ನಾಯಕ ನಟ ರಥರ್ವ ಸಿನಿಮಾ ಬಿಡುಗಡೆಯ ಖುಷಿಯಲ್ಲಿದ್ದಾರೆ. "ಚಿತ್ರದಲ್ಲಿ ರಿಷಿ ಪಾತ್ರದಲ್ಲಿ ನಟಿಸಿದ್ದೇನೆ. ರಿಷಿ ಬೆಂಗಳೂರು ಹುಡುಗ. ಕೆಲಸ, ಹೆಂಡ್ತಿ ಇಷ್ಟೇ ಅವನಿಗೆ ಜೀವನ. ಹೀಗಿರುವಾಗ ಇಬ್ಬರು ಒಂದಂಕೆ ಕಾಡಿಗೆ ವೆಕೇಶನ್ ಹೋಗುತ್ತಾರೆ. ಆ ಕಾಡಿನಲ್ಲಿ ಏನೇನು ಸಮಸ್ಯೆ ಎದುರಿಸುತ್ತಾರೆ, ಅದನ್ನೆಲ್ಲ ಹೇಗೆ ಫೇಸ್ ಮಾಡ್ತಾರೆ ಅನ್ನೋದೇ ಚಿತ್ರದ ಒನ್ ಲೈನ್ ಕಹಾನಿ. ಇದು ನನ್ನ ಮೊದಲ ಸಿನಿಮಾ. ಮಾರ್ಚ್ 3ರಂದು ಸಿನಿಮಾ ಬಿಡುಗಡೆಯಾಗುತ್ತಿದೆ. ಸಿನಿಮಾ ನೋಡಿ ಪ್ರೋತ್ಸಾಹ ನೀಡಿ ಎಂದರು.

ನಾಯಕಿ ಸೋನಿ ಮಾತನಾಡಿ, ನಾನು ಮೂಲತಃ ಮೈಸೂರಿನವಳು. ರಂಗಭೂಮಿ ಕಲಾವಿದೆ. ಬಿಡುಗಡೆಯಾಗುತ್ತಿರುವ ಮೊದಲ ಸಿನಿಮಾವಿದು. ಚಿತ್ರದಲ್ಲಿ ನಂದಿನಿ ಪಾತ್ರ ಮಾಡಿದ್ದೇನೆ. ಒಂದೊಳ್ಳೆ ಅನುಭವ ಈ ಸಿನಿಮಾ ನೀಡಿದೆ. ನನಗೆ ಈ ಪಾತ್ರ ನೀಡಿದ್ದಕ್ಕೆ ನಿರ್ದೇಶಕರಿಗೆ ಧನ್ಯವಾದ ತಿಳಿಸುತ್ತೇನೆ ಎಂದು ಸಂತಸ ಹಂಚಿಕೊಂಡ್ರು.

ಗಣೇಶ್ ಹೆಗ್ಡೆ ಛಾಯಾಗ್ರಹಣ, ಶ್ರೀಕಾಂತ್ ಸಂಕಲನ, ಟಿ.ಜಿ. ನಂದೀಶ್ ಸಂಭಾಷಣೆ, ಮಧು ಹೆಗ್ಡೆ ಸಂಗೀತ ನಿರ್ದೇಶನ ಚಿತ್ರಕ್ಕಿದೆ. ಹೃದಯಶಿವ, ಡಾ. ಉಮೇಶ್ ಸಾಹಿತ್ಯದಲ್ಲಿ ಹಾಡುಗಳು ಮೂಡಿ ಬಂದಿದ್ದು, ಅನುರಾಧ ಭಟ್, ಕಪಿಲ್ ನಾಯರ್, ಕೀರ್ತನ್ ಹೊಳ್ಳ ಹಿನ್ನೆಲೆ ಗಾಯನ ಚಿತ್ರಕ್ಕಿದೆ.

Whats_app_banner