Eagle OTT Release: ರವಿತೇಜ ನಟನೆಯ ಈಗಲ್‌ ಒಟಿಟಿ ಬಿಡುಗಡೆ ದಿನಾಂಕ ಪ್ರಕಟ, ಎಲ್ಲಿ ಯಾವಾಗ ನೋಡಬಹುದು? ಇಲ್ಲಿದೆ ವಿವರ
ಕನ್ನಡ ಸುದ್ದಿ  /  ಮನರಂಜನೆ  /  Eagle Ott Release: ರವಿತೇಜ ನಟನೆಯ ಈಗಲ್‌ ಒಟಿಟಿ ಬಿಡುಗಡೆ ದಿನಾಂಕ ಪ್ರಕಟ, ಎಲ್ಲಿ ಯಾವಾಗ ನೋಡಬಹುದು? ಇಲ್ಲಿದೆ ವಿವರ

Eagle OTT Release: ರವಿತೇಜ ನಟನೆಯ ಈಗಲ್‌ ಒಟಿಟಿ ಬಿಡುಗಡೆ ದಿನಾಂಕ ಪ್ರಕಟ, ಎಲ್ಲಿ ಯಾವಾಗ ನೋಡಬಹುದು? ಇಲ್ಲಿದೆ ವಿವರ

Ravi Teja's Eagle OTT Release Date: ತೇಜಾ ನಟನೆಯ ಈಗಲ್‌ ಸಿನಿಮಾ ಒಟಿಟಿ ಬಿಡುಗಡೆ ದಿನಾಂಕ ಪ್ರಕಟವಾಗಿದೆ. ಮಾರ್ಚ್‌ 2ರಂದು ಇಟಿವಿ ವಿನ್‌ ಮತ್ತು ಅಮೆಜಾನ್‌ ಪ್ರೈಮ್‌ ವಿಡಿಯೋದಲ್ಲಿ ಈಗಲ್‌ ಸಿನಿಮಾ ಬಿಡುಗಡೆಯಾಗಲಿದೆ. ಈ ಸಿನಿಮಾದಲ್ಲಿ ಅನುಪಮಾ ಪರಮೇಶ್ವರನ್‌ ಮತ್ತು ಕಾವ್ಯ ಥಾಪರ್‌ ಪ್ರಮುಖ ಪಾತ್ರಗಳಲ್ಲಿ ನಟಿಸಿದ್ದಾರೆ.

Eagle OTT Release: ರವಿತೇಜ ನಟನೆಯ ಈಗಲ್‌ ಒಟಿಟಿ ಬಿಡುಗಡೆ ದಿನಾಂಕ ಪ್ರಕಟ
Eagle OTT Release: ರವಿತೇಜ ನಟನೆಯ ಈಗಲ್‌ ಒಟಿಟಿ ಬಿಡುಗಡೆ ದಿನಾಂಕ ಪ್ರಕಟ

ಬೆಂಗಳೂರು: ತೆಲುಗು ಚಿತ್ರರಂಗದ ಮಾಸ್‌ ಮಹಾರಾಜ ರವಿತೇಜಾ ನಟನೆಯ ಈಗಲ್‌ ಸಿನಿಮಾ ಈಗಾಗಲೇ ಚಿತ್ರಮಂದಿರಗಳಲ್ಲಿ ಬಿಡುಗಡೆಯಾಗಿದೆ. ಇದೀಗ ಸದ್ಯದಲ್ಲಿಯೇ ಈಗಲ್‌ ಸಿನಿಮಾ ಒಟಿಟಿಯಲ್ಲಿ ಸ್ಟ್ರೀಮ್‌ ಆಗಲಿದೆ. ಮಾರ್ಚ್‌ 2ರಂದು ಈ ಸಿನಿಮಾ ಇಟಿವಿ ವಿನ್‌ ಒಟಿಟಿಯಲ್ಲಿ ಪ್ಲೇ ಆಗಲಿದೆ. ಅಯ್ಯೋ, ಈ ಒಟಿಟಿಗೆ ಚಂದಾದಾರರಾಗಿಲ್ಲ ಎಂದು ಟೆನ್ಷನ್‌ ಮಾಡುವಿರಾ? ಈ ಸಿನಿಮಾ ಅಮೆಜಾನ್‌ ಪ್ರೈಮ್‌ ವಿಡಿಯೋದಲ್ಲಿಯೂ ಸ್ಟ್ರೀಮಿಂಗ್‌ ಆಗಲಿದೆ.

ಈಗಲ್‌ ಸಿನಿಮಾವನ್ನು ಕಾರ್ತಿಕ್‌ ಗಟ್ಟಮನೆನಿ ನಿರ್ದೇಶಿಸಿದ್ದಾರೆ. ಈ ಚಿತ್ರದಲ್ಲಿ ರವಿತೇಜಾ ಮಾತ್ರವಲ್ಲದೆ ಅನುಪಮಾ ಪರಮೇಶ್ವರನ್‌ ಮತ್ತು ಕಾವ್ಯ ಥಾಪರ್‌ ಪ್ರಮುಖ ಪಾತ್ರಗಳಲ್ಲಿ ನಟಿಸಿದ್ದಾರೆ. ಇಟಿವಿ ವಿನ್‌ನಲ್ಲಿ ಈ ಸಿನಿಮಾ ಶೀಘ್ರದಲ್ಲಿ ಬಿಡುಗಡೆಯಾಗಲಿದೆ ಎಂದು ಕೆಲವು ದಿನಗಳ ಹಿಂದೆ ತಿಳಿಸಲಾಗಿತ್ತು. ಆದರೆ, ಈ ಒಟಿಟಿ ಹೊಸತು. ಈಗ ಅಷ್ಟು ಜನಪ್ರಿಯತೆ ಪಡೆದಿಲ್ಲ. ಹೀಗಾಗಿ, ಅಮೆಜಾನ್‌ ಪ್ರೈಮ್‌ ವಿಡಿಯೋದಲ್ಲಿಯೂ ಈಗಲ್‌ ಸಿನಿಮಾ ಬಿಡುಗಡೆ ಮಾಡಲು ಉದ್ದೇಶಿಸಲಾಗಿದೆ.

ಅಮೆಜಾನ್‌ ಪ್ರೈಮ್‌ ವಿಡಿಯೋದಲ್ಲಿ ಈಗಲ್‌ ಸಿನಿಮಾವು ಮಾರ್ಚ್‌ 2ರಂದೇ ಬಿಡುಗಡೆಯಾಗಲಿದೆ. ನವ್‌ದೀಪ್‌, ಶ್ರೀನಿವಾಸ ಅವಸರಲ, ಮಧುಬಾಲ ಮತ್ತು ಇತರರು ಈ ಸಿನಿಮಾದಲ್ಲಿ ನಟಿಸಿದ್ದಾರೆ. ಪೀಪಲ್‌ ಮೀಡಿಯಾ ಫ್ಯಾಕ್ಟರಿಯು ಈ ಸಿನಿಮಾವನ್ನು ನಿರ್ಮಾಣ ಮಾಡಿದೆ. ಸಿನಿಮಾಟ್ರೊಗ್ರಾಫರ್‌ ಆಗಿದ್ದ ಕಾರ್ತಿಕ್‌ ಗಟ್ಟಮನೆನಿ ಅವರು ಈಗಲ್‌ ಮೂಲಕ ಡೈರೆಕ್ಟರ್‌ ಕ್ಯಾಪ್‌ ತೊಟ್ಟುಕೊಂಡಿದ್ದಾರೆ. ಇದು ಆಕ್ಷನ್‌-ಎಂಟರ್‌ಟೇನ್‌ಮೆಂಟ್‌ ಸಿನಿಮಾ.

ಈಗಲ್‌ ಸಿನಿಮಾವು 2024ರ ಜನವರಿ 13ರಂದು ಬಿಡುಗಡೆ ಮಾಡಲು ಉದ್ದೇಶಿಸಲಾಗಿತ್ತು. ಮಕರ ಸಂಕ್ರಾಂತಿಯಂದು ಹಲವು ಸಿನಿಮಾಗಳು ರಿಲೀಸ್‌ ಆಗುತ್ತಿರುವುದರಿಂದ ಬಿಡುಗಡೆ ಮಾಡುವ ಯೋಜನೆಯನ್ನು ಮುಂದಕ್ಕೆ ಹಾಕಲಾಗಿತ್ತು. ಫೆಬ್ರವರಿ 9ರಂದು ಈಗಲ್‌ ಬಿಡುಗಡೆಯಾಗಿತ್ತು. ಸಹದೇವ್‌ ಹೆಸರಿನಲ್ಲಿ ಹಿಂದಿ ವರ್ಷನ್‌ ಕೂಡ ಬಿಡುಗಡೆಯಾಗಿದೆ. ಈಗಲ್‌ ಸಿನಿಮಾಕ್ಕೆ ಪ್ರೇಕ್ಷಕರಿಂದ ಮಿಶ್ರ ಪ್ರತಿಕ್ರಿಯೆ ವ್ಯಕ್ತವಾಗಿತ್ತು. ಹೀಗಾಗಿ, ಚಿತ್ರಮಂದಿರಗಳಲ್ಲಿ ಬಿಡುಗಡೆಯಾದ ಒಂದು ತಿಂಗಳ ಒಳಗಾಗಿ ಒಟಿಟಿಯಲ್ಲಿ ರಿಲೀಸ್‌ ಆಗುತ್ತಿದೆ.

ಸಾಮ್ರಾಟ್ ಮಾಂಧಾತ ಟ್ರೈಲರ್‌ ಬಿಡುಗಡೆ

ಇತ್ತೀಚಿನ ದಿಗಳಲ್ಲಿ ಭಕ್ತಿಪ್ರಧಾನ ಮತ್ತು ಪೌರಾಣಿಕ ಚಿತ್ರಗಳ ನಿರ್ಮಾಣ ಕಡಿಮೆಯಾಗುತ್ತಿವೆ. ಅದರಲ್ಲೂ ಕೆಲವರು ಅಂಥಾ ಸಾಹಸಕ್ಕೆ ಮುಂದಾಗುತ್ತಿದ್ದಾರೆ. ಹೇಮಂತ್ ಪ್ರೊಡಕ್ಷನ್ಸ್ ಮೂಲಕ ಹೇಮಂತ್ ಕುಮಾರ್ ಅವರು ಸೂರ್ಯವಂಶದ ಸಾಮ್ರಾಟ್ ಮಂಧಾತನ ಕಥೆಯನ್ನು ತೆರೆಮೇಲೆ ತರುತ್ತಿದ್ದಾರೆ. ನಿರ್ಮಾಣದ ಜೊತೆಗೆ ಚಿತ್ರದ ನಿರ್ದೇಶನ ಕೂಡ ಮಾಡಿದ್ದಾರೆ. ಸದ್ದಿಲ್ಲದೆ ಚಿತ್ರೀಕರಣ ಪೂರ್ಣಗೊಳಿಸಿ ಬಿಡುಗಡೆ ಹಂತಕ್ಕೆ ತಂದಿದ್ದಾರೆ. ಇತ್ತೀಚೆಗೆ ಸಾಮ್ರಾಟ್ ಮಾಂಧಾರ ಚಿತ್ರದ ಟ್ರೈಲರನ್ನು ಹಿರಿಯ ನಿರ್ದೇಶಕ ಓಂ ಸಾಯಿಪ್ರಕಾಶ್ ಅವರು ಬಿಡುಗಡೆಗೊಳಿಸಿದರು.

ಇಕ್ಷ್ವಾಕು ವಂಶದ (ಸೂರ್ಯವಂಶ) ಯುವನಾಶ್ವ ಮಹಾರಾಜನ ಮಗನಾದ ಮಾಂಧಾತ ತನ್ನ ಸತ್ಯ ಮತ್ತು ಧರ್ಮದ ಆಡಳಿತದಿಂದಲೇ ಪ್ರಖ್ಯಾತಿ ಗಳಿಸಿದ್ದನು. ಶಶಬಿಂದುವಿನ ಮಗಳು ಬಿಂದುಮತಿ ಚೈತ್ರರಥಿಯನ್ನು ವರಿಸಿದ ಮಾಂಧಾತನಿಗೆ ಪುರುಕುತ್ಸ ಅಥವಾ ಸುಸಂಧಿ, ಅಂಬರೀಷ ಮತ್ತು ಮುಚುಕುಂದರೆಂಬ ಮೂವರು ಗಂಡು ಮಕ್ಕಳು ಮತ್ತು ಐವತ್ತು ಹೆಣ್ಣುಮಕ್ಕಳಿದ್ದರೆಂದು ಹೇಳಲಾಗುತ್ತಿದೆ. ಆತನ ಕಥೆಯನ್ನು “ಸಾಮ್ರಾಟ್ ಮಾಂಧಾತ” ಚಿತ್ರದ ಮೂಲಕ ಹೇಮಂತ್ ಅವರು ನಿರೂಪಿಸಹೊರಟಿದ್ದಾರೆ. ಅಂದುಕೊಂಡಂತೆ ಆದರೆ ಏಪ್ರಿಲ್‍ನಲ್ಲಿ ಸಾಮ್ರಾಟ ಮಾಂಧಾತ ತೆರೆಗೆ ಬರುವ ಸಾಧ್ಯತೆಗಳಿವೆ.

ಶನಿದೇವನಾಗಿ ನಟಿಸಿರುವ ಸುಂದರಬಾಬು, ಬಿಂದುಮತಿಯಾಗಿ ಕಾಣಿಸಿಕೊಂಡಿರಯವ ಭಾರತಿ, ನಾರದನಾಗಿರುವ ನಂಜುಂಡಪ್ಪ, ಶೌಭರಿ ಮಹರ್ಷಿಯಾಗಿರುವ ನರಸಿಂಹಮೂರ್ತಿ, ಯವನಾಶ್ವನಾಗಿರುವ ಮಂಜುನಾಥ, ಕಲಾನಿರ್ದೇಶಕ ರವಿ ಮುಂತಾದವರು ಈ ಸಿನಿತಂಡದಲ್ಲಿದ್ದಾರೆ.. ಸಾಮ್ರಾಟ ಮಾಂಧಾತ ಚಿತ್ರಕ್ಕೆ ಆರ್.ವೀರೇಂದ್ರಕುಮಾರ್ ಸಂಭಾಷಣೆ ಸಾಹಿತ್ಯ ರಚಿಸಿದ್ದಾರೆ. ಶಿವರಾಮ್ ಅವರ ಸಂಕಲನ ಈ ಚಿತ್ರಕ್ಕಿದೆ.

Whats_app_banner