ಕನ್ನಡ ಸುದ್ದಿ  /  ಮನರಂಜನೆ  /  Mafia Movie Poster: ಬೆಳಕಿನ ಹಬ್ಬಕ್ಕೆ ಬಂತು ‘ಮಾಫಿಯಾ’ ಚಿತ್ರದ ನೂತನ ಪೋಸ್ಟರ್

Mafia Movie Poster: ಬೆಳಕಿನ ಹಬ್ಬಕ್ಕೆ ಬಂತು ‘ಮಾಫಿಯಾ’ ಚಿತ್ರದ ನೂತನ ಪೋಸ್ಟರ್

ಡೈನಾಮಿಕ್ ಪ್ರಿನ್ಸ್ ಪ್ರಜ್ವಲ್ ದೇವರಾಜ್ ನಾಯಕರಾಗಿ ನಟಿಸುತ್ತಿರುವ ‘ಮಾಫಿಯಾ’ ಚಿತ್ರದ ನೂತನ ಪೋಸ್ಟರ್ ದೀಪಾವಳಿ ಹಬ್ಬಕ್ಕೆ ಬಿಡುಗಡೆಯಾಗಿದ್ದು, ಪೋಸ್ಟರ್ ಗೆ ಮೆಚ್ಚುಗೆ ವ್ಯಕ್ತವಾಗುತ್ತಿದೆ.

ಬೆಳಕಿನ ಹಬ್ಬಕ್ಕೆ ಬಂತು ‘ಮಾಫಿಯಾ’ ಚಿತ್ರದ ನೂತನ ಪೋಸ್ಟರ್
ಬೆಳಕಿನ ಹಬ್ಬಕ್ಕೆ ಬಂತು ‘ಮಾಫಿಯಾ’ ಚಿತ್ರದ ನೂತನ ಪೋಸ್ಟರ್

ಡೈನಾಮಿಕ್ ಪ್ರಿನ್ಸ್ ಪ್ರಜ್ವಲ್ ದೇವರಾಜ್ ನಾಯಕರಾಗಿ ನಟಿಸುತ್ತಿರುವ ‘ಮಾಫಿಯಾ’ ಚಿತ್ರದ ನೂತನ ಪೋಸ್ಟರ್ ದೀಪಾವಳಿ ಹಬ್ಬಕ್ಕೆ ಬಿಡುಗಡೆಯಾಗಿದ್ದು, ಪೋಸ್ಟರ್ ಗೆ ಮೆಚ್ಚುಗೆ ವ್ಯಕ್ತವಾಗುತ್ತಿದೆ.

ಟ್ರೆಂಡಿಂಗ್​ ಸುದ್ದಿ

ಆಕ್ಷನ್ ಥ್ರಿಲ್ಲರ್ ಕಥಾಹಂದರ ಹೊಂದಿರುವ ಈ ಚಿತ್ರವನ್ನು ಬೆಂಗಳೂರು ಕುಮಾರ್ ಫಿಲಂಸ್ ಲಾಂಛನದಲ್ಲಿ ಕುಮಾರ್ ಬಿ ನಿರ್ಮಿಸುತ್ತಿದ್ದಾರೆ. ಮಮ್ಮಿ ಸಿನಿಮಾ ಖ್ಯಾತಿಯ ಲೋಹಿತ್ ಹೆಚ್ ನಿರ್ದೇಶನದ ಈ ಚಿತ್ರದ ಸಾಹಸ ಸನ್ನಿವೇಶಗಳು ಸಾಹಸಪ್ರಿಯರಿಗೆ ಹೆಚ್ಚು ಪ್ರಿಯವಾಗಲಿದೆ.

ನಾಯಕ ಪ್ರಜ್ವಲ್ ದೇವರಾಜ್ ಅಭಿನಯದ 35ನೇ ಚಿತ್ರ "ಮಾಫಿಯಾ". ಹಿಂದಿನ ಚಿತ್ರಗಳಿಗಿಂತ ವಿಭಿನ್ನ ಗೆಟಪ್‌ನಲ್ಲಿ ಪ್ರಜ್ವಲ್ ಈ ಚಿತ್ರದಲ್ಲಿ ಕಾಣಿಸಿಕೊಳ್ಳುತ್ತಿದ್ದಾರೆ. ಈ ಚಿತ್ರಕ್ಕಾಗಿ ಸಾಕಷ್ಟು ತಯಾರಿ ಸಹ ಮಾಡಿಕೊಂಡಿದ್ದಾರೆ.

ಈಗಾಗಲೇ ಈ ಚಿತ್ರದ ಬಹುತೇಕ ಚಿತ್ರೀಕರಣ ಮುಕ್ತಾಯವಾಗಿದೆ. ಒಂದು ಹಾಡಿನ ಚಿತ್ರೀಕರಣ ಮಾತ್ರ ಬಾಕಿಯಿದೆ. ದೀಪಾವಳಿ ನಂತರ ಬೆಂಗಳೂರಿನಲ್ಲಿ ಈ ಹಾಡಿನ ಚಿತ್ರೀಕರಣ ನಡೆಯಲಿದೆ ಎಂದು ನಿರ್ಮಾಪಕರು ತಿಳಿಸಿದ್ದಾರೆ‌.

‘ಮಾಫಿಯಾ’ಗಾಗಿ ಹೈದರಾಬಾದ್ ನ ರಾಮೋಜಿ ಫಿಲ್ಮ್ ಸಿಟಿಯಲ್ಲಿ ಅದ್ದೂರಿ ಸೆಟ್ ಸಹ ನಿರ್ಮಾಣ ಮಾಡಿ ಚಿತ್ರೀಕರಿಸಲಾಗಿದೆ. ಎಸ್ ಪಾಂಡಿಕುಮಾರ್ ಛಾಯಾಗ್ರಹಣ ಹಾಗೂ ಅನೂಪ್ ಸೀಳಿನ್ ಸಂಗೀತ ನಿರ್ದೇಶನವಿರುವ ಈ ಚಿತ್ರದ ತಾರಾಬಳಗದಲ್ಲಿ ಪ್ರಜ್ವಲ್ ದೇವರಾಜ್, ಅದಿತಿ ಪ್ರಭುದೇವ, ದೇವರಾಜ್, ಸಾಧುಕೋಕಿಲ, ಶೈನ್ ಶೆಟ್ಟಿ, ವಿಜಯ್ ಚೆಂಡೂರ್, ವಾಸುಕಿ ವೈಭವ್ ಮುಂತಾದವರಿದ್ದಾರೆ.

IPL_Entry_Point