ಕನ್ನಡ ಸುದ್ದಿ  /  ಮನರಂಜನೆ  /  Raktaksha: ರಕ್ತಾಕ್ಷ ಸಿನಿಮಾ ಮೂಲಕ ಬೆಳ್ಳಿತೆರೆಗೆ ಎಂಟ್ರಿ ಕೊಟ್ಟ ರಾಯಚೂರಿನ ಪ್ರತಿಭೆ; ನಟ ರೋಹಿತ್‌ಗೆ ವಸಿಷ್ಠ ಸಿಂಹ ಸಾಥ್‌

Raktaksha: ರಕ್ತಾಕ್ಷ ಸಿನಿಮಾ ಮೂಲಕ ಬೆಳ್ಳಿತೆರೆಗೆ ಎಂಟ್ರಿ ಕೊಟ್ಟ ರಾಯಚೂರಿನ ಪ್ರತಿಭೆ; ನಟ ರೋಹಿತ್‌ಗೆ ವಸಿಷ್ಠ ಸಿಂಹ ಸಾಥ್‌

ರೋಹಿತ್ ಹೀರೋ ಆಗಿ ನಟಿಸುತ್ತಿರುವ ರಕ್ತಾಕ್ಷ ಚಿತ್ರದ ಟೈಟಲ್ ಟ್ರ್ಯಾಕ್‌ಗೆ ವಸಿಷ್ಠಸಿಂಹ ಧ್ವನಿಯಾಗಿದ್ದಾರೆ. ಸುಜಿತ್ ವೆಂಕಟ್ ವೆಂಕಟರಾಮಯ್ಯ ಸಾಹಿತ್ಯ, ಧೀರೇಂದರ್ ದಾಸ್ ಸಂಗೀತ ಈ ಹಾಡಿಗಿದ್ದು, ಶೀಘ್ರದಲ್ಲಿ ರಕ್ತಾಕ್ಷ ಟೈಟಲ್ ಟ್ರ್ಯಾಕ್, ಆನಂದ್ ಆಡಿಯೋ ಯೂಟ್ಯೂಬ್ ಚಾನೆಲ್‌ನಲ್ಲಿ ರಿಲೀಸ್ ಆಗಲಿದೆ.

ರಕ್ತಾಕ್ಷ ಟೈಟಲ್‌ ಟ್ರ್ಯಾಕ್‌ಗೆ ದನಿಯಾದ ವಸಿಷ್ಠ ಸಿಂಹ
ರಕ್ತಾಕ್ಷ ಟೈಟಲ್‌ ಟ್ರ್ಯಾಕ್‌ಗೆ ದನಿಯಾದ ವಸಿಷ್ಠ ಸಿಂಹ

ಚಿತ್ರರಂಗದಲ್ಲಿ ಹೆಸರು ಮಾಡಬೇಕೆಂಬ ಉದ್ದೇಶದಿಂದ ಬಹಳ ಪ್ರತಿಭೆಗಳು ಬೆಂಗಳೂರು ಹಾದಿ ಹಿಡಿಯುತ್ತಾರೆ. ಅದರಲ್ಲಿ ಗ್ರಾಮೀಣ ಪ್ರತಿಭೆಗಳೇ ಹೆಚ್ಚು ಎನ್ನಬಹುದು. ಇದೀಗ ರಾಯಚೂರಿನ ಪುಟ್ಟ ಹಳ್ಳಿಗೆ ಸೇರಿದ ರೋಹಿತ್‌ ಕೂಡಾ ಸಿನಿಮಾರಂಗಕ್ಕೆ ಎಂಟ್ರಿ ಕೊಟ್ಟಿದ್ದಾರೆ. ರೋಹಿತ್‌ ಮಾಡೆಲ್‌ ಆಗಿ ಕೂಡಾ ಹೆಸರು ಮಾಡಿದ್ದಾರೆ.

ಟ್ರೆಂಡಿಂಗ್​ ಸುದ್ದಿ

ರೋಹಿತ್‌ ಮಾಡೆಲ್‌ ಆಗಿ ಕೂಡಾ ಗುರುತಿಸಿಕೊಂಡಿದ್ದಾರೆ. ಮೂಲತಃ ಉತ್ತರ ಕರ್ನಾಟಕದ ರಾಯಚೂರು ಜಿಲ್ಲೆಯ ಪುಟ್ಟ ಹಳ್ಳಿಯ ರೋಹಿತ್, ಸುಮಾರು 6 ವರ್ಷಗಳ ಕಾಲ ಮಾಡೆಲಿಂಗ್ ಸಾಮ್ರಾಜ್ಯದಲ್ಲಿ ಮಿಂಚಿದವರು. ಎರಡು ವರ್ಷಗಳ ರಂಗಭೂಮಿ ಅನುಭವ ಪಡೆದಿರುವ ರೋಹಿತ್‌, ಈಗ ರಕ್ತಾಕ್ಷ ಸಿನಿಮಾ ಮೂಲಕ ನಾಯಕನಾಗಿ ಅದೃಷ್ಟ ಪರೀಕ್ಷೆಗೆ ಇಳಿದ್ದಾರೆ. ಒಂದಷ್ಟು ಪ್ರತಿಷ್ಠಿತ ಬ್ರ್ಯಾಂಡ್ ಪ್ರತಿನಿಧಿಸಿರುವ ರೋಹಿತ್‌ಗೆ, ಎಬಿ ಪಾಸಿಟಿವ್ ಸಿನಿಮಾದಲ್ಲಿ ಖಳ ನಾಯಕನಾಗಿ ಅಭಿನಯಿಸಿದ ಅನುಭವಿದೆ. ನಾಯಕನಾಗಿ ಬೆಳ್ಳಿ ಪರದೆಯಲ್ಲಿ ರಾರಾಜಿಸಬೇಕೆಂಬ ಹೊಸ ಉತ್ಸಹ ಹಾಗೂ ಹುಮ್ಮಸ್ಸಿನೊಂದಿಗೆ ತಮ್ಮದೇ ಸಾಯಿ ಪ್ರೊಡಕ್ಷನ್ ಹೌಸ್ ಅಡಿ ರಕ್ತಾಕ್ಷ ಚಿತ್ರ ನಿರ್ಮಾಣ ಮಾಡಿ ನಟಿಸುತ್ತಿದ್ದಾರೆ.

ರಕ್ತಾಕ್ಷ ಚಿತ್ರಕ್ಕೆ ವಾಸುದೇವ ಎಸ್‌ಎನ್ ಆಕ್ಷನ್ ಕಟ್ ಹೇಳುತ್ತಿದ್ದಾರೆ. ಇದು ಇವರ ಚೊಚ್ಚಲ ನಿರ್ದೇಶನದ ಸಿನಿಮಾವಾಗಿದೆ. ಒಂದಷ್ಟು ಸಿನಿಮೋತ್ಸಾಹಿ ಪ್ರತಿಭೆಗಳು ಸೇರಿ ತಯಾರಿಸುತ್ತಿರುವ ರಕ್ತಾಕ್ಷ ಸಿನಿಮಾಗೆ ವಸಿಷ್ಠ ಸಿಂಹ ಸಾಥ್ ಕೊಟ್ಟಿದ್ದಾರೆ. ರೋಹಿತ್ ಹೀರೋ ಆಗಿ ನಟಿಸುತ್ತಿರುವ ಈ ಚಿತ್ರದ ಟೈಟಲ್ ಟ್ರ್ಯಾಕ್‌ಗೆ ಚಿಟ್ಟೆ ಧ್ವನಿಯಾಗಿದ್ದಾರೆ. ಸುಜಿತ್ ವೆಂಕಟ್ ವೆಂಕಟರಾಮಯ್ಯ ಸಾಹಿತ್ಯ, ಧೀರೇಂದರ್ ದಾಸ್ ಸಂಗೀತ ಈ ಹಾಡಿಗಿದ್ದು, ಶೀಘ್ರದಲ್ಲಿ ರಕ್ತಾಕ್ಷ ಟೈಟಲ್ ಟ್ರ್ಯಾಕ್, ಆನಂದ್ ಆಡಿಯೋ ಯೂಟ್ಯೂಬ್ ಚಾನೆಲ್‌ನಲ್ಲಿ ರಿಲೀಸ್ ಆಗಲಿದೆ.

ಚಿಕ್ಕಂದಿನಿಂದಲೇ ಬಣ್ಣದ ಲೋಕದಲ್ಲಿ ಮಿಂಚಬೇಕೆಂಬ ಕನಸು ಕಟ್ಟಿಕೊಂಡಿರುವ ಪ್ರತಿಭಾವಂತ ರೋಹಿತ್, ತನ್ನ ಜೊತೆ ಹಳ್ಳಿ ಪ್ರತಿಭೆಗಳಿಗೂ ಈ ಸಿನಿಮಾದಲ್ಲಿ ಅವಕಾಶ ಕೊಟ್ಟಿದ್ದಾರೆ. ಉಳಿದ ತಾರಾಬಳಗ ಹಾಗೂ ತಾಂತ್ರಿಕ ವರ್ಗದ ಬಗ್ಗೆ ಮುಂದಿನ ದಿನಗಳಲ್ಲಿ ಮಾಹಿತಿ ನೀಡುವುದಾಗಿ ಚಿತ್ರತಂಡ ಮಾಹಿತಿ ನೀಡಿದೆ.

ಮತ್ತಷ್ಟು ಮನರಂಜನೆ ಸುದ್ದಿಗಳು

ಹಿರಿಯ ನಟ ಶರತ್‌ ಬಾಬು ಇನ್ನಿಲ್ಲ; ಬಹು ಅಂಗಾಂಗ ವೈಫಲ್ಯದಿಂದ ಬಳಲುತ್ತಿದ್ದ ಅಮೃತವರ್ಷಿಣಿ ಸಿನಿಮಾ ನಾಯಕ

ಶರತ್‌ ಬಾಬು ಅವರಿಗೆ 71 ವರ್ಷ ವಯಸ್ಸಾಗಿತ್ತು. ಕಳೆದ ತಿಂಗಳು ಶರತ್‌ ಬಾಬು, ಹೈದರಾಬಾದ್‌ ಆಸ್ಪತ್ರೆಯೊಂಕ್ಕೆ ದಾಖಲಾಗಿದ್ದರು. ಅವರ ಆರೋಗ್ಯ ಪರಿಸ್ಥಿತಿ ಬಹಳ ಗಂಭೀರವಾಗಿತ್ತು. ಬಹು ಅಂಗಾಂಗ ವೈಫಲ್ಯದಿಂದ ಬಳಲುತ್ತಿದ್ದ ಶರತ್‌ ಬಾಬು ಅವರಿಗೆ ವೆಂಟಿಲೇಟರ್‌ ನೀಡಿ ಚಿಕಿತ್ಸೆ ನೀಡಲಾಗಿತ್ತು. ಇದಕ್ಕೂ ಮುನ್ನ ಶರತ್‌ ಬಾಬು ಅವರಿಗೆ ಚೆನ್ನೈ ಆಸ್ಪತ್ರೆಯಲ್ಲಿ ಚಿಕಿತ್ಸೆ ನೀಡಲಾಗಿತ್ತು. ಪೂರ್ತಿ ಸ್ಟೋರಿಗೆ ಈ ಲಿಂಕ್‌ ಒತ್ತಿ.

ಬೆಂಗಳೂರಿನಲ್ಲಿ ಸುರಿದ ಧಾರಾಕಾರ ಮಳೆಗೆ ನಟ ಜಗ್ಗೇಶ್‌ ಐಷಾರಾಮಿ ಕಾರು ಮುಳುಗಡೆ; ಮಳೆ ಅವಾಂತರದ ಬಗ್ಗೆ ಟ್ವೀಟ್‌

ಸೋಷಿಯಲ್‌ ಮೀಡಿಯಾದಲ್ಲಿ ಸದಾ ಆಕ್ಟಿವ್‌ ಇರುವ ರಾಜ್ಯಸಭೆ ಸದಸ್ಯ, ನಟ ಜಗ್ಗೇಶ್‌ ತಮ್ಮ ಸಿನಿಮಾಗಳು ಹಾಗೂ ರಾಜಕೀಯ ಜೀವನದ ಅನೇಕ ವಿಚಾರಗಳನ್ನು ಸೋಷಿಯಲ್‌ ಮೀಡಿಯಾದಲ್ಲಿ ಹಂಚಿಕೊಳ್ಳುತ್ತಾ ಬಂದಿದ್ದಾರೆ. ಕಳೆದ ಕೆಲವು ದಿನಗಳಿಂದ ಬೆಂಗಳೂರಿನಲ್ಲಿ ಧಾರಾಕಾರ ಮಳೆ ಸುರಿಯುತ್ತಿದ್ದು ಆ ವಿಚಾರವನ್ನು ಕೂಡಾ ಜಗ್ಗೇಶ್‌ ತಮ್ಮ ಟ್ವಿಟ್ಟರ್‌ನಲ್ಲಿ ಹಂಚಿಕೊಂಡಿದ್ದಾರೆ. ಪೂರ್ತಿ ಸ್ಟೋರಿ ಓದಲು ಈ ಲಿಂಕ್‌ ಕ್ಲಿಕ್‌ ಮಾಡಿ.

IPL_Entry_Point