ಕನ್ನಡ ಸುದ್ದಿ  /  ಮನರಂಜನೆ  /  ರೇಣುಕಾ ಸ್ವಾಮಿ ಹತ್ಯೆ ಪ್ರಕರಣ; ನಟ ದರ್ಶನ್, ಪವಿತ್ರಾ ಗೌಡ ಸೇರಿ 13 ಆರೋಪಿಗಳು 6 ದಿನ ಪೊಲೀಸ್ ಕಸ್ಟಡಿಗೆ ನೀಡಿ ಕೋರ್ಟ್ ಆದೇಶ

ರೇಣುಕಾ ಸ್ವಾಮಿ ಹತ್ಯೆ ಪ್ರಕರಣ; ನಟ ದರ್ಶನ್, ಪವಿತ್ರಾ ಗೌಡ ಸೇರಿ 13 ಆರೋಪಿಗಳು 6 ದಿನ ಪೊಲೀಸ್ ಕಸ್ಟಡಿಗೆ ನೀಡಿ ಕೋರ್ಟ್ ಆದೇಶ

ನಟ ದರ್ಶನ, ಗೆಳತಿ ಪವಿತ್ರಾ ಗೌಡ ಸೇರಿ 13 ಆರೋಪಿಗಳನ್ನು 6 ದಿನ ಪೊಲೀಸ್ ಕಸ್ಟಡಿಗೆ ನೀಡಿ ಬೆಂಗಳೂರಿನ ಮ್ಯಾಜಿಸ್ಟ್ರೇಟ್ ಕೋರ್ಟ್ ಆದೇಶ ನೀಡಿದೆ. ಅಭಿಮಾನಿ ರೇಣುಕಾಸ್ವಾಮಿ ಕೊಲೆ ಪ್ರಕರಣದಲ್ಲಿ ಇವರೆಲ್ಲಾ ಆರೋಪಿಗಳಾಗಿದ್ದಾರೆ.

ರೇಣುಕಾ ಸ್ವಾಮಿ ಹತ್ಯೆ ಪ್ರಕರಣ; ನಟ ದರ್ಶನ್, ಪವಿತ್ರಾ ಗೌಡ ಸೇರಿ 13 ಆರೋಪಿಗಳು 6 ದಿನ ಪೊಲೀಸ್ ಕಸ್ಟಡಿಗೆ ನೀಡಿ ಬೆಂಗಳೂರಿನ ಮ್ಯಾಜಿಸ್ಟ್ರೇಟ್ ಕೋರ್ಟ್ ಆದೇಶ ನೀಡಿದೆ.
ರೇಣುಕಾ ಸ್ವಾಮಿ ಹತ್ಯೆ ಪ್ರಕರಣ; ನಟ ದರ್ಶನ್, ಪವಿತ್ರಾ ಗೌಡ ಸೇರಿ 13 ಆರೋಪಿಗಳು 6 ದಿನ ಪೊಲೀಸ್ ಕಸ್ಟಡಿಗೆ ನೀಡಿ ಬೆಂಗಳೂರಿನ ಮ್ಯಾಜಿಸ್ಟ್ರೇಟ್ ಕೋರ್ಟ್ ಆದೇಶ ನೀಡಿದೆ. (instagram\ pavithra_gowda_7 (All Photos))

ಬೆಂಗಳೂರು: ಅಭಿಮಾನಿ ರೇಣುಕಾ ಸ್ವಾಮಿ ಹತ್ಯೆ ಪ್ರಕರಣದಲ್ಲಿ (Renukaswamy Murder Case) ನಟ ದರ್ಶನ್ (Actor Darshan), ಪವಿತ್ರಾ ಗೌಡ (Pavithra Gowda) ಸೇರಿದಂತೆ 13 ಆರೋಪಿಗಳನ್ನು 6 ದಿನಗಳವರೆಗೆ ಪೊಲೀಸ್ ಕಸ್ಟಡಿಗೆ ನೀಡಿ ಬೆಂಗಳೂರಿನ ಮ್ಯಾಜಿಸ್ಟ್ರೇಟ್ ಕೋರ್ಟ್ ಆದೇಶ ನೀಡಿದೆ. ಪೊಲೀಸ್ ವಶಕ್ಕೆ ನೀಡುತ್ತಿದ್ದಂತೆ ದರ್ಶನ್ ಮತ್ತು ಪವಿತ್ರಾ ಗೌಡ ಕೋರ್ಟ್ ಆವರಣದಲ್ಲೇ ಕಣ್ಣೀರು ಹಾಕಿದ್ದಾರೆ ಎಂದು ವರದಿಯಾಗಿದೆ. ಪವಿತ್ರ ಗೌಡಗೆ ರೇಣುಕಾಸ್ವಾಮಿ ಅಶ್ಲೀಲ ಸಂದೇಶ ಕಳುಹಿಸಿದ್ದಾನೆ ಎಂಬ ಏಕೈಕ ಆರೋಪದ ಮೇಲೆ ದರ್ಶನ್ ಅಭಿಮಾನಿ ಸಂಘದ ಅಧ್ಯಕ್ಷ ರಘು (ರಾಘವೇಂದ್ರ) ಸಹಾಯದಿಂದ ಚಿತ್ರದುರ್ಗದ ರೇಣುಕಾಸ್ವಾಮಿಯನ್ನು ಬೆಂಗಳೂರಿಗೆ ಕರೆತಂದು ತೀವ್ರವಾಗಿ ಹಲ್ಲೆ ಮಾಡಿ ಹತ್ಯೆ ಮಾಡಲಾಗಿದೆ. ದರ್ಶನ್ ಅವರ ಮಾರ್ಗದರ್ಶನದಿಂದಲೇ ಕೃತ್ಯವೆಸಗಿರುವುದಾಗಿ ಆರೋಪಿಗಳ ಮಾಹಿತಿ ಆಧಾರದ ಮೇಲೆ ಬೆಂಗಳೂರಿನ ಅನ್ನಪೂರ್ಣೇಶ್ವರಿ ಠಾಣಾ ಪೊಲೀಸರು ನಟ ದರ್ಶನ, ಪವಿತ್ರಾ ಗೌಡ ಸೇರಿ 13 ಆರೋಪಿಗಳನ್ನು ಬಂಧಿಸಿದ್ದಾರೆ. ರೇಣುಕಾಸ್ವಾಮಿ ದರ್ಶನ್ ಅವರ ಅಭಿಮಾನಿಯಾಗಿದ್ದಾರೆ.

ಟ್ರೆಂಡಿಂಗ್​ ಸುದ್ದಿ

ರೇಣುಕಾಸ್ವಾಮಿ ಹತ್ಯೆ ಸಂಬಂಧ ದರ್ಶನ ಬಂಧನ ಸೇರಿ ಜೂನ್ 11ರಂದು ಏನೆಲ್ಲಾ ನಡೀತು ಅನ್ನೋದರ ಅಂಶಗಳು ಇಲ್ಲಿವೆ

 • ಅಭಿಮಾನಿ ರೇಣುಕಾಸ್ವಾಮಿ ಹತ್ಯೆ ಪ್ರಕರಣ ಸಂಬಂಧ ಬಂಧಿತ ಆರೋಪಿಗಳ ಮಾಹಿತಿ ಮೇರೆಗೆ ಜೂನ್ 11ರ ಮಂಗಳವಾರ ಮೈಸೂರಿನಲ್ಲಿ ನಟ ದರ್ಶನಕ್ಕೆ ಪೊಲೀಸರ ವಶಕ್ಕೆ
 • ವಶಕ್ಕೆ ಪಡೆದಿದ್ದ ದರ್ಶನ್ ಅವರಿಗೆ ಬೆಂಗಳೂರಿನ ಅನ್ನಪೂರ್ಣೇಶ್ವರಿ ಪೊಲೀಸ್ ಠಾಣೆಯಲ್ಲಿ ವಿಚಾರಣೆ

ಇದನ್ನೂ ಓದಿ: ಅಭಿಮಾನಿ ರೇಣುಕಾ ಸ್ವಾಮಿ ಕೊಲೆ ಆರೋಪ ಸಾಬೀತಾದ್ರೆ ನಟ ದರ್ಶನ್‌ಗೆ ಎಷ್ಟು ವರ್ಷ ಜೈಲು ಶಿಕ್ಷೆ?

 • ಅದೇ ಸಮಯಕ್ಕೆ ದರ್ಶನ್ ಗೆಳತಿ ಪವಿತ್ರಾ ಗೌಡ ಕೂಡ ಪೊಲೀಸರ ವಶಕ್ಕೆ
 • ರೇಣುಕಾಸ್ವಾಮಿ ಹತ್ಯೆ ಪ್ರಕರಣ ಸಂಬಂಧ ಒಟ್ಟು 13 ಆರೋಪಿಗಳ ಬಂಧನ
 • ಎಲ್ಲಾ ಆರೋಪಿಗಳಿಗೆ ನಗರದ ಬೌರಿಂಗ್ ಆಸ್ಪತ್ರೆಯಲ್ಲಿ ವೈದ್ಯಕೀಯ ಪರೀಕ್ಷೆ
 • ವೈದ್ಯಕೀಯ ಪರೀಕ್ಷೆ ನಂತರ ನಗರ ಮ್ಯಾಜಿಸ್ಟ್ರೇಟ್ ಕೋರ್ಟ್‌ ಮುಂದೆ ದರ್ಶನ್, ಪವಿತ್ರಾ ಗೌಡ ಸೇರಿ 13 ಆರೋಪಿಗಳನ್ನು ಹಾಜರು ಪಡಿಸಿದ ಪೊಲೀಸರು
 • ಕೋರ್ಟ್‌ನಲ್ಲಿ ನಿನ್ನ ಹೆಸರೇನು, ನಿಮ್ಮ ತಂದೆಯ ಹೆಸರೇನು, ನಿನ್ನನ್ನು ಎಲ್ಲಿ ಬಂಧಿಸಲಾಯಿತು, ಪೊಲೀಸರು ನಿಮಗೆ ಏನಾದರೂ ತೊಂದರೆ ನೀಡಿದರೆ ಎಂಬುದರ ಸೇರಿದಂತೆ ದರ್ಶನ್‌ಗೆ ಹಲವು ಪ್ರಶ್ನೆಗಳನ್ನು ಕೇಳಿದ ನ್ಯಾಯಾಧೀಶರು
 • ನ್ಯಾಯಾಧೀಶಕರ ಪ್ರಶ್ನೆಗಳಿಗೆ ಉತ್ತರ ನೀಡಿದ ದರ್ಶನ್. ನಂತರ ಪೊಲೀಸರ ಪರ ಸರ್ಕಾರಿ ವಕೀಲರ ವಾದ ಮಂಡನೆ, ಪ್ರಕರಣ ಸಂಪೂರ್ಣ ತನಿಖೆಗಾಗಿ 14 ದಿನ ಪೊಲೀಸರ ವಶಕ್ಕೆ ನೀಡುವಂತೆ ಮನವಿ
 • ಸರ್ಕಾರಿ ವಕೀಲರ ಮನವಿಗೆ ದರ್ಶನ್ ಪರ ವಕೀಲರ ಆಕ್ಷೇಪ, ಪೊಲೀಸರ ವಶಕ್ಕೆ ನೀಡುವ ಅಗತ್ಯವೇ ಇಲ್ಲ. ಒಂದು ವೇಳೆ ನೀಡಬೇಕಾದರೆ ಎರಡ್ಮೂರು ದಿನ ಸಾಕೆಂದು ವಾದ

ಇದನ್ನೂ ಓದಿ: ಅಭಿಮಾನಿ ಹತ್ಯೆ ಪ್ರಕರಣದಲ್ಲಿ ನಟ ದರ್ಶನ್‌ ಬಂಧನ; ಜೀವಾವಧಿ ಶಿಕ್ಷೆ ಅಥವಾ ಮರಣದಂಡನೆ ಪೋಸ್ಟ್‌ ರಿಟ್ವೀಟ್ ಮಾಡಿದ ನಟಿ ರಮ್ಯಾ

 • ವಾದ, ಪ್ರತಿವಾದಗಳನ್ನು ಆಲಿಸಿದ ಬಳಿಕ ದರ್ಶನ್, ಪವಿತ್ರಾ ಗೌಡ ಸೇರಿ 13 ಆರೋಪಿಗಳಿಗೆ 6 ದಿನಗಳ ಕಾಲ ಪೊಲೀಸರ ವಶಕ್ಕೆ ನೀಡಿದ ಮ್ಯಾಜಿಸ್ಟ್ರೇಟ್ ಕೋರ್ಟ್ ಆದೇಶ
 • ಬಳಿಕ ಬಿಗಿ ಭದ್ರತೆಯಲ್ಲಿ ಕೋರ್ಟ್‌ನಿಂದ ಆರೋಪಿಗಳನ್ನು ಕರೆದೊಯ್ದು ಪೊಲೀಸರು
 • ದರ್ಶನ ಸ್ನೇಹಿತೆ ಪವಿತ್ರ ಗೌಡ ಅವರಿಗೆ ಅಶ್ಲೀಲ ಸಂದೇಶ ಕಳುಹಿಸಿದ್ದಾನೆ ಎಂಬ ಕಾರಣಕ್ಕೆ ಚಿತ್ರದುರ್ಗ ಮೂಲದ ರೇಣುಕಾ ಸ್ವಾಮಿ ಎಂಬುವರನ್ನು ಜೂನ್ 8ರ ಶನಿವಾರ ಬೆಂಗಳೂರಿಗೆ ಕರೆಸಿಕೊಂಡು ಹಲ್ಲೆ ಮಾಡಿ ಹತ್ಯೆ
 • ನಟ ದರ್ಶನ್ ಮತ್ತು ಅವರ ಆಪ್ತರು ಆರ್‌ಆರ್‌ ನಗರದ ಪಟ್ಟಣಗೆರೆಯಲ್ಲಿರುವ ಜಯಣ್ಣ ಎಂಬುವರ ಮಾಲೀಕತ್ವದ ಶೆಡ್‌ನಲ್ಲಿ ರೇಣುಕಾಸ್ವಾಮಿ ಹತ್ಯೆ ಮಾಡಿ ಶವವನ್ನು ಕಾಮಾಕ್ಷಿಪಾಳ್ಯದ ಬಳಿಯ ಮೋರಿಯಲ್ಲಿ ಎಸೆದಿದ್ದಾರೆ

ಇದನ್ನೂ ಓದಿ: ದರ್ಶನ್‌ ಜತೆ ಬಂಧಿತರಾಗಿರುವ 13 ಆರೋಪಿಗಳ ವಿವರ ಬಹಿರಂಗ; ಚಾಲೆಂಜಿಂಗ್‌ ಸ್ಟಾರ್‌ನ ಕಾಪಾಡಲು ಪ್ರಭಾವಿಗಳ ಒತ್ತಡಕ್ಕೆ ಬಗ್ಗದ ಕರ್ನಾಟಕ ಪೊಲೀಸರು

 • ನಾಯಿಗಳು ಶವವನ್ನು ಎಳೆದಾಡುತ್ತಿದ್ದಾಗ ಸ್ಥಳೀಯರ ಗಮನಕ್ಕೆ ಬಂದಿದೆ. ಕೂಡಲೇ ಪೊಲೀಸರಿಗೆ ಮಾಹಿತಿ ನೀಡಿದ್ದಾರೆ. ಪೊಲೀಸರು ತನಿಖೆ ಕೈಗೊಂಡು ಆರಂಭದಲ್ಲಿ ವಿನಯ್ ಎಂಬುವರು ಸೇರಿ ನಾಲ್ವರನ್ನು ಬಂಧಿಸಿದ್ದಾರೆ
 • ಬಂಧಿತರು ನೀಡಿದ ಮಾಹಿತಿಯ ಮೇರೆಗೆ ಇಂದು (ಜೂನ್ 11, ಮಂಗಳವಾರ) ಬೆಳಗ್ಗೆ 8.30ಕ್ಕೆ ಮೈಸೂರಿನಲ್ಲಿದ್ದ ದರ್ಶನ್ ಅವರನ್ನು ವಶಕ್ಕೆ ಪಡೆದು ಬೆಂಗಳೂರಿಗೆ ಕರೆತರಲಾಗಿದೆ.
 • ಈ ಪ್ರಕರಣದಲ್ಲಿ ನಾನು ಭಾಗಿಯಾಗಿಲ್ಲ. ನನಗೇನು ಗೊತ್ತಿಲ್ಲ, ನನ್ನನ್ನು ಬಿಟ್ಟುಬಿಡಿ ಎಂದು ದರ್ಶನ್ ಪೊಲೀಸರಿಗೆ ಕೇಳಿಕೊಂಡಿದ್ದಾರೆ ಎಂದು ವರದಿಯಾಗಿದೆ

(ಕನ್ನಡದಲ್ಲಿ ಕ್ರಿಕೆಟ್, ಎಚ್‌ಟಿ ಕನ್ನಡ ಬೆಸ್ಟ್‌. ಐಪಿಎಲ್, ಟಿ20 ವರ್ಲ್ಡ್‌ಕಪ್ ಸೇರಿದಂತೆ ಕ್ರಿಕೆಟ್ ಲೋಕದ ಸಮಗ್ರ ಮಾಹಿತಿ, ತಾಜಾ ವಿದ್ಯಮಾನ, ರನ್-ವಿಕೆಟ್, ಪ್ಲೇಆಫ್, ಟೀಮ್ ಸ್ಟಾಟ್ ವಿಶ್ಲೇಷಣೆಗಳಿಗಾಗಿ kannada.hindustantimes.com/cricket ಕ್ಕೆ ಭೇಟಿ ನೀಡಿ.)

ಟಿ20 ವರ್ಲ್ಡ್‌ಕಪ್ 2024