ಕನ್ನಡ ಸುದ್ದಿ  /  Entertainment  /  Rishab Shetty S Kantara Makes History By Becoming First Kannada Film To Win The Special Jury Award At Iffi 2023 Mnk

IFFI 2023: ಕನ್ನಡದಲ್ಲಿಯೇ ಇದು ಮೊದಲು, ಹೊಸ ಇತಿಹಾಸ ಸೃಷ್ಟಿಸಿದ ‘ಕಾಂತಾರ’; ಗೋವಾ ಚಿತ್ರೋತ್ಸವದಲ್ಲಿ ದಕ್ಕಿತು ಗೌರವ

ಗೋವಾದಲ್ಲಿ ಮುಕ್ತಾಯವಾದ 54ನೇ ಅಂತಾರಾಷ್ಟ್ರೀಯ ಚಿತ್ರೋತ್ಸವದಲ್ಲಿ ರಿಷಬ್ ಶೆಟ್ಟಿ ನಿರ್ದೇಶನದ ‘ಕಾಂತಾರ’ ಚಿತ್ರಕ್ಕೆ ತೀರ್ಪುಗಾರರ ವಿಶೇಷ ಪ್ರಶಸ್ತಿ ಸಿಕ್ಕಿದೆ. ಕನ್ನಡ ಚಿತ್ರವೊಂದು ಇದೇ ಮೊದಲ ಬಾರಿಗೆ ಇಂಥದ್ದೊಂದು ಪ್ರಶಸ್ತಿಗೆ ಭಾಜನವಾಗಿದೆ.

IFFI 2023: ಕನ್ನಡದಲ್ಲಿಯೇ ಇದು ಮೊದಲು, ಹೊಸ ಇತಿಹಾಸ ಸೃಷ್ಟಿಸಿದ ‘ಕಾಂತಾರ’; ಗೋವಾ ಚಿತ್ರೋತ್ಸವದಲ್ಲಿ ದಕ್ಕಿತು ಗೌರವ
IFFI 2023: ಕನ್ನಡದಲ್ಲಿಯೇ ಇದು ಮೊದಲು, ಹೊಸ ಇತಿಹಾಸ ಸೃಷ್ಟಿಸಿದ ‘ಕಾಂತಾರ’; ಗೋವಾ ಚಿತ್ರೋತ್ಸವದಲ್ಲಿ ದಕ್ಕಿತು ಗೌರವ

Kantara: ಕಳೆದ ವರ್ಷ ತೆರೆಕಂಡು ಕರ್ನಾಟಕ ಮಾತ್ರವಲ್ಲದೆ, ರಾಷ್ಟ್ರಮಟ್ಟದಲ್ಲಿ ಸದ್ದು ಮಾಡಿತ್ತು ಕಾಂತಾರ ಸಿನಿಮಾ. ಇದೀಗ ಇದೇ ಚಿತ್ರಕ್ಕೆ 54ನೇ ಗೋವಾ ಸಿನಿಮೋತ್ಸವದಲ್ಲಿ ಅವಾರ್ಡ್‌ ಲಭಿಸಿದೆ. ಕನ್ನಡ ಸಿನಿಮಾಕ್ಕೆ ಸಿಕ್ಕ ಮೊದಲ ಅವಾರ್ಡ್‌ ಇದಾಗಿದೆ ಎಂಬುದೇ ವಿಶೇಷ. ಈ ಖುಷಿಯ ಕ್ಷಣದ ವಿಡಿಯೋವನ್ನು ಸ್ವತಃ ರಿಷಬ್‌ ತಮ್ಮ ಸೋಷಿಯಲ್‌ ಮೀಡಿಯಾದಲ್ಲಿ ಹಂಚಿಕೊಂಡಿದ್ದಾರೆ.

ಹೊಂಬಾಳೆ ಫಿಲಂಸ್‍ ನಿರ್ಮಾಣದ, ರಿಷಬ್ ಶೆಟ್ಟಿ ನಿರ್ದೇಶಿಸಿ ನಟಿಸಿರುವ ‘ಕಾಂತಾರ’ ಚಿತ್ರದ ಪ್ರೀಕ್ವೆಲ್‌ ‘ಕಾಂತಾರ – ಅಧ್ಯಾಯ 1’ ಸೋಮವಾರವಷ್ಟೇ ಅದ್ಧೂರಿಯಾಗಿ ಪ್ರಾರಂಭವಾಗಿತ್ತು. ಇದೀಗ ಇದೇ ಕಾಂತಾರ ಚಿತ್ರವು ಇನ್ನೊಂದು ಹೆಗ್ಗಳಿಕೆಗೆ ಪಾತ್ರವಾಗಿದೆ.

ಮಂಗಳವಾರ, ಗೋವಾದಲ್ಲಿ ಮುಕ್ತಾಯವಾದ 54ನೇ ಅಂತಾರಾಷ್ಟ್ರೀಯ ಚಿತ್ರೋತ್ಸವದಲ್ಲಿ ರಿಷಬ್ ಶೆಟ್ಟಿ ನಿರ್ದೇಶನದ ‘ಕಾಂತಾರ’ ಚಿತ್ರಕ್ಕೆ ತೀರ್ಪುಗಾರರ ವಿಶೇಷ ಪ್ರಶಸ್ತಿ ಸಿಕ್ಕಿದೆ. ಕನ್ನಡ ಚಿತ್ರವೊಂದು ಇದೇ ಮೊದಲ ಬಾರಿಗೆ ಇಂಥದ್ದೊಂದು ಪ್ರಶಸ್ತಿಗೆ ಭಾಜನವಾಗಿದೆ.

ಈ ಬಾರಿ ಅಂತಾರಾಷ್ಟ್ರೀಯ ಸ್ಪರ್ಧಾ ವಿಭಾಗದಲ್ಲಿ 15 ಚಿತ್ರಗಳು ಕಣದಲ್ಲಿದ್ದವು. ಈ ಪೈಕಿ ಭಾರತದಿಂದ ‘ಕಾಂತಾರ’ ಸೇರಿದಂತೆ ಒಟ್ಟು ಮೂರು ಚಿತ್ರಗಳು ಸ್ಪರ್ಧೆಯಲ್ಲಿದ್ದವು. ಈ ವಿಭಾಗದಲ್ಲಿ "ಕಾಂತಾರ" ಚಿತ್ರಕ್ಕೆ ತೀರ್ಪುಗಾರರ ವಿಶೇಷ ಪ್ರಶಸ್ತಿ ಸಿಕ್ಕಿದೆ. ಈ ಪ್ರಶಸ್ತಿ ಪ್ರಮಾಣ ಪತ್ರ, ರಜತ ಮಯೂರ ಮತ್ತು 15 ಲಕ್ಷ ರೂ. ನಗದನ್ನು ಒಳಗೊಂಡಿದೆ.

ಈ ಸಂದರ್ಭದಲ್ಲಿ ಮಾತನಾಡಿರುವ ರಿಷಬ್ ಶೆಟ್ಟಿ, ‘ಕಳೆದ ವರ್ಷ ಗೋವಾ ಅಂತಾರಾಷ್ಟ್ರೀಯ ಚಿತ್ರೋತ್ಸವಕ್ಕೆ ಚಿತ್ರದ ಪ್ರಚಾರಕ್ಕಾಗಿ ಬಂದಿದ್ದೆವು. ಈ ಬಾರಿ ನಮ್ಮ ಚಿತ್ರ ಅಂತಾರಾಷ್ಟ್ರೀಯ ಸ್ಪರ್ಧಾ ವಿಭಾಗದಲ್ಲಿ ಸ್ಪರ್ಧಿಸಿ, ತೀರ್ಪುಗಾರರ ವಿಶೇಷ ಪ್ರಶಸ್ತಿಯನ್ನು ಗೆದ್ದಿದೆ. ಇದು ನಮ್ಮೆಲ್ಲರಿಗೂ ಹೆಮ್ಮೆಯ ವಿಷಯ’ ಎಂದು ತಮ್ಮ ಸಂತೋಷವನ್ನು ಹಂಚಿಕೊಂಡಿದ್ದಾರೆ.

‘ಕಾಂತಾರ’ ಚಿತ್ರವು ಕಳೆದ ವರ್ಷ ಬಿಡುಗಡೆಯಾಗಿ ಅಭೂತಪೂರ್ವ ಯಶಸ್ಸು ಪಡೆಯುವುದರ ಜೊತೆಗೆ, ಪ್ರೇಕ್ಷಕರಿಂದ ಮೆಚ್ಚುಗೆಗೆ ಪಾತ್ರವಾಗಿ ಹಲವು ಭಾಷೆಗಳಿಗೆ ಡಬ್‍ ಆಗಿತ್ತು. ರಿಷಬ್ ಶೆಟ್ಟಿ, ಸಪ್ತಮಿ ಗೌಡ, ಅಚ್ಯುತ್‍ ಕುಮಾರ್, ಕಿಶೋರ್ ಮುಂತಾದವರು ಅಭಿನಯಿಸಿರುವ ಈ ಚಿತ್ರಕ್ಕೆ ಅಜನೀಶ್‍ ಲೋಕನಾಥ್‍ ಅವರ ಸಂಗೀತ ಮತ್ತು ಅರವಿಂದ್‍ ಕಶ್ಯಪ್‍ ಛಾಯಾಗ್ರಹಣವಿದೆ.

ಸಿನಿಮಾ, ಕನ್ನಡ ಕಿರುತೆರೆ, ರಿಯಾಲಿಟಿ ಶೋ ಮತ್ತು ಒಟಿಟಿ ಕುರಿತ ಅಪ್‌ಡೇಟ್‌ಗಳಿಗಾಗಿ, "ಹಿಂದೂಸ್ತಾನ್ ಟೈಮ್ಸ್ ಕನ್ನಡ" ವೆಬ್‌ಸೈಟ್ ನೋಡಿ