ಯಶ್ ತಾಯಿ ನಿರ್ಮಾಣದ ಕೊತ್ತಲವಾಡಿ ಸಿನಿಮಾದ ಟೀಸರ್ ಬಿಡುಗಡೆ, ಮಾಸ್‌ ಅವತಾರದಲ್ಲಿ ಮಿಂಚಿದ ಪೃಥ್ವಿ ಅಂಬಾರ್
ಕನ್ನಡ ಸುದ್ದಿ  /  ಮನರಂಜನೆ  /  ಯಶ್ ತಾಯಿ ನಿರ್ಮಾಣದ ಕೊತ್ತಲವಾಡಿ ಸಿನಿಮಾದ ಟೀಸರ್ ಬಿಡುಗಡೆ, ಮಾಸ್‌ ಅವತಾರದಲ್ಲಿ ಮಿಂಚಿದ ಪೃಥ್ವಿ ಅಂಬಾರ್

ಯಶ್ ತಾಯಿ ನಿರ್ಮಾಣದ ಕೊತ್ತಲವಾಡಿ ಸಿನಿಮಾದ ಟೀಸರ್ ಬಿಡುಗಡೆ, ಮಾಸ್‌ ಅವತಾರದಲ್ಲಿ ಮಿಂಚಿದ ಪೃಥ್ವಿ ಅಂಬಾರ್

ರಾಕಿಂಗ್‌ ಸ್ಟಾರ್‌ ಯಶ್‌ ಅವರ ತಾಯಿಯ ಪ್ರೊಡಕ್ಷನ್‌ ಹೌಸ್‌ ನಿರ್ಮಿಸಿದ ಕೊತ್ತಲವಾಡಿ ಸಿನಿಮಾದ ಟೀಸರ್‌ ರಿಲೀಸ್‌ ಆಗಿದೆ. ಇದು ಈ ಸಂಸ್ಥೆಯ ಮೊದಲ ಚಿತ್ರ. ಈ ಟೀಸರ್‌ನಲ್ಲಿ ಪೃಥ್ವಿ ಅಂಬಾರ್ ಮಾಸ್‌ ಮತ್ತು ರಗಡ್‌ ಅವತಾರದಲ್ಲಿ ಕಾಣಿಸಿದ್ದಾರೆ.

ಕೊತ್ತಲವಾಡಿ ಸಿನಿಮಾದ ಟೀಸರ್ ಬಿಡುಗಡೆ, ಮಾಸ್‌ ಅವತಾರದಲ್ಲಿ ಮಿಂಚಿದ ಪೃಥ್ವಿ ಅಂಬಾರ್
ಕೊತ್ತಲವಾಡಿ ಸಿನಿಮಾದ ಟೀಸರ್ ಬಿಡುಗಡೆ, ಮಾಸ್‌ ಅವತಾರದಲ್ಲಿ ಮಿಂಚಿದ ಪೃಥ್ವಿ ಅಂಬಾರ್

ಬೆಂಗಳೂರು: ಭಾರತೀಯ ಚಿತ್ರರಂಗವನ್ನು ಕನ್ನಡದತ್ತ ತಿರುಗಿ ನೋಡುವಂತೆ ಮಾಡಿರುವವ ಪೈಕಿ ನಟ ರಾಕಿಂಗ್‌ ಸ್ಟಾರ್‌ ಯಶ್‌ ಕೂಡ ಒಬ್ಬರು. ಅವರ ತಾಯಿ ತಮ್ಮದೇ ಪಿಎ ಪ್ರೊಡಕ್ಷನ್ಸ್‌ ಸ್ಥಾಪಿಸಿದ್ದಾರೆ. ಈ ನಿರ್ಮಾಣ ಸಂಸ್ಥೆಯಡಿ ಕೊತ್ತಲವಾಡಿ ಎಂಬ ಚೊಚ್ಚಲ ಚಿತ್ರ ತಯಾರಾಗಿದೆ. ಈ ಟೀಸರ್‌ ಬಿಡುಗಡೆ ಕಾರ್ಯಕ್ರಮ ಬೆಂಗಳೂರಿನ ಒರೆಯನ್‌ ಮಾಲ್‌ ನಲ್ಲಿ ನಡೆಯಿತು. ಟೀಸರ್‌ ಕಾರ್ಯಕ್ರಮದಲ್ಲಿ ನಿರ್ಮಾಪಕಿ ಪುಷ್ಪ ಅರುಣ್‌ ಕುಮಾರ್‌, ಯಶ್‌ ತಂದೆ ಅರುಣ್‌ ಕುಮಾರ್‌, ನಟ ಪೃಥ್ವಿ ಅಂಬಾರ್, ನಟಿ ಕಾವ್ಯ, ಗೋಪಾಲಕೃಷ್ಣ ದೇಶಪಾಂಡೆ, ರಾಜೇಶ್ ನಟರಂಗ, ನಿರ್ದೇಶಕ ಶ್ರೀರಾಜ್ ಭಾಗಿಯಾಗಿದ್ದರು. ನಟ ಶರಣ್‌ ಟೀಸರ್‌ ರಿಲೀಸ್‌ ಕಾರ್ಯಕ್ರಮ ವಿಶೇಷ ಅತಿಥಿಯಾಗಿ ಆಗಮಿಸಿ ಟೀಸರ್‌ ಅನಾವರಣ ಮಾಡಿ ಶುಭಾಶಯ ತಿಳಿಸಿದ್ದಾರೆ.

"ನಮ್ಮ ಯಶಸ್ಸಿನ ಗುಟ್ಟು ಈ ಒಗ್ಗಟ್ಟಿನ ಸಾಕ್ಷಿ, ಈ ಚಿತ್ರಕ್ಕೆ ಕೆಲಸ ಮಾಡಿರುವ ಮುಖದಲ್ಲಿ ಕುತೂಹಲ, ಪಾಸಿಟಿವ್‌ ಎನರ್ಜಿ, ಭಕ್ತಿ, ಆತ್ಮೀಯತೆ, ಪ್ರೀತಿ ಇದೆ. ಇಷ್ಟು ಸಾಕು ಒಂದು ಯಶಸ್ವಿಗೆ. ಈ ಕಾರ್ಯಕ್ರಮಕ್ಕೆ ನನಗೆ ಆಹ್ವಾನ ಕೊಟ್ಟಿದ್ದಕ್ಕೆ ಅಮ್ಮನಿಗೆ ಧನ್ಯವಾದ. ಇಷ್ಟು ವರ್ಷದ ಕನಸ್ಸು ಲೋಕಾರ್ಪಣೆ ಮಾಡುತ್ತಿರುವ ಖುಷಿ ಚಿತ್ರತಂಡದ ಮುಖದಲ್ಲಿ ಕಾಣಿಸುತ್ತದೆ. ಇಡೀ ತಂಡಕ್ಕೆ ದೊಡ್ಡ ಯಶಸ್ಸು ಸಿಗಲಿ" ಎಂದು ಟೀಸರ್‌ ಬಿಡುಗಡೆ ಮಾಡಿದ ಬಳಿಕ ಶರಣ್‌ ಶುಭಹಾರೈಸಿದ್ದಾರೆ.

"ಸಿನಿಮಾ ಅವಕಾಶ ಕೊಡುತ್ತೇನೆ ಎಂದು ಸುತ್ತಿಕೊಂಡು ಬರಬಾರದು. ಕೆಲಸ ಮಾತನಾಡಬೇಕು. ನಾವು ಮಾತನಾಡಬಾರದು. ಈ ಸಿನಿಮಾನಾ ನಾವು ನೋಡಲ್ಲ.‌ ಯಶ್‌ ಮನೆ ಸಿನಿಮಾ ಅಂದ್ರೆ ಇಡೀ ದೇಶ ನೋಡುತ್ತದೆ. ಅದಕ್ಕೆ ತಕ್ಕ ರೀತಿ ಮಾಡಿ. ಇಲ್ಲ ಅಂದರೆ ಮಾಡಬೇಡಿ. ಎಲ್ಲ ನಿಮಗೆ ಕೊಡುತ್ತೇವೆ. ಆರ್ಟಿಸ್ಟ್‌ ಯಾರು ಬೇಕು. ಎಲ್ಲಾ ಸೆಲೆಕ್ಷನ್‌ ಅವರೇ ಮಾಡಿದ್ದಾರೆ. ನಮ್ಮ ಬ್ಯಾನರ್‌ ಯಾವುದು? ಎಲ್ಲವನ್ನೂ ಯಶ್‌ ಗೆ ಉತ್ತರ ಕೊಡಬೇಕು. ಯಶ್‌ ನಿಂದ ನಾವು ಏನು ಕಲಿತಿದ್ದೇವೆ ಎಂದರೆ ಸಿನಿಮಾ ಏನು ಕೇಳುತ್ತದೆಯೋ ಅದು ಕೊಡಬೇಕು.ಸಿನಿಮಾಗೆ ಮೋಸ ಮಾಡಬಾರದು ಎನ್ನುವುದು. 10 ರೂಪಾಯಿ ಜಾಸ್ತಿಯಾಗಲಿ. ಕ್ವಾಲಿಟಿ ಕೊಡಬೇಕು. ಕಥೆ ಮಾತನಾಡಬೇಕು. ಅದೇ ರೀತಿ ನೀವು ಮಾಡುತ್ತೇವೆ ಎಂದರೆ ನಿಮಗೆ ಕೊಡುತ್ತೇವೆ ಎಂದು ಹೇಳಿದ್ದೆ. ಆಡಿಯನ್ಸ್‌ ನೀಡುವ ಫಲಿತಾಂಶಕ್ಕೆ ನಾವು ಕಾಯುತ್ತೇವೆ" ಎಂದು ನಿರ್ಮಾಪಕಿ ಪುಷ್ಪ ಅರುಣ್‌ ಕುಮಾರ್‌ ಹೇಳಿದ್ದಾರೆ. ಅರುಣ್‌ ಕುಮಾರ್‌ ಮಾತನಾಡಿ, ನಿನಗೆ ಖುಷಿಯಾದರೆ ಮಾಡಮ್ಮ. ನಾನು ರೈತ. ನೀನು ಏನ್‌ ಬೇಕಾದರೂ ಮಾಡು ಎಂದು ಪತ್ನಿಗೆ ಬೆಂಬಲವಾಗಿ ನಿಂತಿರುವುದಾಗಿ ತಿಳಿಸಿದರು.

"ರಾಜು ಸರ್‌ ನನಗೆ ಮೊದಲಿನಿಂದ ಪರಿಚಯ. ನನಗೆ ಅವರು ಹೇಳಿರುವ ಎರಡನೇ ಕಥೆ. ಹಳ್ಳಿಯ ಸೊಡಗಿರುವ, ಹಳ್ಳಿಯ ಮುಗ್ದ, ಪವರ್‌ ಫುಲ್‌ ಸ್ಟ್ರಾಂಗ್‌ ಕ್ಯಾರೆಕ್ಟರ್‌ ಪ್ಲೇ ಮಾಡಬೇಕು ಎಂಬ ಮನಸ್ಸು ಇತ್ತು. ಎಲ್ಲರೂ ಚೆನ್ನಾಗಿ ಪಾತ್ರ ಮಾಡಿದ್ದಾರೆ. ಸಿನಿಮಾ ಮುಗಿದ್ರು ಪ್ರೊಡ್ಯೂಸರ್‌ ಯಾರು ಎಂದು ಗೊತ್ತಿರಲಿಲ್ಲ. ಪ್ರೊಡಕ್ಷನ್‌ ಹೌಸ್‌ ಮೀಟ್‌ ಮಾಡೋಣಾ ಎಂದು ರಾಜು ಸರ್‌ ಹೇಳುತ್ತಿದ್ದರು. ಮ್ಯಾಮ್‌ ಹಾಸನ್‌ ಮನೆಗೆ ಹೋದೆವು. ಮೀಟಿಂಗ್‌ ಮುಗಿಸಿ ಹೊರಟ ಬಳಿಕ ಮ್ಯಾಮ್‌ ಕಾಲಿಗೆ ಬಿದ್ದಾಗ ನನ್ನ ಮಗನಿಗಿಂತ ಚೆನ್ನಾಗಿ ಬೆಳೆಯಪ್ಪ ಎಂದರು. ಮ್ಯಾಮ್‌ ಬ್ರ್ಯಾಗ್ರೌಂಡ್‌ ಇಲ್ಲದವರ ಜೊತೆ ನಿಲ್ಲುತ್ತಾರೆ ಎಂಬ ನಂಬಿಕೆ ಇದೆ. ಸಿನಿಮಾ ಕಥೆಗೆ ಏನೋ ಬೇಕು ಎಲ್ಲವನ್ನೂ ಕೊಟ್ಟಿದ್ದಾರೆ. ಬಹಳ ಪ್ರೀತಿಯಿಂದ ಎಲ್ಲರೂ ಈ ಸಿನಿಮಾಗೆ ಕೆಲಸ ಮಾಡಿದ್ದಾರೆ" ಎಂದು ನಟ ಪೃಥ್ವಿ ಅಂಬಾರ್ ಹೇಳಿದ್ದಾರೆ.

"ನನಗೆ ಮೊದಲ ಬಾರಿಗೆ ಅವಕಾಶ ಕೊಟ್ಟಿರುವುದಕ್ಕೆ ಅಪ್ಪಾಜಿ-ಅಮ್ಮನಿಗೆ ಧನ್ಯವಾದ. ಅಮ್ಮ ಕಥೆ ಜಡ್ಟ್‌ ಮೆಂಟ್‌ ಚೆನ್ನಾಗಿ ಮಾತನಾಡುತ್ತಾರೆ. ಆಗ ನಾನು ಕಥೆ ಹೇಳಿದೆ ಅವರು ಇದು ವರ್ಕ್‌ ಆಗಲ್ಲ ಎಂದರು. ನಾನು ಸಿನಿಮಾ ಮಾಡುವುದು ನನಗೆ ನಿನಗೆ ಮಾತ್ರ ಗೊತ್ತಿರಬೇಕು. ಯಾರಿಗೂ ಗೊತ್ತಾಗಬಾರದು ಎಂದು ಹೇಳಿದರು. ಕೊತ್ತಲವಾಡಿ ಒನ್‌ ಲೈನ್‌ ಕಥೆ ಹೇಳಿದೆ ಅವರಿಗೆ ಇಷ್ಟವಾಯ್ತು. ಅದಕ್ಕೆ ಓಂಕಾರ ಹಾಕಿದರು. ಕಥೆ ಬರೆಯೋದಿಕ್ಕೆ ಎಂಟು ತಿಂಗಳು ಟೈಮ್‌ ತೆಗೆದುಕೊಂಡೆ. ಕಥೆ ಪೂರ್ತಿಯಾದಾಗ ಬಾ ಎಂದಿದ್ದರು. ಅಮ್ಮನಿಗೆ ಪೂರ್ತಿಯಾಗಿ ಕಥೆ ಹೇಳಿದೆ ಅವರಿಗೆ ಇಷ್ಟವಾಯ್ತು. ಅಲ್ಲಿಂದ ಈ ಜರ್ನಿ ಶುರುವಾಯ್ತು" ಎಂದು ನಿರ್ದೇಶಕ ಶ್ರೀರಾಜ್‌ ಹೇಳಿದರು.

ಟೀಸರ್ ಹೇಗಿದೆ?

ಕೊತ್ತಲವಾಡಿ ಟೀಸರ್‌ ನಿರೀಕ್ಷೆಗಿಂತಲೂ ಅದ್ಭುತವಾಗಿ ಕಟ್ಟಿಕೊಡಲಾಗಿದೆ. ಇಷ್ಟು ದಿನ ರೋಸ್‌ ಹಿಡಿಯುತ್ತಿದ್ದ ಪೃಥ್ವಿ ಈಗ ಕಂಪ್ಲೀಟ್‌ ರಗಡ್‌ ಹಾಗೂ ಮಾಸ್‌ ಅವತಾರದಲ್ಲಿ ಕಾಣಿಸಿಕೊಂಡಿದ್ದಾರೆ. ಟೀಸರ್‌ ಕ್ವಾಲಿಟಿ ಚೆನ್ನಾಗಿದೆ. ಕೊತ್ತಲವಾಡಿ ಎಂಬ ಹಳ್ಳಿಯಲ್ಲಿ ನಡೆಯುವ ಕಥೆಯನ್ನು ನಿರ್ದೇಶಕ ಶ್ರೀರಾಜ್‌ ಹೇಳೋದಿಕ್ಕೆ ಹೊರಟಿದ್ದಾರೆ. ವಿಕಾಸ್‌ ವಸಿಷ್ಠ ಸಂಗೀತ, ಅಭಿನಂದನ್‌ ಕಶ್ಯಪ್‌ ಹಿನ್ನೆಲೆ ಸಂಗೀತ ಟೀಸರ್‌ ಹೈಲೆಟ್.

ಹಿರಿಯ ನಿರ್ದೇಶಕರಾದ ಕೆವಿ ರಾಜು, ರವಿಶ್ರೀವತ್ಸ ಗರಡಿಯಲ್ಲಿ ಕೆಲಸ ಮಾಡಿರುವ ಶ್ರೀರಾಜ್ ಈ ಚಿತ್ರದ ಮೂಲಕ ಸ್ವತಂತ್ರ ನಿರ್ದೆಶಕರಾಗಿ ಮೊದಲ ಹೆಜ್ಜೆ ಇಡುತ್ತಿದ್ದಾರೆ. ಕನ್ನಡದ ಪ್ರತಿಭಾನ್ವಿತ ನಾಯಕ ಪೃಥ್ವಿ ಅಂಬರ್ ನಾಯಕನಾಗಿ ನಟಿಸುತ್ತಿದ್ದು, ಕಿರುತೆರೆ ನಟಿ ಕಾವ್ಯಾ ಶೈವ ನಾಯಕಿಯಾಗಿ ನಟಿಸುತ್ತಿದ್ದಾರೆ. ಗೋಪಾಲಕೃಷ್ಣ ದೇಶಪಾಂಡೆ, ರಾಜೇಶ್ ನಟರಂಗರಂತಹ ಅನುಭವಿ ತಾರಾಬಳಗ ಚಿತ್ರದಲ್ಲಿದೆ. PA ಪ್ರೊಡಕ್ಷನ್ಸ್ ಪ್ರಮುಖ ಉದ್ದೇಶ ಹೊಸ ಪ್ರತಿಭೆಗಳಿಗೆ ಅವಕಾಶ ನೀಡಬೇಕೆಂಬ ನಿಟ್ಟಿನಲ್ಲಿ ಪುಷ್ಪ ಅರುಣ್ ಕುಮಾರ್ ನಿರ್ಮಾಣ ಸಂಸ್ಥೆಯನ್ನು ಹುಟ್ಟಾಕಿದ್ದಾರೆ. ಅದರಂತೆ ಕೊತ್ತಲವಾಡಿ ಚಿತ್ರದಲ್ಲಿಯೂ ಹೊಸ ಪ್ರತಿಭೆಗಳಿಗೆ ಅವಕಾಶ ದೊರೆತಿದೆ. ಯುವ ನಿರ್ದೇಶಕರ ಜೊತೆಗೆ ಹಿನ್ನೆಲೆ ಸಂಗೀತ ಕೊಟ್ಟಿರುವ ಅಭಿನಂದನ್ ಕಶ್ಯಪ್, ಸಾಹಸ ನಿರ್ದೇಶಕ ಸಾಗರ್ ಕೂಡ ಹೊಸಬರೇ.

ಹಳ್ಳಿ ಹಿನ್ನೆಲೆಯಲ್ಲಿ ಸಾಗುವ ಕಥೆಯಲ್ಲಿ ಪೃಥ್ವಿ ಅಂಬಾರ್ ಆಕ್ಷನ್ ಹೀರೋ ಆಗಿ ಕಾಣಿಸಿಕೊಳ್ಳುತ್ತಾರೆ. ಕಾರ್ತಿಕ್ ಎಸ್ ಕ್ಯಾಮೆರಾ ಕೈಚಳಕ, ರಾಮಿಸೆಟ್ಟಿ ಪವನ್ ಸಂಕಲನ, ವಿಕಾಸ್ ವಸಿಷ್ಠ ಸಂಗೀತ, ರಘು ನಿಡುವಳ್ಳಿ ಸಂಭಾಷಣೆ, ಡಾ.ವಿ.ನಾಗೇಂದ್ರ ಪ್ರಸಾದ್, ಕಿನ್ನಾಳ್ ರಾಜ್ ಹಾಗೂ ಪ್ರಮೋದ್ ಮರವಂತೆ, ಗೌಸ್ ಪಿರ್ ಸಾಹಿತ್ಯ ಕೊತ್ತಲವಾಡಿ ಸಿನಿಮಾಗೆ ಇದೆ.

Praveen Chandra B

TwittereMail
ಪ್ರವೀಣ್ ಚಂದ್ರ ಪುತ್ತೂರು: 'ಹಿಂದೂಸ್ತಾನ್‌ ಟೈಮ್ಸ್‌ ಕನ್ನಡ'ದಲ್ಲಿ ಸಹಾಯಕ ಸುದ್ದಿ ಸಂಪಾದಕ. ಒನ್‌ ಇಂಡಿಯಾ, ವಿಜಯ ಕರ್ನಾಟಕದಲ್ಲಿ ಒಟ್ಟು 16 ವರ್ಷಗಳ ಅನುಭವ. ಆನ್‌ಲೈನ್‌ ಪತ್ರಿಕೋದ್ಯಮದಲ್ಲಿ ಎತ್ತರದ ಸಾಧನೆ ಮಾಡುವ ಕನಸು. ಡಿಜಿಟಲ್‌ ಜಗತ್ತಿನಲ್ಲಿ ಹೊಸತನ್ನು ಕಲಿಯುವ ಆಸಕ್ತಿ. ಮನರಂಜನೆ, ಶಿಕ್ಷಣ, ಉದ್ಯೋಗ, ತಂತ್ರಜ್ಞಾನ, ವಾಣಿಜ್ಯ, ಕರ್ನಾಟಕ, ದೇಶ- ವಿದೇಶ, ಸಿನಿಮಾ, ಷೇರುಪೇಟೆ, ಜೀವನಶೈಲಿ... ಹಲವು ವಿಚಾರಗಳ ಬಗ್ಗೆ ತಳಸ್ಪರ್ಶಿಯಾಗಿ ಬರೆಯಬಲ್ಲರು. ಎಸ್‌ಇಒ ತಂತ್ರಗಳನ್ನು ಪತ್ರಿಕೋದ್ಯಮದ ಹದಕ್ಕೆ ಪಳಗಿಸುವ ಸಾಮರ್ಥ್ಯ ರೂಢಿಸಿಕೊಂಡವರು. ಇಮೇಲ್: praveen.chandra@htdigital.in