Manada Kadalu: ಮುಂಗಾರು ಮಳೆಗೆ ಹದಿನೆಂಟರ ಹರೆಯ, ಅದೇ ನೆನಪಲ್ಲಿ ಮನದ ಕಡಲು ಚಿತ್ರದ ಮನಮೋಹಕ ಗೀತೆ ಬಿಡುಗಡೆ
ಕನ್ನಡ ಸುದ್ದಿ  /  ಮನರಂಜನೆ  /  Manada Kadalu: ಮುಂಗಾರು ಮಳೆಗೆ ಹದಿನೆಂಟರ ಹರೆಯ, ಅದೇ ನೆನಪಲ್ಲಿ ಮನದ ಕಡಲು ಚಿತ್ರದ ಮನಮೋಹಕ ಗೀತೆ ಬಿಡುಗಡೆ

Manada Kadalu: ಮುಂಗಾರು ಮಳೆಗೆ ಹದಿನೆಂಟರ ಹರೆಯ, ಅದೇ ನೆನಪಲ್ಲಿ ಮನದ ಕಡಲು ಚಿತ್ರದ ಮನಮೋಹಕ ಗೀತೆ ಬಿಡುಗಡೆ

ಯೋಗರಾಜ್‌ ಭಟ್‌ ನಿರ್ದೇಶನದ ಮನದ ಕಡಲು ಚಿತ್ರದ ಮೊದಲ ಹಾಡು ಬಿಡುಗಡೆ ಆಗಿದೆ. 18 ವರ್ಷಗಳ ಹಿಂದೆ ಡಿಸೆಂಬರ್‌ 29ರಂದು ಮುಂಗಾರು ಮಳೆ ಸಿನಿಮಾ ರಿಲೀಸ್‌ ಆಗಿತ್ತು. ಈಗ ಅದೇ ದಿನದಂದೇ ಮನದ ಕಡಲು ಚಿತ್ರದ ಮೆಲೋಡಿ ಹಾಡನ್ನು ಹೊತ್ತು ತಂದಿದೆ ಚಿತ್ರತಂಡ.

ಮುಂಗಾರು ಮಳೆಗೆ ಹದಿನೆಂಟರ ಹರೆಯ, ಅದೇ ನೆನಪಲ್ಲಿ ಮನದ ಕಡಲು ಚಿತ್ರದ ಮನಮೋಹಕ ಗೀತೆ ಬಿಡುಗಡೆ
ಮುಂಗಾರು ಮಳೆಗೆ ಹದಿನೆಂಟರ ಹರೆಯ, ಅದೇ ನೆನಪಲ್ಲಿ ಮನದ ಕಡಲು ಚಿತ್ರದ ಮನಮೋಹಕ ಗೀತೆ ಬಿಡುಗಡೆ

Manada Kadalu Song: ಸ್ಯಾಂಡಲ್‌ವುಡ್‌ನ ಎವರ್‌ಗ್ರೀನ್‌ ಸಿನಿಮಾ ಸಾಲಿನಲ್ಲಿ ಮುಂಗಾರು ಮಳೆ ಸಿನಿಮಾ ಸಹ ಒಂದು. 2006 ಡಿಸೆಂಬರ್‌ನಲ್ಲಿ ತೆರೆಕಂಡಿದ್ದ ಈ ಚಿತ್ರ, ಇಂದಿಗೂ ಎಲ್ಲರ ಹಾಟ್‌ ಪೇವರಿಟ್‌. ಅಂದಿನ ಹಾಡುಗಳು ಇಂದಿಗೂ ಅದೇ ಇಂಪು. ಡೈಲಾಗ್‌ಗಳೂ ಅಷ್ಟೇ ಫೇಮಸ್‌. ಅದರಂತೆ ಈ ಚಿತ್ರಕ್ಕೀಗ ಹದಿನೆಂಟರ ಹರೆಯ. ಇದೀಗ ಇದೇ ಮುಂಗಾರು ಮಳೆ ನೆನಪಿನಲ್ಲಿಯೇ ಆ ಸಿನಿಮಾದ ನಿರ್ಮಾಪಕರು ಮತ್ತು ನಿರ್ದೇಶಕರು ಮನದ ಕಡಲು ಸಿನಿಮಾ ಮೂಲಕ ಒಂದಾಗಿದ್ದಾರೆ. ಮುಂಗಾರು ಮಳೆ ಬಿಡುಗಡೆ ಆದ ದಿನವೇ ಮನದ ಕಡಲು ಸಿನಿಮಾದ ಹಾಡೊಂದನ್ನು ಬಿಡುಗಡೆ ಮಾಡಿದ್ದಾರೆ.

ಹದಿನೆಂಟು ವರ್ಷಗಳ ಹಿಂದೆ ಇ.ಕೆ. ಎಂಟರ್ಟೈನರ್ಸ್ ಬ್ಯಾನರ್‌ನಲ್ಲಿ ಇ. ಕೃಷ್ಣಪ್ಪ ನಿರ್ಮಿಸಿ, ಯೋಗರಾಜ್ ಭಟ್ ನಿರ್ದೇಶಿಸಿದ್ದ ಮುಂಗಾರು ಮಳೆ, ಬಿಡುಗಡೆಯಾಗಿ ಇದೇ ಡಿಸೆಂಬರ್‌ಗೆ ಹದಿನೆಂಟು ವರ್ಷ ತುಂಬಿದೆ. ಹದಿನೆಂಟು ವರ್ಷಗಳ ಬಳಿಕ ಈ ಜೋಡಿ ಮತ್ತೆ ಒಂದಾಗಿದೆ. ಇ.ಕೃಷ್ಣಪ್ಪ ನಿರ್ಮಾಣದಲ್ಲಿ,‌ ಯೋಗರಾಜ್ ಭಟ್ ನಿರ್ದೇಶನದಲ್ಲಿ ಮನದ ಕಡಲು ಮೂಡಿ ಬರುತ್ತಿದೆ. ಮುಂಗಾರು ಮಳೆ ಬಿಡುಗಡೆಯಾದ ದಿನವೇ ಮನದ ಕಡಲು ಚಿತ್ರಕ್ಕಾಗಿ ನಿರ್ದೇಶಕ ಯೋಗರಾಜ್ ಭಟ್ ಬರೆದಿರುವ, ವಿ.ಹರಿಕೃಷ್ಣ ಸಂಗೀತ ನೀಡಿರುವ "ಹೂ ದುಂಬಿಯ ಕಥೆಯ.." ಎಂಬ ಮನಮೋಹಕ ಹಾಡು ಡಿ ಬಿಟ್ಸ್ ಮೂಲಕ ಬಿಡುಗಡೆಯಾಗಿದೆ. ಗಾಯಕ ಸಂಜಿತ್ ಹೆಗ್ಡೆ ಈ ಹಾಡಿಗೆ ಧ್ವನಿಯಾಗಿದ್ದಾರೆ.

ಹೂ ದುಂಬಿಯ ಕಥೆಯ.. ಹಾಡು ಬಿಡುಗಡೆ

‘ಮುಂಗಾರು ಮಳೆ' ಬಂದು ಹದಿನೆಂಟು ವರ್ಷ ಆಯಿತು ಅಂದರೆ ನಂಬಲಿಕ್ಕೆ ಆಗುತ್ತಿಲ್ಲ. ನಿನ್ನೆ ಮೊನ್ನೆ ಆದ ಹಾಗೆ ಇದೆ. ಇಂದಿಗೆ "ಮುಂಗಾರು ಮಳೆ" ಬಿಡುಗಡೆಯಾಗಿ ಹದಿನೆಂಟು ವರ್ಷಗಳಾಗಿದೆ. ಇದೇ ಸಂದರ್ಭದಲ್ಲಿ ಇ. ಕೃಷ್ಣಪ್ಪರವರ ನಿರ್ಮಾಣದಲ್ಲಿ ಹಾಗೂ ನನ್ನ ನಿರ್ದೇಶನದಲ್ಲಿ ಮೂಡಿಬರುತ್ತಿರುವ ಮನದ ಕಡಲು ಚಿತ್ರದ ಮೊದಲ ಗೀತೆಯನ್ನು ಬಿಡುಗಡೆ ಮಾಡುತ್ತಿದ್ದೇವೆ. ಈ ಹಾಡು ಹುಟ್ಟಿದ್ದು ನಿರ್ಮಾಪಕರ ತೋಟದ ಮನೆಯಲ್ಲಿ. ಕಂಪೋಸ್ ಆಗಿದ್ದು‌ ನನ್ನ‌ ಆಫೀಸ್‌ನ ಮೇಲಿರುವ ಸ್ಟುಡಿಯೋದಲ್ಲಿ. ಹರಿಕೃಷ್ಣ ಅವರ ಸಂಗೀತ ಸಂಯೋಜನೆಯಲ್ಲಿ ಸಂಚಿತ್ ಹೆಗ್ಡೆ ಗಾಯನದಲ್ಲಿ ಮುರಳಿ ನೃತ್ಯ ಸಂಯೋಜನೆಯಲ್ಲಿ ಹೂ ದುಂಬಿಯ ಕಥೆಯ.. ಹಾಡು ಮೂಡಿಬಂದಿದೆ.‌ ಸುಮುಖ ಹಾಗು ರಾಶಿಕಾ ಶೆಟ್ಟಿ ಈ ಹಾಡಿನಲ್ಲಿ ಅಭಿನಯಿಸಿದ್ದಾರೆ ಎಂದು ಹಾಡಿನ ಬಗ್ಗೆ ನಿರ್ದೇಶಕ ಯೋಗರಾಜ್ ಭಟ್ ಮಾಹಿತಿ ನೀಡಿದರು.

ಚಂದನವನಕ್ಕೆ ನಾಯಕನಾಗಿ ಸುಮುಖ 

ಹದಿನೆಂಟು ವರ್ಷಗಳ ನಂತರ ಯೋಗರಾಜ್ ಭಟ್ ಅವರ ಜೊತೆ ಮತ್ತೆ ಚಿತ್ರ ಮಾಡುತ್ತಿದ್ದೇನೆ. ಆದರೆ ನಿಮ್ಮ ಜೊತೆ ಸಿನಿಮಾ ಮಾಡುವುದಾದರೆ ಹೊಸ ನಾಯಕನೇ ಇರಬೇಕು ಅಂದಿದ್ದೆ. ಹೊಸ ಪ್ರತಿಭೆ ಸುಮುಖ ನಾಯಕನಾಗಿ, ರಾಶಿಕಾ ಹಾಗೂ ಅಂಜಲಿ ನಾಯಕಿಯರಾಗಿ ನಟಿಸಿದ್ದಾರೆ. ಯಾವುದೇ ಕೊರತೆ ಬಾರದ ಹಾಗೆ ಒಂದೊಳ್ಳೆ ಸಿನಿಮಾ‌ ಮಾಡಿದ್ದೀನಿ. ಮುಂದಿನದ್ದು ಪ್ರೇಕ್ಷಕರಿಗೆ ಬಿಟ್ಟಿದ್ದು. ಬಿಡುಗಡೆ ಆಗಿರುವ ಹಾಡು ಚೆನ್ನಾಗಿದೆ ಎಂದು ನಿರ್ಮಾಪಕ ಇ.ಕೃಷ್ಣಪ್ಪ ತಿಳಿಸಿದರು.

ನನ್ನ ಹಾಗೂ ಸಂಜಿತ್ ಅವರನ್ನು ನೋಡಿದವರು ಟ್ವಿನ್ಸಾ? ಅಂತ ಕೇಳಿದರು. ನಾನು‌ ಯೋಗರಾಜ್ ಭಟ್ ಅವರ ಸಾಹಿತ್ಯಕ್ಕೆ, ಹರಿಕೃಷ್ಣ ಅವರ ಸಂಗೀತಕ್ಕೆ ಹಾಗೂ ಸಂಜಿತ್ ಅವರ ಗಾಯನಕ್ಕೆ ಅಭಿಮಾನಿ. ಅವಕಾಶ ನೀಡಿದ ನಿರ್ಮಾಪಕರಿಗೆ ಧನ್ಯವಾದ ಎಂದರು ನಾಯಕ ಸುಮುಖ. ಸಹ ನಿರ್ಮಾಪಕ ಗಂಗಾಧರ್, ಕಾರ್ಯಕಾರಿ ನಿರ್ಮಾಪಕ ಪ್ರತಾಪ್, ನಾಯಕಿಯರಾದ ಅಂಜಲಿ ಅನೀಶ್, ರಾಶಿಕಾ ಶೆಟ್ಟಿ, ಹಿರಿಯ ನಟ ದತ್ತಣ್ಣ, ಶಿವಧ್ವಜ್, ಸೂರಜ್, ನೃತ್ಯ ನಿರ್ದೇಶಕ ಮುರಳಿ, ಗಡ್ಡ ವಿಜಿ, ಡಿ ಬಿಟ್ಸ್ ಸಂಸ್ಥೆಯ ಶೈಲಜಾ ನಾಗ್ ಮನದ ಕಡಲು ಚಿತ್ರದ ಮೊದಲ ಹಾಡಿನ ಬಗ್ಗೆ ಮಾತನಾಡಿದರು.

ಹೊಸ ವರ್ಷ ಹೇಗಿರುತ್ತೆ? ಇಲ್ಲಿದೆ 2025 ರ ರಾಶಿವಾರು ಮಾಹಿತಿ

2025 ನಿಮಗೆ ಏನೆಲ್ಲಾ ಶುಭಫಲಗಳನ್ನು ನೀಡಲಿದೆ? ಹೊಸ ವರ್ಷದಲ್ಲಿ ಬದಲಾವಣೆಗಳು, ಉದ್ಯೋಗ ಪ್ರಗತಿ, ವಿದ್ಯಾಭ್ಯಾಸ, ಪ್ರೀತಿ, ದಾಂಪತ್ಯ ಸೇರಿದಂತೆ ನೀವು ತಿಳಿಯಬಯಸುವ ಸಮಗ್ರ ಮಾಹಿತಿ ಇಲ್ಲಿದೆ. ಪ್ರತಿ ರಾಶಿಯ ಸಮಗ್ರ ವಿವರ ಇಲ್ಲಿ ಲಭ್ಯ. ನೀವು ಈವರೆಗೆ ನೋಡಿಲ್ಲ ಅಂತಾದ್ರೆ ಬೇಗ ನೋಡಿ. ಈಗಾಗಲೇ ನೋಡಿದ್ದರೆ ನಿಮ್ಮ ಆಪ್ತರಿಗೂ ಈ ಬಗ್ಗೆ ತಿಳಿಸಿ. kannada.hindustantimes.com/astrology/yearly-horoscope

Whats_app_banner