ನ್ಯಾಯಾಂಗದ ಮೇಲೆ ನಂಬಿಕೆ ಇದೆ; ನಟ ದರ್ಶನ್‌ಗೆ ಜಾಮೀನು ಸಿಗ್ತಿದ್ದಂತೆ,‌ ರೇಣುಕಾಸ್ವಾಮಿ ತಂದೆಯ ಮೊದಲ ಪ್ರತಿಕ್ರಿಯೆ
ಕನ್ನಡ ಸುದ್ದಿ  /  ಮನರಂಜನೆ  /  ನ್ಯಾಯಾಂಗದ ಮೇಲೆ ನಂಬಿಕೆ ಇದೆ; ನಟ ದರ್ಶನ್‌ಗೆ ಜಾಮೀನು ಸಿಗ್ತಿದ್ದಂತೆ,‌ ರೇಣುಕಾಸ್ವಾಮಿ ತಂದೆಯ ಮೊದಲ ಪ್ರತಿಕ್ರಿಯೆ

ನ್ಯಾಯಾಂಗದ ಮೇಲೆ ನಂಬಿಕೆ ಇದೆ; ನಟ ದರ್ಶನ್‌ಗೆ ಜಾಮೀನು ಸಿಗ್ತಿದ್ದಂತೆ,‌ ರೇಣುಕಾಸ್ವಾಮಿ ತಂದೆಯ ಮೊದಲ ಪ್ರತಿಕ್ರಿಯೆ

ರೇಣುಕಾಸ್ವಾಮಿ ಹತ್ಯೆ ಪ್ರಕರಣದಲ್ಲಿ ನಟ ದರ್ಶನ್‌ ಸೇರಿ ಎಲ್ಲ ಆರೋಪಿಗಳಿಗೆ ಷರತ್ತುಬದ್ಧ ಜಾಮೀನು ಮಂಜೂರು ಮಾಡಿ ಕೋರ್ಟ್‌ ಆದೇಶಿಸಿದೆ. ಈ ಬೆನ್ನಲ್ಲೇ, ರೇಣುಕಾಸ್ವಾಮಿ ಅವರ ತಂದೆ ಕಾಶಿನಾಥಯ್ಯ, ಚಿತ್ರದುರ್ಗದಲ್ಲಿ ಈ ಬೆಳವಣಿಗೆ ಬಗ್ಗೆ ಪ್ರತಿಕ್ರಿಯೆ ನೀಡಿದ್ದಾರೆ.

ದರ್ಶನ್‌ಗೆ ಜಾಮೀನು ಸಿಗ್ತಿದ್ದಂತೆ,‌ ರೇಣುಕಾಸ್ವಾಮಿ ತಂದೆಯ ಮೊದಲ ಪ್ರತಿಕ್ರಿಯೆ
ದರ್ಶನ್‌ಗೆ ಜಾಮೀನು ಸಿಗ್ತಿದ್ದಂತೆ,‌ ರೇಣುಕಾಸ್ವಾಮಿ ತಂದೆಯ ಮೊದಲ ಪ್ರತಿಕ್ರಿಯೆ

Actor Darshan: ಚಿತ್ರದುರ್ಗದ ರೇಣುಕಾಸ್ವಾಮಿ ಹತ್ಯೆ ಪ್ರಕರಣಕ್ಕೆ ಸಂಬಂಧಿಸಿದಂತೆ, ನಟ ದರ್ಶನ್‌, ಪವಿತ್ರಾ ಗೌಡ ಸೇರಿ ಪ್ರಕರಣದ 7 ಆರೋಪಿಗಳಿಗೆ ಹೈಕೋರ್ಟ್‌ ಶುಕ್ರವಾರ ಜಾಮೀನು ಮಂಜೂರು ಮಾಡಿ ಆದೇಶ ಹೊರಡಿಸಿದೆ. ನ್ಯಾಯಮೂರ್ತಿ ಎಸ್‌ ವಿಶ್ವಜಿತ್ ಶೆಟ್ಟಿ ಅವರಿದ್ದ ಪೀಠ ಈ ತೀರ್ಪು ನೀಡಿದೆ. ಈ ಹಿಂದೆ ಬೆನ್ನು ಹುರಿಯ ಸಮಸ್ಯೆ ಸಲುವಾಗಿ ಆರು ವಾರಗಳ ಕಾಲ ಮಧ್ಯಂತರ ಜಾಮೀನು ಪಡೆದಿದ್ದ ದರ್ಶನ್‌, ಇದೀಗ ಚಿಕಿತ್ಸೆಗೆ ಒಳಗಾಗಲಿದ್ದಾರೆ. ಇದೆಲ್ಲದರ ನಡುವೆ ಕೊಲೆಯಾದ ರೇಣುಕಾಸ್ವಾಮಿ ಅವರ ತಂದೆ ಕಾಶಿನಾಥಯ್ಯ ಜಾಮೀನು ಸಿಕ್ಕ ಬಗ್ಗೆ ಪ್ರತಿಕ್ರಿಯೆ ನೀಡಿದ್ದಾರೆ.

ಈ ಬಗ್ಗೆ ಮಾಧ್ಯಮಗಳಿಗೆ ಪ್ರತಿಕ್ರಿಯೆ ನೀಡಿದ ಕಾಶಿನಾಥಯ್ಯ, "ಆರೋಪಿಗಳಿಗೆ ಜಾಮೀನು ಸಿಕ್ಕ ವಿಚಾರ ಮಾಧ್ಯಮಗಳ ಮೂಲಕ ತಿಳಿಯಿತು. ಈಗ ಜಾಮೀನು ನೀಡಿದ್ದರೂ ತೀರ್ಪಲ್ಲಿ ನ್ಯಾಯ ಸಿಗುತ್ತದೆ. ನಮಗೆ ನ್ಯಾಯಾಂಗದ ಮೇಲೆ ನಂಬಿಕೆ ಇದೆ, ಅದರ ತೀರ್ಮಾನಕ್ಕೆ ನಾವು ಬದ್ಧರಾಗಿದ್ದೇವೆ. ವಯಕ್ತಿಕವಾಗಿ ನನಗೆ ಈ ಬಗ್ಗೆ ಅಷ್ಟಾಗಿ ಗೊತ್ತಿಲ್ಲ. ಇದಕ್ಕೆಂದೇ ನಾನು ನನ್ನ ಹಿತೈಷಿಗಳ ಮೊರೆ ಹೋಗುವೆ. ಜಾಮೀನು ಪ್ರಶ್ನಿಸಿ, ಸುಪ್ರೀಂ ಕೋರ್ಟ್‌ಗೂ ಸರ್ಕಾರ ಮೇಲ್ಮನವಿ ಸಲ್ಲಿಸಲಿದೆ ಎಂಬ ನಂಬಿಕೆ ಇದೆ. ಈಗಾಗಲೇ ಮಧ್ಯಂತರ ಜಾಮೀನಿಗೆ ಅರ್ಜಿ ಸಲ್ಲಿಕೆಯಾಗಿತ್ತು" ಎಂದಿದ್ದಾರೆ. ಮುಂದಿನ ದಿನಗಳಲ್ಲಿ ದರ್ಶನ್‌ ನಿಮ್ಮ ಮನೆಗೆ ಬಂದರೆ ಎಂಬ ಪ್ರಶ್ನೆಗೂ ರೇಣುಕಾಸ್ವಾಮಿ ಅವರ ತಂದೆ ಉತ್ತರ ನೀಡಿದ್ದಾರೆ.

"ದರ್ಶನ್‌ ಅವರು ನಮ್ಮ ಮನೆಗೆ ಬಂದರೆ ಎಂಬ ವಿಚಾರ ನಮ್ಮಲ್ಲಿ ಚರ್ಚೆ ಇಲ್ಲ. ನಾವು ಈಗಾಗಲೇ ನಮ್ಮ ಮಗನನ್ನ ಕಳೆದುಕೊಂಡಿದ್ದೇವೆ. ಹಾಗಾಗಿ ನಮ್ಮ ಮನೆಗೆ ದರ್ಶನ್ ಬರುವುದು ಬೇಕಿಲ್ಲ. ನನ್ನ ಮಗನ ಸಾವಿಗೆ ನ್ಯಾಯ ಬೇಕಿದೆ. ಇಲ್ಲಿ ಮಾತನಾಡುವುದಕ್ಕೆ ಏನೂ ಇಲ್ಲ. ಕಾನೂನಿನ ಮೇಲೆ ನಂಬಿಕೆ ಇದೆ ಆ ಮಾತಂತೂ ನಾನು ಹೇಳಬಲ್ಲೆ. ಇಲ್ಲಿಯವರೆಗೂ ನಮ್ಮನ್ನು ಯಾರೂ ಸಂಪರ್ಕ ಮಾಡಿಲ್ಲ. ನಾವೂ ಯಾರನ್ನೂ ಸಂಪರ್ಕಿಸುವುದಿಲ್ಲ. ದರ್ಶನ್‌ ಅವರಿಗೆ ಜಾಮೀನು ಸಿಕ್ಕಿದ್ದಕ್ಕೆ ಮುಂದೆ ನಮ್ಮ ನಡೆ ಏನೆಂಬುದು ಆಪ್ತರ ಜತೆ ಚರ್ಚೆ ಮಾಡಿ ಮುಂದುವರಿಯಲಿದ್ದೇವೆ ಎಂದಿದ್ದಾರೆ ರೇಣುಕಾಸ್ವಾಮಿ ತಂದೆ ಕಾಶಿನಾಥಯ್ಯ.

ಜೂನ್‌ 11ರಂದು ದರ್ಶನ್‌ ಬಂಧನ

ದರ್ಶನ್ ಪ್ರೇಯಸಿ ಪವಿತ್ರಾ ಗೌಡ ಬಗ್ಗೆ ಮೃತ ರೇಣುಕಸ್ವಾಮಿ ಸಾಮಾಜಿಕ ಮಾಧ್ಯಮಗಳಲ್ಲಿ ಆಕ್ಷೇಪಾರ್ಹ ಕಾಮೆಂಟ್ ಮಾಡಿದ್ದರು. ಅವರಿಗೆ ಆಶ್ಲೀಲ ಸಂದೇಶಗಳನ್ನೂ ಕಳಿಸಿದ್ದರು. ಇದರಿಂದ ಸಿಟ್ಟಿಗೆದ್ದಿದ್ದ ದರ್ಶನ್, ಚಿತ್ರದುರ್ಗದ ರೇಣುಕಸ್ವಾಮಿ ಅವರ ಅಪಹರಣಕ್ಕೆ ಸೂಚಿಸಿದ್ದರು ಎಂದು ಪೊಲೀಸರು ಹೇಳಿದ್ದರು. ಜೂನ್ 11 ರಂದು ದರ್ಶನ್‌ ಅವರನ್ನು ಬಂಧಿಸಲಾಗಿತ್ತು.

Whats_app_banner