ಕಾಲೇಜು ಜೂನಿಯರ್ ರಿಷಿಯ ರುದ್ರ ಗರುಡ ಪುರಾಣ ಚಿತ್ರದ ಟ್ರೇಲರ್ ರಿಲೀಸ್ ಮಾಡಿದ ಸೀನಿಯರ್ ಡಾಲಿ ಧನಂಜಯ್
Rudra Garuda Purana: ನಟ ರಿಷಿ ಅಭಿನಯದ ಆ ಸಿನಿಮಾ ಹೆಸರು ರುದ್ರ ಗರುಡ ಪುರಾಣ. ಇತ್ತೀಚೆಗಷ್ಟೇ ಇದೇ ಚಿತ್ರದ ಟ್ರೇಲರ್ ಬಿಡುಗಡೆ ಆಗಿದೆ. ಚಂದನವನದ ನಟ ಡಾಲಿ ಧನಂಜಯ್, ನಿರ್ಮಾಪಕ ಕೆ ಮಂಜು ಸೇರಿದಂತೆ ಹಲವು ಸಿನಿಮಾ ಗಣ್ಯರು ಟ್ರೇಲರ್ ಬಿಡುಗಡೆ ಮಾಡಿ ಶುಭ ಕೋರಿದ್ದಾರೆ.

Rudra Garuda Purana Trailer: ಆಪರೇಷನ್ ಅಲಮೇಲಮ್ಮ, ಕವಲು ದಾರಿ ಸಿನಿಮಾಗಳ ಮೂಲಕ ಸ್ಯಾಂಡಲ್‌ವುಡ್‌ನಲ್ಲಿ ಭರವಸೆ ಮೂಡಿಸಿರುವ ನಟ ರಿಷಿ, ಇದೀಗ ಮತ್ತೆ ಖಡಕ್ ಪೊಲೀಸ್ ಪಾತ್ರದಲ್ಲಿ ಎದುರಾಗಿದ್ದಾರೆ. ಆ ಸಿನಿಮಾ ಹೆಸರು ರುದ್ರ ಗರುಡ ಪುರಾಣ. ಇತ್ತೀಚೆಗಷ್ಟೇ ಇದೇ ಚಿತ್ರದ ಟ್ರೇಲರ್ ಬಿಡುಗಡೆ ಆಗಿದೆ. ಚಂದನವನದ ನಟ ಡಾಲಿ ಧನಂಜಯ್, ನಿರ್ಮಾಪಕ ಕೆ ಮಂಜು ಸೇರಿದಂತೆ ಹಲವು ಸಿನಿಮಾ ಗಣ್ಯರು ಟ್ರೇಲರ್ ಬಿಡುಗಡೆ ಮಾಡಿ ಶುಭ ಕೋರಿದ್ದಾರೆ. ಈ ಸಿನಿಮಾ ಜನವರಿ 24ರಂದು ರಾಜ್ಯಾದ್ಯಂತ ಬಿಡುಗಡೆ ಆಗಲಿದೆ.
ಟ್ರೇಲರ್ ಬಿಡುಗಡೆ ಮಾಡಿದ ಡಾಲಿ
"ರಿಷಿ ನನ್ನ ಕಾಲೇಜು ಹಾಗೂ ರಂಗಭೂಮಿ ದಿನಗಳ ಗೆಳೆಯ. ನಿರ್ದೇಶಕರು ಬಹು ದಿನಗಳ ಪರಿಚಯ. ರುದ್ರ ಗರುಡ ಪುರಾಣ ಟ್ರೇಲರ್ ವಿಭಿನ್ನವಾಗಿದೆ. ಚಿತ್ರ ಭರ್ಜರಿ ಯಶಸ್ಸು ಕಾಣಲಿ" ಎಂದು ನಟ ಧನಂಜಯ ಹಾರೈಸಿದರು. ಬಳಿಕ ಮಾತನಾಡಿದ ರಿಷಿ, ಧನಂಜಯ ಅವರು ಹೇಳಿದ ಹಾಗೆ ಕಾಲೇಜಿನಲ್ಲಿ ನಾನು ಅವರ ಜೂನಿಯರ್ ಎಂದ ನಾಯಕ ರಿಷಿ, ಇಂಜನಿಯರಿಂಗ್ ದಿನಗಳನ್ನು ನೆನಪಿಸಿಕೊಂಡರು. ಈಗಾಗಲೇ ಬಿಡುಗಡೆಯಾಗಿರುವ ಹಾಡುಗಳು ಮತ್ತು ಟೀಸರ್ ಮೂಲಕ ಜನರನ್ನು ತಲುಪಿದ್ದೇವೆ. ಟ್ರೇಲರ್ ಸಹ ಚೆನ್ನಾಗಿದೆ. ನಿರ್ದೇಶಕರ ಶ್ರಮ ಚಿತ್ರಕ್ಕೆ ಸಾಕಷ್ಟಿದೆ. ಯಾವುದೇ ಕೊರತೆ ಬಾರದೆ ಹಾಗೆ ನಿರ್ಮಾಪಕರು ನಿರ್ಮಾಣ ಮಾಡಿದ್ದಾರೆ. ಜನವರಿ 24 ರಂದು ತೆರೆಗೆ ಬರಲಿದೆ ಎಂದರು ರಿಷಿ.
ನಾನು ಮೈಸೂರುನವಳು. ನಾಯಕಿಯಾಗಿ ಇದು ಮೊದಲ ಚಿತ್ರ. ನನ್ನ ತಂದೆಗೆ ನಾನು ಚೆನ್ನಾಗಿ ಓದಬೇಕೆಂಬ ಆಸೆ. ನನಗೆ ಓದು ಹಾಗೂ ನಟನೆ ಎರಡು ಆಸೆ. ಓದಿನಲ್ಲೂ ನಮ್ಮ ತಂದೆ ಹೇಳಿದ ಹಾಗೆ ಕೇಳಿದ್ದೇನೆ. ಇದರಿಂದ ಅವರಿಗೂ ಖುಷಿಯಾಗಿದೆ. ಈ ಚಿತ್ರದ ಟ್ರೇಲರ್ ನೋಡಿ ನಮ್ಮ ತಂದೆ ಸಂತೋಷಪಟ್ಟಿದ್ದಾರೆ. ಜನರಿಗೂ ಚಿತ್ರ ಇಷ್ಟವಾಗಲಿದೆ ಎಂದು ನಾಯಕಿ ಪ್ರಿಯಾಂಕ ಕುಮಾರ್ ತಿಳಿಸಿದರು.
ಜನವರಿ 24ರಂದು ಬಿಡುಗಡೆ
ಚಿತ್ರದ ಟ್ರೇಲರ್ ಬಿಡುಗಡೆ ಮಾಡಿಕೊಟ್ಟ ಧನಂಜಯ ಅವರಿಗೆ ಧನ್ಯವಾದ. ಇದೇ ಜನವರಿ 24 ರಂದು ನಮ್ಮ ಚಿತ್ರ ಬಿಡುಗಡೆಯಾಗುತ್ತಿದೆ. ಎಲ್ಲರೂ ನಮ್ಮ ಚಿತ್ರ ನೋಡಿ. ಬೆಂಬಲ ನೀಡಿ ಎಂದು ನಿರ್ದೇಶಕ ನಂದೀಶ್ ಹಾಗೂ ನಿರ್ಮಾಪಕ ಲೋಹಿತ್ ತಿಳಿಸಿದರು. ಛಾಯಾಗ್ರಾಹಕ ಸಂದೀಪ್ ಕುಮಾರ್, ಸಂಭಾಷಣೆಕಾರ ರಘು ನಿಡವಳ್ಳಿ, ಹಾಡು ಬರೆದಿರುವ ಪ್ರಮೋದ್ ಮರವಂತೆ, ಮಂಜು ಮಾಂಡವ್ಯ ಹಾಗೂ ಚಿತ್ರದಲ್ಲಿ ನಟಿಸಿರುವ ಶಿವರಾಜ್ ಕೆ.ಆರ್ ಪೇಟೆ, ಅಶ್ವಿನಿ ಗೌಡ, ಪ್ರಭಾಕರ್, ರಾಮ್ ಪವನ್ ಮುಂತಾದವರು ಚಿತ್ರದ ಕುರಿತು ಮಾತನಾಡಿದರು. ನಿರ್ಮಾಪಕಿ ಅಶ್ವಿನಿ ವಿಜಯ್ ಲೋಹಿತ್ ಸಹ ಸಮಾರಂಭದಲ್ಲಿ ಉಪಸ್ಥಿತರಿದ್ದರು. ಕೆ.ಪಿ ಈ ಚಿತ್ರಕ್ಕೆ ಸಂಗೀತ ನೀಡಿದ್ದಾರೆ.
