Toxic Movie:ಹಾಲಿವುಡ್‌ನ ಪ್ರತಿಷ್ಠಿತ ಸಂಸ್ಥೆ ಜತೆ ರಾಕಿಂಗ್ ಸ್ಟಾರ್ ಯಶ್ ಮಾತುಕತೆ; ಟಾಕ್ಸಿಕ್ ಚಿತ್ರದ ಬಗ್ಗೆ ಸಿಕ್ಕಿದೆ ಬಿಗ್ ಅಪ್‌ಡೇಟ್
ಸ್ಯಾಂಡಲ್‌ವುಡ್ ಸ್ಟಾರ್ ನಟ ರಾಕಿಂಗ್ ಸ್ಟಾರ್ ಯಶ್ ತಮ್ಮ ಹೊಸ ಸಿನಿಮಾ ಟಾಕ್ಸಿಕ್ ಬಿಡುಗಡೆಗೆ ಸಿದ್ಧತೆ ಮಾಡಿಕೊಳ್ಳುತ್ತಿದ್ದಾರೆ. ಹಾಲಿವುಡ್‌ನ ಪ್ರತಿಷ್ಠಿತ ಸಂಸ್ಥೆ ಜತೆ ರಾಕಿಂಗ್ ಸ್ಟಾರ್ ಯಶ್ ಮಾತುಕತೆ ನಡೆದಿದೆ.
ಸ್ಯಾಂಡಲ್‌ವುಡ್ ಸ್ಟಾರ್ ನಟ ರಾಕಿಂಗ್ ಸ್ಟಾರ್ ಯಶ್ ತಮ್ಮ ಹೊಸ ಸಿನಿಮಾ ಟಾಕ್ಸಿಕ್ ಕೆಲಸದಲ್ಲಿ ಬ್ಯುಸಿಯಾಗಿದ್ದಾರೆ. ಈ ಬಾರಿ ತಮ್ಮ ಹುಟ್ಟುಹಬ್ಬವನ್ನು ಆಚರಿಸಿಕೊಳ್ಳಲಾಗುವುದಿಲ್ಲ. ಶೂಟಿಂಗ್ ಇರುತ್ತದೆ ಎಂಬ ಮಾಹಿತಿಯನ್ನೂ ಹಂಚಿಕೊಂಡಿದ್ದಾರೆ. ರಾಷ್ಟ್ರೀಯ ಪ್ರಶಸ್ತಿ ವಿಜೇತ ಮಲಯಾಳಂ ನಿರ್ದೇಶಕಿ ಗೀತು ಮೋಹನ್‌ದಾಸ್ ನಿರ್ದೇಶಿಸುತ್ತಿರು ಈ ಟಾಕ್ಸಿಕ್ ಸಿನಿಮಾವನ್ನು ತುಂಬಾ ದೊಡ್ಡ ರೀತಿಯಲ್ಲಿ ಬಿಡುಗಡೆ ಮಾಡುವ ಮಹದಾಸೆಯನ್ನು ಈ ಚಿತ್ರತಂಡ ಹೊಂದಿದೆ. ಈ ಸಲುವಾಗಿ ಸಾಕಷ್ಟು ಪ್ರಯತ್ನ ಪಡುತ್ತಿದೆ. ಇದರ ನಡುವೆಯೇ ಟಾಕ್ಸಿಕ್ ಸಿನಿಮಾ ವಿಚಾರವಾಗಿ ಇನ್ನೊಂದಷ್ಟು ಸುದ್ದಿ ಕೇಳಿಬರುತ್ತಿದೆ.
ಈ ಚಿತ್ರವನ್ನು ಇಂಟರ್ನ್ಯಾಷನಲ್ ಲೆವೆಲ್‌ನಲ್ಲಿ ಬಿಡುಗಡೆ ಮಾಡುವ ತಯಾರಿ ನಡೆಯುತ್ತಿದೆ. ಈ ಹಿನ್ನೆಲೆಯಲ್ಲಿ ಹೆಸರಾಂತ ಹಾಲಿವುಡ್ ವಿತರಕ ಸಂಸ್ಥೆಗಳ ಬಳಿ ಮಾತುಕತೆ ನಡೆಯುತ್ತಿದೆ ಎನ್ನಲಾಗಿದೆ. ಯಶ್ ಮತ್ತು ಟಾಕ್ಸಿಕ್‌ನ ನಿರ್ಮಾಪಕ, ಕೆವಿಎನ್ ಪ್ರೊಡಕ್ಷನ್ಸ್‌ನ ವೆಂಕಟ್ ಕೆ. ನಾರಾಯಣ ಅವರು ಚಲನಚಿತ್ರದ ಅಂತರರಾಷ್ಟ್ರೀಯ ಬಿಡುಗಡೆಗಾಗಿ ಹಾಲಿವುಡ್ ನಿರ್ಮಾಣ ಮತ್ತು ವಿತರಣಾ ಸಂಸ್ಥೆ ಫಾಕ್ಸ್‌ನೊಂದಿಗೆ ಮಾತುಕತೆ ನಡೆಸುತ್ತಿದೆ ಎಂದು ತಿಳಿದು ಬಂದಿದೆ.
ಯಶ್ ಮತ್ತು ಟಾಕ್ಸಿಕ್ ತಂಡವು ಈ ಚಿತ್ರವು ಜಾಗತಿಕ ಮಟ್ಟದಲ್ಲಿ ಹೆಸರು ಮಾಡಬೇಕು. ಸಾಕಷ್ಟು ಜನರನ್ನು ಈ ಸಿನಿಮಾ ತಲುಪಬೇಕು ಎಂಬ ಉದ್ದೇಶದಿಂದ ಪ್ರಯತ್ನಿಸುತ್ತಿದ್ದಾರೆ. ಇಂಟರ್‌ನ್ಯಾಷನಲ್ ಮಾರ್ಕೆಟ್‌ಗೆ ತಕ್ಕ ಹಾಗೆ ಈ ಸಿನಿಮಾವನ್ನು ರೆಡಿ ಮಾಡಲಾಗುತ್ತಿದೆ. ಪ್ರಪಂಚದಾದ್ಯಂತ ವ್ಯಾಪಕವಾದ ಬಿಡುಗಡೆಯನ್ನು ಪಡೆಯಲು ಉತ್ತಮ ಹೆಸರು ಮಾಡಲು ಈ ಚಿತ್ರತಂಡ ಬೇಕಾದ ತಯಾರಿಯನ್ನು ಮಾಡಿಕೊಳ್ಳುತ್ತಿದೆ ಎಂಬ ವಿಚಾರ ತಿಳಿದು ಅಭಿಮಾನಿಗಳಲ್ಲಿ ಇನ್ನಷ್ಟು ಕುತೂಹಲ ಮೂಡಿದೆ.
20th Century Fox ಜೊತೆಗೆ ಯಶ್ ಮಾತುಕತೆ ಮಾಡುತ್ತಿದ್ದಾರೆ ಎಂಬ ಸುದ್ದಿ ಹರಡಿದೆ. ಟಾಕ್ಸಿಕ್ ಚಿತ್ರದಲ್ಲಿ ಜನಪ್ರಿಯ ಬಾಲಿವುಡ್ ನಟಿ ಕಿಯಾರಾ ಅಡ್ವಾಣಿ ಪ್ರಮುಖ ಪಾತ್ರದಲ್ಲಿ ಕಾಣಿಸಿಕೊಳ್ಳಲಿದ್ದಾರೆ. ನಿರ್ಮಾಪಕರು ಡಿಸೆಂಬರ್ 2025ರಲ್ಲಿ ಕನ್ನಡ, ಹಿಂದಿ, ತೆಲುಗು, ತಮಿಳು ಮತ್ತು ಮಲಯಾಳಂ ಮತ್ತು ಇತರ ವಿದೇಶಿ ಭಾಷೆಗಳಲ್ಲಿಯೂ ಚಲನಚಿತ್ರವನ್ನು ಬಿಡುಗಡೆ ಮಾಡಲು ಯೋಜಿಸುತ್ತಿದ್ದಾರೆ ಎಂಬ ಮಾಹಿತಿ ಲಭ್ಯವಾಗಿದೆ.
ಹೊಸ ವರ್ಷ ಹೇಗಿರುತ್ತೆ? ಇಲ್ಲಿದೆ 2025 ರ ರಾಶಿವಾರು ಮಾಹಿತಿ
2025 ನಿಮಗೆ ಏನೆಲ್ಲಾ ಶುಭಫಲಗಳನ್ನು ನೀಡಲಿದೆ? ಹೊಸ ವರ್ಷದಲ್ಲಿ ಬದಲಾವಣೆಗಳು, ಉದ್ಯೋಗ ಪ್ರಗತಿ, ವಿದ್ಯಾಭ್ಯಾಸ, ಪ್ರೀತಿ, ದಾಂಪತ್ಯ ಸೇರಿದಂತೆ ನೀವು ತಿಳಿಯಬಯಸುವ ಸಮಗ್ರ ಮಾಹಿತಿ ಇಲ್ಲಿದೆ. ಪ್ರತಿ ರಾಶಿಯ ಸಮಗ್ರ ವಿವರ ಇಲ್ಲಿ ಲಭ್ಯ. ನೀವು ಈವರೆಗೆ ನೋಡಿಲ್ಲ ಅಂತಾದ್ರೆ ಬೇಗ ನೋಡಿ. ಈಗಾಗಲೇ ನೋಡಿದ್ದರೆ ನಿಮ್ಮ ಆಪ್ತರಿಗೂ ಈ ಬಗ್ಗೆ ತಿಳಿಸಿ. kannada.hindustantimes.com/astrology/yearly-horoscope