ಅಭಿಮಾನಿಗಳಿಗೆ ಗುಡ್‌ ನ್ಯೂಸ್‌ ನೀಡಿದ ದರ್ಶನ್; ಹುಟ್ಟುಹಬ್ಬದಂದು ಬಿಡುಗಡೆಯಾಗಲಿದೆ ‘ಡೆವಿಲ್’ ಸಿನಿಮಾ ಟೀಸರ್
ಕನ್ನಡ ಸುದ್ದಿ  /  ಮನರಂಜನೆ  /  ಅಭಿಮಾನಿಗಳಿಗೆ ಗುಡ್‌ ನ್ಯೂಸ್‌ ನೀಡಿದ ದರ್ಶನ್; ಹುಟ್ಟುಹಬ್ಬದಂದು ಬಿಡುಗಡೆಯಾಗಲಿದೆ ‘ಡೆವಿಲ್’ ಸಿನಿಮಾ ಟೀಸರ್

ಅಭಿಮಾನಿಗಳಿಗೆ ಗುಡ್‌ ನ್ಯೂಸ್‌ ನೀಡಿದ ದರ್ಶನ್; ಹುಟ್ಟುಹಬ್ಬದಂದು ಬಿಡುಗಡೆಯಾಗಲಿದೆ ‘ಡೆವಿಲ್’ ಸಿನಿಮಾ ಟೀಸರ್

ಚಾಲೆಂಜಿಂಗ್ ಸ್ಟಾರ್​ ದರ್ಶನ್ ಅಭಿಮಾನಿಗಳಿಗೆ ಸಿಹಿ ಸುದ್ದಿ ನೀಡಿದ್ದಾರೆ. ದರ್ಶನ್ ಹುಟ್ಟುಹಬ್ಬದಂದು ‘ಡೆವಿಲ್’ ಸಿನಿಮಾ ಟೀಸರ್ ಬಿಡುಗಡೆಯಾಗಲಿದೆ.

ದರ್ಶನ್ ಹುಟ್ಟುಹಬ್ಬದಂದು ಬಿಡುಗಡೆಯಾಗಲಿದೆ ಡೆವಿಲಿ ಟೀಸರ್
ದರ್ಶನ್ ಹುಟ್ಟುಹಬ್ಬದಂದು ಬಿಡುಗಡೆಯಾಗಲಿದೆ ಡೆವಿಲಿ ಟೀಸರ್

ಚಾಲೆಂಜಿಂಗ್ ಸ್ಟಾರ್​ ದರ್ಶನ್ ಅಭಿಮಾನಿಗಳಿಗೆ ಸಿಹಿ ಸುದ್ದಿ ನೀಡಿದ್ದಾರೆ. ಪ್ರತಿವರ್ಷವೂ ಅಭಿಮಾನಿಗಳೊಂದಿಗೆ ಅದ್ದೂರಿಯಾಗಿ ಹುಟ್ಟುಹಬ್ಬ ಆಚರಿಸಿಕೊಳ್ಳುತ್ತಿದ್ದ ದರ್ಶನ್ ಈ ಬಾರಿ ಬೆನ್ನು ನೋವಿರುವ ಕಾರಣ ತಾನು ಹುಟ್ಟುಹಬ್ಬ ಆಚರಿಸಿಕೊಳ್ಳುವುದಿಲ್ಲ ಎಂದು ಹೇಳಿದ್ದರು. ಆಗ ಅಭಿಮಾನಿಳಿಗೆ ಕೊಂಚ ಬೇಸರವೆನಿಸಿದ್ದರೂ ಈಗ ಖುಷಿಯಾಗಿದೆ. ಯಾಕೆಂದರೆ ದರ್ಶನ್ ಅಭಿನಯದ ಸಿನಿಮಾ ‘ಡೆವಿಲ್’ ಟೀಸರ್ ಬಿಡುಗಡೆಯನ್ನು ದರ್ಶನ್ ಹುಟ್ಟುಹಬ್ಬಂದು ಮಾಡಲಾಗುತ್ತದೆ. ಇದೇ ಕಾರಣಕ್ಕಾಗಿ ದರ್ಶನ್ ಅಭಿಮಾನಿಗಳು ಸಂತಸಗೊಂಡಿದ್ದಾರೆ. ಬಹುನಿರೀಕ್ಷಿತ ‘ಡೆವಿಲ್’ ಚಿತ್ರದ ಟೀಸರ್ ಬಿಡುಗಡೆಗಾಗಿ ದರ್ಶನ್ ಅಭಿಮಾನಿಗಳು ಕಾತರದಿಂದ ಕಾಯುತ್ತಿದ್ದಾರೆ.

ಬಹುನಿರೀಕ್ಷಿತ ‘ಡೆವಿಲ್’ ಚಿತ್ರದ ಟೀಸರ್ ಯಶಸ್ಸಿನ ಬಳಿಕ ದರ್ಶನ್ ಈ ಸಿನಿಮಾದಲ್ಲಿ ಅಭಿನಯಿಸುತ್ತಿದ್ದು, ಈ ಸಿನಿಮಾ ಎಷ್ಟರ ಮಟ್ಟಿಗೆ ಯಶಸ್ವಿಯಾಗಬಹುದು ಎಂದು ಕಾದು ನೋಡಬೇಕಿದೆ. ಎಲ್ಲವೂ ಅಂದುಕೊಂಡಂತೆ ಆಗಿದ್ದರೆ 2024ರಲ್ಲೇ ಈ ಸಿನಿಮಾ ಥಿಯೇಟರ್‍‌ಗಳಲ್ಲಿ ಪ್ರದರ್ಶನ ಕಾಣಬೇಕಿತ್ತು. ಆದರೆ ದರ್ಶನ್ ರೇಣುಕಾಸ್ವಾಮಿ ಕೊಲೆ ಪ್ರಕರಣದಲ್ಲಿ ಆರೋಪಿಯಾಗಿ ಜೈಲು ಸೇರಿಕೊಂಡದ್ದರಿಂದ ಎಲ್ಲವೂ ತಡವಾಗುತ್ತಾ ಹೋಯಿತು.

ದರ್ಶನ್ ಹುಟ್ಟುಹಬ್ಬಕ್ಕೆ ಉಡುಗೊರೆ ರೂಪದಲ್ಲಿ ಟೀಸರ್ ಬಿಡುಗಡೆಯಾಗುತ್ತಿದೆ. ದರ್ಶನ್ ಜಾಮೀನು ಪಡೆದು ಜೈಲಿನಿಂದ ಹೊರ ಬಂದ ಕಾರಣ ಈಗ ಸಿನಿಮಾದ ಕೆಲಸಗಳು ಮುಂದೆ ಸಾಗುತ್ತಿದ್ದು, ಅಭಿಮಾನಿಗಳು ದರ್ಶನ್ ಅವರನ್ನು ತೆರೆಮೇಲೆ ಕಾಣಲು ಹವಣಿಸುತ್ತಿದ್ದಾರೆ.

Whats_app_banner