Kannada Films: ಈ ವಾರ ಬಿಡುಗಡೆಯಾಗಲಿವೆ ಮೂರು ಕನ್ನಡದ ಸಿನಿಮಾಗಳು; ನಾಳೆಯೇ ‘ಸಂಜು ವೆಡ್ಸ್‌ ಗೀತಾ 2’ ಚಿತ್ರ ರಿಲೀಸ್‌
ಕನ್ನಡ ಸುದ್ದಿ  /  ಮನರಂಜನೆ  /  Kannada Films: ಈ ವಾರ ಬಿಡುಗಡೆಯಾಗಲಿವೆ ಮೂರು ಕನ್ನಡದ ಸಿನಿಮಾಗಳು; ನಾಳೆಯೇ ‘ಸಂಜು ವೆಡ್ಸ್‌ ಗೀತಾ 2’ ಚಿತ್ರ ರಿಲೀಸ್‌

Kannada Films: ಈ ವಾರ ಬಿಡುಗಡೆಯಾಗಲಿವೆ ಮೂರು ಕನ್ನಡದ ಸಿನಿಮಾಗಳು; ನಾಳೆಯೇ ‘ಸಂಜು ವೆಡ್ಸ್‌ ಗೀತಾ 2’ ಚಿತ್ರ ರಿಲೀಸ್‌

ನಾಳೆ ಕನ್ನಡದ ಮೂರು ಸಿನಿಮಾಗಳು ಬಿಡುಗಡೆಯಾಗಲಿದೆ. ನಟರಾಜ್ ಕೃಷ್ಣೇಗೌಡ ನಿರ್ದೇಶನದ ಕನ್ನಡ ಚಲನಚಿತ್ರ ‘ಕಣ್ಣಾ ಮುಚ್ಚೆ ಕಾಡೇ ಗೂಡೇ’, ಶ್ರಿನಗರ್ ಕಿಟ್ಟಿ ಹಾಗೂ ರಚಿತಾ ರಾಮ್ ಅಭಿನಯದ ‘ಸಂಜು ವೆಡ್ಸ್‌ ಗೀತಾ 2’ ಸಿನಿಮಾ ಮತ್ತು ‘ರಾವಣಾಪುರ’ ತೆರೆಕಾಣಲಿದೆ.

ಸಂಜು ವೆಡ್ಸ್‌ ಗೀತಾ, ಕಣ್ಣಾಮುಚ್ಚೆ ಕಾಡೇ ಗೂಡೇ, ರಾವಣಾಪುರ
ಸಂಜು ವೆಡ್ಸ್‌ ಗೀತಾ, ಕಣ್ಣಾಮುಚ್ಚೆ ಕಾಡೇ ಗೂಡೇ, ರಾವಣಾಪುರ

ಶುಕ್ರವಾರ ಬಂದರೆ ಸಾಕು ಸಿನಿಮಾಗಳು ಬಿಡುಗಡೆಗೆ ಸಜ್ಜಾಗಿರುತ್ತವೆ. ಎಷ್ಟೇ ಸಿನಿಮಾಗಳು ಬಿಡುಗಡೆಯಾದರೂ ಆಸಕ್ತಯಿಂದ ನೋಡುವ ವೀಕ್ಷಕರಿದ್ದಾರೆ. ಸಿನಿ ಪ್ರಿಯರು ಪ್ರತಿ ವಾರವೂ ಹೊಸ ಹೊಸ ಸಿನಿಮಾ ಬಿಡುಗಡೆಗಾಗಿ ಕಾಯುತ್ತಿರುತ್ತಾರೆ. ಈ ವಾರ ಕೂಡ ಕನ್ನಡದ ಮುರೂ ಸಿನಿಮಾಗಳು ಬಿಡುಗಡೆಯಾಗುತ್ತಿವೆ. ಈ ಹಿಂದೆಯೇ ಬಿಡುಗಡೆಯಾಗಬೇಕಿದ್ದ ಸಿನಿಮಾ ‘ಸಂಜು ವೆಡ್ಸ್‌ ಗೀತಾ 2’ ಸಿನಿಮಾ ಕೂಡ ಈ ವಾರ ಬಿಡುಗಡೆಯಾಗಲಿದೆ. ಇನ್ನೂ ಹೆಚ್ಚಿನ ಮಾಹಿತಿಗಾಗಿ ಪೂರ್ತಿ ಓದಿ.

ಕಣ್ಣಾ ಮುಚ್ಚೆ ಕಾಡೇ ಗೂಡೇ

ನಟರಾಜ್ ಕೃಷ್ಣೇಗೌಡ ನಿರ್ದೇಶನದ ಕನ್ನಡ ಚಲನಚಿತ್ರ ‘ಕಣ್ಣಾ ಮುಚ್ಚೆ ಕಾಡೇ ಗೂಡೇ’ ನಾಳೆ (ಜನವರಿ 17) ಬಿಡುಗಡೆಯಾಗಲಿದೆ. ಚಿತ್ರದಲ್ಲಿ ರಾಘವೇಂದ್ರ ರಾಜ್‌ಕುಮಾರ್ ಮತ್ತು ಅಥರ್ವ ಪ್ರಕಾಶ್ ಪ್ರಮುಖ ಪಾತ್ರದಲ್ಲಿ ಕಾಣಿಸಿಕೊಂಡಿದ್ದಾರೆ, ಜೊತೆಗೆ ಪ್ರಾರ್ಥನಾ ಸುವರ್ಣ, ಅರವಿಂದ್ ಬೋಳಾರ್, ದೀಪಕ್ ರೈ ಪಾಣಾಜೆ ಮತ್ತು ಅನೇಕರು ನಟಿಸಿದ್ದಾರೆ. ದೀಪಕ್ ಕುಮಾರ್ ಜೆಕೆ ಅವರ ಛಾಯಾಗ್ರಹಣವಿದೆ. ಈ ಸಿನಿಮಾವನ್ನು ಅನಿತಾ ವೀರೇಶ್ ಕುಮಾರ್ ನಿರ್ಮಾಣ ಮಾಡಿದ್ದಾರೆ.

ರಾವಣಾಪುರ
ರಾವಣಪುರ ಸಿನಿಮಾದಲ್ಲಿ ರೈತನ ಮಗ ಹಳ್ಳಿಯ ಸಂಪ್ರದಾಯಗಳನ್ನು ಉಳಿಸಿಕೊಂಡು. ಊರ ಮುಖ್ಯಸ್ಥನ ದಬ್ಬಾಳಿಕೆ ಸವಾಲು ಹಾಕಿ ನಿಲ್ಲುವ ಕಥನವನ್ನು ಹೊಂದಿದೆ. ಇದೊಂದು ಆಕ್ಷನ್, ರೋಮ್ಯಾಂಟಿಕ್ ಡ್ರಾಮಾ ಸಿನಿಮಾ ಆಗಿದ್ದು ನಾಳೆ (ಜನವರಿ 17) ಬಿಡುಗಡೆಯಾಗಲಿದೆ.

ಸಂಜು ವೆಡ್ಸ್ ಗೀತಾ 2

‘ಸಂಜು ವೆಡ್ಸ್ ಗೀತಾ 2’ ಚಿತ್ರವನ್ನು ಪವಿತ್ರ ಇಂಟರ್ ನ್ಯಾಷನಲ್ ಮೂವೀ ಮೇಕರ್ಸ್ ಅಡಿಯಲ್ಲಿ ಛಲವಾದಿ ಕುಮಾರ್ ನಿರ್ಮಿಸಿದ್ದಾರೆ. ಚಿತ್ರದಲ್ಲಿ ಶ್ರೀನಗರ ಕಿಟ್ಟಿ, ರಚಿತಾ ರಾಮ್, ರಂಗಾಯಣ ರಘು, ಸಾಧು ಕೋಕಿಲ, ತಬಲಾ ನಾಣಿ ಮುಂತಾದವರು ಪ್ರಮುಖ ಪಾತ್ರಗಳಲ್ಲಿ ನಟಿಸಿದ್ದಾರೆ.

ನ್ಯಾಯಾಲಯ ತಡೆಯಾಜ್ಞೆ ವಿಧಿಸಿದ್ದು ಯಾಕೆ?

ಸಂಜು ವೆಡ್ಸ್‌ ಗೀತಾ 2 ಸಿನಿಮಾ ಹಿಂದಿನ ವಾರವೇ ಬಿಡುಗಡೆಯಾಗಬೇಕಿತ್ತು. ಆದರೆ ತಡೆಯಾಜ್ಞೆ ವಿಧಿಸಲಾಗಿತ್ತು. ಇದಕ್ಕೆ ಕಾರಣ ಏನು ಎಂಬುದನ್ನು ನಾವಿಲ್ಲಿ ನೀಡಿದ್ದೇವಡ ಗಮನಿಸಿ. ನಿರ್ದೇಶಕ ನಾಗಶೇಖರ್ ಈ ಹಿಂದೆ ತೆಲುಗಿನಲ್ಲಿ ತಮನ್ನಾ ಭಾಟಿಯಾ ಅಭಿನಯದಲ್ಲಿ ‘ಗುರ್ತುಂಡ ಸೀತಾಕಲಂ’ ಎಂಬ ಚಿತ್ರವನ್ನು ನಿರ್ದೇಶನ ಮಾಡಿದ್ದರು. ಚಿತ್ರಕ್ಕೆ ಪಾಲುದಾರರಾಗಿದ್ದರು. ಆದರೆ, ಚಿತ್ರ ನಿರೀಕ್ಷಿತ ಯಶಸ್ಸು ಕಾಣಲಿಲ್ಲ. ಆ ಸಂದರ್ಭದಲ್ಲಿ ಇನ್ನೊಂದು ಚಿತ್ರ ಮಾಡಿಕೊಡುವುದಾಗಿ ಅವರು ಸಹನಿರ್ಮಾಪಕ ರಾಮರಾವ್‍ ಚಿಂತಪಲ್ಲಿ ಎನ್ನುವವರಿಗೆ ಪತ್ರ ಬರೆದುಕೊಟ್ಟಿದ್ದರಂತೆ. ಆದರೆ, ಆ ನಂತರ ಅವರು ಕನ್ನಡದಲ್ಲಿ ಎರಡು ಚಿತ್ರಗಳನ್ನು ಮಾಡಿದ್ದಾರೆ. ತಮಗೆ ಚಿತ್ರ ಮಾಡಿಕೊಡುವುದಾಗಿ ಹೇಳಿ, ನಾಗಶೇಖರ್ ಮಾತು ತಪ್ಪಿದ್ದಾರೆ ಎಂದು ರಾಮರಾವ್‍ ನ್ಯಾಯಾಲಯಕ್ಕೆ ಹೋಗಿ ತಡೆಯಾಜ್ಞೆಯನ್ನು ತಂದಿದ್ದರು.ಆದರೆ, ನಾಗಶೇಖರ್ ನಮ್ಮ ಚಿತ್ರದ ನಿರ್ದೇಶಕರಷ್ಟೇ. ಅವರು ಚಿತ್ರಕ್ಕೆ ಹಣ ಹೂಡಿಲ್ಲ. ಇದನ್ನು ನ್ಯಾಯಾಲಯಕ್ಕೆ ಮನವರಿಕೆ ಮಾಡಿಕೊಟ್ಟಾಗ, ತಡೆಯಾಜ್ಞೆಯನ್ನು ತೆರವು ಮಾಡಲಾಗಿದೆ. ಹಾಗಾಗಿ ನಾಳೆ ಈ ಸಿನಿಮಾ ರಿಲೀಸ್‌ ಆಗುತ್ತಿದೆ.

Whats_app_banner