‘ಕಟ್ಲೆ’ ಸಿನಿಮಾದ ಮೊದಲ ಸಾಂಗ್ ರಿಲೀಸ್ ಮಾಡಿದ ಡಾರ್ಲಿಂಗ್ ಕೃಷ್ಣ; ಸದ್ಯದಲ್ಲೇ ತೆರೆಗೆ ಬರಲಿದೆ ಚಿತ್ರ
ಭರತ್ ಗೌಡ ನಿರ್ಮಾಣದ ಹಾಗೂ ಶ್ರೀವಿದ ನಿರ್ದೇಶನದ ಚಿತ್ರ ‘ಕಟ್ಲೆ’ ಸಿನಿಮಾ ಸದ್ಯದಲ್ಲೇ ತೆರೆಗೆ ಬರಲಿದೆ. ಈ ಸಿನಿಮಾದ ಮೊದಲ ಹಾಡನ್ನು ಡಾರ್ಲಿಂಗ್ ಕೃಷ್ಣ ಬಿಡುಗಡೆ ಮಾಡಿದ್ದಾರೆ. ಹಾಸ್ಯನಟನಾಗಿ ಜನಮನ ಗೆದ್ದಿರುವ ಕೆಂಪೇಗೌಡ ಪ್ರಮುಖಪಾತ್ರದಲ್ಲಿ ಕಾಣಿಸಿಕೊಂಡಿದ್ದಾರೆ.
ಭರತ್ ಗೌಡ ಹೊಸಕೋಟೆ ನಿರ್ಮಾಣದ, ಶ್ರೀವಿದ ನಿರ್ದೇಶನದ ಹಾಗೂ ಹಾಸ್ಯನಟನಾಗಿ ಜನಮನ ಗೆದ್ದಿರುವ ಕೆಂಪೇಗೌಡ ಪ್ರಮುಖಪಾತ್ರದಲ್ಲಿ ನಟಿಸಿರುವ "ಕಟ್ಲೆ" ಚಿತ್ರದ ಮೊದಲ ಹಾಡನ್ನು ನಟ ಡಾರ್ಲಿಂಗ್ ಕೃಷ್ಣ ಬಿಡುಗಡೆ ಮಾಡಿದ್ದಾರೆ. ಬಹದ್ದೂರ್ ಚೇತನ್ ಕುಮಾರ್ ಬರೆದಿರುವ "ಯಾರೋ ನಾ ಕಾಣೆ. ಚಂದಾಗೌಳೆ ಶಾಣೆ" ಎಂಬ ಈ ಹಾಡನ್ನು ಖ್ಯಾತ ಗಾಯಕ ಟಿಪ್ಪು ಅವರು ಹಾಡಿದ್ದು, ಶ್ರೀಧರ್ ವಿ ಸಂಭ್ರಮ್ ಸಂಗೀತ ನೀಡಿದ್ದಾರೆ.
ಹಾಸ್ಯನಟನಾಗಿದ್ದ ನನ್ನ ಮೇಲೆ ಭರವಸೆಯಿಟ್ಟು ನನ್ನನ್ನು ನಾಯಕನನ್ನಾಗಿ ಮಾಡಿದ ನಿರ್ಮಾಪಕ ಭರತ್ ಗೌಡ ಅವರಿಗೆ ನಾನು ಆಭಾರಿ ಎಂದು ನಾಯಕ ಕೆಂಪೇಗೌಡ ಹೇಳಿದ್ದಾರೆ. ಶ್ರೀವಿದ ಅವರು "ಕಟ್ಲೆ" ಚಿತ್ರಕ್ಕೆ ಅದ್ಭುತವಾದ ಕಥೆ ಬರೆದು ನಿರ್ದೇಶನ ಮಾಡಿದ್ದಾರೆ. ಚಿತ್ರದ ಮೊದಲ ಹಾಡು ಬಿಡುಗಡೆಯಾಗಿದೆ. ಚೇತನ್ ಕುಮಾರ್ ಬರೆದು ಶ್ರೀಧರ್ ವಿ ಸಂಭ್ರಮ್ ಸಂಗೀತ ನೀಡಿರುವ ಈ ಹಾಡು ಎಲ್ಲರಿಗೂ ಮೆಚ್ಚುಗೆಯಾಗಲಿದೆ ಎಂಬ ಭರವಸೆಯನ್ನು ಚಿತ್ರತಂಡ ಹೊಂದಿದೆ.
ಈ ಚಿತ್ರ ಉತ್ತಮವಾಗಿ ಮೂಡಿಬರಲು ಮುಖ್ಯ ಕಾರಣ ಯಾವುದೇ ಕೊರತೆ ಬಾರದ ಹಾಗೆ ನಿರ್ಮಾಣ ಮಾಡಿರುವ ಭರತ್ ಗೌಡ ಅವರು. ಅವರು ನಮ್ಮ ಮೇಲೆ ನಂಬಿಕೆಯಿಟ್ಟು ಬಂಡವಾಳ ಹಾಕಿರುವುದೇ ನಮ್ಮ ಕನಸು ನನಸಾಗಲು ಕಾರಣ. ಅವರಿಗೆ ಹಾಗೂ ನನ್ನ ತಂಡಕ್ಕೆ ನನ್ನ ಧನ್ಯವಾದ. ನಮ್ಮ ಚಿತ್ರದ ಪ್ರಥಮ ಹಾಡು ಇಂದು ಬಿಡುಗಡೆಯಾಗಿದೆ. ಸದ್ಯದಲ್ಲೇ "ಕಟ್ಲೆ" ಸೆನ್ಸಾರ್ ವೀಕ್ಷಿಸಲಿದ್ದು, ಡಿಸೆಂಬರ್ ವೇಳೆಗೆ ತರುವ ಪ್ರಯತ್ನ ನಡೆಯುತ್ತಿದೆ ಎಂದರು ನಿರ್ದೇಶಕ ಶ್ರೀವಿದ ಹೇಳಿದ್ದಾರೆ.
ನಿರ್ಮಾಪಕ ಭರತ್ ಗೌಡ ಶ್ರೀವಿದ ಅವರು ಹೇಳಿದ ಕಥೆ ಇಷ್ಟವಾಗಿ ನಿರ್ಮಾಣಕ್ಕೆ ಮುಂದಾದೆ. ಎಲ್ಲರ ಸಹಕಾರದಿಂದ ಚಿತ್ರ ಚೆನ್ನಾಗಿ ಮೂಡಿಬಂದಿದೆ. ನಮ್ಮ ಚಿತ್ರಕ್ಕೆ ನಿಮ್ಮೆಲ್ಲರ ಪ್ರೋತ್ಸಾಹವಿರಲಿ ಎಂದಿದ್ದಾರೆ.
ಹಾಡು ಹುಟ್ಟಿದ ಬಗ್ಗೆ ಹಾಡು ಬರೆದಿರುವ ಚೇತನ್ ಕುಮಾರ್ ಹಾಗೂ ಸಂಗೀತ ಸಂಯೋಜಕನೆ ಕುರಿತು ಸಂಗೀತ ನಿರ್ದೇಶಕ ಶ್ರೀಧರ್ ವಿ ಸಂಭ್ರಮ್ ಖುಷಿಪಟ್ಟಿದ್ದಾರೆ.
ಕಟ್ಲೆ ಸಿನಿಮಾ ಪಾತ್ರವರ್ಗ
ನಾಯಕಿಯರಾದ ಅಮೃತ ರಾಜ್, ಸಂಹಿತ, ನಟರಾದ ಉಮೇಶ್, ತಬಲ ನಾಣಿ, ಹರೀಶ್ ರಾಜ್, ಕರಿಸುಬ್ಬು ನಟಿಯರಾದ ಶೃತಿ, ನಿಸರ್ಗ ಅಪ್ಪಣ್ಣ ಮುಂತಾದವರು "ಕಟ್ಲೆ" ಸಿನಿಮಾದಲ್ಲಿ ಅಭಿನಯಿಸಿದ್ದಾರೆ.
ಚೇತನ್ ಕುಮಾರ್ ಈ ಹಾಡನ್ನು ಬರೆದಿದ್ದಾರೆ