ದರ್ಶನ್ ಬಂಧನ ಪ್ರಕರಣದಲ್ಲಿ ರೇಣುಕಸ್ವಾಮಿ ಕುಟುಂಬ ನ್ಯಾಯಕ್ಕೆ ಅರ್ಹ, ಪಾರದರ್ಶಕ ತನಿಖೆ ನಡೆಯಲಿ; ನಟ ಉಪೇಂದ್ರ ಟ್ವೀಟ್
ಕನ್ನಡ ಸುದ್ದಿ  /  ಮನರಂಜನೆ  /  ದರ್ಶನ್ ಬಂಧನ ಪ್ರಕರಣದಲ್ಲಿ ರೇಣುಕಸ್ವಾಮಿ ಕುಟುಂಬ ನ್ಯಾಯಕ್ಕೆ ಅರ್ಹ, ಪಾರದರ್ಶಕ ತನಿಖೆ ನಡೆಯಲಿ; ನಟ ಉಪೇಂದ್ರ ಟ್ವೀಟ್

ದರ್ಶನ್ ಬಂಧನ ಪ್ರಕರಣದಲ್ಲಿ ರೇಣುಕಸ್ವಾಮಿ ಕುಟುಂಬ ನ್ಯಾಯಕ್ಕೆ ಅರ್ಹ, ಪಾರದರ್ಶಕ ತನಿಖೆ ನಡೆಯಲಿ; ನಟ ಉಪೇಂದ್ರ ಟ್ವೀಟ್

ಚಿತ್ರದುರ್ಗದ ರೇಣುಕಸ್ವಾಮಿ ಹತ್ಯೆ ಪ್ರಕರಣದಲ್ಲಿ ನಟ ದರ್ಶನ ಬಂಧನ ಬಗ್ಗೆ ಇದೇ ಮೊದಲ ಬಾರಿಗೆ ನಟ ಉಪೇಂದ್ರ ಪ್ರತಿಕ್ರಿಯಿಸಿದ್ದಾರೆ. ಮೃತ ರೇಣುಕಸ್ವಾಮಿ ಕುಟುಂಬಕ್ಕೆ ನ್ಯಾಯ ಸಿಗಬೇಕು, ಪೊಲೀಸರು ಪಾರದರ್ಶಕ ತನಿಖೆ ನಡೆಸಬೇಕೆಂದು ಹೇಳಿದ್ದಾರೆ.

ದರ್ಶನ್ ಬಂಧನ ಪ್ರಕರಣದಲ್ಲಿ ರೇಣುಕಸ್ವಾಮಿ ಕುಟುಂಬ ನ್ಯಾಯಕ್ಕೆ ಅರ್ಹ, ಪಾರದರ್ಶಕ ತನಿಖೆ ನಡೆಯಲಿ; ನಟ ಉಪೇಂದ್ರ ಟ್ವೀಟ್
ದರ್ಶನ್ ಬಂಧನ ಪ್ರಕರಣದಲ್ಲಿ ರೇಣುಕಸ್ವಾಮಿ ಕುಟುಂಬ ನ್ಯಾಯಕ್ಕೆ ಅರ್ಹ, ಪಾರದರ್ಶಕ ತನಿಖೆ ನಡೆಯಲಿ; ನಟ ಉಪೇಂದ್ರ ಟ್ವೀಟ್

ಬೆಂಗಳೂರು: ಸ್ಯಾಂಡಲ್‌ವುಡ್ ನಟ ದರ್ಶನ್ (Actor Darshan Arrest), ಗೆಳತಿ ಪವಿತ್ರಾ ಗೌಡ (Pavithra Gowda) ಅಂಡ್ ಗ್ಯಾಂಗ್‌ನಿಂದ ಚಿತ್ರದುರ್ಗದ ಮೂಲದ ರೇಣುಕಸ್ವಾಮಿ ಹತ್ಯೆ (Renukaswamy Murder Case) ಆರೋಪ ಪ್ರಕರಣ ದಿನಕ್ಕೊಂದು ತಿರುವು ಪಡೆಯುತ್ತಿದ್ದು, ಪ್ರಕರಣದ ತನಿಖೆ ನಡೆಸುತ್ತಿರುವ ಅನ್ನಪೂರ್ಣೇಶ್ವರಿ ಠಾಣಾ ಪೊಲೀಸರು ವಿಚಾರಣೆಗೆ ಬರುವಂತೆ ನಟ ಚಿಕ್ಕಣ್ಣಗೆ (Actor Chikkanna) ನೋಟಿಸ್ ನೀಡಿದ್ದಾರೆ. ಕೋರ್ಟ್‌ ಆದೇಶದೊಂದಿಗೆ ಎಲ್ಲಾ ಆರೋಪಿಗಳನ್ನು ವಶಕ್ಕೆ ಪಡೆದಿರುವ ಪೊಲೀಸರು ಕೃತ್ಯದ ಸ್ಥಳಕ್ಕೆ ಕರೆದೊಯ್ದು ಮಹಜರು ಹಾಗೂ ಇತರೆ ತನಿಖೆಯನ್ನು ಮತ್ತಷ್ಟು ಚುರುಕುಗೊಳಿಸಿದ್ದಾರೆ. ಈ ನಡುವೆ ಘಟನೆ ನಡೆದ ಹಲವು ದಿನಗಳಿಂದ ಮೌನವಾಗಿದ್ದ ಚಂದನವನದ ಹಿರಿಯ ನಟರು ಪ್ರಕರಣದ ಬಗ್ಗೆ ತಮ್ಮ ಅಭಿಪ್ರಾಯಗಳನ್ನು ವ್ಯಕ್ತಪಡಿಸುತ್ತಿದ್ದಾರೆ.

ಕಿಚ್ಚ ಸುದೀಪ್ ಬೆನ್ನಲ್ಲೇ ಇದೀಗ ರಿಯಲ್ ಸ್ಟಾರ್ ಉಪೇಂದ್ರ ಕೂಡ ರೇಣುಕಸ್ವಾಮಿ ಹತ್ಯೆಯ ಆರೋಪದಲ್ಲಿ ಬಂಧನವಾಗಿರುವ ನಟ ದರ್ಶನ್ ಪ್ರಕರಣದ ಬಗ್ಗೆ ಕೆಲವೊಂದು ಆಸಕ್ತಿಕರ ಮಾತುಗಳನ್ನು ಹೇಳಿದ್ದಾರೆ.

ದರ್ಶನ್ - ರೇಣುಕಾ ಸ್ವಾಮಿ - ಪಾರದರ್ಶಕ ವಿಚಾರಣೆ

ಈ ಬಗ್ಗೆ ಸಾಮಾಜಿಕ ಜಾಲತಾಣ ಎಕ್ಸ್‌ ಖಾತೆಯಲ್ಲಿ ಬರೆದುಕೊಂಡಿಕೊರುವ ನಟ ಉಪೇಂದ್ರ, ದರ್ಶನ್ - ರೇಣುಕಾ ಸ್ವಾಮಿ - ಪಾರದರ್ಶಕ ವಿಚಾರಣೆ. ಕಳೆದ ಕೆಲವು ದಿನಗಳಿಂದ ನಡೆಯುತ್ತಿರುವ ದರ್ಶನ್ ಬಂಧನ ರೇಣುಕಾಸ್ವಾಮಿ ಕೊಲೆ ಪ್ರಕರಣ ಮತ್ತು ಅದರ ವಿಚಾರಣೆ ಇಡೀ ಕರ್ನಾಟಕ ಮಾತ್ರವಲ್ಲ ಇಡೀ ಭಾರತವೇ ಭೆರಗಾಗಿ ನೋಡುತ್ತಿದೆ. ಈ ಹೈ ಪ್ರೊಫೈಲ್ ಕೇಸ್‌ನ ವಿಚಾರಣೆಯಲ್ಲಿ ನಿಶ್ಪಕ್ಷಪಾತವಾದ ನಿರ್ಣಯ ಮತ್ತು ನ್ಯಾಯಕ್ಕಾಗಿ ಕಾಯುತ್ತಿದ್ದಾರೆ. ರೇಣುಕಾಸ್ವಾಮಿ ಕುಟುಂಬದಲ್ಲಿ, ಜನರಲ್ಲಿ, ಟೀವಿ ಮಾಧ್ಯಮಗಳಲ್ಲಿ ಮತ್ತು ದರ್ಶನ್ ಅಭಿಮಾನಿಗಳಲ್ಲಿ ಏನೇನೋ ಆತಂಕ, ಅನುಮಾನಗಳು ಕಾಡುತ್ತಿದೆ.

ಊಹಾಪೋಹಗಳು ಹುಟ್ಟಿಕೊಳ್ಳುತ್ತಿದೆ. ಏಕೆಂದರೆ……

ಉಪೇಂದ್ರ ಅವರ ಟ್ವಿಟರ್ ಪೋಸ್ಟ್ ಮುಂದುವರಿದು, ಯಾವುದೇ ಕೇಸ್ ಆದರೂ ಆ ಕೇಸ್ ನ ವಿಚಾರಣೆಯ ವೀಡಿಯೊ ದಾಖಲೆಗಳನ್ನು ಮತ್ತು ಸಾಕ್ಷಿಗಳ ಎಲ್ಲಾ ವಿವರಗಳನ್ನು ಆಗಾಗ ಪೊಲೀಸರು ಸಂಬಂಧ ಪಟ್ಟ ವ್ಯಕ್ತಿಗಳ ಕುಟುಂಬದವರ ಜೊತೆ ಹಂಚಿಕೊಳ್ಳಬೇಕು ಮತ್ತು ಅದು ಕಾನೂನಾಗಬೇಕು. ( ಹಿಂದೆಲ್ಲಾ ಪೊಲೀಸರು ವಿಚಾರಣೆಯ ವಿವರ ಬರೆದು ದಾಖಲಿಸುತ್ತಿದ್ದರು. ಈಗ ತಂತ್ರಜ್ಞಾನ ಇಷ್ಟೊಂದು ಮುಂದುವರೆದಿದ್ದು ಎಲ್ಲವನ್ನೂ ವೀಡಿಯೋ ರೆಕಾರ್ಡ್ ಮತ್ತು ಲೈವ್ ಸ್ಟ್ರೀಮಿಂಗ್ ಮಾಡಬಹುದು )( ಕಾನೂನು ಸುಧಾರಣೆಗಳು #CriminalJustice Reforms )

ಅದೇ ರೀತಿ ಒಬ್ಬ ಸಾರ್ವಜನಿಕ ವ್ಯಕ್ತಿಯ ಬಗ್ಗೆ ಕೇಸ್ ಆಗಿದ್ದರೆ ಆ ಕೇಸ್ ನ ವಿಚಾರಣೆಯ ವೀಡಿಯೋ ಧಾಖಲೆಗಳನ್ನು ಮತ್ತು ಸಾಕ್ಷಿಗಳ ಎಲ್ಲಾ ವಿವರಗಳನ್ನು ಪೊಲೀಸರು ಆಗಾಗ ಸಾರ್ವಜನಿಕವಾಗಿ ತೆರೆದಿಡಬೇಕು. ಒಬ್ಬ ಸಾರ್ವಜನಿಕ ವ್ಯಕ್ತಿಯ ವಿಚಾರಣೆ ಸಾರ್ವಜನಿಕವಾಗೇ ಸಂಪೂರ್ಣ ಪಾರದರ್ಶಕತೆಯಿಂದ ಆಗಬೇಕು, ಸಾಕ್ಷಿ ನಾಶ, ಪ್ರಭಾವಿಗಳ ಹಸ್ತಕ್ಷೇಪ, ಭ್ರಷ್ಟಾಚಾರ ಇವಕ್ಕೆಲ್ಲಾ ತೆರೆ ಎಳೆದಂತಾಗುತ್ತದೆ. ಆಗ ರೇಣುಕಾ ಸ್ವಾಮಿ ಕುಟುಂಬಕ್ಕೆ, ಜನರಿಗೆ, ಟೀವಿ ಮಾಧ್ಯಮಗಳಿಗೆ ಮತ್ತು ದರ್ಶನ್ ಅಭಿಮಾನಿಗಳಿಗೆ ಮನಸಿನಲ್ಲಿ ಗೊಂದಲಗಳಿಲ್ಲದೆೇ ಪೋಲೀಸ್ ಮತ್ತು ಟೀವಿ ಮಾಧ್ಯಮಗಳ ಬಗ್ಗೆ ಇನ್ನೂ ಗೌರವ ಹೆಚ್ಚಾಗುತ್ತದೆ ಮತ್ತು ನ್ಯಾಯ ಸಿಗುತ್ತದೆ ಎಂಬ ನಂಬಿಕೆ ಬರುತ್ತದೆ.

(ಕನ್ನಡದಲ್ಲಿ ಕ್ರಿಕೆಟ್, ಎಚ್‌ಟಿ ಕನ್ನಡ ಬೆಸ್ಟ್‌. ಐಪಿಎಲ್, ಟಿ20 ವರ್ಲ್ಡ್‌ಕಪ್ ಸೇರಿದಂತೆ ಕ್ರಿಕೆಟ್ ಲೋಕದ ಸಮಗ್ರ ಮಾಹಿತಿ, ತಾಜಾ ವಿದ್ಯಮಾನ, ರನ್-ವಿಕೆಟ್, ಪ್ಲೇಆಫ್, ಟೀಮ್ ಸ್ಟಾಟ್ ವಿಶ್ಲೇಷಣೆಗಳಿಗಾಗಿ kannada.hindustantimes.com/cricket ಕ್ಕೆ ಭೇಟಿ ನೀಡಿ.)

Whats_app_banner