ಅಭಿಮಾನಿ ಹತ್ಯೆ ಪ್ರಕರಣದಲ್ಲಿ ನಟ ದರ್ಶನ್‌ ಬಂಧನ; ಜೀವಾವಧಿ ಶಿಕ್ಷೆ ಅಥವಾ ಮರಣದಂಡನೆ ಪೋಸ್ಟ್‌ ರಿಟ್ವೀಟ್ ಮಾಡಿದ ನಟಿ ರಮ್ಯಾ-sandalwood news actor darshan arrested in murder case actress ramya retweet on sentence for darshan post rmy ,ಮನರಂಜನೆ ಸುದ್ದಿ
ಕನ್ನಡ ಸುದ್ದಿ  /  ಮನರಂಜನೆ  /  ಅಭಿಮಾನಿ ಹತ್ಯೆ ಪ್ರಕರಣದಲ್ಲಿ ನಟ ದರ್ಶನ್‌ ಬಂಧನ; ಜೀವಾವಧಿ ಶಿಕ್ಷೆ ಅಥವಾ ಮರಣದಂಡನೆ ಪೋಸ್ಟ್‌ ರಿಟ್ವೀಟ್ ಮಾಡಿದ ನಟಿ ರಮ್ಯಾ

ಅಭಿಮಾನಿ ಹತ್ಯೆ ಪ್ರಕರಣದಲ್ಲಿ ನಟ ದರ್ಶನ್‌ ಬಂಧನ; ಜೀವಾವಧಿ ಶಿಕ್ಷೆ ಅಥವಾ ಮರಣದಂಡನೆ ಪೋಸ್ಟ್‌ ರಿಟ್ವೀಟ್ ಮಾಡಿದ ನಟಿ ರಮ್ಯಾ

ಅಭಿಮಾನಿ ಹತ್ಯೆ ಪ್ರಕರಣದಲ್ಲಿ ಬಂಧನವಾಗಿರುವ ನಟ ದರ್ಶನ್ ವಿಚಾರವಾಗಿ ನಟಿ ರಮ್ಯಾ ಪ್ರತಿಕ್ರಿಯಿಸಿದ್ದು, ದರ್ಶನ್‌ಗೆ ಜೀವಾವಧಿ ಶಿಕ್ಷೆ ಅಥವಾ ಮರಣದಂಡನೆ ಪೋಸ್ಟ್ ಅವರನ್ನು ರಿಟ್ವೀಟ್ ಮಾಡಿದ್ದಾರೆ.

ಅಭಿಮಾನಿ ಹತ್ಯೆ ಪ್ರಕರಣದಲ್ಲಿ ನಟ ದರ್ಶನ್‌ ಬಂಧನ; ಜೀವಾವಧಿ ಶಿಕ್ಷೆ ಅಥವಾ ಮರಣದಂಡನೆ ಪೋಸ್ಟ್‌ ರಿಟ್ವೀಟ್ ಮಾಡಿದ ನಟಿ ರಮ್ಯಾ
ಅಭಿಮಾನಿ ಹತ್ಯೆ ಪ್ರಕರಣದಲ್ಲಿ ನಟ ದರ್ಶನ್‌ ಬಂಧನ; ಜೀವಾವಧಿ ಶಿಕ್ಷೆ ಅಥವಾ ಮರಣದಂಡನೆ ಪೋಸ್ಟ್‌ ರಿಟ್ವೀಟ್ ಮಾಡಿದ ನಟಿ ರಮ್ಯಾ

ಬೆಂಗಳೂರು: ಸ್ನೇಹಿತೆ ಪವಿತ್ರ ಗೌಡ (Pavithra Gowda) ಅವರಿಗೆ ಮೆಸೇಜ್ ಮಾಡಿದ ಎಂಬ ಏಕೈಕ ಕಾರಣಕ್ಕೆ ಚಿತ್ರದುರ್ಗ ಮೂಲದ ರೇಣುಕಾ ಸ್ವಾಮಿ (Renuka swamy Murder Case) ಎಂಬ ವ್ಯಕ್ತಿಯ ಹತ್ಯೆ ಪ್ರಕರಣದಲ್ಲಿ ನಟ ದರ್ಶನ್ (Actor Darshan), ಪವಿತ್ರ ಗೌಡ ಸೇರಿ 13 ಮಂದಿ ಆರೋಪಿಗಳನ್ನು ಅನ್ನಪೂರ್ಣೇಶ್ವರಿ ಠಾಣೆ ಪೊಲೀಸರು ಬಂಧಿಸಿದ್ದಾರೆ. ಪ್ರಕರಣ ಸಂಬಂಧ ಪೊಲೀಸರು ತನಿಖೆ ನಡೆಸುತ್ತಿದ್ದಾರೆ. ಈ ನಡುವೆ ನಟಿ ರಮ್ಯಾ ಅವರು ಪೋಸ್ಟ್‌ವೊಂದನ್ನು ರಿಟ್ವೀಟ್ ಮಾಡಿದ್ದು, ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ ಆಗಿದೆ.

ಈ ಪ್ರಕರಣದಲ್ಲಿ ಕಾಯ್ದೆ 302ರ ಅಡಿಯಲ್ಲಿ ದರ್ಶನ್‌ಗೆ ಜೀವಾವಧಿ ಶಿಕ್ಷೆ ಅಥವಾ ಮರಣ ದಂಡನೆ ಶಿಕ್ಷೆಯಾಗುವ ಸಾಧ್ಯತೆ ಇದೆ. ಇತರೆ ಪ್ರಕರಣಗಳಿಂತೆ ಹಣದ ಪ್ರಭಾವ ಮತ್ತು ಭಾರತೀಯ ಕಾನೂನು ವ್ಯವಸ್ಥೆಯ ಅಪಹಾಸ್ಯದ ಪ್ರಕರಣವಾಗಬಹುದು. ಸಂತ್ರಸ್ತರಿಗೆ ಸಿಗಬೇಕಾದ ನ್ಯಾಯ ಸಿಗುತ್ತದೆ ಎಂದು ನಿರೀಕ್ಷಿಸುತ್ತೇವೆ ಎಂದು ಕರ್ನಾಟಕ ಬಾಕ್ಸ್ ಆಫೀಸ್ ಹೆಸರಿನ ಎಕ್ಸ್‌ ಖಾತೆಯಲ್ಲಿ ಬರೆಯಲಾಗಿದೆ. ಇದನ್ನು ನಟಿ ರಮ್ಯಾ ಅವರು ರಿಟ್ವೀಟ್ ಮಾಡಿದ್ದಾರೆ. ಆ ಪೋಸ್ಟ್ ಇಲ್ಲಿದೆ.

ರಮ್ಯಾ ಅವರು ರಿಟ್ವೀಟ್ ಪೋಸ್ಟ್‌ಗೆ ಹಲವರು ಪ್ರತಿಕ್ರಿಯಿಸಿದ್ದಾರೆ. ರೇಣುಕಸ್ವಾಮಿ ನಟಿ ಪವಿತ್ರ ಗೌಡ ಬಗ್ಗೆ ಅಶ್ಲೀಲ ಕಮೆಂಟ್ ಮಾಡಿದ್ದರೆ ದರ್ಶನ, ಪವಿತ್ರ ಅವರು ರೇಣುಕಾ ಸ್ವಾಮಿ ವಿರುದ್ಧ ಪೊಲೀಸರಿಗೆ ದೂರು ನೀಡಬೇಕು, ಇಂತಹ ಸಣ್ಣ ವಿಚಾರಕ್ಕೆ ಈ ರೀತಿ ಹತ್ಯೆ ಮಾಡಬಾರದು. ಯಾರು ಕಾನೂನನ್ನು ಕೈಗೆ ತೆಗೆದುಕೊಳ್ಳಬಾರದು ಎಂದು ಶರಣು ಎನ್ ಎಂಬುವರು ಕಾಮೆಂಟ್ ಮಾಡಿದ್ದಾರೆ.

ಏನಿದು ರೇಣುಕಾ ಸ್ವಾಮಿ ಹತ್ಯೆ ಪ್ರಕರಣ?

ದರ್ಶನ ಸ್ನೇಹಿತೆ ಪವಿತ್ರ ಗೌಡ ಅವರಿಗೆ ಅಶ್ಲೀಲ ಸಂದೇಶ ಕಳುಹಿಸಿದ್ದಾನೆ ಎಂಬ ಕಾರಣಕ್ಕೆ ಚಿತ್ರದುರ್ಗ ಮೂಲದ ರೇಣುಕಾ ಸ್ವಾಮಿ ಎಂಬುವರನ್ನು ಜೂನ್ 8ರ ಶನಿವಾರ ಬೆಂಗಳೂರಿಗೆ ಕರೆಸಿಕೊಂಡಿದ್ದಾರೆ. ದರ್ಶನ್ ಮತ್ತು ಅವರ ಆಪ್ತರು ಆರ್‌ಆರ್‌ ನಗರದ ಪಟ್ಟಣಗೆರೆಯಲ್ಲಿರುವ ಜಯಣ್ಣ ಎಂಬುವರ ಮಾಲೀಕತ್ವದ ಶೆಡ್‌ನಲ್ಲಿ ರೇಣುಕಾ ಸ್ವಾಮಿ ಅವರಿಗೆ ಚೆನ್ನಾಗಿ ತೀವ್ರವಾಗಿ ಹಲ್ಲೆ ನಡೆಸಿದ್ದಾರೆ ಎಂಬ ಆರೋಪಗಳಿವೆ. ನಂತರ ದರ್ಶನ್ ಸ್ನೇಹಿತರು ರೇಣುಕಾ ಅವರನ್ನು ಹತ್ಯೆ ಮಾಡಿ ಶವವನ್ನು ಕಾಮಾಕ್ಷಿಪಾಳ್ಯದ ಬಳಿಯ ಮೋರಿಯಲ್ಲಿ ಎಸೆದಿದ್ದಾರೆ.

ನಾಯಿಗಳು ಶವವನ್ನು ಎಳೆದಾಡುತ್ತಿದ್ದಾಗ ಸ್ಥಳೀಯರ ಗಮನಕ್ಕೆ ಬಂದಿದೆ. ಕೂಡಲೇ ಪೊಲೀಸರಿಗೆ ಮಾಹಿತಿ ನೀಡಿದ್ದಾರೆ. ಪೊಲೀಸರು ತನಿಖೆ ಕೈಗೊಂಡು ಆರಂಭದಲ್ಲಿ ವಿನಯ್ ಎಂಬುವರು ಸೇರಿ ನಾಲ್ವರನ್ನು ಬಂಧಿಸಿದ್ದಾರೆ. ಬಂಧಿತರು ನೀಡಿದ ಮಾಹಿತಿಯ ಮೇರೆಗೆ ಇಂದು (ಜೂನ್ 11, ಮಂಗಳವಾರ) ಬೆಳಗ್ಗೆ 8.30ಕ್ಕೆ ಮೈಸೂರಿನಲ್ಲಿದ್ದ ದರ್ಶನ್ ಅವರನ್ನು ಬಂಧಿಸಿ ಬೆಂಗಳೂರಿಗೆ ಕರೆತರಲಾಗಿದೆ. ದರ್ಶನ ಸೇರಿ ಇತರೆ ಆರೋಪಿಗಳ ವಿಚಾರಣೆ ನಡೆಯುತ್ತಿದ್ದು, ದರ್ಶನ್ ಅಭಿಮಾನಿ ರೇಣುಕಾ ಸ್ವಾಮಿ ಹತ್ಯೆ ಪ್ರಕರಣದಲ್ಲಿ 13 ಆರೋಪಿಗಳನ್ನು ಬಂಧಿಸಲಾಗಿದೆ.

(ಕನ್ನಡದಲ್ಲಿ ಕ್ರಿಕೆಟ್, ಎಚ್‌ಟಿ ಕನ್ನಡ ಬೆಸ್ಟ್‌. ಐಪಿಎಲ್, ಟಿ20 ವರ್ಲ್ಡ್‌ಕಪ್ ಸೇರಿದಂತೆ ಕ್ರಿಕೆಟ್ ಲೋಕದ ಸಮಗ್ರ ಮಾಹಿತಿ, ತಾಜಾ ವಿದ್ಯಮಾನ, ರನ್-ವಿಕೆಟ್, ಪ್ಲೇಆಫ್, ಟೀಮ್ ಸ್ಟಾಟ್ ವಿಶ್ಲೇಷಣೆಗಳಿಗಾಗಿ kannada.hindustantimes.com/cricket ಕ್ಕೆ ಭೇಟಿ ನೀಡಿ.)

mysore-dasara_Entry_Point