ಕನ್ನಡ ಸುದ್ದಿ  /  Entertainment  /  Sandalwood News Actor Director Abhishek Shetty Announces Nam Gani Bcom Pass Movie Sequel On His Birthday Mnk

Gani Bcom Pass 2: ಬರ್ತ್‌ಡೇ ದಿನವೇ ನಮ್‌ ಗಣಿ ಬಿಕಾಂ ಪಾಸ್‌ ಚಿತ್ರದ ಸೀಕ್ವೆಲ್‌ ಘೋಷಿಸಿದ ನಟ, ನಿರ್ದೇಶಕ ಅಭಿಷೇಕ್‌ ಶೆಟ್ಟಿ

ಆರಾಮ್ ಅರವಿಂದ್ ಸ್ವಾಮಿ ಸಿನಿಮಾ ಬಿಡುಗಡೆಗೆ ಎದುರು ನೋಡುತ್ತಿರುವ ನಟ ನಿರ್ದೇಶಕ ಅಭಿಷೇಕ್ ಶೆಟ್ಟಿ, ಈಗ ಹೊಸ ಚಿತ್ರ ಘೋಷಿಸಿದ್ದಾರೆ. ಅವರ ಜನ್ಮದಿನದ ಪ್ರಯುಕ್ತ ಗಣಿ ಬಿಕಾಂ ಪಾಸ್ 2 ಚಿತ್ರದ ಫಸ್ಟ್ ಲುಕ್ ಹಾಗೂ ಟೈಟಲ್ ರಿವೀಲ್ ಮಾಡಲಾಗಿದೆ.

Nam Gani Bcom Pass 2: ಬರ್ತ್‌ಡೇ ದಿನವೇ ಗಣಿ ಬಿಕಾಂ ಪಾಸ್‌ ಚಿತ್ರದ ಸೀಕ್ವೆಲ್‌ ಘೋಷಿಸಿದ ನಟ, ನಿರ್ದೇಶಕ ಅಭಿಷೇಕ್‌ ಶೆಟ್ಟಿ
Nam Gani Bcom Pass 2: ಬರ್ತ್‌ಡೇ ದಿನವೇ ಗಣಿ ಬಿಕಾಂ ಪಾಸ್‌ ಚಿತ್ರದ ಸೀಕ್ವೆಲ್‌ ಘೋಷಿಸಿದ ನಟ, ನಿರ್ದೇಶಕ ಅಭಿಷೇಕ್‌ ಶೆಟ್ಟಿ

Nam Gani Bcom Pass 2: ಒಬ್ಬ ನಟ ಅಭಿನಯದ ಮೇಲೆ‌ ಮಾತ್ರ ಗಮನಹರಿಸಬೇಕು. ಆದರೆ ನಿರ್ದೇಶಕನಾದವನು ಎಲ್ಲಾ ಜವಾಬ್ದಾರಿಯನ್ನು ತಮ್ಮ ಹೆಗಲಿಗೇರಿಸಿಕೊಂಡು ಸಾಗಬೇಕು. ಹಾಗ್ ನೋಡಿದರೆ ಏಕಕಾಲಕ್ಕೆ ನಟನೆ ಹಾಗೂ ನಿರ್ದೇಶನ ಮಾಡುವುದು ಸುಲಭದ ಮಾತಲ್ಲ. ಅಂಥಹ ಪ್ರಯತ್ನದಲ್ಲಿ ಗೆದ್ದವರು ಕೆಲವೊಂದಿಷ್ಟು ಮಂದಿ. ಆ ಸಾಲಿನಲ್ಲಿ ಯುವ ನಿರ್ದೇಶಕ ಅಭಿಷೇಕ್ ಶೆಟ್ಟಿ ಸ್ಥಾನ ಪಡೆದಿದ್ದಾರೆ.

ಅಭಿಷೇಕ್ ಶೆಟ್ಟಿ‌ ನಟನೆ ಜೊತೆಗೆ ನಿರ್ದೇಶಕನಾಗಿಯೂ ಗುರುತಿಸಿಕೊಂಡಿದ್ದಾರೆ. ನಮ್ ಗಣಿ ಬಿ.ಕಾಂ ಪಾಸ್ ಚಿತ್ರದ ಮೂಲಕ ನಟನಾಗಿ ಹಾಗೂ ನಿರ್ದೇಶಕರಾಗಿ ಸ್ಯಾಂಡಲ್ವುಡ್‌ಗೆ ಹೆಜ್ಜೆ ಇಟ್ಟವರು. ಮೊದಲ ಚಿತ್ರದಲ್ಲಿಯೇ ಗಮನಸೆಳೆದ ಅವರು ಆ ನಂತರ ಗಜಾನನ ಅಂಡ್ ಗ್ಯಾಂಗ್ ಚಿತ್ರ ನಿರ್ದೇಶಿಸಿ ಸೈ ಎನಿಸಿಕೊಂಡರು. ಅನೀಶ್‌ಗೆ ಆರಾಮ್ ಅರವಿಂದ್ ಸ್ವಾಮಿ ಅಂತೇಳಿ ಕುಣಿಸಿರುವ ಅಭಿಷೇಕ್ ಶೆಟ್ಟಿ, ಇದೀಗ ಮತ್ತೊಂದು ಪ್ರಯತ್ನಕ್ಕೆ ಕೈ ಹಾಕಿದ್ದಾರೆ.

ಆರಾಮ್ ಅರವಿಂದ್ ಸ್ವಾಮಿ ಸಿನಿಮಾ ಬಿಡುಗಡೆಗೆ ಎದುರು ನೋಡುತ್ತಿರುವ ಅಭಿಷೇಕ್ ಶೆಟ್ಟಿ, ಈಗ ಹೊಸ ಚಿತ್ರ ಘೋಷಿಸಿದ್ದಾರೆ. ಅವರ ಜನ್ಮದಿನದ ಪ್ರಯುಕ್ತ ಗಣಿ ಬಿಕಾಂ ಪಾಸ್ 2 ಚಿತ್ರದ ಫಸ್ಟ್ ಲುಕ್ ಹಾಗೂ ಟೈಟಲ್ ರಿವೀಲ್ ಮಾಡಲಾಗಿದೆ. ವಿಶೇಷ ಎಂದರೆ ಅಭಿಷೇಕ್ ಶೆಟ್ಟಿ ನಮ್ ಗಣಿ ಬಿ.ಕಾಂ ಪಾಸ್ ಸೀಕ್ವೆಲ್‌ಗೆ ಮುನ್ನುಡಿ ಬರೆದಿದ್ದು, ಫಸ್ಟ್ ಲುಕ್ ಕೂಡ ರಿವೀಲ್ ಮಾಡಿದ್ದಾರೆ. ಸೂಟ್ ಬೂಟ್ ತೊಟ್ಟು, ಕೈಯಲ್ಲಿ ಕಾಫಿ ಕಪ್ ಬನ್ ಹಿಡಿದು ದುಬಾರಿ ಕಾರಿನ ಮುಂದೆ ಸ್ಟೈಲೀಶ್ ಆಗಿ ಅಭಿ ಪೋಸ್ ಕೊಟ್ಟಿದ್ದಾರೆ.

ಸುಮಂತ್ ಆಚಾರ್ಯ ಕ್ಯಾಮೆರಾ ಹಿಡಿಯಲಿದ್ದಾರೆ. ಉಮೇಶ್ ಆರ್ ಬಿ ಸಂಕಲನ, ಆನಂದ್ ರಾಜವಿಕ್ರಂ ಟ್ಯೂನ್ ಹಾಕಲಿದ್ದಾರೆ. ನಮ್ ಗಣಿ ಬಿ.ಕಾಂ ಪಾಸ್-2 ಸಿನಿಮಾದ ಕಥೆ ಬರವಣಿಗೆ ಹಂತದಲ್ಲಿದ್ದು, ಶೀಘ್ರದಲ್ಲೇ ಮತ್ತೊಂದು ಅಪ್ ಡೇಟ್ ನೊಂದಿಗೆ ಅಭಿಷೇಕ್ ಶೆಟ್ಟಿ ನಿಮ್ಮ ಮುಂದೆ ಹಾಜರಾಗಲಿದ್ದಾರೆ.

ನಮ್ ಗಣಿ ಬಿ.ಕಾಂ ಪಾಸ್ 2 ಚಿತ್ರದ ಮೂಲಕ ಅಭಿಷೇಕ್ ಶೆಟ್ಟಿ ಮತ್ತೊಮ್ಮೆ ಡೈರೆಕ್ಟರ್ ಕ್ಯಾಪ್ ತೊಟ್ಟು ಹೀರೋ ಆಗಿ ಎಂಟ್ರಿ ಕೊಡಲಿದ್ದಾರೆ. ಅವರ ಹೊಸ‌ ಕನಸಿಗೆ ಬಿ ಎಸ್ ಪ್ರಶಾಂತ್ ಶೆಟ್ಟಿ ಶಕ್ತಿಯಾಗಿ ನಿಂತಿದ್ದಾರೆ. ಅದ್ವಿ ಕ್ರಿಯೇಷನ್ ಬ್ಯಾನರ್‌ನಡಿ ಪ್ರಶಾಂತ್, ಈ ಸೀಕ್ವೆಲ್‌ಗೆ ಹಣ ಹೂಡಲಿದ್ದಾರೆ.

IPL_Entry_Point