Actor Ganesh: ಬಂಡೀಪುರ ಸೂಕ್ಷ್ಮ ವಲಯದಲ್ಲಿ ನಟ ಗೋಲ್ಡನ್ ಸ್ಟಾರ್ ಗಣೇಶ್ ಬೃಹತ್ ಕಟ್ಟಡ ನಿರ್ಮಾಣಕ್ಕೆ ತೀವ್ರ ಆಕ್ಷೇಪ
ಕನ್ನಡ ಸುದ್ದಿ  /  ಮನರಂಜನೆ  /  Actor Ganesh: ಬಂಡೀಪುರ ಸೂಕ್ಷ್ಮ ವಲಯದಲ್ಲಿ ನಟ ಗೋಲ್ಡನ್ ಸ್ಟಾರ್ ಗಣೇಶ್ ಬೃಹತ್ ಕಟ್ಟಡ ನಿರ್ಮಾಣಕ್ಕೆ ತೀವ್ರ ಆಕ್ಷೇಪ

Actor Ganesh: ಬಂಡೀಪುರ ಸೂಕ್ಷ್ಮ ವಲಯದಲ್ಲಿ ನಟ ಗೋಲ್ಡನ್ ಸ್ಟಾರ್ ಗಣೇಶ್ ಬೃಹತ್ ಕಟ್ಟಡ ನಿರ್ಮಾಣಕ್ಕೆ ತೀವ್ರ ಆಕ್ಷೇಪ

ಸ್ಯಾಂಡಲ್‌ವುಡ್ ನಟ ಗಣೇಶ್ ಅವರು ಪರಿಸರ ಸೂಕ್ಷ್ಮ ವಲಯದಲ್ಲಿ ರೆಸಾರ್ಟ್‌ಗಾಗಿ ಬೃಹತ್ ಕಟ್ಟಡ ನಿರ್ಮಾಣ ಮಾಡುತ್ತಿರುವ ಆರೋಪ ಕೇಳಿ ಬಂದಿದೆ.

ನಟ ಗಣೇಶ್ ಬಂಡೀಪುರ ಸೂಕ್ಷ್ಮ ವಲಯದಲ್ಲಿ ಬೃಹತ್ ಕಟ್ಟಡ ನಿರ್ಮಾಣಕ್ಕೆ ತೀವ್ರ ಆಕ್ಷೇಪ ವ್ಯಕ್ತವಾಗಿದೆ
ನಟ ಗಣೇಶ್ ಬಂಡೀಪುರ ಸೂಕ್ಷ್ಮ ವಲಯದಲ್ಲಿ ಬೃಹತ್ ಕಟ್ಟಡ ನಿರ್ಮಾಣಕ್ಕೆ ತೀವ್ರ ಆಕ್ಷೇಪ ವ್ಯಕ್ತವಾಗಿದೆ

ಗುಂಡ್ಲುಪೇಟೆ (ಚಾಮರಾಜನಗರ): ಬಂಡೀಪುರ ಹುಲಿ ಸಂರಕ್ಷಿತ ಪ್ರದೇಶದ (Bandipur Tiger Reserve) ವ್ಯಾಪ್ತಿಯ ಪರಿಸರ ಸೂಕ್ಷ್ಮವಲಯದಲ್ಲಿ ನಟ ಗೋಲ್ಡನ್ ಸ್ಟಾರ್ ಗಣೇಶ್ (Actor Ganesh) ಅವರು ಕಟ್ಟಡ ನಿರ್ಮಿಸುತ್ತಿರುವುದಕ್ಕೆ ಪರಿಸರವಾದಿಗಳು ಆಕ್ಷೇಪ ವ್ಯಕ್ತಪಡಿಸಿದ್ದಾರೆ.

ಗುಂಡ್ಲುಪೇಟೆ ತಾಲ್ಲೂಕು ಹಂಗಳ ಹೋಬಳಿಯ ಜಕ್ಕಹಳ್ಳಿಯ ಸರ್ವೆ ನಂಬರ್ 105 ರಲ್ಲಿ 1ಎಕರೆ 24 ಗುಂಟೆ ಜಮೀನನ್ನು ಗಣೇಶ್ ಹೊಂದಿದ್ದಾರೆ. ಇದು ಬಂಡೀಪುರ ಹುಲಿ ಸಂರಕ್ಷಿತ ಪ್ರದೇಶದ ಪರಿಸರ ಸೂಕ್ಷ್ಮ ವಲಯದಲ್ಲಿದೆ. ಕಣಿಯನಪುರ ಆನೆ ಕಾರಿಡಾರ್ ಕೂಡ ಈ ಪ್ರದೇಶದಲ್ಲಿ ಹಾದು ಹೋಗುತ್ತದೆ.

ಖ್ಯಾತ ಚಿತ್ರ ನಟರು ಈ ರೀತಿಯ ಬೃಹತ್ ಕಟ್ಟಡ ನಿರ್ಮಾಣ ಮಾಡುವ ಮೂಲಕ ಪರಿಸರ ಸೂಕ್ಷ್ಮವಲಯದಲ್ಲಿ ಕಟ್ಟಡ ನಿರ್ಮಿಸುತ್ತಿರುವುದು ದುರಾದೃಷ್ಟಕರ. ಜಮೀನು ಪರಿಸರ ಸೂಕ್ಷ್ಮ ವಲಯ ಹಾಗೂ ಆನೆ ಕಾರಿಡಾರ್‌ನಲ್ಲಿದೆ ಎಂದು ತಿಳಿದಿದ್ದರೂ ಮಾನಿಟರಿಂಗ್ ಕಮಿಟಿ ಹಾಗೂ ಬಂಡೀಪುರ ಹುಲಿ ಸಂರಕ್ಷಿತ ಪ್ರದೇಶದ ನಿರ್ದೇಶಕರು ಕಟ್ಟಡ ನಿರ್ಮಿಸಲು ಅವಕಾಶ ನೀಡಿರುವುದು ದುರಂತವೇ ಸರಿ ಎಂದು ಪರಿಸರವಾದಿ ಜೋಸೆಫ್ ಹೂವರ್ ಆಕ್ರೋಶ ವ್ಯಕ್ತಪಡಿಸಿದ್ದಾರೆ.

ಕಟ್ಟಡ ನಿರ್ಮಾಣಕ್ಕೆ ವಿಧಿಸಿದ್ದ ಷರತ್ತುಗಳೇನು?

2023 ರ ಮಾರ್ಚ್ 15ರಂದು ವಾಸ ಹಾಗೂ ಕೃಷಿ ಉಪಕರಣಗಳನ್ನು ಇರಿಸಲು ಮನೆ ನಿರ್ಮಿಸಲು ಅನುಮತಿ ನೀಡಬೇಕು ಎಂದು ಗಣೇಶ್ ಕೋರಿದ್ದರು. ಜಮೀನಿನಲ್ಲಿ ಸ್ವಂತ ಉಪಯೋಗಕ್ಕೆ ಮನೆ ನಿರ್ಮಿಸಲು ಬಂಡೀಪುರ ನಿರ್ದೇಶಕರು ಅನುಮತಿ ನೀಡಿದ್ದಾರೆ. ಅನುಮತಿಗಿಂತ ಹೆಚ್ಚು ಜಾಗದಲ್ಲಿ ಮನೆ ನಿರ್ಮಿಸುವಂತಿಲ್ಲ. ವಾಣಿಜ್ಯ ಉದ್ದೇಶದ ಕಟ್ಟಡ ನಿರ್ಮಿಸುವಂತಿಲ್ಲ ಎಂಬ ಷರತ್ತನ್ನೂ ಹಾಕಿದ್ದರು. ಆದರೆ ಸ್ಥಳದಲ್ಲಿ ದೊಡ್ಡ ಕಾಂಕ್ರೀಟ್ ಪಿಲ್ಲರ್‌ಗಳನ್ನು ನಿರ್ಮಿಸಲಾಗಿದೆ.

ಇತ್ತಿಚೀನ ದಿನಗಳಲ್ಲಿ ಮಾನವ ವನ್ಯಜೀವಿ ದಾಳಿ ಹೆಚ್ಚುತ್ತಿದೆ. ಪ್ರಭಾವಿ ವ್ಯಕ್ತಿಗಳಿಗೆ ಪರಿಸರ ಸೂಕ್ಷ್ಮ ವಲಯದಲ್ಲಿ ಕಟ್ಟಡ ನಿರ್ಮಾಣ ಮಾಡಿಕೊಳ್ಳಲು ಅನುಮತಿ ನೀಡುವುದೆ ಇದಕ್ಕೆ ಎಲ್ಲಾ ಕಾರಣವಾಗಿದೆ. ಇದರಿಂದ ರೈತರಿಗೆ ತೊಂದರೆ ಉಂಟಾಗುತ್ತಿದೆ. ಇದ್ದರಿಂದ ಮುಂದೆ ಯಾವುದೇ ರೀತಿಯಲ್ಲಿ ಅನುಮತಿ ನೀಡಬಾರದು ಮತ್ತು ಸೆಲೆಬ್ರಿಟಿಗಳು, ರೈತರು ಎನ್ನದೆ ತಾರತಮ್ಯ ಮಾಡದೆ ಎಲ್ಲಾರನ್ನು ಒಂದೇ ರೀತಿಯಲ್ಲಿ ಕಾಣಬೇಕು ಎಂದು ಜೋಸೆಫ್ ಹೂವರ್ ತಿಳಿಸಿದ್ದಾರೆ.

ಎಲ್ಲಾದಕ್ಕೂ ಅರಣ್ಯ ಇಲಾಖೆಯನ್ನು ತಪ್ಪು ಎಂದು ಹೇಳುವುದು ತಪ್ಪು. ಕಂದಾಯ ಇಲಾಖೆಯ ಅಧಿಕಾರಿಗಳ ಜವಾಬ್ದಾರಿ ಇದರಲ್ಲಿ ಬಹಳ ಮುಖ್ಯವಾಗಿದೆ. ಆದರಿಂದ ಇದರಲ್ಲಿ ಎಲ್ಲಾರನ್ನು ಜವಾಬ್ದಾರಿಯಾಗಿ ಮಾಡುವ ಮೂಲಕ ಸಮಸ್ಯೆ ಉಂಟಾಗದಂತೆ ನೋಡಿಕೊಳ್ಳಬೇಕಾಗಿದೆ. ಅಲ್ಲದೆ ಮಾನಿಟರಿಂಗ್ ಕಮಿಟಿ ಒಂದು ನೀಲಿ ನಕ್ಷೆ ರೀತಿಯಲ್ಲಿ ಸೂಕ್ಷ್ಮ ಪರಿಸರ ವಲಯಲ್ಲಿ ಕಟ್ಟಡ ನಿರ್ಮಾಣ ಮಾಡಬೇಕು ಎಂಬುವುದನ್ನು ತಿಳಿಸುವ ಕೆಲಸ ಆಗಬೇಕಿದೆ ಎಂದು ಹೆಸರು ಹೇಳದ ಅಧಿಕಾರಿಗಳು ತಿಳಿಸಿದ್ದಾರೆ.

Whats_app_banner