GST Movie: ಒಂದೇ ಚಿತ್ರದಲ್ಲಿ ಅಮ್ಮ, ಮಗ, ಮೊಮ್ಮಗ; ಜಿಎಸ್‌ಟಿ ಸಿನಿಮಾ ಮುಗಿಸಿದ ಸೃಜನ್‌ ಲೋಕೇಶ್‌-sandalwood news actor maja talkies fame srujan lokesh finished shooting for gst movie gst movie latest update mnk ,ಮನರಂಜನೆ ಸುದ್ದಿ
ಕನ್ನಡ ಸುದ್ದಿ  /  ಮನರಂಜನೆ  /  Gst Movie: ಒಂದೇ ಚಿತ್ರದಲ್ಲಿ ಅಮ್ಮ, ಮಗ, ಮೊಮ್ಮಗ; ಜಿಎಸ್‌ಟಿ ಸಿನಿಮಾ ಮುಗಿಸಿದ ಸೃಜನ್‌ ಲೋಕೇಶ್‌

GST Movie: ಒಂದೇ ಚಿತ್ರದಲ್ಲಿ ಅಮ್ಮ, ಮಗ, ಮೊಮ್ಮಗ; ಜಿಎಸ್‌ಟಿ ಸಿನಿಮಾ ಮುಗಿಸಿದ ಸೃಜನ್‌ ಲೋಕೇಶ್‌

ನಟ ಸೃಜನ್‌ ಲೋಕೇಶ್‌ ನಿರ್ದೇಶನದ ಚೊಚ್ಚಲ ಜಿಎಸ್‌ಟಿ ಚಿತ್ರದ ಶೂಟಿಂಗ್‌ ಮುಕ್ತಾಯವಾಗಿದೆ. ಈ ಚಿತ್ರದಲ್ಲಿ ಸೃಜನ್‌ ಅವರ ತಾಯಿ, ಹಿರಿಯ ನಟಿ ಗಿರಿಜಾ ಲೋಕೇಶ್‌ ಮತ್ತು ಸೃಜನ್‌ ಅವರ ಪುತ್ರ ಸುಕೃತ್‌ ಸಹ ನಟಿಸಿದ್ದಾರೆ.

GST Movie: ಒಂದೇ ಚಿತ್ರದಲ್ಲಿ ಅಮ್ಮ, ಮಗ, ಮೊಮ್ಮಗ; ಜಿಎಸ್‌ಟಿ ಸಿನಿಮಾ ಮುಗಿಸಿದ ಸೃಜನ್‌ ಲೋಕೇಶ್‌
GST Movie: ಒಂದೇ ಚಿತ್ರದಲ್ಲಿ ಅಮ್ಮ, ಮಗ, ಮೊಮ್ಮಗ; ಜಿಎಸ್‌ಟಿ ಸಿನಿಮಾ ಮುಗಿಸಿದ ಸೃಜನ್‌ ಲೋಕೇಶ್‌

GST Kannada Movie: ಸೃಜನ್ ಲೋಕೇಶ್ ನಾಯಕನಾಗಿ ನಟಿಸುವುದಲ್ಲದೆ, ಮೊದಲ ಸಲ ನಿರ್ದೇಶನ ಮಾಡಿರುವ GST ಚಿತ್ರದ ಚಿತ್ರೀಕರಣ ಮುಕ್ತಾಯವಾಗಿದೆ. ಈ ಚಿತ್ರದಲ್ಲಿ ಗಿರಿಜಾ ಲೋಕೇಶ್, ಸೃಜನ್ ಲೋಕೇಶ್ ಹಾಗೂ ಸೃಜನ್ ಅವರ ಪುತ್ರ ಸುಕೃತ್ ಮೂರು ಜನ ಅಭಿನಯಿಸಿದ್ದಾರೆ. ಅಜ್ಜಿ, ಮಗ ಹಾಗೂ ಮೊಮ್ಮಗ ಮೂರು ಜನರನ್ನು ಒಟ್ಟಿಗೆ ತೆರೆಯ ಮೇಲೆ ಜಿಎಸ್‌ಟಿ ಚಿತ್ರದಲ್ಲಿ ನೋಡಬಹುದು. ತಮ್ಮ ನಿರ್ದೇಶನದ ಮೊದಲ ಚಿತ್ರದಲ್ಲೇ ಸೃಜನ್ ತಮ್ಮ ತಾಯಿ ಹಾಗೂ ಮಗನಿಗೆ ಆಕ್ಷನ್ ಕಟ್ ಹೇಳಿದ್ದಾರೆ. ಮನೋರಂಜನೆಯೇ ಪ್ರಧಾನವಾಗಿರುವ GST ಚಿತ್ರಕ್ಕೆ ಘೋಸ್ಟ್ ಇನ್ ಟ್ರಬಲ್ ಎಂಬ ಅಡಿಬರಹವಿದೆ.

ಕಬಿನಿ ಬಳಿಯ ಸಂದೇಶ್ ಅವರ ಹೊಸ ರೆಸಾರ್ಟ್‌ನಲ್ಲಿ ನಾಯಕ ಸೃಜನ್ ಹಾಗೂ ನಾಯಕಿ ರಜನಿ ಭಾರದ್ವಾಜ್ ನಟಿಸಿದ ಹಾಡೊಂದರ ಚಿತ್ರೀಕರಣ ಹಾಗೂ ಮೈಸೂರಿನಲ್ಲಿ ಸೃಜನ್ ಲೋಕೇಶ್, ಸಂಹಿತ ವಿನ್ಯ, ತಬಲನಾಣಿ, ಗಿರೀಶ್ ಶಿವಣ್ಣ, ವಿನೋದ್ ಗೊಬ್ಬರಗಾಲ ಮುಂತಾದವರು ಅಭಿನಯಿಸಿದ ಮತ್ತೊಂದು ಹಾಡಿನ ಚಿತ್ರೀಕರಣ ನಡೆದಿದೆ. ಸೃಜನ್ ಲೋಕೇಶ್ ಹಾಗೂ ಚಂದನ್ ಶೆಟ್ಟಿ ಹಾಡುಗಳನ್ನು ಬರೆದಿದ್ದಾರೆ. ಮುರುಗಾನಂದ ನೃತ್ಯ ನಿರ್ದೇಶನ ಮಾಡಿದ್ದಾರೆ. ಈ ಎರಡು ಹಾಡುಗಳ ಚಿತ್ರೀಕರಣದೊಂದಿಗೆ "ಜಿ ಎಸ್ ಟಿ" ಚಿತ್ರದ ಚಿತ್ರೀಕರಣ ಮುಕ್ತಾಯವಾಗಿದೆ.

ಹಾರರ್ ಕಾಮಿಡಿ ಜಾನರ್‌ನ ಕಥಾಹಂದರ ಹೊಂದಿರುವ ಈ ಚಿತ್ರಕ್ಕೆ ಸಿಜಿ ಕಾರ್ಯ ನಡೆಯುತ್ತಿದೆ. ಚಿತ್ರವನ್ನು ಆದಷ್ಟು ಬೇಗ ತೆರೆಗೆ ತರುವುದಾಗಿ ನಿರ್ಮಾಪಕರು ತಿಳಿಸಿದ್ದಾರೆ. GST ಚಿತ್ರ ಹಲವು ವಿಶೇಷತೆಗಳನ್ನೊಳಗೊಂಡಿದೆ. ಈ ಚಿತ್ರದಲ್ಲಿ ನಿರ್ಮಾಪಕ ಸಂದೇಶ್ ಅವರು ಪ್ರಮುಖಪಾತ್ರದಲ್ಲಿ ನಟಸಿದ್ದಾರೆ. ಅವರ ಪಾತ್ರ ಏನೆಂಬುದ್ದನ್ನು ನಿರ್ದೇಶಕ ಸೃಜನ್ ಲೋಕೇಶ್ ಗುಪ್ತವಾಗಿಟ್ಟಿದ್ದಾರೆ.

ತಾರಾಗಣದಲ್ಲಿ ಯಾರೆಲ್ಲ ಇದ್ದಾರೆ?

ಸೃಜನ್ ಲೋಕೇಶ್ ಅವರಿಗೆ ನಾಯಕಿಯಾಗಿ ರಜನಿ ಭಾರದ್ವಾಜ್ ನಟಿಸಿದ್ದಾರೆ. ಪ್ರಮೋದ್ ಶೆಟ್ಟಿ, ಗಿರಿಜಾ ಲೋಕೇಶ್, ಶೋಭ್ ರಾಜ್, ಶರತ್ ಲೋಹಿತಾಶ್ವ, ನಿವೇದಿತಾ, ಅರವಿಂದ್ ರಾವ್, ತಬಲ ನಾಣಿ, ರವಿಶಂಕರ್ ಗೌಡ, ವಿನೋದ್ ಗೊಬ್ಬರಗಾಲ, ಮಾಸ್ಟರ್ ಸುಕೃತ್ ಮುಂತಾದವರು ಈ ಸಿನಿಮಾದ ತಾರಾಬಳಗದಲ್ಲಿದ್ದಾರೆ. ಚಂದನ್ ಶೆಟ್ಟಿ ಸಂಗೀತ ನಿರ್ದೇಶನ ಹಾಗೂ ಗುಂಡ್ಲುಪೇಟೆ ಸುರೇಶ್ ಅವರ ಛಾಯಾಗ್ರಹಣವಿರುವ ಈ ಚಿತ್ರಕ್ಕೆ ರಾಜಶೇಖರ್ ಸಂಭಾಷಣೆ ಬರೆದಿದ್ದಾರೆ. ತೇಜಸ್ವಿ ಕೆ ನಾಗ್ ಈ ಚಿತ್ರದ ಸಹ ನಿರ್ದೇಶಕರು.