ಕನ್ನಡ ಸುದ್ದಿ  /  ಮನರಂಜನೆ  /  ‌Prajwal Devaraj: ಡೈನಾಮಿಕ್‌ ಪ್ರಿನ್ಸ್ ಪ್ರಜ್ವಲ್ ದೇವರಾಜ್ ಇನ್ನಿಲ್ಲ ಎಂಬ ಸುಳ್ಳು ವದಂತಿ; ಕುಟುಂಬಸ್ಥರಿಂದ ಹೊರಬಿತ್ತು ಸ್ಪಷ್ಟನೆ

‌Prajwal Devaraj: ಡೈನಾಮಿಕ್‌ ಪ್ರಿನ್ಸ್ ಪ್ರಜ್ವಲ್ ದೇವರಾಜ್ ಇನ್ನಿಲ್ಲ ಎಂಬ ಸುಳ್ಳು ವದಂತಿ; ಕುಟುಂಬಸ್ಥರಿಂದ ಹೊರಬಿತ್ತು ಸ್ಪಷ್ಟನೆ

ಡೈನಾಮಿಕ್‌ ಪ್ರಿನ್ಸ್‌ ಪ್ರಜ್ವಲ್‌ ದೇವರಾಜ್‌ ನಿಧನರಾಗಿದ್ದಾರೆ ಎಂಬ ಸುದ್ದಿ ಸೋಷಿಯಲ್‌ ಮೀಡಿಯಾದಲ್ಲಿ ಹರಿದಾಡುತ್ತಿದೆ. ಈ ಬಗ್ಗೆ ದೇವರಾಜ್‌ ಕುಟುಂಬ ಮತ್ತು ಅವರ ಆಪ್ತರು ಈ ಸುದ್ದಿಗೆ ಸ್ಪಷ್ಟನೆ ನೀಡಿದ್ದಾರೆ.

‌Prajwal Devaraj: ಡೈನಾಮಿಕ್‌ ಪ್ರಿನ್ಸ್ ಪ್ರಜ್ವಲ್ ದೇವರಾಜ್ ಇನ್ನಿಲ್ಲ ಎಂಬ ಸುಳ್ಳು ವದಂತಿ; ಕುಟುಂಬಸ್ಥರಿಂದ ಹೊರಬಿತ್ತು ಸ್ಪಷ್ಟನೆ
‌Prajwal Devaraj: ಡೈನಾಮಿಕ್‌ ಪ್ರಿನ್ಸ್ ಪ್ರಜ್ವಲ್ ದೇವರಾಜ್ ಇನ್ನಿಲ್ಲ ಎಂಬ ಸುಳ್ಳು ವದಂತಿ; ಕುಟುಂಬಸ್ಥರಿಂದ ಹೊರಬಿತ್ತು ಸ್ಪಷ್ಟನೆ

‌Prajwal Devaraj: ಸ್ಯಾಂಡಲ್‌ವುಡ್‌ ನಟ, ಡೈನಾಮಿಕ್‌ ಸ್ಟಾರ್‌ ಪ್ರಜ್ವಲ್‌ ದೇವರಾಜ್‌ ಇನ್ನಿಲ್ಲ ಎಂಬ ಸುದ್ದಿ ಸದ್ಯ ಸೋಷಿಯಲ್‌ ಮೀಡಿಯಾದಲ್ಲಿ ದೊಡ್ಡ ಮಟ್ಟದಲ್ಲಿ ಸದ್ದು ಮಾಡುತ್ತಿದೆ. ಈ ವಿಚಾರವನ್ನು ಅರಗಿಸಿಕೊಳ್ಳಲಾಗದೇ, ಅಭಿಮಾನಿ ವಲಯವೂ ಆತಂಕಕ್ಕೀಡಾಗಿದೆ. ಈ ಬಗ್ಗೆ ಸ್ವತಃ ಹಿರಿಯ ನಟ ದೇವರಾಜ್‌ ಮತ್ತವರ ಕುಟುಂಬ ಸ್ಪಷ್ಟನೆ ನೀಡಿದೆ.

ಟ್ರೆಂಡಿಂಗ್​ ಸುದ್ದಿ

 ಸೋಷಿಯಲ್‌ ಮೀಡಿಯಾದಲ್ಲಿ ನಟ ಪ್ರಜ್ವಲ್‌ ದೇವರಾಜ್‌ ನಿಧನರಾಗಿದ್ದಾರೆ ಎಂಬ ಸುದ್ದಿ ಹರಿದಾಡುತ್ತಿದೆ. ಈ ವಿಚಾರ ಕುಟುಂಬದ ಗಮನಕ್ಕೂ ಬಂದಿದ್ದು, ಹರಿದಾಡುತ್ತಿರುವ ಸುದ್ದಿಯ ಸತ್ಯಾಸತ್ಯತೆಯ ಬಗ್ಗೆ ಸ್ಪಷ್ಟೀಕರಣ ನೀಡಿದೆ. ನಟ ಪ್ರಜ್ವಲ್ ದೇವರಾಜ್ ಕ್ಷೇಮವಾಗಿದ್ದಾರೆ ಎಂದು ಕುಟುಂಬದವರು ಹೇಳಿದ್ದಾರೆ.

ಸುಳ್ಳು ಸುದ್ದಿ ಹಬ್ಬಿಸಬೇಡಿ…

ನಟ ಪ್ರಜ್ವಲ್ ದೇವರಾಜ್ ಇನ್ನಿಲ್ಲ ಎಂಬ ಪೋಟೋ ಸಾಮಾಜಿಕ ಜಾಲತಾಣದಲ್ಲಿ ವೈರಲ್ ಆಗುತ್ತಿದ್ದಂತೆ, ಪೋಟೋ ನೋಡಿ ಕುಟುಂಬಸ್ಥರು ಬೇಸರ ಹೊರಹಾಕಿದ್ದಾರೆ. ಪ್ರಜ್ವಲ್‌ ಆರೋಗ್ಯದಲ್ಲಿ ಯಾವುದೇ ಬದಲಾವಣೆ ಆಗಿಲ್ಲ. ಅವರು ಕ್ಷೇಮವಾಗಿದ್ದಾರೆ. ಸಾಮಾಜಿಕ ಜಾಲತಾಣದಲ್ಲಿ ಸುಳ್ಳು ವದಂತಿಗಳನ್ನು ಹಬ್ಬಿಸಲಾಗಿದೆ. ಪ್ರಜ್ವಲ್ ದೇವರಾಜ್ ಅವರ ಪೋಟೋಗಳನ್ನ ದುರ್ಬಳಕೆ ಮಾಡಲಾಗಿದೆ ಎಂದಿದ್ದಾರೆ.

ಕಿಡಿಗೇಡಿಗಳ ವಿರುದ್ಧ ದೂರು

ಆರೋಗ್ಯವಂತ ನಟನ ಬಗ್ಗೆ ಈ ರೀತಿಯ ಸುಳ್ಳು ವದಂತಿಗಳು ಸಲ್ಲದು. ಇದರಿಂದ ಕುಟುಂಬಸ್ಥರು ಹಾಗೂ ಅಭಿಮಾನಿಗಳಲ್ಲಿ ಆತಂಕ ಸೃಷ್ಟಿಯಾಗುತ್ತದೆ. ಕಿಡಿಗೇಡಿಗಳು ಪ್ರಜ್ವಲ್ ದೇವರಾಜ್ ಆರೋಗ್ಯದ ಬಗ್ಗೆ ಅನಗತ್ಯ ಸುಳ್ಳು ವದಂತಿ ಹಬ್ಬಿಸಿದ್ದಾರೆ. ಈ ಬಗ್ಗೆ ಕಾನೂನು ಸಲಹೆ ಪಡೆದು ದೂರು ನೀಡಲು ದೇವರಾಜ್‌ ಮತ್ತವರ ಆಪ್ತರು ನಿರ್ಧರಿಸಿದ್ದಾರೆ.

ಪ್ರಜ್ವಲ್‌ ಕ್ಷೇಮವಾಗಿದ್ದಾರೆ

ಪ್ರಜ್ವಲ್ ದೇವರಾಜ್ ಆರೋಗ್ಯವಾಗಿದ್ದಾರೆ. ಅಭಿಮಾನಿಗಳು ಯಾವುದೇ ಆತಂಕ ಪಡುವ ಅಗತ್ಯವಿಲ್ಲ ಎಂದು ಪ್ರಜ್ವಲ್ ದೇವರಾಜ್ ಆಪ್ತ ಮೂಲಗಳಿಂದ ಮಾಹಿತಿ ಸಿಕ್ಕಿದೆ. ಈ ಮೂಲಕ ಹರಿದಾಡಿದ ವದಂತಿ ಸುಳ್ಳು, ಅದನ್ನು ನಂಬಬೇಡಿ ಎಂದು ಕುಟುಂಬಸ್ಥರು ಹೇಳಿಕೊಂಡಿದ್ದಾರೆ.

ಕರಾವಳಿ ಚಿತ್ರದಲ್ಲಿ ಪ್ರಜ್ವಲ್‌ ಬಿಜಿ

ಸದ್ಯ ಕರಾವಳಿ ಸಿನಿಮಾದ ಶೂಟಿಂಗ್‌ ಕೆಲಸಗಳಲ್ಲಿ ನಟ ಪ್ರಜ್ವಲ್‌ ದೇವರಾಜ್‌ ಬಿಜಿಯಾಗಿದ್ದಾರೆ. ಈಗಾಗಲೇ ಮೇಕಿಂಗ್‌ ಮತ್ತು ಪಾತ್ರವರ್ಗದ ವಿಚಾರವಾಗಿ ಒಂದಷ್ಟು ನಿರೀಕ್ಷೆ ಮೂಡಿಸಿರುವ ಈ ಸಿನಿಮಾತಂಡ, ಇತ್ತೀಚೆಗಷ್ಟೇ ಚಿತ್ರದ ಖಳನ ಪಾತ್ರವನ್ನು ಪರಿಚಯಿಸಿದ್ದರು. ಗುರುದತ್ ಗಾಣಿಗ ನಿರ್ಮಾಣದ ಜೊತೆಗೆ ನಿರ್ದೇಶನ ಮಾಡುತ್ತಿರೋ ಕರಾವಳಿ ಚಿತ್ರಕ್ಕೆ ಶಿಥಿಲ್‌ ಪೂಜಾರಿ ಅವರ ಆಗಮನವಾಗಿದೆ. ಡೈನಾಮಿಕ್ ಪ್ರಿನ್ಸ್ ಎದುರು ತೊಡೆತಟ್ಟಲು ಮಿಸ್ಟರ್ ದುಬೈ ಆಗಿದ್ದ ಶಿಥಿಲ್ ಪೂಜಾರಿ ಖಳನಾಗಿ ಕರಾವಳಿ ಸಿನಿಮಾಕ್ಕೆ ಎಂಟ್ರಿಕೊಟ್ಟಿದ್ದಾರೆ.

ಇನ್ನು ಕರಾವಳಿ ಚಿತ್ರಕ್ಕೆ ಅಭಿಮನ್ಯು ಸದಾನಂದ್ ಕ್ಯಾಮರಾ ಹಿಡಿದರೆ, ಸಚಿನ್ ಬಸ್ರೂರು ಸಂಗೀತ ನೀಡುತ್ತಿದ್ದಾರೆ. ವಿಶೇಷ ಎಂದರೆ ನಟ ಮಿತ್ರ ಕರಾವಳಿ ಸಿನಿಮಾದಲ್ಲಿ ವಿಶೇಷ ಪಾತ್ರದಲ್ಲಿ ಕಾಣಿಸಿಕೊಳ್ಳಲ್ಲಿದ್ದಾರೆ. ಶ್ರೀಧರ್, ಜಿ ಜಿ, ನಿರಂಜನ್ ಸೇರಿ ಹಲವು ಕಲಾವಿದರು ಕರಾವಳಿ ಸಿನಿಮಾದಲ್ಲಿ ನಟಿಸುತ್ತಿದ್ದಾರೆ. ಇದೇ ತಿಂಗಳು 23ರಿಂದ ಕರಾವಳಿ ಭಾಗದಲ್ಲಿ ಈ ಸಿನಿಮಾ ಚಿತ್ರೀಕರಣ ಶುರುವಾಗಲಿದೆ.

 

ಟಿ20 ವರ್ಲ್ಡ್‌ಕಪ್ 2024