ಕನ್ನಡ ಸುದ್ದಿ  /  ಮನರಂಜನೆ  /  ಆದಿತ್ಯ- ರಂಜನಿ ರಾಘವನ್‌ ಅಭಿನಯದ ಕಾಂಗರೂ ಸಿನಿಮಾ ಮೇ 3ರಂದು ಬಿಡುಗಡೆ; ಪೀಣ್ಯ ಇಂಡಸ್ಟ್ರಿ ಸ್ನೇಹಿತರ ಸಾಹಸವಿದು

ಆದಿತ್ಯ- ರಂಜನಿ ರಾಘವನ್‌ ಅಭಿನಯದ ಕಾಂಗರೂ ಸಿನಿಮಾ ಮೇ 3ರಂದು ಬಿಡುಗಡೆ; ಪೀಣ್ಯ ಇಂಡಸ್ಟ್ರಿ ಸ್ನೇಹಿತರ ಸಾಹಸವಿದು

Kangaroo Movie: ಕಿಶೋರ್ ಮೇಗಳಮನೆ ನಿರ್ದೇಶನದಲ್ಲಿ ಆದಿತ್ಯ ನಾಯಕರಾಗಿ ನಟಿಸಿರುವ ಕಾಂಗರೂ ಸಿನಿಮಾದ ಟ್ರೇಲರ್‌ ಇತ್ತೀಚೆಗೆ ರಿಲೀಸ್‌ ಆಗಿದೆ. ಕಾಂಗರೂ ಸಿನಿಮಾವು ಮೇ 3ರಂದು ಚಿತ್ರಮಂದಿರಗಳಲ್ಲಿ ಬಿಡುಗಡೆಯಾಗಲಿದೆ. ಕಾಂಗರೂ ಸಿನಿಮಾದ ಕುರಿತು ಹೆಚ್ಚಿನ ವಿವರವನ್ನು ಚಿತ್ರತಂಡ ನೀಡಿದೆ.

ಆದಿತ್ಯ- ರಂಜನಿ ರಾಘವನ್‌ ಅಭಿನಯದ ಕಾಂಗರೂ ಸಿನಿಮಾ ಮೇ 3ರಂದು ಬಿಡುಗಡೆ
ಆದಿತ್ಯ- ರಂಜನಿ ರಾಘವನ್‌ ಅಭಿನಯದ ಕಾಂಗರೂ ಸಿನಿಮಾ ಮೇ 3ರಂದು ಬಿಡುಗಡೆ

ಬೆಂಗಳೂರು: ಆರೋಹ ಪ್ರೊಡಕ್ಷನ್ಸ್ ಲಾಂಛನದಲ್ಲಿ ಕಿಶೋರ್ ಮೇಗಳಮನೆ ನಿರ್ದೇಶನದಲ್ಲಿ ಆದಿತ್ಯ ನಾಯಕರಾಗಿ ನಟಿಸಿರುವ ಕಾಂಗರೂ ಸಿನಿಮಾದ ಟ್ರೇಲರ್‌ ಇತ್ತೀಚೆಗೆ ರಿಲೀಸ್‌ ಆಗಿದೆ. ಕಾಂಗರೂ ಸಿನಿಮಾವು ಮೇ 3ರಂದು ಚಿತ್ರಮಂದಿರಗಳಲ್ಲಿ ಬಿಡುಗಡೆಯಾಗಲಿದೆ. ಚೆನ್ನಕೇಶವ ಬಿ.ಸಿ, ನರಸಿಂಹಮೂರ್ತಿ ಚಕ್ರಭಾವಿ, ರಮೇಶ್‌ ಬಂಡೆ, ಸ್ವಾಮಿ ಚಕ್ರಭಾವಿ, ರವಿ ಕೀಲಾರ ಮಂಡ್ಯ ಹಾಗೂ ಕೆ.ಜಿ.ಆರ್.ಗೌಡ ನಿರ್ಮಿಸಿರುವ ಈ ಸಿನಿಮಾದ ಕುರಿತು ಸ್ಯಾಂಡಲ್‌ವುಡ್‌ನಲ್ಲಿ ಹೆಚ್ಚಿನ ನಿರೀಕ್ಷೆಯಿದೆ. ಇತ್ತೀಚೆಗೆ ಕಾಂಗರೂ ಸಿನಿಮಾದ ಕುರಿತು ಚಿತ್ರತಂಡ ಹೆಚ್ಚಿನ ವಿವರ ನೀಡಿದೆ.

ಟ್ರೆಂಡಿಂಗ್​ ಸುದ್ದಿ

ಕಾಂಗಾರೂ ಸಿನಿಮಾ ಮೇ 3ರಂದು ಬಿಡುಗಡೆ

ಮೇ 3ರಂದು ಚಿತ್ರಮಂದಿರಗಳಲ್ಲಿ ಬಿಡುಗಡೆಯಾಗಲಿರುವ ಕಾಂಗರೂ ಸಿನಿಮಾದ ಟ್ರೇಲರ್‌ ಬಿಡುಗಡೆಯಾಗಿದೆ. "ಚಿತ್ರದ ನಿರ್ಮಾಪಕರೇ ನಮ್ಮ ಅನ್ನದಾತರು. ಹಾಗಾಗಿ ಅವರಿಂದಲೇ ಕಾಂಗರೂ ಟ್ರೇಲರ್ ರಿಲೀಸ್ ಮಾಡಿಸಬೇಕೆಂದು ಬಯಸಿದೆವು. ಈ ಚಿತ್ರದ ನಿರ್ಮಾಪಕರೆ ಕಾಂಗರೂ ಟ್ರೇಲರ್ ರಿಲೀಸ್‌ ಮಾಡಿದ್ದಾರೆ. ಈ ಚಿತ್ರದಲ್ಲಿ ಹಾರರ್, ಸಸ್ಪೆನ್ಸ್ , ಥ್ರಿಲ್ಲರ್ ಇದೆ. ಎಲ್ಲಕ್ಕಿಂತ ಹೆಚ್ಚಾಗಿ ತಾಯಿ ಹೃದಯದ ಮಮತೆಯಿದೆ, 'ನೀನೊಂದು ಮುಗಿಯದ ಮೌನ' ದಂಥ ಸುಂದರ ಹಾಡನ್ನು ನನಗೆ ಕೊಟ್ಟವರು ಸಾಧು ಕೋಕಿಲ. ಅವರು ಮತ್ತೊಮ್ಮೆ ನನ್ನ ಚಿತ್ರಕ್ಕೆ ಅದ್ಭುತವಾದ ಮ್ಯೂಸಿಕ್ ಕಂಪೋಸ್‌ ಮಾಡಿಕೊಟ್ಟಿದ್ದಾರೆ. ಸಂಗೀತದ ನಂತರ ನಮ್ಮ ಚಿತ್ರದ ಮತ್ತೊಂದು ವಿಶೇಷ ಎಂದರೆ ಕ್ಯಾಮೆರಾ ವರ್ಕ್, ಉದಯಲೀಲಾ ಅವರು ಅದ್ಭುತವಾಗಿ ಛಾಯಾಗ್ರಹಣಮಾಡಿದ್ದಾರೆ. ನಾನು ಈ ಚಿತ್ರದಲ್ಲಿ ತನಿಖಾಧಿಕಾರಿ ಪಾತ್ರದಲ್ಲಿ ಕಾಣಿಸಿಕೊಂಡಿದ್ದೇನೆ. ಮೇ 4 ನನ್ನ ಹುಟ್ಟುಹಬ್ಬ. ಮೇ 3 ರಂದು ನಮ್ಮ ಚಿತ್ರ ಬಿಡುಗಡೆಯಾಗಲಿದೆ" ಎಂದು ನಟ ಆದಿತ್ಯ ಮಾಹಿತಿ ನೀಡಿದ್ದಾರೆ.

"ನಾವು 6 ಜನ ಸ್ನೇಹಿತರು ಪೀಣ್ಯದಲ್ಲಿ ಇಂಡಸ್ಟ್ರಿ ನಡೆಸುತ್ತಿದ್ದೇವೆ. ಏನಾದರೂ ಹೊಸತನ್ನು ಮಾಡೋಣ ಅಂತ ಈ ಸಿನಿಮಾ ಮಾಡಿದ್ದೇವೆ, ಜನ ಕೊಟ್ಟ ದುಡ್ಡಿಗೆ ನ್ಯಾಯ ಒದಗಿಸುತ್ತೇವೆ" ಎಂದು ಟ್ರೇಲರ್ ರಿಲೀಸ್ ಮಾಡಿದ ನಂತರ ನಿರ್ಮಾಪಕ ರಮೇಶ್ ಬಂಡೆ ಹೇಳಿದ್ದಾರೆ. "ಅನಿಮೇಶನ್‌ನಲ್ಲೇ ಚಿತ್ರವನ್ನು ನಮಗೆ ತೋರಿಸಿದ್ದರು, ಸಿನಿಮಾ ತುಂಬಾ ಚೆನ್ನಾಗಿ ಬಂದಿದೆ" ಎಂದು ರವಿ ಕೀಲಾರ ಮಂಡ್ಯ ಹೇಳಿದ್ದಾರೆ.

"ಕನ್ನಡದ ಜನರಿಗಾಗಿ ಒಳ್ಳೆಯ ಸಿನಿಮಾ ಮಾಡಿರುವ ಖುಷಿಯಿದೆ. ಚಿತ್ರದ ಮೋಷನ್ ಪೋಸ್ಟರನ್ನು ಶಿವರಾಜಕುಮಾರ್ ರಿಲೀಸ್ ಮಾಡಿಕೊಟ್ಟಿದ್ದರು. ಇನ್ನು ಸಾಧು ಕೋಕಿಲ ಉತ್ತಮ ಮ್ಯೂಸಿಕ್ ಮಾಡಿದ್ದಾರೆ. ನಮ್ಮ ಚಿತ್ರಕ್ಕೆ ಜನ ಬೆಂಬಲ ದೊರೆತರೆ , ಇನ್ನೂ ಹತ್ತಾರು ಸಿನಿಮಾ ಮಾಡುತ್ತೇವೆ" ಎಂದು ಮತ್ತೊಬ್ಬ ನಿರ್ಮಾಪಕ ಚೆನ್ನಕೇಶವ ಹೇಳಿದ್ದಾರೆ. ನಿರ್ಮಾಪಕರಾದ ಸ್ವಾಮಿ ಚಕ್ರಭಾವಿ, ಕೆ.ಜಿ.ಆರ್. ಗೌಡ, ಮ ಜೋಗ್ ಸ ಚಕ್ರಭಾವಿ ಅವರು ಕಾಂಗರೂ ಸಿನಿಮಾದ ಕುರಿತು ತಮ್ಮ ಅಭಿಪ್ರಾಯ ವ್ಯಕ್ತಪಡಿಸಿದ್ದಾರೆ.

ಕಾಂಗರೂ ನಿರ್ಮಾಪಕರ ತಂಡ
ಕಾಂಗರೂ ನಿರ್ಮಾಪಕರ ತಂಡ

ಕಾಂಗರೂ ಸಿನಿಮಾದ ನಾಯಕಿ ರಂಜನಿ ರಾಘವನ್‌

ಕಾಂಗರೂ ಸಿನಿಮಾದಲ್ಲಿ ಆದಿತ್ಯ ಅವರಿಗೆ ನಾಯಕಿಯಾಗಿ ರಂಜನಿ ರಾಘವನ್ ಅಭಿನಯಿಸಿದ್ದಾರೆ. "ನಾನು ಆದಿತ್ಯ ಅವರ ಸಿನಿಮಾಗಳನ್ನು ನೋಡುತ್ತಾ ಬೆಳೆದವಳು, ಈ ಚಿತ್ರದಲ್ಲಿ ಅವರ ಜೊತೆಗೆ ಅಭಿನಯಿಸುವ ಅವಕಾಶ ಸಿಕ್ಕಿತ್ತು. ಒಬ್ಬ ಪ್ರೇಕ್ಷಕಳಾಗಿ ನಾನು ಸಿನಿಮಾನ ನೋಡಿದ್ದೇನೆ. ನಿರ್ದೇಶಕರು ಪ್ರತಿ ಪಾತ್ರವನ್ನು ಅಚ್ಚುಕಟ್ಟಾಗಿ ತಂದಿದ್ದಾರೆ" ಎಂದು ರಂಜನಿ ರಾಘವನ್‌ ಹೇಳಿದ್ದಾರೆ.

"ಈ ಸಿನಿಮಾ ತುಂಬಾ ಚೆನ್ನಾಗಿ ಬಂದಿದೆ. ಕಥೆಗೆ ತಕ್ಕಂತೆ ಖರ್ಚಾಗಿದೆ. 150 ರಿಂದ 200 ಚಿತ್ರಮಂದಿರಗಳಲ್ಲಿ ಕಾಂಗಾರೂ ಸಿನಿಮಾ ರಿಲೀಸ್ ಮಾಡುತ್ತಿದ್ದೇವೆ. ವಿಶೇಷವಾಗಿ ಫ್ಯಾಮಿಲಿ ಆಡಿಯನ್ಸ್ ಗಾಗಿ ಮಾಡಿದ ಕಥೆ, ಬೆಂಗಳೂರು, ಶೃಂಗೇರಿ, ಚಿಕ್ಕಮಗಳೂರು, ಕೊಪ್ಪ ಹಾಗೂ ಹೊರನಾಡು ಸುತ್ತಮುತ್ತ ಚಿತ್ರೀಕರಿಸಿದ್ದೇವೆ. ಯೂ ಟರ್ನ್ ಚಿತ್ರದ ಇನ್‌ ಸ್ಪೈರ್ ನಿಂದ ಈ ಚಿತ್ರ ನಿರ್ದೇಶನ ಮಾಡಿದ್ದೇನೆ. ಒಂದು ಸಣ್ಣ ತಪ್ಪಿನಿಂದ ಮುಂದೆ ಏನೇನೆಲ್ಲ ಆಗಬಹುದೆಂದು ಚಿತ್ರದಲ್ಲಿ ತೋರಿಸಿದ್ದೇವೆ" ಎಂದು ನಿರ್ದೇಶಕ ಕಿಶೋರ್ ಮೇಗಳಮನೆ ಹೇಳಿದ್ದಾರೆ.

IPL_Entry_Point