Hide and Seek Trailer: ಅನೂಪ್- ಧನ್ಯಾ ರಾಮ್‌ಕುಮಾರ್‌ ‘ಹೈಡ್ ಆ್ಯಂಡ್​ ಸೀಕ್’ ಚಿತ್ರದ ಟ್ರೇಲರ್‌ ರಿಲೀಸ್‌ ಮಾಡಿದ ಸಚಿವ ರಾಮಲಿಂಗಾ ರೆಡ್ಡಿ-sandalwood news anoop revanna dhanya ramkumars hide and seek movie trailer released by minister ramalinga reddy mnk ,ಮನರಂಜನೆ ಸುದ್ದಿ
ಕನ್ನಡ ಸುದ್ದಿ  /  ಮನರಂಜನೆ  /  Hide And Seek Trailer: ಅನೂಪ್- ಧನ್ಯಾ ರಾಮ್‌ಕುಮಾರ್‌ ‘ಹೈಡ್ ಆ್ಯಂಡ್​ ಸೀಕ್’ ಚಿತ್ರದ ಟ್ರೇಲರ್‌ ರಿಲೀಸ್‌ ಮಾಡಿದ ಸಚಿವ ರಾಮಲಿಂಗಾ ರೆಡ್ಡಿ

Hide and Seek Trailer: ಅನೂಪ್- ಧನ್ಯಾ ರಾಮ್‌ಕುಮಾರ್‌ ‘ಹೈಡ್ ಆ್ಯಂಡ್​ ಸೀಕ್’ ಚಿತ್ರದ ಟ್ರೇಲರ್‌ ರಿಲೀಸ್‌ ಮಾಡಿದ ಸಚಿವ ರಾಮಲಿಂಗಾ ರೆಡ್ಡಿ

ನಟ ಅನೂಪ್‌ ರೇವಣ್ಣ ಮತ್ತು ಧನ್ಯಾ ರಾಮ್‌ಕುಮಾರ್‌ ನಟಿಸಿರುವ ಹೈಡ್‌ ಅಂಡ್‌ ಸೀಕ್‌ ಸಿನಿಮಾದ ಟ್ರೇಲರ್‌ಅನ್ನು ಸಾರಿಗೆ ಸಚಿವ ರಾಮಲಿಂಗಾ ರೆಡ್ಡಿ ರಿಲೀಸ್‌ ಮಾಡಿ, ತಂಡಕ್ಕೆ ಶುಭ ಹಾರೈಸಿದ್ದಾರೆ.

Hide and Seek Trailer: ಅನೂಪ್- ಧನ್ಯಾ ರಾಮ್‌ಕುಮಾರ್‌ ‘ಹೈಡ್ ಆ್ಯಂಡ್​ ಸೀಕ್’ ಚಿತ್ರದ ಟ್ರೇಲರ್‌ ರಿಲೀಸ್‌ ಮಾಡಿದ ಸಚಿವ ರಾಮಲಿಂಗಾರೆಡ್ಡಿ
Hide and Seek Trailer: ಅನೂಪ್- ಧನ್ಯಾ ರಾಮ್‌ಕುಮಾರ್‌ ‘ಹೈಡ್ ಆ್ಯಂಡ್​ ಸೀಕ್’ ಚಿತ್ರದ ಟ್ರೇಲರ್‌ ರಿಲೀಸ್‌ ಮಾಡಿದ ಸಚಿವ ರಾಮಲಿಂಗಾರೆಡ್ಡಿ

Hide and Seek Trailer: ಯುವನಟ ಅನೂಪ್ ರೇವಣ್ಣ (Anoop Revanna) ಅಭಿನಯದ ನಾಲ್ಕನೇ ಚಿತ್ರ ಹೈಡ್ ಅಂಡ್ ಸೀಕ್ (Hide and Seek Trailer) ಮಾರ್ಚ್ 15ರಂದು ರಾಜ್ಯಾದ್ಯಂತ ಬಿಡುಗಡೆಯಾಗಲಿದೆ. ಅನೂಪ್‌ ರೇವಣ್ಣ ನಾಯಕನಾಗಿ ನಟಿಸಿರುವ ಈ ಸಿನಿಮಾದಲ್ಲಿ ಅಣ್ಣಾವ್ರ ಮೊಮ್ಮಗಳು ಧನ್ಯಾ ರಾಮ್‌ ಕುಮಾರ್‌ ನಾಯಕಿಯಾಗಿ ನಟಿಸಿದ್ದಾರೆ. ಇದೀಗ ಇದೇ ಚಿತ್ರದ ಟ್ರೇಲರ್‌ ಅನ್ನು ಸಾರಿಗೆ ಸಚಿವ ರಾಮಲಿಂಗಾರೆಡ್ಡಿ (Ramalinga reddy) ಬಿಡುಗಡೆ ಮಾಡಿ ಶುಭಕೋರಿದ್ದಾರೆ. ಈ ಚಿತ್ರದಲ್ಲಿ ಅನೂಪ್ ರೇವಣ್ಣ ಕಿಡ್ನಾಪರ್ ಆಗಿ ಕಾಣಿಸಿಕೊಂಡಿದ್ದಾರೆ.

ರೇವಣ್ಣ ಅವರ ಮಗ ಹೀರೋ ಆಗಿ ನಟಿಸಿರುವ ಈ ಚಿತ್ರ ಯಶಸ್ವಿಯಾಗಲಿ. ಇದು ಅವರ ನಾಲ್ಕನೇ ಚಿತ್ರ. ಟ್ರೇಲರ್‌ನಲ್ಲಿ ಅಭಿನಯ ಚೆನ್ನಾಗಿ ಬಂದಿದೆ. ಚಿತ್ರವೂ ಸಹ ಚೆನ್ನಾಗಿರುತ್ತದೆ. ಈ ಸಿನಿಮಾದಲ್ಲಿ ಕೆಲಸ ಮಾಡಿದ ಎಲ್ಲರಿಗೂ ಒಳ್ಳೆಯ ಹೆಸರು ಬರಬೇಕು ಎಂದು ಶುಭ ಹಾರೈಸಿದರು ರಾಮಲಿಂಗಾರೆಡ್ಡಿ. ಬಳಿಕ ಮಾತನಾಡಿದ ಎಸ್.ವಿಶ್ವನಾಥ್, ಈ ಚಿತ್ರದಲ್ಲಿ ನಮ್ಮ ಹುಡುಗನೇ ಹೀರೋ ಆಗಿದ್ದಾನೆ. ರಾಜ್‌ಕುಮಾರ್ ಅವರ ಮೊಮ್ಮಗಳು ಕೂಡ ಚಿತ್ರದಲ್ಲಿ ನಟಿಸಿದ್ದಾರೆ. ಸಿನಿಮಾ ಎಲ್ಲರ ಮನಗೆಲ್ಲಲಿ ಎಂದರು.

ನಂತರ ಮಾಜಿ ಸಚಿವ ರೇವಣ್ಣ ಮಾತನಾಡಿ, ಚಿತ್ರರಂಗ ಇವತ್ತು ಚಾಲೆಂಜಿಂಗ್ ಏರಿಯಾ ಆಗಿದೆ. ಕನ್ನಡ ಚಿತ್ರರಂಗಕ್ಕೆ ಹಿಂದೆ ಸೀಮಿತ ಮಾರುಕಟ್ಟೆ ಇತ್ತು. ಈಗ ಅದು ವಿಸ್ತಾರವಾಗಿದೆ. ನಾನು ಈ ಚಿತ್ರದ ಶೂಟಿಂಗ್ ಟೈಮ್‌ನಲ್ಲಿ ಹೋಗಿದ್ದೇನೆ. ಎಲ್ಲರೂ ಕುಟುಂಬದ ರೀತಿ ಸಿನಿಮಾ ಮಾಡಿದ್ದಾರೆ ಎಂದು ಹೇಳಿದರು. ಟ್ರೇಲರ್ ತುಂಬಾ ಇಂಪ್ರೆಸಿವ್ ಆಗಿದೆ. ಅನೂಪ್ ಒಳ್ಳೇ ಹುಡುಗ, ಆತನಿಗೆ ಉತ್ತಮ ಭವಿಷ್ಯವಿದೆ ಎಂದರು ಪ್ರೊಫೆಸರ್ ಡಿ.ಕೆ.ರವಿ.

ಹೈಡ್ ಅಂಡ್ ಸೀಕ್ ಮಾ.15ಕ್ಕೆ ರಿಲೀಸಾಗ್ತಿದೆ. ನನ್ನ ತಂಗಿ ಧನ್ಯಾ, ಅನೂಪ್ ಚಿತ್ರವನ್ನು ಪ್ರೋತ್ಸಾಹಿಸಿ ಎಂದು ಕೇಳಿಕೊಂಡರು ನಟ ಹಾಗೂ ಧನ್ಯಾ ಸಹೋದರ ಧೀರೇನ್ ರಾಮ್ ಕುಮಾರ್. ನಿರ್ದೇಶಕ ಪುನೀತ್ ನಾಗರಾಜು ಮಾತನಾಡುತ್ತ, ಕಿಡ್ನಾಪಿಂಗ್ ಕೂಡ ಹೇಗೆ ಒಂದು ಆರ್ಗನೈಜೇಶನ್ ಮೂಲಕ ನಡೆಯುತ್ತೆ ಎಂಬುದನ್ನು ಚಿತ್ರದಲ್ಲಿ ತೋರಿಸಿದ್ದೇವೆ. ಬೆಂಗಳೂರು, ಮಾಗಡಿ, ಚಿಕ್ಕಮಗಳೂರು ಸುತ್ತಮುತ್ತ 30 ದಿನಗಳ ಕಾಲ ಚಿತ್ರೀಕರಿಸಿದ್ದೇವೆ. ಹೈಡ್ ಅಂಡ್ ಸೀಕ್ ಚಿತ್ರದಲ್ಲಿ ನಾಯಕನೇ ಕಿಡ್ನಾಪರ್ ಆಗಿದ್ದು, ಹೆಚ್ಚು ಮಾತನಾಡದ, ಯಾವುದನ್ನೂ ಎಕ್ಸ್ಪ್ರೆಸ್ ಮಾಡದ ವ್ಯಕ್ತಿಯ ಪಾತ್ರ ಅನೂಪ್ ರೇವಣ್ಣ ಅವರದು ಎಂದರು ನಿರ್ದೇಶಕರು.

ನನ್ನ ಪಾತ್ರದ ಹೆಸರು ಹಾಸಿನಿ. ಒಳ್ಳೇ ಫ್ಯಾಮಿಲಿಯಿಂದ ಬಂದ ಹುಡುಗಿ, ಅಂಥ ಹುಡುಗಿ ಕಿಡ್ನ್ಯಾಪ್ ಆದಾಗ ಆಕೆ ಎದುರಿಸಿದ ಪರಿಸ್ಥಿತಿ ಎಂಥಾದ್ದು, ಆ ಕಿಡ್ನಾರ್ಸ್‌ ಉದ್ದೇಶ, ಹಿನ್ನೆಲೆ ಏನು ಅನ್ನೋದರ ಮೇಲೆ ಈ ಸಿನಿಮಾ ನಿಂತಿದೆ ಎಂದರು ಧನ್ಯಾ. ನಟ ಬಲ ರಾಜವಾಡಿ, ಸೂರಜ್, ಜಗ್ಗಿ, ವಿತರಕ ಕಮರ್ ಚಿತ್ರದ ಕುರಿತಂತೆ ಮಾತನಾಡಿದರು. ರಿಜೋ ಪಿ.ಜಾನ್ ಅವರ ಛಾಯಾಗ್ರಾಹಣ, ಸ್ಯಾಂಡಿ ಅದಾನ್ಕಿ ಅವರ ಸಂಗೀತ ಸಂಯೋಜನೆ, ಮಧು ತುಂಬಕೆರೆ ಅವರ ಸಂಕಲನ ಈ ಚಿತ್ರಕ್ಕಿದೆ. ಸುನೇರಿ ಆರ್ಟ್ ಕ್ರಿಯೇಷನ್ಸ್ ಮೂಲಕ ಪುನೀತ್ ನಾಗರಾಜು ಹಾಗೂ ವಸಂತ್‌ರಾವ್ ಎಂ. ಕುಲಕರ್ಣಿ ಸೇರಿ ಈ ಚಿತ್ರವನ್ನು ನಿರ್ಮಾಣ ಮಾಡಿದ್ದಾರೆ. ಪುನೀತ್ ನಾಗರಾಜು ಕಥೆ, ಚಿತ್ರಕಥೆ ಬರೆದು ನಿರ್ದೇಶಿಸಿದ್ದಾರೆ.

mysore-dasara_Entry_Point