ಚಿತ್ರೀಕರಣಕ್ಕೂ ಮುನ್ನ ‘45’ ಸಿನಿಮಾ ತೋರಿಸಿದ್ದ ಅರ್ಜುನ್‌ ಜನ್ಯ! ಶಿವಣ್ಣ, ಉಪೇಂದ್ರಗೂ ಅಚ್ಚರಿ-sandalwood news arjun janya directorial shiva rajkumar raj b shetty upendra starrer 45 movie shooting complete mnk ,ಮನರಂಜನೆ ಸುದ್ದಿ
ಕನ್ನಡ ಸುದ್ದಿ  /  ಮನರಂಜನೆ  /  ಚಿತ್ರೀಕರಣಕ್ಕೂ ಮುನ್ನ ‘45’ ಸಿನಿಮಾ ತೋರಿಸಿದ್ದ ಅರ್ಜುನ್‌ ಜನ್ಯ! ಶಿವಣ್ಣ, ಉಪೇಂದ್ರಗೂ ಅಚ್ಚರಿ

ಚಿತ್ರೀಕರಣಕ್ಕೂ ಮುನ್ನ ‘45’ ಸಿನಿಮಾ ತೋರಿಸಿದ್ದ ಅರ್ಜುನ್‌ ಜನ್ಯ! ಶಿವಣ್ಣ, ಉಪೇಂದ್ರಗೂ ಅಚ್ಚರಿ

ಅರ್ಜುನ್‌ ಜನ್ಯ ನಿರ್ದೇಶನದ 45 ಚಿತ್ರದ ಶೂಟಿಂಗ್‌ ಮುಗಿದಿದೆ. ಶಿವರಾಜ್‌ಕುಮಾರ್‌, ಉಪೇಂದ್ರ ಜತೆಗೆ ರಾಜ್‌ ಬಿ ಶೆಟ್ಟಿ ಈ ಸಿನಿಮಾದ ಪ್ರಮುಖ ತಾರಾಗಣದಲ್ಲಿದ್ದಾರೆ.

ಅರ್ಜುನ್‌ ಜನ್ಯ ನಿರ್ದೇಶನದ 45 ಚಿತ್ರದ ಚಿತ್ರೀಕರಣ ಮುಕ್ತಾಯ.
ಅರ್ಜುನ್‌ ಜನ್ಯ ನಿರ್ದೇಶನದ 45 ಚಿತ್ರದ ಚಿತ್ರೀಕರಣ ಮುಕ್ತಾಯ.

45 Movie Shooting Complete: ಸ್ಯಾಂಡಲ್‌ವುಡ್‌ನ ಬಹು ನಿರೀಕ್ಷಿತ ಬಹುತಾರಾಗಣದ ಸಿನಿಮಾ "45". ಈಗ ಇದೇ ಸಿನಿಮಾ ಶೂಟಿಂಗ್‌ ಮುಗಿಸಿಕೊಂಡು ಕುಂಬಳಕಾಯಿ ಒಡೆದಿದೆ. ಸಂಗೀತ ನಿರ್ದೇಶಕ ಅರ್ಜುನ್ ಜನ್ಯ ಚೊಚ್ಚಲ ನಿರ್ದೇಶನದ ಈ ಸಿನಿಮಾ ಈಗಾಗಲೇ ಒಂದಷ್ಟು ಕಾರಣಕ್ಕೆ ಸುದ್ದಿಯಲ್ಲಿದೆ. ಸೂರಜ್ ಪ್ರೊಡಕ್ಷನ್ಸ್ ಬ್ಯಾನರ್‌ನಲ್ಲಿ ಶ್ರೀಮತಿ ಉಮಾ ರಮೇಶ್ ರೆಡ್ಡಿ ಈ ಸಿನಿಮಾ ನಿರ್ಮಿಸುತ್ತಿದ್ದಾರೆ. ಪ್ಯಾನ್‌ ಇಂಡಿಯಾ ಮಟ್ಟದಲ್ಲಿ ನಿರ್ಮಾಣವಾಗಿರುವ ಈ ಸಿನಿಮಾದ ಶೂಟಿಂಗ್‌ ಮುಕ್ತಾಯವಾಗಿದ್ದು, ಚಿತ್ರದ ಬಗ್ಗೆ ಎಲ್ಲರೂ ತಮ್ಮ ಅನಿಸಿಕೆ ಮತ್ತು ಅಭಿಪ್ರಾಯ ಹಂಚಿಕೊಂಡಿದ್ದಾರೆ.

ಶಿವಣ್ಣ ಹೇಳಿದ್ದೇನು?

"45" ಚಿತ್ರದ ಚಿತ್ರೀಕರಣದಲ್ಲಿ ಪಾಲ್ಗೊಂಡಿದ್ದು ಬಹಳ ಖುಷಿಯಾಗಿದೆ. ಈ ಚಿತ್ರದಲ್ಲಿ ನಾವು ಮೂವರು ನಟಿಸಿದ್ದೇವೆ. ಅವರು ಮುಂದು. ಇವರು ಮುಂದು ಅಂತ ಇಲ್ಲ. ಇಲ್ಲಿ ಎಲ್ಲರೂ ಒಂದೇ. ಉಪೇಂದ್ರ ಅವರ ಜೊತೆ ನಟಿಸಲು ನಾನು ಯಾವಾಗಲೂ ಸಿದ್ದ. ರಾಜ್ ಬಿ ಶೆಟ್ಟಿ ಅವರ ಜೊತೆಗೆ ನಟಿಸಿದ್ದು ಸಂತೋಷವಾಗಿದೆ. ಅರ್ಜುನ್ ಜನ್ಯ ಅವರ ಮೊದಲ ನಿರ್ದೇಶನದ ಚಿತ್ರ ಅಂತ ಹೇಳಲಿಕ್ಕೆ ಆಗಲ್ಲ. ಅಷ್ಟು ಅದ್ಭುತ ನಿರ್ದೇಶನ ಅವರದು. ಅಷ್ಟೇ ಅದ್ದೂರಿಯಾಗಿ ರಮೇಶ್ ರೆಡ್ಡಿ ನಿರ್ಮಾಣ ಮಾಡಿದ್ದಾರೆ. ರವಿವರ್ಮ ಅವರ ಸಾಹಸ ನಿರ್ದೇಶನದಲ್ಲಿ ಮೂಡಿಬಂದಿರುವ ಸಾಹಸ ಸನ್ನಿವೇಶಗಳು ಸೂಪರ್. "45" ಇಡೀ ಭಾರತೀಯರೆ ಮೆಚ್ಚುವಂತಹ ಆಕ್ಷನ್ ಚಿತ್ರವಾಗಲಿದೆ ಎಂದರು ಶಿವರಾಜ್‌ಕುಮಾರ್‌.

ಅನಿಮೇಷನ್‌ ಮೂಲಕ ಕಥೆ ಹೇಳಿದ ಜನ್ಯ

ಕಥೆಯನ್ನು ಅನಿಮೇಷನ್‌ ಮೂಲಕ ಹೇಳಿದ್ದನ್ನು ನಾನು ಹಾಲಿವುಡ್‌ನಲ್ಲಿ ಕೇಳಿದ್ದೆ. ಆದರೆ ಅರ್ಜುನ್ ಜನ್ಯ ಅವರು ಕನ್ನಡದಲ್ಲೇ ಅದನ್ನು ಮಾಡಿ ತೋರಿಸಿದ್ದಾರೆ. ಅಷ್ಟೇ ಅಲ್ಲದೇ ಅನಿಮೇಷನ್‌ ಮೂಲಕ ಕಥೆ ಹೇಳಿದ ರೀತಿಯಲ್ಲೇ ಚಿತ್ರವನ್ನೂ ಮಾಡಿದ್ದಾರೆ. ಅರ್ಜುನ್ ಜನ್ಯ ಅವರು ಅಂದುಕೊಂಡಂತೆ ಚಿತ್ರ ಮಾಡಲು ನಿರ್ಮಾಪಕ ರಮೇಶ್ ರೆಡ್ಡಿ ಸಾಥ್ ನೀಡಿದ್ದಾರೆ. ಶಿವಣ್ಣ ಹಾಗೂ ರಾಜ್ ಬಿ ಶೆಟ್ಟಿ ಅವರ ಜೊತೆಗೆ ಅಭಿನಯಿಸಿದ್ದು ಸಂತಸವಾಗಿದೆ ಎಂದರು ಉಪೇಂದ್ರ.

ಶಿವಣ್ಣ ಅವರ ಚಿತ್ರಗಳನ್ನು ನೋಡುತ್ತಾ ವಿಷಲ್ ಹೊಡೆಯುತ್ತಿದ್ದೆ. ಉಪೇಂದ್ರ ಅವರ "A" ಚಿತ್ರದ ಪೋಸ್ಟರನ್ನು ಬೆರಗಾಗಿ ನೋಡುತ್ತಿದ್ದೆ. ಅವರಿಬ್ಬರ ಅಭಿಮಾನಿ ನಾನು. ಇಂದು ಅವರ ಜೊತೆಗೆ ನಟಿಸಿರುವುದು ನನ್ನ ಭಾಗ್ಯ. ಇನ್ನು "45", ಕನ್ನಡಿಗರು ಹೆಮ್ಮೆಯ ಪಡುವ ಸಿನಿಮಾ ಅಂತ ಕನ್ನಡಿಗನಾಗಿ ಹೇಳುತ್ತೇನೆ. ಈ ಸಿನಿಮಾದಲ್ಲಿ ನಟಿಸಿದ್ದು ನನಗೂ ಹೆಮ್ಮೆಯಿದೆ ಎಂದರು ರಾಜ್ ಬಿ ಶೆಟ್ಟಿ.

45 ಚಿತ್ರವನ್ನು ದೇವಸ್ಥಾನವೆಂದು ಮಾತು ಆರಂಭಿಸಿದ ನಿರ್ದೇಶಕ ಅರ್ಜುನ್ ಜನ್ಯ, "ಶಿವರಾಜಕುಮಾರ್, ಉಪೇಂದ್ರ, ರಾಜ್ ಬಿ ಶೆಟ್ಟಿ ಈ ಮೂವರು ಬ್ರಹ್ಮ ವಿಷ್ಣು ಮಹೇಶ್ವರ ಇದ್ದ ಹಾಗೆ. ರಮೇಶ್ ರೆಡ್ಡಿ ಅವರು ಈ ದೇವಸ್ಥಾನ ಕಟ್ಟಿದವರು. ಛಾಯಾಗ್ರಾಹಕ ಸತ್ಯ ಹೆಗಡೆ ಪ್ರಧಾನ ಪುರೋಹಿತರು. ಹೀಗೆ ಇವರೆಲ್ಲರ ಸಹಕಾರದಿಂದ 106 ದಿನಗಳ ಚಿತ್ರೀಕರಣ ಯಶಸ್ವಿಯಾಗಿ ಮುಕ್ತಾಯವಾಗಿದೆ. ಸಹಕಾರ ನೀಡಿದ ಪ್ರತಿಯೊಬ್ಬರಿಗೂ ಧನ್ಯವಾದ. ಮುಂದೆ ಸಿಜಿ ವರ್ಕ್ ಆರಂಭವಾಗಲಿದೆ ಎಂದರು ಅರ್ಜುನ್‌ ಜನ್ಯ.

.

mysore-dasara_Entry_Point