ಕನ್ನಡ ಸುದ್ದಿ  /  ಮನರಂಜನೆ  /  ಅಶ್ವಿನಿ ಪುನೀತ್‌ರಾಜ್‌ಕುಮಾರ್‌ ನಿಂದನೆ; ಗೊಡ್ಡು ಸಂಪ್ರದಾಯವಾದಿಗಳ ವಿರುದ್ಧ ಸಿಡಿದು, ಮನುವಾದ ಉಲ್ಲೇಖಿಸಿದ ಸಿಎಂ ಸಿದ್ದರಾಮಯ್ಯ

ಅಶ್ವಿನಿ ಪುನೀತ್‌ರಾಜ್‌ಕುಮಾರ್‌ ನಿಂದನೆ; ಗೊಡ್ಡು ಸಂಪ್ರದಾಯವಾದಿಗಳ ವಿರುದ್ಧ ಸಿಡಿದು, ಮನುವಾದ ಉಲ್ಲೇಖಿಸಿದ ಸಿಎಂ ಸಿದ್ದರಾಮಯ್ಯ

ಅಶ್ವಿನಿ ಪುನೀತ್‌ ರಾಜ್‌ಕುಮಾರ್‌ ಅವರನ್ನು ನಿಂದಿಸಿದವರ ವಿರುದ್ಧ ತೀಕ್ಷ್ಣ ಪ್ರತಿಕ್ರಿಯೆ ನೀಡಿರುವ ಸಿಎಂ ಸಿದ್ಧರಾಮಯ್ಯ, ಇತ್ತೀಚೆಗೆ ಕೆಲವು ಗೊಡ್ಡು ಸಂಪ್ರದಾಯವಾದಿಗಳು ಪತಿಯನ್ನು ಕಳೆದುಕೊಂಡ ಹೆಣ್ಣುಮಕ್ಕಳನ್ನು ಸಾರ್ವಜನಿಕವಾಗಿ ಅಪಮಾನಿಸಿ ತಮ್ಮ ವಿಕೃತಿಯನ್ನು ಮೆರೆಯುತ್ತಿರುವುದು ಖಂಡನೀಯ ಎಂದಿದ್ದಾರೆ.

ಅಶ್ವಿನಿ ಪುನೀತ್‌ರಾಜ್‌ಕುಮಾರ್‌ ನಿಂದನೆ; ಗೊಡ್ಡು ಸಂಪ್ರದಾಯವಾದಿಗಳ ವಿರುದ್ಧ ಸಿಡಿದು, ಮನುವಾದ ಉಲ್ಲೇಖಿಸಿದ ಸಿಎಂ ಸಿದ್ದರಾಮಯ್ಯ
ಅಶ್ವಿನಿ ಪುನೀತ್‌ರಾಜ್‌ಕುಮಾರ್‌ ನಿಂದನೆ; ಗೊಡ್ಡು ಸಂಪ್ರದಾಯವಾದಿಗಳ ವಿರುದ್ಧ ಸಿಡಿದು, ಮನುವಾದ ಉಲ್ಲೇಖಿಸಿದ ಸಿಎಂ ಸಿದ್ದರಾಮಯ್ಯ

Cm Siddaramaiah on Ashwini Puneeth Rajkumar: ಕಳೆದ ಮೂರು ದಿನಗಳಿಂದ ಸೋಷಿಯಲ್‌ ಮೀಡಿಯಾದಲ್ಲಿ ಡಾ. ರಾಜ್‌ ಕುಟುಂಬದ ಕಿರಿ ಸೊಸೆ, ದಿ. ಪುನೀತ್‌ ರಾಜ್‌ಕುಮಾರ್‌ ಅವರ ಧರ್ಮ ಪತ್ನಿ ಅಶ್ವಿನಿ ಪುನೀತ್‌ ಅವರ ಬಗ್ಗೆ ಕೆಟ್ಟದಾಗಿ ಟೀಕೆ ಮಾಡಿದ ವಿಚಾರ ವ್ಯಾಪಕ ಚರ್ಚೆಗೆ ಕಾರಣವಾಗಿದೆ. ಸ್ಯಾಂಡಲ್‌ವುಡ್‌ನ ಚಿತ್ರರಂಗದ ಹಲವರು ನಿರ್ಮಾಪಕ ಅಶ್ವಿನಿ ಅವರ ಬೆಂಬಲಕ್ಕೆ ನಿಂತರೆ, ಇನ್ನು ಕೆಲವರು ತುಚ್ಯವಾಗಿ ನಿಂದಿಸಿದ ವ್ಯಕ್ತಿಗೆ ಶಿಕ್ಷೆಯಾಗಬೇಕು ಎಂದು ಆಗ್ರಹಿಸುತ್ತಿದ್ದಾರೆ. ಇದೆಲ್ಲದರ ಬೆಳವಣಿಗೆಯ ನಡುವೆಯೇ ಸಿಎಂ ಸಿದ್ದರಾಮಯ್ಯ ಸಹ ಈ ವಿಚಾರಕ್ಕೆ ಸಂಬಂಧಿಸಿದಂತೆ ಪ್ರತಿಕ್ರಿಯೆ ನೀಡಿದ್ದಾರೆ.

ಟ್ರೆಂಡಿಂಗ್​ ಸುದ್ದಿ

ಆರ್‌ಸಿಬಿಯ ಹೊಸ ಅಧ್ಯಾಯದ ಜತೆಗೆ ಅನ್‌ಬಾಕ್ಸಿಂಗ್‌ ಇವೆಂಟ್‌ನಲ್ಲಿ ಅಶ್ವಿನಿ ಪುನೀತ್ ರಾಜ್‌ಕುಮಾರ್‌ ಅತಿಥಿಯಾಗಿ ಭಾಗವಹಿಸಿದ್ದರು. ಇತ್ತ ಈ ಸಲದ ಐಪಿಎಲ್‌ ಟೂರ್ನಿಯಲ್ಲಿಯೂ ರಾಯಲ್‌ ಚಾಲೆಂಜರ್ಸ್‌ ಬೆಂಗಳೂರು ತಂಡ ಕಳಪೆ ಪ್ರದರ್ಶನ ಮುಂದುವರಿಸಿದೆ. ಇದನ್ನೇ ಗಮನದಲ್ಲಿಟ್ಟುಕೊಂಡು, ಅಶ್ವಿನಿ ಪುನೀತ್‌ ಅವರನ್ನು ಗುರಿಯಾಗಿಸಿಕೊಂಡು, ಪತಿ ಇಲ್ಲದ ಮಹಿಳೆಯನ್ನು ಇಂಥ ಕಾರ್ಯಕ್ರಮಕ್ಕೆ ಕರೆಸಿದ್ದಕ್ಕೆ ಆರ್‌ಸಿಬಿ ಸೋಲುತ್ತಿದೆ ಎಂದು ಗಜಪಡೆಯ ಟ್ವಿಟ್ಟರ್‌ ಖಾತೆಯಿಂದ ಹೀನ ಪೋಸ್ಟ್‌ವೊಂದು ಪೋಸ್ಟ್‌ ಆಗಿತ್ತು. ಹೀಗೆ ಪೋಸ್ಟ್‌ ವೈರಲ್‌ ಆಗುತ್ತಿದ್ದಂತೆ, ಎಲ್ಲ ಕಡೆಯಿಂದಲೂ ತೀವ್ರ ಟೀಕೆಗೂ ಗುರಿಯಾಗಿದೆ. ಈಗ ಇದೇ ವಿಚಾರದ ಬಗ್ಗೆ ಸಿಎಂ ಪೋಸ್ಟ್‌ ಹಂಚಿಕೊಂಡಿದ್ದಾರೆ

ಸಿಎಂ ಹಂಚಿಕೊಂಡ X ಪೋಸ್ಟ್‌ನಲ್ಲೇನಿದೆ?

"ಹೆಣ್ಣಿಗೆ ಸ್ವಾತಂತ್ರ್ಯವನ್ನು ನಿರಾಕರಿಸಿ ಗುಲಾಮಳನ್ನಾಗಿ ಮಾಡಿ ಮನೆಯೊಳಗೆ ಕೂರಿಸಿದ ಮನುವಾದದ ಸಂಕೋಲೆಯನ್ನು ಮಹಿಳೆಯರೇ ಕಿತ್ತುಹಾಕಿ ಸ್ವತಂತ್ರರಾಗುತ್ತಿದ್ದಾರೆ. ಸಂವಿಧಾನದತ್ತ ಸ್ವಾತಂತ್ರ್ಯದೊಂದಿಗೆ ಪುರುಷರಿಗೆ ಸರಿಸಮಾನರಾಗಿ ಎಲ್ಲ ಕ್ಷೇತ್ರಗಳಲ್ಲಿಯೂ ಮುನ್ನಡೆಯುತ್ತಿದ್ದಾರೆ"

"ಪತಿಯನ್ನು ಕಳೆದುಕೊಂಡು ಹೆಣ್ಣುಮಕ್ಕಳು ಕೂಡಾ ವೈಯಕ್ತಿಕ ಬದುಕಿನ ನೋವುಗಳನ್ನು ನುಂಗಿಕೊಂಡು ಸಾಮಾಜಿಕ ಮತ್ತು ಔದ್ಯಮಿಕ ಕ್ಷೇತ್ರಗಳಲ್ಲಿ ತಮ್ಮನ್ನು ತೊಡಗಿಸಿಕೊಂಡು ಮಾದರಿಯಾಗುತ್ತಿದ್ದಾರೆ. ಈ ಸಾಮಾಜಿಕ ಬದಲಾವಣೆಯಲ್ಲಿ ಬುದ್ಧ, ಬಸವ, ಅಂಬೇಡ್ಕರ್, ಗಾಂಧೀಜಿಯವರಂತಹ ಮಹನೀಯರ ಸಮಾಜ ಸುಧಾರಣೆಯ ಕೊಡುಗೆಯೂ ಇದೆ"

"ಹೀಗಿದ್ದರೂ ಇತಿಹಾಸದ ಚಕ್ರವನ್ನು ಹಿಂದಕ್ಕೆ ಎಳೆದೊಯ್ಯುವ ಪ್ರಯತ್ನವನ್ನು ಕೆಲವು ಕಿಡಿಗೇಡಿಗಳು ನಡೆಸುತ್ತಿದ್ದಾರೆ. ಇತ್ತೀಚೆಗೆ ಕೆಲವು ಗೊಡ್ಡು ಸಂಪ್ರದಾಯವಾದಿಗಳು ಪತಿಯನ್ನು ಕಳೆದುಕೊಂಡ ಹೆಣ್ಣುಮಕ್ಕಳನ್ನು ಸಾರ್ವಜನಿಕವಾಗಿ ಅಪಮಾನಿಸಿ ತಮ್ಮ ವಿಕೃತಿಯನ್ನು ಮೆರೆಯುತ್ತಿರುವುದು ಖಂಡನೀಯ"

“ಇದು ಸಂವಿಧಾನವನ್ನು ತಿರಸ್ಕರಿಸಿ ಮನುವಾದವನ್ನು ಪುರಸ್ಕರಿಸಬೇಕೆಂದು ಕೆಲವು ಸಮಾಜ ವಿರೋಧಿ ಶಕ್ತಿಗಳು ಹಾಕುತ್ತಿರುವ ಕೂಗಿನ ಫಲ. ಹೆಣ್ಣುಮಕ್ಕಳ ನಿಂದನೆಯನ್ನು ನಮ್ಮ ಸರ್ಕಾರ ಯಾವುದೇ ಕಾರಣಕ್ಕೂ ಸಹಿಸುವುದಿಲ್ಲ, ಇದರ ಹಿಂದಿರುವ ಕಿಡಿಗೇಡಿಗಳ ವಿರುದ್ಧ ಕಠಿಣ ಕ್ರಮ ಕೈಗೊಳ್ಳಲಾಗುವುದು” ಎಂದಿದ್ದಾರೆ.

ರೊಚ್ಚಿಗೆದ್ದ ಅಪ್ಪು ಫ್ಯಾನ್ಸ್‌

ಇತ್ತ ಹೀಗೆ ಹೆಣ್ಣನ್ನು ಬಹಿರಂಗವಾಗಿ ನಿಂದಿಸಿದ ಗಜಪಡೆ ಟ್ವಿಟ್ಟರ್‌ ಬಳಕೆದಾರನ ವಿರುದ್ಧ ರಾಜ್ಯಾದ್ಯಂತ ವಿರೋಧದ ಕೂಗು ಕೇಳಿಬಂದಿದೆ. ಈಗಾಗಲೇ ಬೆಂಗಳೂರಿನಲ್ಲಿ ಈ ಬಗ್ಗೆ ಪುನೀತ್‌ ರಾಜ್‌ಕುಮಾರ್‌ ಅವರ ಅಭಿಮಾನಿಗಳು ದೂರು ನೀಡಿದ್ದಾರೆ. ಇದಷ್ಟೇ ಅಲ್ಲದೆ, ಅಖಿಲ ಕರ್ನಾಟಕ ಡಾ. ರಾಜ್ ಕುಮಾರ್ ಅಭಿಮಾನಿ ಸಂಘಗಳ ಒಕ್ಕೂಟ ಸಹ ರಾಜ್ಯದ ಬೇರೆ ಬೇರೆ ಜಿಲ್ಲೆ, ಪಟ್ಟಣದಲ್ಲಿನ ಪೊಲೀಸ್‌ ಠಾಣೆಗಳಲ್ಲಿ ದೂರು ನೀಡಿದ್ದು, ನಿಂದಿಸಿದ ವ್ಯಕ್ತಿಯನ್ನು ಈ ಕೂಡಲೇ ಬಂಧಿಸಬೇಕು ಎಂದು ಆಗ್ರಹಿಸುತ್ತಿವೆ.

IPL_Entry_Point