Luv you Shankar: ಬಾಲಿವುಡ್ ನಟನ ಸಿನಿಮಾ ಹಾಡನ್ನು ಬಿಡುಗಡೆ ಮಾಡಿದ ತುಮಕೂರು ಸಿದ್ಧಗಂಗಾ ಮಠದ ಸ್ವಾಮೀಜಿ
ಪ್ಯಾನ್ ಇಂಡಿಯಾ ಮಟ್ಟದಲ್ಲಿ ನಿರ್ಮಾಣವಾಗಿರುವ ಲವ್ ಯೂ ಶಂಕರ್ ಚಿತ್ರದ ಓಂ ನಮಃ ಶಿವಾಯ ಹಾಡನ್ನು ತುಮಕೂರಿನ ಸಿದ್ಧಗಂಗಾ ಮಠದ ಸ್ವಾಮೀಜಿಗಳು ಬಿಡುಗಡೆ ಮಾಡಿದ್ದಾರೆ.
Luv You Shankar: ಬಾಲಿವುಡ್ ನಟರೊಬ್ಬರ ಚಿತ್ರದ ಹಾಡನ್ನು ತುಮಕೂರಿನ ಶ್ರೀ ಸಿದ್ಧಗಂಗಾ ಮಠದ ಸ್ವಾಮೀಜಿಗಳು ಬಿಡುಗಡೆ ಮಾಡಿದ್ದಾರೆ. ಭಾರತದ ಅತೀ ದೊಡ್ಡ ಕಾಂಪೋಸಿಟ್ ಅನಿಮೇಷನ್ ಡ್ರಾಮಾ ಎಂಬ ಹೆಗ್ಗಳಿಕೆಗೆ ಪಾತ್ರವಾಗಿರುವ ಲವ್ ಯೂ ಶಂಕರ್ ಚಿತ್ರದ ‘ಓಂ ನಮಃ ಶಿವಾಯ’ ಹಾಡನ್ನು ತುಮಕೂರಿನ ಶ್ರೀ ಸಿದ್ಧಗಂಗಾ ಮಠದ ಪರಮಪೂಜ್ಯ ಶ್ರೀ ಸಿದ್ಧಲಿಂಗ ಮಹಾಸ್ವಾಮೀಜಿಗಳು ಬಿಡುಗಡೆ ಮಾಡಿದ್ದಾರೆ.
ರಿಲಯನ್ಸ್ ಎಂಟರ್ಟೈನ್ಮೆಂಟ್ ಸ್ಟುಡಿಯೋ ಮತ್ತು ಎಸ್.ಡಿ. ವರ್ಲ್ಡ್ ಫಿಲಂ ಪ್ರೈವೇಟ್ ಲಿಮಿಟೆಡ್ ಜೊತೆಯಾಗಿ ‘ಲವ್ ಯೂ ಶಂಕರ್' ಚಿತ್ರವನ್ನು ಪ್ರಸೆಂಟ್ ಮಾಡುತ್ತಿದ್ದು, ‘ಮೈ ಫ್ರೆಂಡ್ ಗಣೇಶ’ ಸಿನಿಮಾ ಖ್ಯಾತಿಯ ನಿರ್ದೇಶಕ ರಾಜೀವ್ ಎಸ್.ರುಯಾ ನಿರ್ದೇಶನ ಮಾಡಿದ್ದಾರೆ. ಈ ಮೂಲಕ ಸಿನಿಮಾ ತನ್ನ ಪ್ರಚಾರ ಕೆಲಸಕ್ಕೆ ಚಾಲನೆ ನೀಡಲಿದೆ. ಇದೇ ತಿಂಗಳಲ್ಲಿ ಬಿಡುಗಡೆಯ ಪ್ಲಾನ್ ಸಹ ಇದ್ದು, ಶೀಘ್ರದಲ್ಲಿ ದಿನಾಂಕ ಘೋಷಣೆ ಆಗಲಿದೆ.
‘ಲವ್ ಯೂ ಶಂಕರ್' ಚಿತ್ರದಲ್ಲಿ ಬಾಲಿವುಡ್ ನಟ ಶ್ರೇಯಸ್ ತಲಪಾಡೆ, ತನಿಷಾ ಮುಖರ್ಜಿ, ಸಂಜಯ್ ಮಿಶ್ರಾ, ಮನ್ ಗಾಂಧಿ, ಅಭಿಮನ್ಯು ಸಿಂಗ್, ಪ್ರತೀಕ್ ಜೈನ್, ಹೇಮಂತ್ ಪಾಂಡೆ ಮುಂತಾದವರು ನಟಿಸಿದ್ದು, ಈ ಚಿತ್ರವು ತನ್ನ ವಿಭಿನ್ನ ಕಥಾಹಂದರ ಮತ್ತು ಅದ್ಭುತ ಅಭಿನಯಗಳ ಮೂಲಕ ಪ್ರೇಕ್ಷಕರಿಗೆ ಹತ್ತಿರವಾಗಲಿದೆ. ತೇಜಸ್ ದೇಸಾಯಿ ಮತ್ತು ಸುನೀತಾ ದೇಸಾಯಿ ನಿರ್ಮಿಸುತ್ತಿರುವ ಈ ಚಿತ್ರಕ್ಕೆ ವರ್ಧನ್ ಸಿಂಗ್ ಮತ್ತು ರಾಮಿರಾ ತನೇಜ ಸಹ-ನಿರ್ಮಾಪಕರಾಗಿ ಕಾರ್ಯನಿರ್ವಹಿಸಿದ್ದಾರೆ.
ಕನ್ನಡ, ಹಿಂದಿ, ತಮಿಳು ಮತ್ತು ತೆಲುಗಿನಲ್ಲಿ ಏಕಕಾಲಕ್ಕೆ ಬಿಡುಗಡೆಯಾಗುತ್ತಿರುವ ಈ ಚಿತ್ರವು ನವಿರಾದ ಭಾವನೆಗಳು, ಪಾತ್ರಗಳು, ಹಾಡುಗಳು ಮತ್ತು ಕಲಾವಿದರ ಅದ್ಭುತ ಪಾತ್ರಪೋಷಣೆಯಿಂದ ಎಲ್ಲಾ ಭಾಷೆಗಳ ಮತ್ತು ಪ್ರದೇಶಗಳ ಪ್ರೇಕ್ಷಕರಿಗೆ ಆಪ್ತವಾಗಲಿದೆ ಎಂದು ಚಿತ್ರತಂಡ ನಂಬಿದೆ. ‘ಲವ್ ಯೂ ಶಂಕರ್' ಚಿತ್ರವು ನವೆಂಬರ್ ತಿಂಗಳಲ್ಲಿ ಬಿಡುಗಡೆಯಾಗಲಿದೆ. ವಿಸಿಕಾ ಫಿಲಂಸ್ ವಿತರಣಾ ಸಂಸ್ಥೆ ಕರ್ನಾಟಕದಲ್ಲಿ ಈ ಚಿತ್ರವನ್ನು ಬಿಡುಗಡೆ ಮಾಡುತ್ತಿದೆ.
ಮನರಂಜನೆ ಸುದ್ದಿಗಳಿಗೆ ಇಲ್ಲಿ ಕ್ಲಿಕ್ ಮಾಡಿ