ಕನ್ನಡ ಸುದ್ದಿ  /  ಮನರಂಜನೆ  /  ಮೊಬೈಲ್‌ ಗೀಳು, ಯುವಜನತೆಯ ಗೋಳು; ಚಂದನ್‌ ಶೆಟ್ಟಿ ನಟನೆಯ ವಿದ್ಯಾರ್ಥಿ ವಿದ್ಯಾರ್ಥಿನಿಯರೇ ಚಿತ್ರದ ಟ್ರೇಲರ್‌ ಬಿಡುಗಡೆ

ಮೊಬೈಲ್‌ ಗೀಳು, ಯುವಜನತೆಯ ಗೋಳು; ಚಂದನ್‌ ಶೆಟ್ಟಿ ನಟನೆಯ ವಿದ್ಯಾರ್ಥಿ ವಿದ್ಯಾರ್ಥಿನಿಯರೇ ಚಿತ್ರದ ಟ್ರೇಲರ್‌ ಬಿಡುಗಡೆ

ಚಂದನ್‌ ಶೆಟ್ಟಿ ಪ್ರಮುಖ ಪಾತ್ರದಲ್ಲಿ ನಟಿಸಿರುವ ವಿದ್ಯಾರ್ಥಿ ವಿದ್ಯಾರ್ಥಿನಿಯರೇ ಚಿತ್ರದ ಟ್ರೇಲರ್‌ ಬಿಡುಗಡೆ ಆಗಿದೆ. ಇನ್ನೇನು ಶೀಘ್ರದಲ್ಲಿ ತೆರೆಗೆ ಬರಲಿರುವ ಈ ಚಿತ್ರದಲ್ಲಿ ಶೀರ್ಷಿಕೆಗೆ ತಕ್ಕಂತೆ, ಯುವ ಪೀಳಿಗೆಯ ಕಥೆಯನ್ನೇ ಪ್ರಧಾನವಾಗಿಸಿಕೊಂಡು ಸಿದ್ಧಪಡಿಸಿದ್ದಾರೆ ನಿರ್ದೇಶಕ ಅರುಣ್‌ ಅಮುಕ್ತ.

ಮೊಬೈಲ್‌ ಗೀಳು, ಯುವಜನತೆಯ ಗೋಳು; ಚಂದನ್‌ ಶೆಟ್ಟಿ ನಟನೆಯ ವಿದ್ಯಾರ್ಥಿ ವಿದ್ಯಾರ್ಥಿನಿಯರೇ ಚಿತ್ರದ ಟ್ರೇಲರ್‌ ಬಿಡುಗಡೆ
ಮೊಬೈಲ್‌ ಗೀಳು, ಯುವಜನತೆಯ ಗೋಳು; ಚಂದನ್‌ ಶೆಟ್ಟಿ ನಟನೆಯ ವಿದ್ಯಾರ್ಥಿ ವಿದ್ಯಾರ್ಥಿನಿಯರೇ ಚಿತ್ರದ ಟ್ರೇಲರ್‌ ಬಿಡುಗಡೆ

Vidyarthi Vidyarthiniyare Trailer: ರ್ಯಾಪರ್ ಚಂದನ್ ಶೆಟ್ಟಿ (Chandan Shetty) ನಾಯಕನಾಗಿ ನಟಿಸಿರುವ ಬಹು ನಿರೀಕ್ಷಿತ ಚಿತ್ರ ವಿದ್ಯಾರ್ಥಿ ವಿದ್ಯಾರ್ಥಿನಿಯರೇ (Vidyarthi Vidyarthiniyare). ಶೀರ್ಷಿಕೆಯಲ್ಲಿಯೇ ಟೀನೇಜ್ ಸ್ಟೋರಿಯ ಕಂಪು ಹೊಂದಿರುವ ಈ ಸಿನಿಮಾ ಈಗಾಗಲೇ ನಾನಾ ಕ್ರೀಯಾಶೀಲ ಚಟುವಟಿಕೆಗಳ ಮೂಲಕ ಪ್ರೇಕ್ಷಕರನ್ನು ತಲುಪಿಕೊಂಡಿತ್ತು. ಆ ಕಾರಣದಿಂದಲೇ ಎಲ್ಲರೂ ಟ್ರೈಲರ್ ನತ್ತ ದೃಷ್ಟಿ ನೆಟ್ಟಿದ್ದರು. ಇದೀಗ ಚಿತ್ರತಂಡ ಯುವ ಆವೇಗದಿಂದ ತೊನೆದಾಡುತ್ತಿರುವಂತೆ ಭಾಸವಾಗುವ ಟ್ರೈಲರ್ ಅನ್ನು ಬಿಡುಗಡೆಗೊಳಿಸಿದೆ.

ಟ್ರೆಂಡಿಂಗ್​ ಸುದ್ದಿ

ಅದರೊಳಗೆ ಹದಿಹರೆಯದ ಮನಸುಗಳ ನಾನಾ ಮಗ್ಗುಲುಗಳು ಹರೆಯದ ತೊರೆಯೊಂದಿಗೆ ದುಮ್ಮಿಕ್ಕಿ ಹರಿದಿವೆ. ಈ ಟ್ರೈಲರ್ ಅನ್ನು ಸೈಡ್ ಎ ಅಂತ ಹೆಸರಿಸಲಾಗಿದೆ. ಇದನ್ನು ನೋಡುತ್ತಲೇ ಒಟ್ಟಾರೆ ಸಿನಿಮಾದಲ್ಲೇನೋ ಇದೆಯೆಂಬ ಗಟ್ಟಿಯಾದ ಭರವಸೆ ತಂತಾನೇ ಮೂಡಿಕೊಳ್ಳುತ್ತೆ. ಸೈಡ್ ಬಿ ಟ್ರೈಲರ್‌ಗಾಗಿ ಕಾತರವೂ ಮೂಡಿಕೊಳ್ಳುತ್ತೆ. ಅಷ್ಟರಮಟ್ಟಿಗೆ ಈ ಟ್ರೈಲರ್ ಪರಿಣಾಮಕಾರಿಯಾಗಿ ಮೂಡಿ ಬಂದಿದೆ!

ಒಂದೇ ವಿಷಯಕ್ಕೆ ಸೀಮಿತವಾಗಿಲ್ಲ..

`ವಿದ್ಯಾರ್ಥಿ ವಿದ್ಯಾರ್ಥಿನಿಯರೇ’ ಟೈಟಲ್ಲೇ ಹೇಳುವಂತೆ ಯೂತ್ಸ್ ಸಬ್ಜೆಕ್ಟ್ ಸಿನಿಮಾ. ಕಾಲೇಜ್ ಹುಡುಗ, ಹುಡುಗಿಯರ, ಹದಿ ಹರೆಯದ ಹುಚ್ಚು ಮನಸ್ಸಿನ ಹೊಯ್ದಾಟವನ್ನು ಇಲ್ಲಿ ತೆರೆದಿಡಲಾಗಿದೆ. ಹಾಗಂತ ಇದು ಮಾಮೂಲಿಯಾಗೋ ಸಿದ್ಧಸೂತ್ರದ ಚೌಕಟ್ಟಿಗೊಳಪಟ್ಟಿಲ್ಲ ಅನ್ನೋದು ಟ್ರೇಲರ್ ಎಳೆಯಲ್ಲಿ ಸ್ಪಷ್ಟವಾಗುತ್ತದೆ. ಹೊಡೆದಾಟ, ಬಡಿದಾಟ, ರ್ಯಾಗಿಂಗ್, ಬಿಸಿ ರಕ್ತದ ಹುಡುಗರ ಪುಂಡಾಟಿಕೆ ಸೇರಿದಂತೆ ಇಲ್ಲಿ ಎಲ್ಲವೂ ಇದೆ.

ಮೋಜು ಮಸ್ತಿಯಲ್ಲಿ ಮೈಮರೆತ ಮನಸ್ಥಿತಿಗಳ ಕಥೆಯ ಜತೆಗೆ ಶಿಕ್ಷಣ ಕ್ಷೇತ್ರದಲ್ಲಿನ ಬದಲಾವಣೆಗಳ ಬಗ್ಗೆಯೂ ಟ್ರೇಲರ್‌ನಲ್ಲಿ ಕಿರಿದಾಗಿ ತೋರಿಸಿದ್ದಾರೆ ನಿರ್ದೇಶಕರು. ಹಿಡಿತ ತಪ್ಪಿದ ಮಕ್ಕಳನ್ನು ಹಾದಿಗೆ ತರುವ ಯತ್ನವೂ ಇದೆ. ಪ್ರಸ್ತುತ ಕಾಲದ ಟೀನೇಜ್ ಹುಡುಗರ ಕಹಾನಿಯನ್ನು ಎಳೆ ಎಳೆಯಾಗಿ ಬಿಚ್ಚಿಟ್ಟಿದೆ ಟ್ರೇಲರ್.

ಅರುಣ್‌ ಅಮುಕ್ತ ನಿರ್ದೇಶನದ ಸಿನಿಮಾ

ಚಂದನ್ ಶೆಟ್ಟಿ ಈ ಚಿತ್ರದ ಮೂಲಕ ಡಿಫರೆಂಟಾಗಿ ಕಾಣಿಸಲಿದ್ದಾರೆಂಬ ನಿಖರ ಮಾಹಿತಿಯನ್ನು ನಿರ್ದೇಶಕ ಅರುಣ್ ಅಮುಕ್ತ ನೀಡುತ್ತಾ ಬಂದಿದ್ದಾರೆ. ಜತೆಗೆ ಅದಕ್ಕೆ ತಕ್ಕಂತೆ ವಿಶೇಷ ಪಾತ್ರದಲ್ಲಿಯೇ ಚಂದನ್‌ ಶೆಟ್ಟಿ ಟ್ರೇಲರ್‌ನಲ್ಲಿ ಎದುರಾಗಿದ್ದಾರೆ. ಒಟ್ಟಾರೆಯಾಗಿ ಟ್ರೈಲರ್ ನೋಡಿದರೆ ನಿರ್ದೇಶಕರು ಹೊಸದೇನನ್ನೋ ಹೇಳುವ ಪ್ರಯತ್ನ ಮಾಡಿದ್ದಾರೆ ಅನ್ನೋದು ಮೇಲ್ನೋಟಕ್ಕೆ ಎದ್ದು ಕಾಣುತ್ತಿದೆ.

ಅರುಣ್ ಅಮುಕ್ತ ಅತ್ಯಂತ ಆಸ್ಥೆಯಿಂದ ಈ ಸಿನಿಮಾವನ್ನು ರೂಪಿಸಿದ್ದಾರೆಂಬುದಕ್ಕೂ ಕೂಡಾ ಈ ಟ್ರೈಲರಿನಲ್ಲಿ ಸಾಕ್ಷಿಗಳಿದ್ದಾವೆ. ಕಾಲೇಜು ಕೇಂದ್ರಿತ ಕಥೆ ಅಂದಾಕ್ಷಣ ಒಂದು ಕಲ್ಪನೆ ಮೊಳೆತುಕೊಳ್ಳುತ್ತದೆ. ಅದನ್ನು ಮೀರಿದ ಆತ್ಮದೊಂದಿಗೆ ಅರುಣ್ ಅಮುಕ್ತ ಈ ಸಿನಿಮಾವನ್ನು ದೃಷ್ಯೀಕರಿಸಿರುವ ಲಕ್ಷಣಗಳಿವೆ. ಈ ಮೂಲಕ ಸೈಡ್‌ ಎ ಟ್ರೇಲರ್‌ ಕುತೂಗಲ ಮೂಡಿಸಿದೆ.

ತಾರಾಗಣ ಮತ್ತು ತಾಂತ್ರಿಕ ವರ್ಗ ಹೇಗಿದೆ?

ಸುಬ್ರಮಣ್ಯ ಕುಕ್ಕೆ ಮತ್ತು ಎ.ಸಿ ಶಿವಲಿಂಗೇಗೌಡ ಈ ಚಿತ್ರವನ್ನು ನಿರ್ಮಾಣ ಮಾಡಿದ್ದಾರೆ. ಶ್ರೀಕಾಂತ್ ಜಿ ಕಶ್ಯಪ್ ಕಾರ್ಯಕಾರಿ ನಿರ್ಮಾಪಕರಾಗಿದ್ದಾರೆ. ತಾಂತ್ರಿಕ ವರ್ಗವನ್ನು ನೋಡುವುದಾದರೆ, ಕುಮಾರ್ ಗೌಡ ಛಾಯಾಗ್ರಹಣ ನಿಭಾಯಿಸಿದರೆ, ಭರ್ಜರಿ ಚೇತನ್ ಮತ್ತು ವಾಸುಕಿ ವೈಭವ್ ಹಾಡುಗಳಿಗೆ ಸಾಹಿತ್ಯ ಬರೆದಿದ್ದಾರೆ. ಪವನ್ ಗೌಡ ಎಡಿಟಿಂಗ್‌ ಕೆಲಸ, ಟೈಗರ್ ಶಿವು, ನರಸಿಂಹ ಸ್ಟಂಟ್‌ ಡೈರೆಕ್ಟ್‌ ಮಾಡೊದ್ದಾರೆ. ಅರುಣ್ ಸುರೇಶ್ ಎಂಬುವವರು ಹಾಡಿಗೆ ಕ್ಯಾಮರಾ ಹಿಡಿದಿದ್ದಾರೆ. ವಿಜೇತ್ ಕೃಷ್ಣ, ವಾಸು ದೀಕ್ಷಿತ್ ಸಂಗೀತ ನಿರ್ದೇಶನ ಈ ಚಿತ್ರಕ್ಕಿದೆ.

ತಾರಾಗಣದಲ್ಲಿ ಚಂದನ್ ಶೆಟ್ಟಿ , ಅಮರ್, ಭಾವನಾ, ಮಾನಸಿ, ವಿವಾನ್, ಭವ್ಯ, ಸುನೀಲ್ ಪುರಾಣಿಕ್, ಅರವಿಂದ ರಾವ್, ಸಿಂಚನಾ, ರಘು ರಾಮನಕೊಪ್ಪ, ಪ್ರಶಾಂತ್ ಸಂಬರ್ಗಿ, ಕಾಕ್ರೋಚ್ ಸುಧಿ ಮುಂತಾದವರು ನಟಿಸಿದ್ದಾರೆ.

IPL_Entry_Point