ಕನ್ನಡ ಸುದ್ದಿ  /  ಮನರಂಜನೆ  /  ಹಣೆ ಬರಹದಲ್ಲಿ ಏನು ಬರೆದಿರುತ್ತೋ ಅದೇ ಆಗೋದು!; ದರ್ಶನ್‌ ಬಂಧನದ ಬಗ್ಗೆ ಶಿವರಾಜ್‌ಕುಮಾರ್‌ ಮೊದಲ ಪ್ರತಿಕ್ರಿಯೆ

ಹಣೆ ಬರಹದಲ್ಲಿ ಏನು ಬರೆದಿರುತ್ತೋ ಅದೇ ಆಗೋದು!; ದರ್ಶನ್‌ ಬಂಧನದ ಬಗ್ಗೆ ಶಿವರಾಜ್‌ಕುಮಾರ್‌ ಮೊದಲ ಪ್ರತಿಕ್ರಿಯೆ

ರೇಣುಕಾಸ್ವಾಮಿ ಕೊಲೆ ಆರೋಪದ ಮೇಲೆ ನಟ ದರ್ಶನ್‌ ಮತ್ತವರ ಗ್ಯಾಂಗ್‌ ಸದ್ಯ ಪರಪ್ಪನ ಅಗ್ರಹಾರ ಜೈಲಿನಲ್ಲಿದೆ. ಈ ನಡುವೆ ಇದೇ ಪ್ರಕರಣಕ್ಕೆ ಸಂಬಂಧಿಸಿದಂತೆ ನಟ ಶಿವರಾಜ್‌ಕುಮಾರ್‌ ಮೊದಲ ಸಲ ಪ್ರತಿಕ್ರಿಯೆ ನೀಡಿದ್ದಾರೆ.

ಹಣೆ ಬರಹದಲ್ಲಿ ಏನು ಬರೆದಿರುತ್ತೋ ಅದೇ ಆಗೋದು!; ದರ್ಶನ್‌ ಬಂಧನದ ಬಗ್ಗೆ ಶಿವರಾಜ್‌ಕುಮಾರ್‌ ಮೊದಲ ಪ್ರತಿಕ್ರಿಯೆ
ಹಣೆ ಬರಹದಲ್ಲಿ ಏನು ಬರೆದಿರುತ್ತೋ ಅದೇ ಆಗೋದು!; ದರ್ಶನ್‌ ಬಂಧನದ ಬಗ್ಗೆ ಶಿವರಾಜ್‌ಕುಮಾರ್‌ ಮೊದಲ ಪ್ರತಿಕ್ರಿಯೆ

Shivarajkumar reacts on Darshan case: ಚಿತ್ರದುರ್ಗದ ರೇಣುಕಾಸ್ವಾಮಿ ಕೊಲೆ ಪ್ರಕರಣಕ್ಕೆ ಸಂಬಂಧಿಸಿದಂತೆ ಈ ವರೆಗೂ ಚಂದನವನದ ಸಾಕಷ್ಟು ಮಂದಿ ಪ್ರತಿಕ್ರಿಯೆ ನೀಡಿದ್ದಾರೆ. ಇನ್ನುಕೆಲವರು ಸೋಷಿಯಲ್‌ ಮೀಡಿಯಾದಲ್ಲಿ ಪೋಸ್ಟ್‌ ಹಂಚಿಕೊಂಡಿದ್ದಾರೆ. ಅತ್ಯಾಪ್ತರು ನೇರವಾಗಿ ಪರಪ್ಪನ ಅಗ್ರಹಾರ ಜೈಲಿಗೆ ಭೇಟಿ ನೀಡಿ ದರ್ಶನ್‌ ಅವರನ್ನು ಮಾತನಾಡಿಕೊಂಡು ಬರುತ್ತಿದ್ದಾರೆ. ಇದೀಗ ನಟ ಶಿವರಾಜ್‌ಕುಮಾರ್‌ ಮೊದಲ ಸಲ ಇದೇ ಪ್ರಕರಣಕ್ಕೆ ಸಂಬಂಧಿಸಿದಂತೆ ಪ್ರತಿಕ್ರಿಯೆ ನೀಡಿದ್ದಾರೆ.

ಬೆಂಗಳೂರಿನ ಶಿವಾನಂದ ಸರ್ಕಲ್‌ನಲ್ಲಿ ಕನ್ನಡ ಚಲನಚಿತ್ರ ನಿರ್ಮಾಪಕರ ಸಂಘದ ನೂತನ ಕಟ್ಟಡದ ಉದ್ಘಾಟನೆ ಕಾರ್ಯಕ್ರಮದ ಬಳಿಕ ನಟ ಶಿವರಾಜ್‌ಕುಮಾರ್‌ ಮಾಧ್ಯಮಗಳಿಗೆ ಪ್ರತಿಕ್ರಿಯೆ ನೀಡಿದ್ದಾರೆ. ರೇಣುಕಾಸ್ವಾಮಿ ಹತ್ಯೆ ನಡೆದಿದೆ. ಈ ಬಗ್ಗೆ ನಿಮ್ಮ ಅಭಿಪ್ರಾಯ ಏನು ಎಂದಾಗ, ಅದಕ್ಕೆ ಉತ್ತರ ನೀಡಿದ ಶಿವಣ್ಣ, ಯಾರ್ಯಾರ ಹಣೆಬರಹದಲ್ಲಿ ಏನೇನು ಬರೆದಿರುತ್ತೋ ಅದೇ ಆಗುತ್ತೆ. ಅದನ್ನು ಯಾರಿಂದಲೂ ತಪ್ಪಿಸಲು ಸಾಧ್ಯವಿಲ್ಲ" ಎಂದಿದ್ದಾರೆ.

ಟ್ರೆಂಡಿಂಗ್​ ಸುದ್ದಿ

"ಈ ರೀತಿ ನಡೆಯುತ್ತೆ ಅಂತ ಯಾರೂ ಊಹಿಸಿರಲಿಲ್ಲ. ಹಣೆಬರಹ. ಏನೇ ಮಾಡುವ ಮುನ್ನ, ನಾವು ಏನು ಮಾಡ್ತಿದ್ದೇವೆ, ನಾವು ಮಾಡೋದೋ ಸರೀನಾ ಎಂದು ಒಮ್ಮೆ ಯೋಚನೆ ಮಾಡಬೇಕು. ಯಾಕಪ್ಪ ಹಿಂಗಾಯ್ತು ಅಂತ ತುಂಬ ಬೇಸರ ಆಗುತ್ತೆ. ಇತ್ತ ರೇಣುಕಾ ಸ್ವಾಮಿ ಕುಟುಂಬಕ್ಕೆ, ದರ್ಶನ್​ ಕುಟುಂಬಕ್ಕೂ ನೋವಾಗಿದೆ. ದರ್ಶನ್ ​ಮಗನ ಬಗ್ಗೆಯೂ ಬೇಸರ ಆಗುತ್ತೆ. ಇದು ಜೀವನದ ಒಂದು ಘಟ್ಟ. ಎಲ್ಲವನ್ನು ನಾವು ಎದುರಿಸಲೇಬೇಕು" ಎಂದು ಮಾಧ್ಯಮಗಳಿಗೆ ಪ್ರತಿಕ್ರಿಯಿಸಿದ್ದಾರೆ.

"ಇನ್ನು ಪ್ರಕರಣದ ಬಗ್ಗೆ ಈಗಾಗಲೇ ಪೊಲೀಸ್‌ ಇಲಾಖೆ ತನಿಖೆ ನಡೆಸಿದ್ದಾರೆ. ಎಲ್ಲದಕ್ಕೂ ಕಾನೂನು ಇದೆ. ಅಲ್ಲಿಯೇ ನ್ಯಾಯ ಸಿಗಲಿದೆ. ಇದಕ್ಕಿಂತ ಹೆಚ್ಚೆನೂ ನಾನು ಹೇಳಲಾರೆ. ಎಲ್ಲವೂ ಅವರವರ ಹಣೆಬರಹ" ಎಂದು ರೇಣುಕಾಸ್ವಾಮಿ ಕೊಲೆ ಪ್ರಕರಣಕ್ಕೆ ಸಂಬಂಧಿಸಿದಂತೆ ನಟ ಶಿವರಾಜ್‌ಕುಮಾರ್‌ ಮೊದಲ ಸಲ ಪ್ರತಿಕ್ರಿಯೆ ನೀಡಿದ್ದಾರೆ.

ಈ ಮೊದಲು ಸ್ಯಾಂಡಲ್‌ವುಡ್‌ನ ಸಾಕಷ್ಟು ಕಲಾವಿದರು ದರ್ಶನ್‌ ಪ್ರಕರಣದ ಬಗ್ಗೆ ಮಾತನಾಡಿದ್ದಾರೆ. ಕಿಚ್ಚ ಸುದೀಪ್‌ ಸಹ ಈ ಘಟನೆ ಬಗ್ಗೆ ಮಾತನಾಡಿ, ಕಾನೂನಿಗಿಂತ ಯಾರೂ ದೊಡ್ಡವರಿಲ್ಲ ಎಂದಿದ್ದರು. ಇನ್ನುಳಿದಂತೆ, ನಟಿ ರಮ್ಯಾ ಸೋಷಿಯಲ್‌ ಮೀಡಿಯಾದಲ್ಲಿ ದರ್ಶನ್‌ ವಿರುದ್ಧವೇ ಪೋಸ್ಟ್‌ ಹಂಚಿಕೊಂಡು ಕೊಂಚ ಗರಂ ಆಗಿಯೇ ಪ್ರತಿಕ್ರಿಯೆ ನೀಡಿದ್ದರು. ಈ ನಡುವೆ ಕೆಲವರು ದರ್ಶನ್‌ ಪರವಾಗಿ ಪ್ರತಿಕ್ರಿಯಿಸಿದರೆ, ಇನ್ನು ಕೆಲವರು ದರ್ಶನ್‌ ವಿರುದ್ಧ ಕ್ರಮಕ್ಕೆ ಮುಂದಾಗಬೇಕು ಎಂದಿದ್ದಾರೆ.