ಕೊಲೆ ಪ್ರಕರಣದಲ್ಲಿ ಬಂಧನವಾದ ದರ್ಶನ್‌ ಬಗ್ಗೆ ಮೊದಲ ಸಲ ಪ್ರತಿಕ್ರಿಯೆ ನೀಡಿದ ಸಿಎಂ ಸಿದ್ಧರಾಮಯ್ಯ
ಕನ್ನಡ ಸುದ್ದಿ  /  ಮನರಂಜನೆ  /  ಕೊಲೆ ಪ್ರಕರಣದಲ್ಲಿ ಬಂಧನವಾದ ದರ್ಶನ್‌ ಬಗ್ಗೆ ಮೊದಲ ಸಲ ಪ್ರತಿಕ್ರಿಯೆ ನೀಡಿದ ಸಿಎಂ ಸಿದ್ಧರಾಮಯ್ಯ

ಕೊಲೆ ಪ್ರಕರಣದಲ್ಲಿ ಬಂಧನವಾದ ದರ್ಶನ್‌ ಬಗ್ಗೆ ಮೊದಲ ಸಲ ಪ್ರತಿಕ್ರಿಯೆ ನೀಡಿದ ಸಿಎಂ ಸಿದ್ಧರಾಮಯ್ಯ

ಚಿತ್ರದುರ್ಗದ ರೇಣುಕಾ ಸ್ವಾಮಿ ಕೊಲೆ ಪ್ರಕರಣಕ್ಕೆ ಸಂಬಂಧಿಸಿದಂತೆ ಸಿಎಂ ಸಿದ್ಧರಾಮಯ್ಯ ಪ್ರತಿಕ್ರಿಯೆ ನೀಡಿದ್ದಾರೆ. ದರ್ಶನ್ ಮೇಲಿನ ಕೊಲೆ ಆರೋಪ ಪ್ರಕರಣದಲ್ಲಿ ಯಾವ ಪ್ರಭಾವಿಗಳೂ ನನ್ನನ್ನು ಭೇಟಿಯಾಗಲು ಬಂದಿಲ್ಲ. ಬಿಜೆಪಿಯವರು ಬೇಕೆಂದೇ ಸುಳ್ಳು ಆರೋಪಗಳನ್ನು ಮಾಡುತ್ತಿದ್ದಾರೆ ಎಂದಿದ್ದಾರೆ.

ಕೊಲೆ ಪ್ರಕರಣದಲ್ಲಿ ಬಂಧನವಾದ ದರ್ಶನ್‌ ಬಗ್ಗೆ ಮೊದಲ ಸಲ ಪ್ರತಿಕ್ರಿಯೆ ನೀಡಿದ ಸಿಎಂ ಸಿದ್ಧರಾಮಯ್ಯ
ಕೊಲೆ ಪ್ರಕರಣದಲ್ಲಿ ಬಂಧನವಾದ ದರ್ಶನ್‌ ಬಗ್ಗೆ ಮೊದಲ ಸಲ ಪ್ರತಿಕ್ರಿಯೆ ನೀಡಿದ ಸಿಎಂ ಸಿದ್ಧರಾಮಯ್ಯ

CM Siddaramaiah: ಚಿತ್ರದುರ್ಗದ ರೇಣುಕಾಸ್ವಾಮಿ ಕೊಲೆ ಪ್ರಕರಣಕ್ಕೆ ಸಂಬಂಧಿಸಿದಂತೆ ನಟ ದರ್ಶನ್‌ ಸೇರಿ ಅವರ ಗ್ಯಾಂಗ್‌ನ ಸಹಚರರನ್ನು ವಶಕ್ಕೆ ಪಡೆದ ಕಾಮಾಕ್ಷಿಪಾಳ್ಯ ಠಾಣೆ ಪೊಲೀಸರು ವಿಚಾರಣೆ ಮುಂದುವರಿಸಿದ್ದಾರೆ. ಈ ನಡುವೆ ಇದೇ ಪ್ರಕರಣಕ್ಕೆ ಸಂಬಂಧಿಸಿದಂತೆ, ನಟ ದರ್ಶನ್‌ ಅವರನ್ನು ರಕ್ಷಿಸಲು ಕೆಲ ರಾಜಕೀಯ ಪಕ್ಷಗಳ ಮುಖಂಡರು ಮುಂದಾಗಿದ್ದಾರೆ ಎಂಬ ಮಾತು ಕೇಳಿಬಂದಿವೆ. ಇದೀಗ ಇದೇ ವಿಚಾರದ ಬಗ್ಗೆ ಸಿಎಂ ಸಿದ್ದರಾಮಯ್ಯ ಪ್ರತಿಕ್ರಿಯೆ ನೀಡಿದ್ದಾರೆ.

ಸಿಎಂ ಹೇಳಿದ್ದೇನು?

"ದರ್ಶನ್ ಮೇಲಿನ ಕೊಲೆ ಆರೋಪ ಪ್ರಕರಣದಲ್ಲಿ ಯಾವ ಪ್ರಭಾವಿಗಳೂ ನನ್ನನ್ನು ಭೇಟಿಯಾಗಲು ಬಂದಿಲ್ಲ. ಬಿಜೆಪಿಯವರು ಬೇಕೆಂದೇ ಸುಳ್ಳು ಆರೋಪಗಳನ್ನು ಮಾಡುತ್ತಿದ್ದಾರೆ. ನಾವು ಈ ನೆಲದ ಕಾನೂನಿನ ಪ್ರಕಾರ ನಡೆದುಕೊಳ್ಳುತ್ತೇವೆ. ಅದನ್ನು ಬಿಟ್ಟು ಬೇರೆ ಏನೂ ಮಾಡುವುದಿಲ್ಲ.

ಪೊಲೀಸ್ ಠಾಣೆಯ ಸುತ್ತ ಶಾಮಿಯಾನ ಹಾಕಿರುವ ನಿರ್ಧಾರದ ಹಿಂದಿನ ಉದ್ದೇಶ ನನಗೂ ತಿಳಿದಿಲ್ಲ. ಪೊಲೀಸರು ನನಗೆ ಮಾಹಿತಿ ನೀಡಿ ತೀರ್ಮಾನ ಮಾಡಿಲ್ಲ. ಸಾಮಾನ್ಯ ಜನರಿಗಾಗಿ ಸರ್ಕಾರ ಕೆಲಸ ಮಾಡುತ್ತಿದೆ. ಸಾಮಾನ್ಯ ಜನ ಹೇಗೆ ಹೇಳುತ್ತಾರೊ ಹಾಗೆ ಕೇಳುತ್ತೇವೆ ಎಂದಿದ್ದಾರೆ.

ಗ್ಯಾರಂಟಿಗಳೂ ಮುಂದುವರಿಯಲಿವೆ...

"ರಾಜ್ಯದಲ್ಲಿ ಐದು ಗ್ಯಾರಂಟಿಗಳೂ ಕೂಡ ಮುಂದುವರೆಯಲಿವೆ, ಈ ಬಗ್ಗೆ ಯಾವುದೇ ಅನುಮಾನಗಳು ಬೇಡ. ಅವು ಬಡವರಿಗೆ ಶಕ್ತಿ ತುಂಬುವ ಕಾರ್ಯಕ್ರಮವಾಗಿರುವುದರಿಂದ ಈ ಕಾರ್ಯಕ್ರಮಗಳನ್ನು ನಿಲ್ಲಿಸುವ ಪ್ರಶ್ನೆಯೇ ಇಲ್ಲ"

"ಈ ಬಾರಿ ಲೋಕಸಭೆಯಲ್ಲಿ ಒಂದು ಸ್ಥಾನದಿಂದ 9 ಸ್ಥಾನಗಳನ್ನು ಪಡೆದಿದ್ದೇವೆ. ನಮ್ಮ ನಿರೀಕ್ಷೆಯಷ್ಟು ಫಲಿತಾಂಶ ಬಂದಿಲ್ಲ. ಒಂದರಿಂದ 9 ಸ್ಥಾನಕ್ಕೇರಿದ್ದು, ಕಳೆದ ಬಾರಿಗಿಂತ 13% ಹೆಚ್ಚು ಮತಗಳ ಹಂಚಿಕೆ ನಮ್ಮ ಪರವಾಗಿದೆ. ಹಾಗೆಂದು ನಮ್ಮ ಬೆನ್ನು ತಟ್ಟಿಕೊಳ್ಳುತ್ತಿಲ್ಲ. ನಮ್ಮ ಫಲಿತಾಂಶ ಕಳೆದ ಬಾರಿಗಿಂತ ಉತ್ತಮವಾಗಿದೆ ಆದರೆ ನಿರೀಕ್ಷೆಯಂತೆ ಆಗಿಲ್ಲ"

ಬಿಎಸ್‌ವೈ ವಿರುದ್ಧ ದೂರು ನೀಡಿದ್ದು ಸರ್ಕಾರ ಅಲ್ಲ..

"ಮಾಜಿ ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪ ಅವರ ವಿರುದ್ಧ ದಾಖಲಾಗಿರುವ ಫೋಕ್ಸೋ ಪ್ರಕರಣದಲ್ಲಿ ದೂರು ನೀಡಿರುವವರು ಯಾರು? ಸರ್ಕಾರ ಅಲ್ಲ, ಖಾಸಗಿ ವ್ಯಕ್ತಿ ದೂರು ನೀಡಿದ್ದು ಹೌದಲ್ವಾ? ಹೀಗಿರುವಾಗ ದ್ವೇಷದ ರಾಜಕಾರಣ ಎಲ್ಲಿದೆ? ಕಾನೂನು ರೀತಿ ಕೆಲಸ ಮಾಡುವ ಪೋಲೀಸರ ಕೆಲಸದಲ್ಲಿ ಹಸ್ತಕ್ಷೇಪ ಮಾಡುವುದಿಲ್ಲ. ನ್ಯಾಯಾಲಯದ ಆದೇಶವನ್ನು ಎಲ್ಲರೂ ಒಪ್ಪಿ ಅದರಂತೆ ನಡೆದುಕೊಳ್ಳಬೇಕಾಗುತ್ತದೆ" ಎಂದಿದ್ದಾರೆ.

Whats_app_banner