ಕನ್ನಡ ಸುದ್ದಿ  /  Entertainment  /  Sandalwood News Crazystar Ravichandran Raghu Bhat Acts Paravasha Movie First Look And Title Revealed Mnk

Ravichandran: ಹೊಸ ತಂಡದ ಜತೆಗೆ ಹೊಸ ಥರದ ಪಾತ್ರದಲ್ಲಿ‌ ರವಿಚಂದ್ರನ್‌; ‘ಪರವಶ’ ಚಿತ್ರಕ್ಕೆ ಫಿದಾ ಆದ ಕ್ರೇಜಿಸ್ಟಾರ್

ಪರವಶ ಹೆಸರಿನ ಸಿನಿಮಾದಲ್ಲಿ ಪ್ರಮುಖ ಪಾತ್ರವೊಂದಕ್ಕೆ ಬಣ್ಣ ಹಚ್ಚಿದ್ದಾರೆ ನಟ ಕ್ರೇಜಿಸ್ಟಾರ್‌ ರವಿಚಂದ್ರನ್.‌ ಇದೀಗ ಈ ಚಿತ್ರದ ಶೀರ್ಷಿಕೆ ಅನಾವರಣದ ಜತೆಗೆ ಚಿತ್ರದ ಫಸ್ಟ್‌ ಲುಕ್‌ ಬಿಡುಗಡೆಯಾಗಿದೆ.

Ravichandran: ಹೊಸ ತಂಡದ ಜತೆಗೆ ಹೊಸ ಥರದ ಪಾತ್ರದಲ್ಲಿ‌ ರವಿಚಂದ್ರನ್‌; ‘ಪರವಶ’ ಚಿತ್ರಕ್ಕೆ ಫಿದಾ ಆದ ಕ್ರೇಜಿಸ್ಟಾರ್
Ravichandran: ಹೊಸ ತಂಡದ ಜತೆಗೆ ಹೊಸ ಥರದ ಪಾತ್ರದಲ್ಲಿ‌ ರವಿಚಂದ್ರನ್‌; ‘ಪರವಶ’ ಚಿತ್ರಕ್ಕೆ ಫಿದಾ ಆದ ಕ್ರೇಜಿಸ್ಟಾರ್

Paravasha movie first look: ಸ್ಯಾಂಡಲ್‌ವುಡ್‌ ಕ್ರೇಜಿಸ್ಟಾರ್‌ ರವಿಚಂದ್ರನ್‌ ಹೊಸಬರ ಸಿನಿಮಾಗಳಲ್ಲಿ ಕಾಣಿಸಿಕೊಳ್ಳುವುದು ತುಂಬ ಅಪರೂಪ. ಇದೀಗ ಸಂಪೂರ್ಣ ಹೊಸ ತಂಡದ ಜತೆಗೆ ಸಿನಿಮಾವನ್ನೇ ಮಾಡಿ ಮುಗಿಸಿದ್ದಾರೆ. ಆ ಚಿತ್ರಕ್ಕೆ ಪರವಶ ಎಂಬ ಶೀರ್ಷಿಕೆ ಇಡಲಾಗಿದೆ. ಬಹುತೇಕ ಕೊನೇ ಹಂತದ ಶೂಟಿಂಗ್‌ನಲ್ಲಿ ಬಿಜಿಯಾಗಿರುವ ಈ ಸಿನಿಮಾತಂಡ, ಈಗ ಚಿತ್ರದ ಫಸ್ಟ್‌ ಲುಕ್‌ ಪೋಸ್ಟರ್‌ ಮತ್ತು ಶೀರ್ಷಿಕೆ ಅನಾವರಣ ಮಾಡಿದೆ. ವಿಶೇಷ ಏನೆಂದರೆ ರವಿಚಂದ್ರನ್‌ ಅವರೇ ಈ ಸಿನಿಮಾದ ಪೋಸ್ಟರ್‌ ಬಿಡುಗಡೆ ಮಾಡಿ ತಂಡಕ್ಕೆ ಶುಭ ಹಾರೈಸಿದ್ದಾರೆ.

ರವಿಚಂದ್ರನ್ ಹಾಗೂ ನೂತನ ಪ್ರತಿಭೆ ರಘು ಭಟ್ ಪ್ರಮುಖಪಾತ್ರದಲ್ಲಿ ಪರವಶ ಚಿತ್ರದಲ್ಲಿ ನಟಿಸಿದ್ದಾರೆ. ಈ ಸಿನಿಮಾವನ್ನು ಅವ್ಯಕ್ತ ಸಿನಿಮಾಸ್ ಬ್ಯಾನರ್‌ ಅಡಿಯಲ್ಲಿ ಹರೀಶ್ ಗೌಡ ನಿರ್ಮಿಸುತ್ತಿದ್ದು, ಸುಧೀಂದ್ರ ನಾಡಿಗರ್ ನಿರ್ದೇಶನದಲ್ಲಿ ಮೂಡಿಬಂದಿದೆ.

ಹೊಸ ತಂಡದ ಜತೆಗೆ ಕ್ರೇಜಿಸ್ಟಾರ್‌ ಸಿನಿಮಾ

ಹೊಸತಂಡದ ಜೊತೆಗೆ ಕೆಲಸ ಮಾಡಿರುವುದು ಖುಷಿಯಾಗಿದೆ. ನಾನು ಈ ವರೆಗೂ ಮಾಡಿರದ ಪಾತ್ರದಲ್ಲಿ ಕಾಣಿಸಿಕೊಂಡಿದ್ದೀನೆ. ನನ್ನ ಭಾಗದ ಚಿತ್ರೀಕರಣ ಮುಕ್ತಾಯವಾಗಿದೆ. ನಿರ್ದೇಶಕ ಸುಧೀಂದ್ರ ನಾಡಿಗರ್ ಅವರ ‌ನಿರ್ದೇಶನದ ಶೈಲಿ ವಿನೂತನವಾಗಿದೆ. ನಿರ್ಮಾಪಕರಿಗೆ ಹಾಗೂ ಇಡೀ ತಂಡಕ್ಕೆ ಒಳ್ಳೆಯದಾಗಲಿ ಎಂದರು ಕ್ರೇಜಿಸ್ಟಾರ್ ರವಿಚಂದ್ರನ್.

ನಾಯಕ ರಘು ಭಟ್ ಪರವಶ ಚಿತ್ರಕ್ಕೆ ಕಥೆ ಬರೆದಿದ್ದಾರೆ. ಸಚಿನ್ ಬಸ್ರೂರ್ ಸಂಗೀತ ನಿರ್ದೇಶನ, ಆನಂದ್ ಮೀನಾಕ್ಷಿ ಛಾಯಾಗ್ರಹಣ ಹಾಗೂ ಪ್ರತೀಕ್ ಶೆಟ್ಟಿ ಅವರ ಸಂಕಲನವಿರುವ ಈ ಚಿತ್ರದ ಹಾಡುಗಳನ್ನು ಪ್ರಮೋದ್ ಮರವಂತೆ ರಚಿಸಿದ್ದಾರೆ. ಸಂಭಾಷಣೆಯನ್ನು ರಘು ನಿಡವಳ್ಳಿ ಬರೆದಿದ್ದಾರೆ ಎಂದು ನಿರ್ದೇಶಕ ಸುಧೀಂದ್ರ ನಾಡಿಗರ್ ತಿಳಿಸಿದರು.

ನಿರ್ಮಾಪಕರ ತವರಲ್ಲಿ ನಡೆದ ಕಾರ್ಯಕ್ರಮ

ನಮ್ಮೂರಿನಲ್ಲಿ ನಾನು ನಿರ್ಮಿಸುತ್ತಿರುವ ಪರವಶ ಚಿತ್ರದ ಶೀರ್ಷಿಕೆ ಬಿಡುಗಡೆಯಾಗಿರುವುದು ಖುಷಿಯಾಗಿದೆ. ಹೊಸತಂಡಕ್ಕೆ ಪ್ರೋತ್ಸಾಹ ನೀಡುತ್ತಿರುವ ರವಿಚಂದ್ರನ್ ಅವರಿಗೆ ಹಾಗೂ ಇಡೀ ಚಿತ್ರತಂಡಕ್ಕೆ ನನ್ನ ಧನ್ಯವಾದ ಎಂದರು ನಿರ್ಮಾಪಕ ಹರೀಶ್ ಗೌಡ.

ಥ್ರಿಲ್ಲರ್, ಕೌಟುಂಬಿಕ ಹಾಗೂ ಪ್ರೇಮ ಕಥಾಹಂದರವುಳ್ಳ ಪರವಶ ಚಿತ್ರದಲ್ಲಿ ಜನರಿಗೆ ಬೇಕಾದ ಎಲ್ಲಾ ಅಂಶಗಳು ಇದೆ. ಒಟ್ಟಿನಲ್ಲಿ ಪ್ರೇಕ್ಷಕ ಕೊಟ್ಟ ದುಡ್ಡಿಗೆ ದುಪ್ಪಟ್ಟು ಮನೋರಂಜನೆ ನೀಡುವ ಚಿತ್ರವಿದು. ಸಚಿನ್ ಬಸ್ರೂರ್ ಸಂಗೀತ ನೀಡಿರುವ ಚಿತ್ರದ ಹಾಡುಗಳು ಕೂಡ ಮುದ ನೀಡುತ್ತದೆ ಎಂದು ನಾಯಕ ಹಾಗೂ ಕಥೆಗಾರ ರಘು ಭಟ್ ತಿಳಿಸಿದರು.

ಚಿತ್ರದಲ್ಲಿ ನನ್ನ ಪಾತ್ರ ಕೂಡ ಚೆನ್ನಾಗಿದೆ.‌ ಈ ತಂಡದ ಜೊತೆಗೆ ಕೆಲಸ ಮಾಡಿದ್ದು ಸಂತೋಷವಾಗಿದೆ ಎಂದರು ನಾಯಕಿ ಸೋನಾಲ್ ಮೊಂತೆರೋ. ಕಲಾವಿದರಾದ ರಾಜೇಶ್ ನಟರಂಗ, ಸುಜಯ್ ಶಾಸ್ತ್ರಿ, ಅನನ್ಯ ಹಾಗೂ ಛಾಯಾಗ್ರಾಹಕ ಆನಂದ್ ಮೀನಾಕ್ಷಿ ಚಿತ್ರತಂಡದ ಅನೇಕ ಸದಸ್ಯರು ಶೀರ್ಷಿಕೆ ಬಿಡುಗಡೆ ಸಮಾರಂಭದಲ್ಲಿ ಉಪಸ್ಥಿತರಿದ್ದರು.

ಎಲ್ಲೆಲ್ಲಿ ಶೂಟಿಂಗ್‌ ಆಗಿದೆ?

ವಿಭಿನ್ನ ಕಥಾಹಂದರ ಹೊಂದಿರುವ ಈ ಚಿತ್ರಕ್ಕೆ ಈಗಾಗಲೇ ನಲವತ್ತು ದಿನಗಳ ಚಿತ್ರೀಕರಣ ಮುಕ್ತಾಯವಾಗಿದೆ. ಕೆಲವು ದಿನಗಳ ಚಿತ್ರೀಕರಣ ಮಾತ್ರ ಬಾಕಿಯಿದೆ. ಮಂಗಳೂರು, ಉಡುಪಿ, ಮಣಿಪಾಲ ಹಾಗೂ ಕುಂದಾಪುರದಲ್ಲಿ ಚಿತ್ರೀಕರಣವಾಗಿದೆ. ರವಿಚಂದ್ರನ್, ರಘು ಭಟ್, ಸೋನಾಲ್ ಮೊಂಟೆರೊ, ಪವಿತ್ರ ಲೋಕೇಶ್, ರಾಜೇಶ್ ನಟರಂಗ, ಸುಜಯ್ ಶಾಸ್ತ್ರಿ, ಅನನ್ಯ ಮುಂತಾದವರು ತಾರಾಬಳಗದಲ್ಲಿದ್ದಾರೆ.