ಕನ್ನಡ ಸುದ್ದಿ  /  Entertainment  /  Sandalwood News Different Style Of Promotion From Dheekshith Shetty Starrer Blink Movie Team Mnk

Blink Movie: ಓ ನಲ್ಲ, ನೀನಲ್ಲ ಬ್ಲಿಂಕ್‌ ಸಿನಿಮಾ ನಮಗೆಲ್ಲ; ಬೀದಿಗಿಳಿದ ಚಿತ್ರತಂಡದಿಂದ ವಿನೂತನ ಪ್ರಚಾರ

ಮಿಡಲ್ ಕ್ಲಾಸ್ ಹುಡುಗನ ಜೀವನದಲ್ಲಿ ನಡೆಯುವ ಅನಿರೀಕ್ಷಿತ ಘಟನೆಗಳು ಹೇಗೆ ಅವನ ಸುತ್ತ ಮುತ್ತಲಿನ ವಾತಾವರಣವನ್ನು ಬದಲಿಸುತ್ತದೆ ಎಂಬುದು ಬ್ಲಿಂಕ್‌ ಚಿತ್ರದ ಕಥೆ. ಮಾರ್ಚ್‌ 8ಕ್ಕೆ ರಿಲೀಸ್‌ ಆಗಲಿರುವ ಈ ಚಿತ್ರತಂಡ ಇದೀಗ ವಿಭಿನ್ನ ಶೈಲಿಯ ಪ್ರಚಾರದ ಮೂಲಕ ಗಮನ ಸೆಳೆಯುತ್ತಿದೆ.

Blink Movie: ಓ ನಲ್ಲ, ನೀನಲ್ಲ ಬ್ಲಿಂಕ್‌ ಸಿನಿಮಾ ನಮಗೆಲ್ಲ; ಬೀದಿಗಿಳಿದ ಚಿತ್ರತಂಡದಿಂದ ವಿನೂತನ ಪ್ರಚಾರ
Blink Movie: ಓ ನಲ್ಲ, ನೀನಲ್ಲ ಬ್ಲಿಂಕ್‌ ಸಿನಿಮಾ ನಮಗೆಲ್ಲ; ಬೀದಿಗಿಳಿದ ಚಿತ್ರತಂಡದಿಂದ ವಿನೂತನ ಪ್ರಚಾರ

Blink Movie Promotion: ಈಗಾಗಲೇ ತಮ್ಮ ಹೊಸತನದಿಂದ ಜನರ ಗಮನಸೆಳೆದಿರುವ ಬ್ಲಿಂಕ್ ತಂಡವು ಮಾರ್ಚ್ 08 ಕ್ಕೆ ಚಿತ್ರಮಂದಿರದೊಳಗೆ ಪ್ರವೇಶಿಸಲು ಎಲ್ಲಾ ಸಿದ್ದತೆ ಮಾಡಿಕೊಂಡಿದೆ. ಇದರ ಸಲುವಾಗಿ ಬ್ಲಿಂಕ್ ಚಿತ್ರ ತಂಡವು ವಿನೂತನ ರೀತಿಯಲ್ಲಿ ಪ್ರಚಾರ ಮಾಡಲು ಮುಂದಾಗಿದೆ. ನಗರದ ವಿವಿಧ ಭಾಗಗಳಲ್ಲಿ ಪ್ರಸ್ತುತ ಟ್ರೆಂಡಿನ ಹಾಡಿನ ಸಾಲುಗಳನ್ನು ಬಳಸಿಕೊಂಡು ತಮ್ಮ ಚಿತ್ರದ ಪ್ರಚಾರ ಮಾಡುತ್ತಿದ್ದಾರೆ..

ಈ ಪ್ರಚಾರವು ಸೋಶಿಯಲ್ ಮೀಡಿಯಾಗಳಲ್ಲಿ ಭಾರಿ ಸದ್ದು ಮಾಡಿದ್ದು ಜನರೆಲ್ಲ ಮೆಚ್ಚುಗೆ ವ್ಯಕ್ತಪಡಿಸಿದ್ದಾರೆ. ಜನನಿ ಪಿಕ್ಚರ್ಸ್ ನಿರ್ಮಾಣದಲ್ಲಿ ಮೂಡಿಬರುತ್ತಿರುವ ಬ್ಲಿಂಕ್ ಚಿತ್ರವು ಸೈಫೈ ಪ್ರಕಾರದ ಚಿತ್ರವಾಗಿದ್ದು ಪ್ರೇಕ್ಷಕರನ್ನು ಸೆಳಿದಿಟ್ಟುಕೊಳ್ಳುವುದು ಖಂಡಿತವೆಂದು ನಿರ್ಮಾಪಕ ರವಿಚಂದ್ರ ಎ ಜೆ ಹೇಳುತ್ತಾರೆ.

ತಮ್ಮ ಚೊಚ್ಚಲ ನಿರ್ದೇಶನದಲ್ಲೇ ಚಿತ್ರದ ಟೀಸರ್ ಹಾಗೂ ಹಾಡುಗಳ ಮೂಲಕ ಜನರ ಮನಸ್ಸನ್ನು ಗೆದ್ದಿರುವ ನಿರ್ದೇಶಕ ಶ್ರೀನಿಧಿ ಬೆಂಗಳೂರು, ಇದೊಂದು ಕಾಲ್ಪನಿಕ ಕಥೆಯಾಗಿದ್ದು, ಕನ್ನಡ ಚಿತ್ರರಂಗದಲ್ಲಿ ಈ ಪ್ರಕಾರದ ಚಿತ್ರಗಳು ತೀರಾ ಕಡಿಮೆ ತೆರೆಕಂಡಿದ್ದು ಈ ಚಿತ್ರವು ನೋಡುಗರಲ್ಲಿ ಹೊಸತನ ಮೂಡಿಸುತ್ತದೆ ಎಂದು ನಿರ್ದೇಶಕ ಶ್ರೀನಿಧಿ ಬೆಂಗಳೂರು ಮಾತು.

ಏನಿದು ಕಥೆ?

ಮಿಡಲ್ ಕ್ಲಾಸ್ ಹುಡುಗನ ಜೀವನದಲ್ಲಿ ನಡೆಯುವ ಅನಿರೀಕ್ಷಿತ ಘಟನೆಗಳು ಹೇಗೆ ಅವನ ಸುತ್ತ ಮುತ್ತಲಿನ ವಾತಾವರಣವನ್ನು ಬದಲಿಸುತ್ತದೆ ಎಂಬುದು ಈ ಕಥೆಯ ಸಾರಾಂಶ. ಬ್ಲಿಂಕ್ ಸಿನಿಮಾ ಯಾವುದೇ ಜಾನರ್‌ಗೆ ಸೇರಿಲ್ಲ. ಸೈನ್ಸ್ ಫಿಕ್ಷನ್ ಸಣ್ಣ ಎಳೆ ಇಟ್ಟುಕೊಂಡು ಸಿನಿಮಾ ಮಾಡಲಾಗಿದೆ. ಮನುಷ್ಯತ್ವ, ಮನುಷ್ಯ ಪ್ರೀತಿ ಎನ್ನುವುದನ್ನು ಸಿನಿಮಾದಲ್ಲಿ ತೋರಿಸಲಾಗಿದೆ. ಸೈನ್ಸ್ ಫಿಕ್ಷನ್ ಎಂದರೆ ಒಂದು ಲ್ಯಾಬ್ ಅಥವಾ ಬೇರೆ ಪ್ರಪಂಚದಲ್ಲಿ ನಡೆಯುವ ಕಥೆಯಾಗಿರುತ್ತದೆ. ಆದರೆ ಇದು ಆ ರೀತಿ ಅಲ್ಲ. ನಮ್ಮಂತ ಮಧ್ಯಮ ವರ್ಗದ ನಡುವೆ ಸೈನ್ಸ್ ಫಿಕ್ಷನ್ ಆದರೆ ಏನೆಲ್ಲಾ ಕಳವಳ ಆಗಬಹುದು. ಏನೆಲ್ಲಾ ಸನ್ನಿವೇಶ ಎದುರಿಸಬಹುದು ಅನ್ನೋದು ಈ ಸಿನಿಮಾದ ಮುಖ್ಯ ಕಥೆ ಎಂಬುದು ನಾಯಕ ದೀಕ್ಷಿತ್‌ ಮಾತು.

ದೀಕ್ಷಿತ್‌ ಶೆಟ್ಟಿ ನಾಯಕ

ಸೈಂಟಿಫಿಕ್‌ ಫಿಕ್ಷನ್‌ ಶೈಲಿಯಲ್ಲಿ ಮೂಡಿ ಬರುತ್ತಿರುವ 'ಬ್ಲಿಂಕ್' ಚಿತ್ರಕ್ಕೆ ನಾಯಕನಾಗಿ ದಿಯಾ ಹಾಗೂ ತೆಲುಗಿನ ದಸರಾ ಖ್ಯಾತಿಯ ದೀಕ್ಷಿತ್ ಶೆಟ್ಟಿ ಅಭಿನಯಿಸಿದ್ದಾರೆ. ನಾಯಕಿಯರಾಗಿ ಮಂದಾರ ಬಟ್ಟಲಹಳ್ಳಿ ಹಾಗೂ ಚೈತ್ರ ಜೆ ಆಚಾರ್ ಇದ್ದಾರೆ. ದಿಯಾ, ದಸರಾ ಖ್ಯಾತಿಯ ನಟ ದೀಕ್ಷಿತ್ ಶೆಟ್ಟಿಯವರು ನಾಯಕ ನಟನ ಜವಬ್ದಾರಿಯನ್ನು ಹೊತ್ತಿದ್ದಾರೆ.. ಹಾಗೂ ಹೊಸ ದಿನಚರಿ ಖ್ಯಾತಿಯ ಮಂದಾರ ಬಟ್ಟಲಹಳ್ಳಿ ನಾಯಕಿನಟಿಯಾಗಿ ಕಾಣಿಸಿಕೊಳ್ಳಲಿದ್ದಾರೆ. ಇತ್ತೀಚಿಗೆ ತೆರೆಕಂಡ ಟೋಬಿ ಮತ್ತು ಸಪ್ತಸಾಗರದಾಚೆ ಎಲ್ಲೋ 2 ಚಿತ್ರದ ಸುರಭಿ ಪಾತ್ರಧಾರಿ ಚೈತ್ರ ಜೆ ಆಚಾರ್ ಬ್ಲಿಂಕ್ ಚಿತ್ರದಲ್ಲಿ ಮುಖ್ಯಭೂಮಿಕೆಯಲ್ಲಿ ಅಭಿನಯಿಸಿದ್ದಾರೆ.

ಚಿತ್ರದಲ್ಲಿ ಯಾರೆಲ್ಲ ನಟಿಸಿದ್ದಾರೆ?

ಇವರ ಜತೆಗೆ ವಜ್ರಧೀರ್ ಜೈನ್, ಗೋಪಾಲಕೃಷ್ಣ ದೇಶಪಾಂಡೆ , ಕಿರಣ್ ನಾಯ್ಕ್ , ಮುರುಳಿ ಶೃಂಗೇರಿ , ಸುರೇಶ್ ಅನಗಹಳ್ಳಿ ಸೇರಿದಂತೆ ಇನ್ನು ದೊಡ್ಡ ತಾರಬಳಗವಿದೆ. ಈ ಚಿತ್ರಕ್ಕೆ ಪ್ರಸನ್ನ ಕುಮಾರ್ ಎಂ ಎಸ್ ರವರ ಸಂಗೀತ ನಿರ್ದೇಶನವಿದ್ದು , ಅವಿನಾಶ ಶಾಸ್ರ್ತಿರವರ ಕ್ಯಾಮೆರಾ ಕೈ ಚಳಕವಿದೆ..ಹಾಗೂ ಸಂಜೀವ್ ಜಾಗೀರ್ದಾರ್ ರವರ ಸಂಕಲನವಿದೆ.

IPL_Entry_Point