ಕರ್ನಾಟಕದಲ್ಲಿ ಮುಚ್ಚಿದ ಥಿಯೇಟರ್‌ಗಳನ್ನೇ ಟಾರ್ಗೆಟ್ ಮಾಡಿದ ಭೀಮ! ರಾಜ್ಯಾದ್ಯಂತ 400 ಚಿತ್ರಮಂದಿರಗಳಲ್ಲಿ ದುನಿಯಾ ವಿಜಯ್ ಚಿತ್ರ
ನಟ ದುನಿಯಾ ವಿಜಯ್ ನಿರ್ದೇಶನದ ಭೀಮ ಸಿನಿಮಾ ಬಿಡುಗಡೆಗೆ ದಿನಾಂಕ ನಿಗದಿಯಾಗಿದೆ. ಆಗಸ್ಟ್ 9ರಂದು ರಾಜ್ಯಾದ್ಯಂತ ಈ ಚಿತ್ರ 400ಕ್ಕೂ ಅಧಿಕ ಚಿತ್ರಮಂದಿರಗಳಲ್ಲಿ ಬಿಡುಗಡೆ ಆಗಲಿದೆ. ಈ ನಡುವೆ ಮುಚ್ಚುವ ಹಂತದ ಚಿತ್ರಮಂದಿರಗಳನ್ನೇ ಭೀಮ ತಂಡ ಟಾರ್ಗೆಟ್ ಮಾಡಿದೆ.
Bheema Kannada Movie: ಸಲಗ ಸಿನಿಮಾ ಬಳಿಕ ಮತ್ತೆ ಸ್ಯಾಂಡಲ್‌ವುಡ್‌ಗೆ ಆಗಮಿಸುತ್ತಿದ್ದಾರೆ. ಭೀಮ ಮೂಲಕ ದೊಡ್ಡ ಸದ್ದು ಮಾಡಲು ಅವರ ಎಂಟ್ರಿಯಾಗಲಿದೆ. ಈಗಾಗಲೇ ಹಾಡು, ಟೀಸರ್ ಮೂಲಕ ಸುದ್ದಿಯಲ್ಲಿರುವ ಈ ಸಿನಿಮಾ, ಸದ್ಯ ಬಿಡುಗಡೆಯ ಹೊಸ್ತಿಲಲ್ಲಿದೆ. ಆಗಸ್ಟ್ 9ರಂದು ರಾಜ್ಯಾದ್ಯಂತ ಈ ಸಿನಿಮಾ ಬಿಡುಗಡೆ ಆಗಲಿದೆ. ವಿಶೇಷ ಏನೆಂದರೆ, ಮುಚ್ಚುವ ಹಂತದಲ್ಲಿರುವ ಚಿತ್ರಮಂದಿರಗಳನ್ನು ಹುಡುಕಿ, ಆ ಥಿಯೇಟರ್‌ಗಳಲ್ಲಿ ಭೀಮ ಸಿನಿಮಾವನ್ನು ರಿಲೀಸ್ ಮಾಡಲು ಮುಂದಾಗಿದೆ ಚಿತ್ರತಂಡ. ಜತೆಗೆ ಸಿನಿಮಾ ಬಗ್ಗೆಯೂ ಇಡೀ ತಂಡ ಮಾತನಾಡಿದೆ.
ಭೀಮನಿಗೆ ಸಿಕ್ತು A ಸರ್ಟಿಫಿಕೇಟ್
ನಟ, ನಿರ್ದೇಶಕ ದುನಿಯಾ ವಿಜಯ್ ಮಾತನಾಡಿ, ಈ ಚಿತ್ರದ ಮೂಲಕ ಒಂದು ಸೂಕ್ಷ್ಮ ವಿಚಾರವನ್ನು ಜನರಿಗೆ ತಲುಪಿಸುವ ಪ್ರಯತ್ನ ಮಾಡುತ್ತಿದ್ದೇನೆ. ಸಂದೇಶವಿರುವ ಈ ಚಿತ್ರ ಎಲ್ಲರಲ್ಲೂ ಜಾಗೃತಿ ಮೂಡಿಸುವಂತೆ ಆಗಬೇಕು. ನಾನು ಹಾಗೂ ಸಂಭಾಷಣೆಕಾರ ಮಾಸ್ತಿ ಸೇರಿ ಕಥೆ ಹಂತದಿಂದ ಹಿಡಿದು ಚಿತ್ರಕಥೆ , ಸಂಭಾಷಣೆಯಿಂದ ಪ್ರತಿ ಹಂತದಲ್ಲೂ ಬಹಳ ಶ್ರಮ ಪಟ್ಟು ಕೆಲಸ ಮಾಡಿದ್ದೇವೆ. ಈಗ ಚಿತ್ರ ಸೆನ್ಸಾರ್‌ನಿಂದ ಹೊರಬಂದಿದೆ, ನಾನು ಶಾಲಾ ದಿನಗಳಿಂದಲೂ ಬಿ ಪ್ಲಸ್, ಸಿ ಪ್ಲಸ್ ಪಡೆಯುತ್ತಿದ್ದೆ. ಈಗ ನನ್ನ ಸಿನಿಮಾ ಮೂಲಕ ಸೆನ್ಸಾರ್‌ನಿಂದ ಎ ಪ್ಲಸ್ ಸಿಕ್ಕಂತಾಗಿದೆ ಎನ್ನುತ್ತಾ ಎ ಸರ್ಟಿಫಿಕೇಟ್ ಸಿಕ್ಕಿದ್ದನ್ನು ಸಮರ್ಥಿಸಿಕೊಂಡರು.
ಹದಿಹರೆಯದ ಬದುಕಿನ ದುಸ್ಥಿತಿಯ ಅನಾವರಣ
ಮುಂದುವರಿದು ಮಾತನಾಡಿದ ಅವರು, ಚಿತ್ರದ ಸಂಭಾಷಣೆ ವಿಚಾರವಾಗಿ ಒಂದಷ್ಟು ಕಟ್ಸ್ , ಮ್ಯೂಟ್ಸ್ ಮಾಡಲು ಹೇಳಿದ್ದಾರೆ. ಅದರಂತೆ ಎಲ್ಲವನ್ನು ಮಾಡುತ್ತೇವೆ. ವಿದ್ಯಾರ್ಥಿಗಳು, ಹರಿಹರಿಯದವರ ಬದುಕಿನ ದುಸ್ಥಿತಿಯ ವಿಚಾರವು ಸೇರಿದಂತೆ ಒಂದಷ್ಟು ನಾ ಕಂಡು ಕೇಳಿದಂತಹ ಸತ್ಯಗಳನ್ನು ಹೊರಹಾಕುವ ಪ್ರಯತ್ನ ಭೀಮ ಚಿತ್ರದಲ್ಲಿ ಮಾಡಿದ್ದೇನೆ. ನನ್ನ ನಿರ್ಮಾಪಕರಾದ ಕೃಷ್ಣ ಸಾರ್ಥಕ್ ಹಾಗೂ ಜಗದೀಶ್ ಗೌಡ ತುಂಬಾ ಸಾಥ್ ನೀಡಿದ್ದಾರೆ. ನನ್ನ ಎಲ್ಲಾ ವಿಚಾರಕ್ಕೂ ಸೈ ಎಂದಿದ್ದಾರೆ. ಮ್ಯೂಸಿಕ್ ಡೈರೆಕ್ಟರ್ ಚರಣ್ ರಾಜ್ ಈಗಾಗಲೇ ಹಾಡುಗಳ ಮೂಲಕ ಸಕ್ಸಸ್ ತಂದು ಕೊಟ್ಟಿದ್ದಾರೆ ಎಂದರು.
ಇನ್ನು ಈ ಚಿತ್ರದ ನಿರ್ಮಾಪಕ ಕೃಷ್ಣ ಸಾರ್ಥಕ್ ಮಾತನಾಡುತ್ತಾ ನಮ್ಮ ಚಿತ್ರ ಉತ್ತಮವಾಗಿ ಮೂಡಿ ಬಂದಿದೆ, ಸೆನ್ಸಾರ್‌ಗೆ ಹೋದಾಗ ಕೊಂಚ ಭಯ ಇತ್ತು. ಆದರೆ ನಿರ್ದೇಶಕ ವಿಜಯ್ ಸರ್ ಸೆನ್ಸಾರ್ ಅಧಿಕಾರಿಗಳಿಗೆ ನಮ್ಮ ಸಿನಿಮಾದ ಕಂಟೆಂಟ್ ಬಗ್ಗೆ ಕನ್ವಿನ್ಸ್ ಮಾಡಿದ ರೀತಿ ಅದ್ಭುತ. ಈಗಾಗಲೇ ಸಿನಿಮಾದ ಹಾಡುಗಳಿಗೆ ಒಳ್ಳೆ ರೆಸ್ಪಾನ್ಸ್ ಸಿಕ್ಕಿದೆ. ಎಲ್ಲರೂ ಬಂದು ಚಿತ್ರ ನೋಡಿ ಪ್ರೋತ್ಸಾಹಿಸಿ ಎಂದರು.
ಮುಚ್ಚುವ ಚಿತ್ರಮಂದಿರಗಳಲ್ಲಿ ಭೀಮ ಘರ್ಜನೆ
ನಾನು ಒಬ್ಬ ವಿತರಕ, ಈ ಚಿತ್ರವನ್ನು ನಿರ್ಮಿಸಿದಾಗ ಒಂದಷ್ಟು ವಿಚಾರ ನನಗೂ ತಿಳಿಯಿತು. ಬಹಳ ಶ್ರಮವಹಿಸಿ ಒಂದು ಉತ್ತಮ ಸಂದೇಶವಿರುವ ಚಿತ್ರವನ್ನು ಬಿಡುಗಡೆ ಹಂತಕ್ಕೆ ತಂದಿದ್ದೇವೆ. ಮುಚ್ಚಿ ಹೋಗುತ್ತಿರುವ 18 ಚಿತ್ರಮಂದಿರಗಳು ನಮ್ಮ ಭೀಮ ಚಿತ್ರದ ಮೂಲಕ ಮತ್ತೆ ಓಪನ್ ಆಗಲಿದೆ. ಸುಮಾರು 400ಕ್ಕೂ ಹೆಚ್ಚು ಚಿತ್ರಮಂದಿರಗಳಲ್ಲಿ ನಮ್ಮ ಚಿತ್ರವನ್ನು ರಾಜ್ಯಾದ್ಯಂತ ಬಿಡುಗಡೆ ಮಾಡುತ್ತಿದ್ದೇವೆ. ಅದೇ ರೀತಿ ದೇಶದ ಬೇರೆ ಬೇರೆ ರಾಜ್ಯಗಳಲ್ಲೂ ಭೀಮ ನೇರವಾಗಿ ರಿಲೀಸ್ ಆಗುತ್ತಿದ್ದು, ವಿದೇಶದಲ್ಲಿ ಕೂಡ ಬಿಡುಗಡೆಗೆ ಮಾತುಕತೆ ನಡೆಯುತ್ತಿದೆ ಎಂದರು ಮತ್ತೋರ್ವ ನಿರ್ಮಾಪಕ ಜಗದೀಶ್ ಗೌಡ ಮತ್ತು ವಿತರಕ.
ತಾಂತ್ರಿಕ ವರ್ಗ ಹೀಗಿದೆ..
ಛಾಯಾಗ್ರಹಕ ಶಿವಸೇನಾ, ಸಂಕಲನ ದೀಪು ಎಸ್. ಕುಮಾರ್, ಸಂಭಾಷಣೆ ಮಾಸ್ತಿ, ವಿನೋದ್ ಅವರ ಸಾಹಸ, ಚೇತನ್ ಡಿಸೋಜಾ, ಟೈಗರ್ ಶಿವ, ಗೌತಮ್ ಹಾಗೂ ಡ್ಯಾನ್ಸ್ ಕೋರಿಯೋಗ್ರಾಫಿ ಬಿ. ಧನಂಜಯ, ರಾಜು ಸೇರಿದಂತೆ ಇಡೀ ನಮ್ಮ ಚಿತ್ರಕ್ಕೆ ತಾರಾಬಳಗ ಹಾಗೂ ತಾಂತ್ರಿಕ ವರ್ಗ ಬಹಳಷ್ಟು ಶ್ರಮಸಿ ಕೆಲಸ ಮಾಡಿದ್ದೇವೆ. ಬುಡಕಟ್ಟು ಜನಾಂಗದವರು ಸೇರಿದಂತೆ ಒಂದಷ್ಟು ಯುವ ಪ್ರತಿಭೆಗಳಿಗೆ ಅವಕಾಶ ಈ ಸಿನಿಮಾದಲ್ಲಿ ಸಿಕ್ಕಿದೆ.
ಬೂಮ್ ಬೂಮ್ ಬೆಂಗಳೂರು ವೈರಲ್ ಸಾಂಗ್
ಜನರ ನಡುವೆ ಹಾಡು ಫೇಮಸ್ಸು
ಭೀಮ ಸಿನಿಮಾ ಪರ ಟ್ವಿಟರ್ ಅಭಿಯಾನ
ಅಭಿಮಾನಿಗಳ ಮನಗೆದ್ದ ಭೀಮಾ ಪೋಸ್ಟರ್