ಎಡಚರರ ಜೀವನ ಶೈಲಿಯೇ ಸಿನಿಮಾವಾಯ್ತು, ಎಡಗೈಯೇ ಅಪಘಾತಕ್ಕೆ ಕಾರಣ ಸಿನಿಮಾ ನೋಡಲು ರೆಡಿಯಾಗಿ, ಚಿತ್ರತಂಡದಿಂದ ಹೊಸ ಅಪ್‌ಡೇಟ್‌
ಕನ್ನಡ ಸುದ್ದಿ  /  ಮನರಂಜನೆ  /  ಎಡಚರರ ಜೀವನ ಶೈಲಿಯೇ ಸಿನಿಮಾವಾಯ್ತು, ಎಡಗೈಯೇ ಅಪಘಾತಕ್ಕೆ ಕಾರಣ ಸಿನಿಮಾ ನೋಡಲು ರೆಡಿಯಾಗಿ, ಚಿತ್ರತಂಡದಿಂದ ಹೊಸ ಅಪ್‌ಡೇಟ್‌

ಎಡಚರರ ಜೀವನ ಶೈಲಿಯೇ ಸಿನಿಮಾವಾಯ್ತು, ಎಡಗೈಯೇ ಅಪಘಾತಕ್ಕೆ ಕಾರಣ ಸಿನಿಮಾ ನೋಡಲು ರೆಡಿಯಾಗಿ, ಚಿತ್ರತಂಡದಿಂದ ಹೊಸ ಅಪ್‌ಡೇಟ್‌

ಆಗಸ್ಟ್‌ 13 ಅಂತಾರಾಷ್ಟ್ರೀಯ ಎಡಗೈ ಬಳಕೆದಾರರ ದಿನ (International Lefthanders Day). ಇಂದು ಸ್ಯಾಂಡಲ್‌ವುಡ್‌ನಲ್ಲಿ ಎಡಗೈ ಬಳಕೆದಾರರ ಜೀವನಶೈಲಿಯನ್ನು ಗಮನದಲ್ಲಿಟ್ಟುಕೊಂಡು ನಿರ್ಮಿಸುತ್ತಿರುವ ಸಿನಿಮಾದ ಪೋಸ್ಟರ್‌ ಬಿಡುಗಡೆ ಮಾಡಿದೆ. ಈ ಸಿನಿಮಾ ಶೀಘ್ರದಲ್ಲಿ ತೆರೆ ಕಾಣಲಿದೆ.

ಎಡಚರರ ಜೀವನ ಶೈಲಿಯೇ ಸಿನಿಮಾವಾಯ್ತು, ಎಡಗೈಯೇ ಅಪಘಾತಕ್ಕೆ ಕಾರಣ ಸಿನಿಮಾ ನೋಡಲು ರೆಡಿಯಾಗಿ
ಎಡಚರರ ಜೀವನ ಶೈಲಿಯೇ ಸಿನಿಮಾವಾಯ್ತು, ಎಡಗೈಯೇ ಅಪಘಾತಕ್ಕೆ ಕಾರಣ ಸಿನಿಮಾ ನೋಡಲು ರೆಡಿಯಾಗಿ

ಬೆಂಗಳೂರು: ಬೆಂಗಳೂರು: ಇಂದು (ಆಗಸ್ಟ್‌ 13) ಅಂತಾರಾಷ್ಟ್ರೀಯ ಎಡಗೈ ಬಳಕೆದಾರರ ದಿನ. ಈ ವಿಶೇಷ ದಿನದ ಅಂಗವಾಗಿ ಎಡಗೈ ಅಪಘಾತಕ್ಕೆ ಕಾರಣ ಸಿನಿಮಾ ತಂಡದಿಂದ ಹೊಸ ಪೋಸ್ಟರ್ ಬಿಡುಗಡೆ ಮಾಡಲಾಗಿದೆ. ಎಡಗೈ ಬಳಸುವವರನ್ನೇ ಗಮನದಲ್ಲಿಟ್ಟುಕೊಂಡು, ಅವರ ಜೀವನ ಶೈಲಿ ಕುರಿತು ಈ ಚಿತ್ರ ಕಟ್ಟಿಕೊಡಲಾಗಿದೆ. ಅದರಂತೆಯೇ ಪೋಸ್ಟರ್ ಕೂಡ ಆಕರ್ಷಕವಾಗಿದೆ. ಸೆಟ್ಟೇರಿದ ದಿನದಂದಲೂ ಚಿತ್ರತಂಡ ವಿಭಿನ್ನ ಪೋಸ್ಟರ್ ಅನಾವರಣ ಮಾಡುವ ಮೂಲಕ ಪ್ರೇಕ್ಷಕರ ಕುತೂಹಲವನ್ನು ಹೆಚ್ಚು ಮಾಡಿದೆ.

ಎಡಗೈಯೇ ಅಪಘಾತಕ್ಕೆ ಕಾರಣ ಸಿನಿಮಾಗೆ ಸಮರ್ಥ್ ಬಿ ಕಡಕೊಳ್ ಆಕ್ಷನ್ ಕಟ್ ಹೇಳಿದ್ದು, ಇದು ಇವರ ಚೊಚ್ಚಲ ನಿರ್ದೇಶನದ ಚಿತ್ರವಾಗಿದೆ. ಮರ್ಡರ್ ಮಿಸ್ಟರಿ, ಡಾರ್ಕ್ ಕಾಮಿಡಿ ಹಾಗೂ ಸಸ್ಪೆನ್ಸ್ ಥ್ರಿಲ್ಲರ್ ಸಬ್ಜೆಕ್ಟ್ ಒಳಗೊಂಡ ಕಥಾ ಹಂದರ ಈ ಸಿನಿಮಾದಲ್ಲಿದೆ.

ದೂದ್ ಪೇಡ ದಿಗಂತ್ ನಾಯಕನಾಗಿ ನಟಿಸಿದ್ದು, ದಿಗ್ಗಿಗೆ ಜೋಡಿಯಾಗಿ ಹೊಸ ನಟಿ ಧನು ಹರ್ಷ ನಟಿಸುತ್ತಿದ್ದು ನಿಧಿ ಸುಬ್ಬಯ್ಯ, ರಾಧಿಕಾ ನಾರಾಯಣ್, ಭಜರಂಗಿ ಲೋಕಿ, ಕೃಷ್ಣ ಹೆಬ್ಬಾಳ್ ಕೂಡಾ ಚಿತ್ರದ ಪ್ರಮುಖ ಪಾತ್ರದಲ್ಲಿ ನಟಿಸಿದ್ದಾರೆ.

ಎಡಗೈ ಅಪಘಾತಕ್ಕೆ ಕಾರಣ ಸಿನಿಮಾವನ್ನು ಹೈಫನ್ ಪಿಕ್ಚರ್ಸ್ ಹಾಗೂ ಗುರುದತ್ ಗಾಣಿಗ ಫಿಲ್ಮಂಸ್ ಬ್ಯಾನರ್ ನಡಿ ಗುರುದತ್ ಗಾಣಿಗ ಹಾಗೂ ನಿರ್ದೇಶಕ ಸಮರ್ಥ್ ಬಿ ಕಡಕೊಳ್ ಜಂಟಿಯಾಗಿ ನಿರ್ಮಾಣ ಮಾಡುತ್ತಿದ್ದಾರೆ. ಚಿತ್ರಕ್ಕೆ ಅಭಿಮನ್ಯು ಸದಾನಂದ್ ಕ್ಯಾಮೆರಾ ವರ್ಕ್, ರಾಹುಲ್ ವಿ ಪಾರ್ವತಿಕರ್ ಹಾಗೂ ಶ್ರೀಪಾದ್ ಜೋಶಿ ಸಂಭಾಷಣೆ ಇದೆ.

ಯಾವಾಗ ರಿಲೀಸ್?

ಎಡಗೈ ಅಪಘಾತಕ್ಕೆ ಕಾರಣ ಸಿನಿಮಾದ ಚಿತ್ರೀಕರಣ ಮುಕ್ತಾಯಗೊಂಡಿದ್ದು, ತೆರೆಗೆ ಬರಲು ಸಜ್ಜಾಗಿದೆ. ಚಿತ್ರತಂಡ ಪ್ರಚಾರ ಕಾರ್ಯಕ್ಕೆ ಚಾಲನೆ ಕೊಟ್ಟಿದ್ದು, ಶೀಘ್ರದಲ್ಲೇ ಸಿನಿಮಾವನ್ನು ತೆರೆಗೆ ತರಲಿದೆ.

ಎಡಗೈಯೇ ಅಪಘಾತಕ್ಕೆ ಕಾರಣ ಚಿತ್ರದಲ್ಲಿ ಪ್ರತಿ ಕೆಲಸಕ್ಕೂ ಎಡಗೈ ಬಳಸುವವರ ಸಮಸ್ಯೆಗಳ ಬಗ್ಗೆ ತಿಳಿಸಲಾಗಿದೆ. ಅವರು ದಿನನಿತ್ಯದ ಜೀವನದಲ್ಲಿ ಎದುರಿಸುವ ಸವಾಲುಗಳ ಕುರಿತಾಗಿಯೇ ಫೋಕಸ್ ಮಾಡಲಾಗಿದೆ. ಮೇಲ್ನೋಟಕ್ಕೆ ಈ ಸಿನಿಮಾ ಸ್ಯಾಂಡಲ್‌ವುಡ್‌ನಲ್ಲಿ ಟ್ರೆಂಡ್ ಹುಟ್ಟು ಹಾಕುವ ಸಾಧ್ಯತೆಯಿದೆ.

ಎಡಗೈ ಬಳಸುವವರ ಸ್ಪೆಷಾಲಿಟಿ

ನಮ್ಮಲ್ಲಿ ಹಲವರು ಬರೆಯುವುದು, ಕೆಲಸ ಮಾಡುವುದು ಮುಂತಾದ ಎಲ್ಲವನ್ನೂ ಬಲಗೈಯಲ್ಲೇ ಮಾಡುತ್ತಾರೆ. ವಿಶ್ವದಲ್ಲಿ ಸುಮಾರು ಶೇ 12ರಷ್ಟು ಮಾತ್ರ ಎಡಗೈ ಬಳಸುವ ವ್ಯಕ್ತಿಗಳಿದ್ದಾರೆ. ಆದರೆ ತಮ್ಮ ಪ್ರತಿ ಕೆಲಸಕ್ಕೂ ಎಡಗೈಯನ್ನೇ ಉಪಯೋಗಿಸುವವರು ಸಿಗುವುದು ತುಂಬಾ ವಿರಳ. ಇಂಥವರು ಕೆಲವೇ ಕೆಲವು ಜನರಷ್ಟೇ ಇದ್ದಾರೆ. ಇವರನ್ನು ಬಹಳ ವಿಶೇಷವಾಗಿ ನೋಡಲಾಗುತ್ತದೆ. ಇಂಥವರು ಬುದ್ಧಿವಂತರು, ಸೃಜನಾತ್ಮಕ ವ್ಯಕ್ತಿತ್ವ, ವಿಶ್ಲೇಷಣಾತ್ಮಕ ಮನೋಭಾವದವರು ಮತ್ತು ಉತ್ತಮ ಭಾಷಾ ಕೌಶಲವನ್ನು ಹೊಂದಿರುತ್ತಾರೆ ಎಂದೂ ಹೇಳಲಾಗುತ್ತದೆ. ಇದಕ್ಕೆ ಸಂಬಂಧಪಟ್ಟಂತೆ ಈ ಮುಂದಿನ ಲಿಂಕ್‌ನಲ್ಲಿರುವ ಲೇಖನ ಓದಿ. ಎಡಗೈ ಬಳಕೆ ಮಾಡುವವರು ಬುದ್ಧಿವಂತರಾ? ಇವರ ಬಗ್ಗೆ ನಿಮಗೆ ತಿಳಿದಿರದ 10 ಆಸಕ್ತಿಕರ ವಿಚಾರಗಳು ಇಲ್ಲಿವೆ

Whats_app_banner