ಕನ್ನಡ ಸುದ್ದಿ  /  ಮನರಂಜನೆ  /  ಬೆಂಗಳೂರು ಕಟ್ಟಿದ ನಾಡಪ್ರಭು ಕೆಂಪೇಗೌಡರ ಬಯೋಪಿಕ್‌ ಘೋಷಣೆ; ದಿನೇಶ್‌ ಬಾಬು ನಿರ್ದೇಶನದ ಚಿತ್ರಕ್ಕೆ ಹೀರೋ ಯಾರು?

ಬೆಂಗಳೂರು ಕಟ್ಟಿದ ನಾಡಪ್ರಭು ಕೆಂಪೇಗೌಡರ ಬಯೋಪಿಕ್‌ ಘೋಷಣೆ; ದಿನೇಶ್‌ ಬಾಬು ನಿರ್ದೇಶನದ ಚಿತ್ರಕ್ಕೆ ಹೀರೋ ಯಾರು?

ಬೆಂಗಳೂರನ್ನು ಕಟ್ಟಿ ಬೆಳೆಸಿದ ನಾಡಪ್ರಭು ಕೆಂಪೇಗೌಡರ ಸಾಹಸ ಕಥೆಯನ್ನು ಸಿನಿಮಾ ರೂಪಕ್ಕೆ ಇಳಿಸುತ್ತಿದ್ದಾರೆ ರಾಜ್ಯ ಪ್ರಶಸ್ತಿ ವಿಜೇತ ನಿರ್ದೇಶಕ ದಿನೇಶ್ ಬಾಬು. ಶೀರ್ಷಿಕೆ ಅನಾವರಣ ಮಾಡಿರುವ ನಿರ್ದೇಶಕರು, ಶೀಘ್ರದಲ್ಲಿ ಶೂಟಿಂಗ್‌ ಆರಂಭಿಸಲಿದ್ದಾರೆ.

ಬೆಂಗಳೂರು ಕಟ್ಟಿದ ನಾಡಪ್ರಭು ಕೆಂಪೇಗೌಡರ ಬಯೋಪಿಕ್‌ ಘೋಷಣೆ; ದಿನೇಶ್‌ ಬಾಬು ನಿರ್ದೇಶನದ ಚಿತ್ರಕ್ಕೆ ಹೀರೋ ಯಾರು?
ಬೆಂಗಳೂರು ಕಟ್ಟಿದ ನಾಡಪ್ರಭು ಕೆಂಪೇಗೌಡರ ಬಯೋಪಿಕ್‌ ಘೋಷಣೆ; ದಿನೇಶ್‌ ಬಾಬು ನಿರ್ದೇಶನದ ಚಿತ್ರಕ್ಕೆ ಹೀರೋ ಯಾರು?

Nadaprabhu Kempegowda: ನಾಡಪ್ರಭು ಕೆಂಪೇಗೌಡರ ಕುರಿತ ಸಿನಿಮಾ ಸೆಟ್ಟೇರಿದೆ. ಈ ಮೂಲಕ ಕಾಯುವಿಕೆಗೆ ಪೂರ್ಣವಿರಾಮ ಬಿದ್ದಿದೆ. ಈ ವರೆಗೂ ಕೆಂಪೇಗೌಡರ ಜೀವನ ಮತ್ತು ಸಾಧನೆಯ ಹಾದಿಯ ಬಗ್ಗೆ ಯಾವುದೇ ಪೂರ್ಣ ಪ್ರಮಾಣದ ಸಿನಿಮಾ  ನಿರ್ಮಾಣವಾಗಿರಲಿಲ್ಲ. ಈಗ ಆ ಕೊರತೆ ನೀಗಿದಂತಾಗಿದೆ. ಬೆಂಗಳೂರಿನ ನಿರ್ಮಾತೃ ನಾಡಪ್ರಭು ಕೆಂಪೇಗೌಡರವರ ಜೀವನ ಚರಿತ್ರೆಯನ್ನು ಬೆಳ್ಳಿತೆರೆ ಮೇಲೆ ನೋಡುವ ಕಾಲ ಹತ್ತಿರವಾಗಿದೆ.  ಸಿನಿಮಾವಾಗುತ್ತಿದೆ. ಚಿತ್ರಕ್ಕೆ ಧರ್ಮಬೀರು ನಾಡಪ್ರಭು ಕೆಂಪೇಗೌಡ ಎಂಬ ಶೀರ್ಷಿಕೆಯೂ ಅಂತಿಮವಾಗಿದೆ. 

ಟ್ರೆಂಡಿಂಗ್​ ಸುದ್ದಿ

ದಿನೇಶ್‌ ಬಾಬು ನಿರ್ದೇಶನ

ಸಿಲಿಕಾನ್ ಸಿಟಿ, ಗಾರ್ಡನ್ ಸಿಟಿ ಅಂತೆಲ್ಲಾ ಖ್ಯಾತಿ ಪಡೆದಿರುವ ಬೆಂಗಳೂರನ್ನು ಕಟ್ಟಿ ಬೆಳೆಸಿದ ನಾಡಪ್ರಭು ಕೆಂಪೇಗೌಡರ ಸಾಹಸ ಕಥೆಯನ್ನು ಸಿನಿಮಾ ರೂಪಕ್ಕೆ ಇಳಿಸುತ್ತಿರುವುದು ರಾಜ್ಯ ಪ್ರಶಸ್ತಿ ವಿಜೇತ ಖ್ಯಾತ ನಿರ್ದೇಶಕ ದಿನೇಶ್ ಬಾಬು. ಇನ್ಸ್‌ಪೆಕ್ಟರ್‌ ವಿಕ್ರಂ, ಅಭಿ ಸೇರಿದಂತೆ 50ಕ್ಕೂ ಹೆಚ್ಚು ಚಿತ್ರಗಳನ್ನು ನಿರ್ಮಿಸಿರುವ ದಿನೇಶ್ ಬಾಬು, ಧರ್ಮಬೀರು ನಾಡಪ್ರಭು ಕೆಂಪೇಗೌಡ ಸಿನಿಮಾಗೆ ಆಕ್ಷನ್ ಕಟ್ ಹೇಳುತ್ತಿದ್ದಾರೆ.

ಕೆಂಪೇಗೌಡ ಪಾತ್ರಧಾರಿ ಯಾರು?

ಹಾಗಾದರೆ, ನಾಡಪ್ರಭು ಕೆಂಪೇಗೌಡರಾಗಿ ಬಣ್ಣ ಹಚ್ಚುತ್ತಿರುವವರು ಯಾರು? ಸದ್ಯಕ್ಕೆ ಚಿತ್ರತಂಡ ಆ ಕುತೂಹಲವನ್ನು ರಿವೀಲ್ ಮಾಡಿಲ್ಲ. ಜನಪ್ರಿಯ ನಟರೊಬ್ಬರು ಕೆಂಪೇಗೌಡರಾಗಿ ರಾರಾಜಿಸಲಿದ್ದಾರೆ ಎನ್ನುತ್ತದೆ ಚಿತ್ರತಂಡ. ಸದ್ಯ ಆ ನಟ ತಮ್ಮ ಪಾತ್ರದ ತಯಾರಿಯಲ್ಲಿ ಬಿಜಿಯಾಗಿದ್ದು, ಮುಂದಿನ ದಿನಗಳಲ್ಲಿ ಅವರನ್ನು ನಿಮ್ಮ ಮುಂದೆ ಪರಿಚಯಿಸುವುದಾಗಿ ಚಿತ್ರತಂಡ ತಿಳಿಸಿದೆ.

ವೃತ್ತಿಯಲ್ಲಿ ವೈದ್ಯರಾಗಿರುವ ಕಿರಣ್ ತೋಟಂಬೈಲ್ ಸಿನಿಮಾ ಮೇಲಿನ ಪ್ರೀತಿಯಿಂದಾಗಿ ಈ ಚಿತ್ರ ನಿರ್ಮಾಣಕ್ಕೆ ಮುಂದಾಗಿದ್ದಾರೆ. ಕೆಂಪೇಗೌಡ ಮೆಡಿಕಲ್ ಕಾಲೇಜ್‌ನಲ್ಲಿ ವ್ಯಾಸಂಗ ಮಾಡುವಾಗಲೇ ಮುಂದೊಂದು ದಿನ ಕೆಂಪೇಗೌಡರ ಸಿನಿಮಾ ಮಾಡಬೇಕು ಅಂದುಕೊಂಡಿದ್ದರಂತೆ. ಅದರಂತೆ ಇಂದು ಧರ್ಮಬೀರು ನಾಡಪ್ರಭು ಕೆಂಪೇಗೌಡರ ಸಿನಿಮಾ ನಿಮ್ಮ ಮುಂದೆ ತರಲು ಸಜ್ಜಾಗಿದ್ದಾರೆ.

ಮೇ, ಜೂನ್‌ನಲ್ಲಿ ಶೂಟಿಂಗ್‌ ಶುರು

ಧರ್ಮೇಂದ್ರ ಕುಮಾರ್ ಅರೇನಹಳ್ಳಿ ಕಥೆ ಬರೆದಿದ್ದು, ಸಂಕೇತ್ ಎಂವೈಎಸ್ ಈ ಸಿನಿಮಾಗೆ ಕ್ಯಾಮೆರಾ ಹಿಡಿಯಲಿದ್ದಾರೆ. ವಿಶೇಷ ಏನೆಂದರೆ ನಿರ್ಮಾಪಕ ಕಿರಣ್ ತೋಟಂಬೈಲ್ ಸಂಗೀತ ನೀಡಲಿದ್ದಾರೆ. ವಿ ನಾಗೇಂದ್ರ ಪ್ರಸಾದ್ ಹಾಗೂ ಸಂತೋಷ್ ನಾಯಕ್ ಹಾಡುಗಳಿಗೆ ಸಾಹಿತ್ಯ ಒದಗಿಸಲಿದ್ದಾರೆ. ಮಾಸ್ತಿ ಹಾಗೂ ರಘು‌ ನಿಡುವಳ್ಳಿ ಸಂಭಾಷಣೆ ಧರ್ಮಬೀರು ನಾಡಪ್ರಭು ಕೆಂಪೇಗೌಡ ಚಿತ್ರಕ್ಕಿರಲಿದೆ. ಕನ್ನಡ ಹಾಗೂ‌‌‌ ಇಂಗ್ಲೀಷ್ ಭಾಷೆಯಲ್ಲಿ ಈ ಚಿತ್ರ‌ ನಿರ್ಮಾಣವಾಗಲಿದೆ. ಮೇ ಅಥವಾ ಜೂನ್ ತಿಂಗಳಲ್ಲಿ‌ ಮುಹೂರ್ತ ಮುಗಿಸಿ ಶೂಟಿಂಗ್‌ಗೂ ಚಾಲನೆ ನೀಡಲಿದೆ ಚಿತ್ರತಂಡ.

IPL_Entry_Point