Sharmila Mandre: ಸಿಲ ನೋಡಿಗಳ್ ಹೆಸರಿನ ತಮಿಳು ಚಿತ್ರ ನಿರ್ಮಿಸಿದ ಕನ್ನಡದ ನಟಿ ಶರ್ಮಿಳಾ ಮಾಂಡ್ರೆ
ಕನ್ನಡ ಸುದ್ದಿ  /  ಮನರಂಜನೆ  /  Sharmila Mandre: ಸಿಲ ನೋಡಿಗಳ್ ಹೆಸರಿನ ತಮಿಳು ಚಿತ್ರ ನಿರ್ಮಿಸಿದ ಕನ್ನಡದ ನಟಿ ಶರ್ಮಿಳಾ ಮಾಂಡ್ರೆ

Sharmila Mandre: ಸಿಲ ನೋಡಿಗಳ್ ಹೆಸರಿನ ತಮಿಳು ಚಿತ್ರ ನಿರ್ಮಿಸಿದ ಕನ್ನಡದ ನಟಿ ಶರ್ಮಿಳಾ ಮಾಂಡ್ರೆ

Sila Nodigal: ಸ್ಯಾಂಡಲ್‌ವುಡ್‌ ನಟಿ ಶರ್ಮಿಳಾ ಮಾಂಡ್ರೆ, ತಮಿಳು ಚಿತ್ರ ನಿರ್ಮಿಸಿದ್ದಾರೆ. ಸಿಲ ನೋಡಿಗಳ್‌ ಶೀರ್ಷಿಕೆಯ ಈ ಸಿನಿಮಾ ಇದೇ ತಿಂಗಳ 24ರಂದು ರಿಲೀಸ್‌ ಆಗಲಿದೆ.

Sharmila Mandre: ಸಿಲ ನೋಡಿಗಳಿಲ್ ಹೆಸರಿನ ತಮಿಳು ಚಿತ್ರ ನಿರ್ಮಿಸಿದ ಕನ್ನಡದ ನಟಿ ಶರ್ಮಿಳಾ ಮಾಂಡ್ರೆ
Sharmila Mandre: ಸಿಲ ನೋಡಿಗಳಿಲ್ ಹೆಸರಿನ ತಮಿಳು ಚಿತ್ರ ನಿರ್ಮಿಸಿದ ಕನ್ನಡದ ನಟಿ ಶರ್ಮಿಳಾ ಮಾಂಡ್ರೆ

Sharmila Mandre: ಸಜನಿ ಚಿತ್ರದ ಮೂಲಕ ಚಿತ್ರರಂಗ ಪ್ರವೇಶಿಸಿ, ಗಾಳಿಪಟ ಸೇರಿದಂತೆ ಅನೇಕ ಯಶಸ್ವಿ ಚಿತ್ರಗಳಲ್ಲಿ ನಟಿಸಿರುವ ನಟಿ ಶರ್ಮಿಳಾ ಮಾಂಡ್ರೆ ಈಗ ಕ್ರಿಯೇಟಿವ್ ಪ್ರೊಡ್ಯೂಸರ್ ಆಗಿದ್ದಾರೆ. ಮಲೇಷಿಯಾ ಮೂಲದ ಪುನ್ನಗೈ ಪೂ ಗೀತಾ ನಿರ್ಮಾಣದ ಈ ಚಿತ್ರದ ಸಂಪೂರ್ಣ ಜವಾಬ್ದಾರಿ ಶರ್ಮಿಳಾ ಮಾಂಡ್ರೆ ಹೊತ್ತಿಕೊಂಡಿದ್ದಾರೆ‌. ಈ ಹಿಂದೆ ಮುಂದಿನ ನಿಲ್ದಾಣ ಎಂಬ ಚಿತ್ರವನ್ನು ನಿರ್ದೇಶಿಸಿದ್ದ ವಿನಯ್ ಭಾರದ್ವಾಜ್ ಈ ಚಿತ್ರವನ್ನು ನಿರ್ದೇಶಿಸಿದ್ದಾರೆ.

ಚಿತ್ರದ ಬಗ್ಗೆ ಮಾಹಿತಿ ನೀಡುವ ನಿರ್ದೇಶಕ ವಿನಯ್‌ ಭಾರದ್ವಾಜ್, ಸಿಲ ನೋಡಿಗಳ್ ಚಿತ್ರ ನನಗೆ ಸಿಗಲು ಲೂಸಿಯಾ ಪವನ್ ಕುಮಾರ್ ಕಾರಣ. ಅವರ ಮೂಲಕ ನನಗೆ ಶರ್ಮಿಳಾ ಮಾಂಡ್ರೆ ಪರಿಚಯವಾಯಿತು. ಮಲೇಷಿಯಾದಲ್ಲಿ ಖ್ಯಾತ ಆರ್ ಜೆ ಆಗಿ ಕಾರ್ಯನಿರ್ವಹಿಸುತ್ತಿರುವ ಪುನ್ನಗೈ ಪೂ ಗೀತಾ ಈ ಚಿತ್ರವನ್ನು ನಿರ್ಮಾಣ ಮಾಡಿದ್ದಾರೆ. ಜೊತೆಗೆ ನಟನೆ ಕೂಡ ಮಾಡಿದ್ದಾರೆ. ಮೂರು ಪ್ರಮುಖ ಪಾತ್ರಗಳ ಸುತ್ತ ಈ ಚಿತ್ರದ ಕಥೆ ಸಾಗುತ್ತದೆ. ರಿಚರ್ಡ್ ರಿಷಿ, ಪುನ್ನಗೈ ಪೂ ಗೀತಾ ಹಾಗೂ ಯಶಿಕಾ ಆನಂದ್ ಪ್ರಮುಖಪಾತ್ರಗಳಲ್ಲಿ ನಟಿಸಿದ್ದಾರೆ ಎಂದರು.

ಮುಂದುವರಿದು ಮಾತನಾಡಿ. ಲಂಡನ್‌ನಲ್ಲಿ ವಾಸವಿರುವ ಗಂಡ- ಹೆಂಡತಿ ನಡುವೆ ಮತ್ತೊಬ್ಬ ಯುವತಿಯ ಆಗಮನವಾಗುತ್ತದೆ. ಅಲ್ಲೊಂದು ಕೊಲೆ ಕೂಡ ಆಗುತ್ತದೆ. ಈ ಕೊಲೆ ಮಾಡಿದ್ದು ಯಾರು? ಇದು ನಿಜವಾಗಿಯೂ ಕೊಲೆನಾ? ಎಂಬ ಕುತೂಹಲಕಾರಿ ಅಂಶಗಳು ನಮ್ಮ ಚಿತ್ರದಲ್ಲಿದೆ. ಸಿಲ ನೋಡಿಗಳ್ ಎಂದರೆ ಕೆಲವೇ ಕ್ಷಣಗಳಲಿ ಎಂದು ಅರ್ಥ" ಎಂದರು ನಿರ್ದೇಶಕ ವಿನಯ್.‌

ಚಿತ್ರದ ನಿರ್ಮಾಪಕಿ ಶರ್ಮಿಳಾ ಮಾಂಡ್ರೆ, ಗಾಳಿಪಟ 2 ಚಿತ್ರದ ನಂತರ ನಾನು ಪವನ್ ಕುಮಾರ್ ಅವರ ಜೊತೆ ಈ ಚಿತ್ರದ ಬಗ್ಗೆ ಮಾತನಾಡಿದ್ದೆ. ಅವರು ಧೂಮಂ ಚಿತ್ರದಲ್ಲಿ ಬಿಜಿಯಾಗಿದ್ದರಿಂದ ವಿನಯ್ ಅವರನ್ನು ಪರಿಚಯಿಸಿದರು. ಮುಂದಿನ ನಿಲ್ದಾಣ ಚಿತ್ರ ನೋಡಿದೆ‌. ವಿನಯ್ ಅವರ ನಿರ್ದೇಶನ ಇಷ್ಟವಾಯಿತು. ಈ ಚಿತ್ರವನ್ನು ವಿನಯ್ ಚೆನ್ನಾಗಿ ನಿರ್ದೇಶನ ಮಾಡಿದ್ದಾರೆ. ನಾನು ಈ ಚಿತ್ರದಲ್ಲಿ ನಟಿಸಿಲ್ಲ. ಕ್ರಿಯೇಟಿವ್ ಪ್ರೊಡ್ಯೂಸರ್ ಆಗಿ ಕಾರ್ಯ ನಿರ್ವಹಿಸಿದ್ದೇನೆ. ನಿರ್ಮಾಪಕರು ಕೊಟ್ಟ ಜವಾಬ್ದಾರಿಯನ್ನು ನಿಭಾಯಿಸಿದ್ದೇನೆ. ನವೆಂಬರ್ 24 ರಂದು ಪ್ರಪಂಚದಾದ್ಯಂತ ಈ ಚಿತ್ರ ಬಿಡುಗಡೆಯಾಗಲಿದೆ ಎಂದರು ನಟಿ ಶರ್ಮಿಳಾ ಮಾಂಡ್ರೆ.

ಚಿತ್ರದಲ್ಲಿ ಐದು ಹಾಡುಗಳಿವೆ. ಐವರು ಖ್ಯಾತ ಸಂಗೀತ ನಿರ್ದೇಶಕರು ಸಂಗೀತ ಸಂಯೋಜನೆ ಮಾಡಿದ್ದಾರೆ. ಹೆಸರಾಂತ ತಂತ್ರಜ್ಞರ ಕೈಚಳಕ ಈ ಚಿತ್ರಕ್ಕಿದೆ. ಮೊದಲು ತಮಿಳಿನಲ್ಲಿ ಈ ಸಿನಿಮಾ ಬಿಡುಗಡೆಯಾಗುತ್ತಿದೆ. ನಂತರದ ದಿನಗಳಲ್ಲಿ ಕನ್ನಡದಲ್ಲಿಯೂ ನಿರ್ಮಿಸುವ ಯೋಜನೆ ಇದೆ ಎಂಬುದು ನಿರ್ದೇಶಕರು ತಿಳಿಸಿದ್ದಾರೆ.

Whats_app_banner