ಕನ್ನಡ ಸುದ್ದಿ  /  ಮನರಂಜನೆ  /  ಗೋಲ್ಡನ್ ಸ್ಟಾರ್ ಗಣೇಶ್ ಅಭಿಮಾನಿಗಳಿಗೆ ಸಿಹಿಸುದ್ದಿ; ಕೃಷ್ಣಂ ಪ್ರಣಯ ಸಖಿ ಚಿತ್ರದ ಮೊದಲ ಹಾಡು ಮೇ 25ರಂದು ಮೈಸೂರಿನಲ್ಲಿ ಬಿಡುಗಡೆ

ಗೋಲ್ಡನ್ ಸ್ಟಾರ್ ಗಣೇಶ್ ಅಭಿಮಾನಿಗಳಿಗೆ ಸಿಹಿಸುದ್ದಿ; ಕೃಷ್ಣಂ ಪ್ರಣಯ ಸಖಿ ಚಿತ್ರದ ಮೊದಲ ಹಾಡು ಮೇ 25ರಂದು ಮೈಸೂರಿನಲ್ಲಿ ಬಿಡುಗಡೆ

Krishnam Pranaya Sakhi Movie: ಗೋಲ್ಡನ್‌ ಸ್ಟಾರ್‌ ಗಣೇಶ್‌ ಅಭಿಮಾನಿಗಳಿಗೆ ಸಿಹಿಸುದ್ದಿಯೊಂದು ಕೃಷ್ಣಂ ಪ್ರಣಯ ಸಖಿ ಚಿತ್ರತಂಡದಿಂದ ಬಂದಿದೆ. ಈ ಸಿನಿಮಾದ ಮೊದಲ ಹಾಡು ಮೇ 25 ರಂದು ಸಾಂಸ್ಕೃತಿಕ ನಗರಿ ಮೈಸೂರಿನಲ್ಲಿ ಬಿಡುಗಡೆಯಾಗಲಿದೆ.

ಗಣೇಶ್ ಅಭಿನಯದ ಕೃಷ್ಣಂ ಪ್ರಣಯ ಸಖಿ ಚಿತ್ರದ ಮೊದಲ ಹಾಡು ಮೇ 25ರಂದು ಮೈಸೂರಿನಲ್ಲಿ ಬಿಡುಗಡೆ
ಗಣೇಶ್ ಅಭಿನಯದ ಕೃಷ್ಣಂ ಪ್ರಣಯ ಸಖಿ ಚಿತ್ರದ ಮೊದಲ ಹಾಡು ಮೇ 25ರಂದು ಮೈಸೂರಿನಲ್ಲಿ ಬಿಡುಗಡೆ

ಬೆಂಗಳೂರು: ಗೋಲ್ಡನ್‌ ಸ್ಟಾರ್‌ ಗಣೇಶ್‌ ಅಭಿನಯದ ಕೃಷ್ಣಂ ಪ್ರಣಯ ಸಖಿ ಸಿನಿಮಾದ ಮೊದಲ ಹಾಡು ಮೇ 25 ರಂದು ಸಾಂಸ್ಕೃತಿಕ ನಗರಿ ಮೈಸೂರಿನಲ್ಲಿ ಬಿಡುಗಡೆಯಾಗಲಿದೆ. ಖ್ಯಾತ ನಿರ್ದೇಶಕ ಶ್ರೀನಿವಾಸರಾಜು ಅವರ ನಿರ್ದೇಶನದಲ್ಲಿ ಗೋಲ್ಡನ್ ಸ್ಟಾರ್ ಗಣೇಶ್ ನಾಯಕರಾಗಿ ನಟಿಸಿರುವ "ಕೃಷ್ಣಂ ಪ್ರಣಯ ಸಖಿ" ಚಿತ್ರ ಆರಂಭದಿಂದಲೂ ಸಾಕಷ್ಟು ಸದ್ದು ಮಾಡುತ್ತಿದೆ. ಈ ಚಿತ್ರದ ಫಸ್ಟ್ ಲುಕ್ ಹಾಗೂ ಪೋಸ್ಟರ್ ಗಳು ಎಲ್ಲರ ಮೆಚ್ಚುಗೆ ಗಳಿಸಿದೆ. ಬಹು ನಿರೀಕ್ಷಿತ ಈ ಚಿತ್ರದ ಮೊದಲ ಹಾಡು ಮೇ 25 ರಂದು ಮೈಸೂರಿನಲ್ಲಿ ಬಿಡುಗಡೆಯಾಗಲಿದೆ.

ಟ್ರೆಂಡಿಂಗ್​ ಸುದ್ದಿ

ಅರ್ಜುನ್ ಜನ್ಯ ಅವರು ಸಂಗೀತ ನೀಡಿರುವ ಆರು ಸುಮಧುರ ಹಾಡುಗಳು "ಕೃಷ್ಣಂ ಪ್ರಣಯ ಸಖಿ" ಚಿತ್ರದಲ್ಲಿದೆ. ಆ ಪೈಕಿ ನಿಶಾನ್ ರಾಯ್ ಅವರು ಬರೆದು ಹೆಸರಾಂತ ಗಾಯಕ ಚಂದನ್ ಶೆಟ್ಟಿ ಹಾಡಿರುವ ಈ ಚಿತ್ರದ ಮೊದಲ ಹಾಡು ಸಾಂಸ್ಕೃತಿಕ ನಗರಿ ಮೈಸೂರಿನ "ಮಾಲ್ ಆಫ್ ಮೈಸೂರಿನಲ್ಲಿ" ಅದ್ದೂರಿಯಾಗಿ ಬಿಡುಗಡೆಯಾಗಲಿದೆ. ಮೈಸೂರಿನಲ್ಲಿ ಮೊದಲ ಹಾಡು ಬಿಡುಗಡೆ ಮಾಡುವುದರ ಮೂಲಕ ಚಿತ್ರದ ಪ್ರಚಾರ ಕಾರ್ಯಕ್ಕೆ ಚಾಲನೆ ಸಿಗಲಿದೆ.

ಕೌಟುಂಬಿಕ ಕಥಾಹಂದರ ಹೊಂದಿರುವ ಈ ಚಿತ್ರವನ್ನು ತ್ರಿಶೂಲ್ ಎಂಟರ್ಟೈನ್ಮೆಂಟ್ ಲಾಂಛನದಲ್ಲಿ ಪ್ರಶಾಂತ್ ಜಿ ರುದ್ರಪ್ಪ ಅವರು ನಿರ್ಮಿಸಿದ್ದಾರೆ. ಈಗಾಗಲೇ ಚಿತ್ರೀಕರಣ ಮುಕ್ತಾಯವಾಗಿದ್ದು, ಬೆಂಗಳೂರು, ವಿಯೆಟ್ನಾಂ ಮುಂತಾದ ಕಡೆ ಚಿತ್ರೀಕರಣ ನಡೆದಿದೆ.ಸದ್ಯದಲ್ಲೇ ಚಿತ್ರವನ್ನು ತೆರೆಗೆ ತರುವ ಸಿದ್ದತೆ ನಡೆಯುತ್ತಿದೆ‌.

ಬಹು ನಿರೀಕ್ಷಿತ "ಕೃಷ್ಣಂ ಪ್ರಣಯ ಸಖಿ" ಗೋಲ್ಡನ್ ಸ್ಟಾರ್ ಗಣೇಶ್ ಅಭಿನಯದ 41 ನೇ ಚಿತ್ರ. ಗಣೇಶ್ ಅವರಿಗೆ ನಾಯಕಿಯಾಗಿ ಮಾಳವಿಕ ನಾಯರ್ ನಟಿಸಿದ್ದಾರೆ. ಶರಣ್ಯ ಶೆಟ್ಟಿ, ಶ್ರೀನಿವಾಸಮೂರ್ತಿ, ಸಾಧುಕೋಕಿಲ, ರಂಗಾಯಣ ರಘು, ಶಶಿಕುಮಾರ್, ಶ್ರುತಿ, ಭಾವನ, ಅಶೋಕ್, ರಾಮಕೃಷ್ಣ, ಶಿವಧ್ವಜ್, ರಘುರಾಮ್, ಮಾನಸಿ ಸುಧೀರ್, ಅಂಬುಜ, ಗಿರಿ ಶಿವಣ್ಣ ಮುಂತಾದವರು ತಾರಾಬಳಗದಲ್ಲಿದ್ದಾರೆ.

ಕೃಷ್ಣಂ ಪ್ರಣಯ ಸಖಿ ಸಿನಿಮಾ ಯಾವಾಗ ಬಿಡುಗಡೆಯಾಗಲಿದೆ ಎಂಬ ಚಿತ್ರತಂಡ ಮಾಹಿತಿ ನೀಡಿಲ್ಲ. ಸದ್ಯ ಮೊದಲ ಹಾಡು ಬಿಡುಗಡೆಯಾಗುತ್ತಿದ್ದು, ಶೀಘ್ರದಲ್ಲಿ ಚಿತ್ರಮಂದಿರಕ್ಕೆ ಕೃಷ್ಣಂ ಪ್ರಣಯ ಸಖಿ ಸಿನಿಮಾ ಆಗಮಿಸುವ ಸೂಚನೆಯಿದೆ. ಈ ಸಿನಿಮಾವನ್ನು ಬೆಂಗಳೂರು, ಇಟಲಿ, ಮಾಲ್ಟದಲ್ಲಿ ಶೂಟಿಂಗ್‌ ಮಾಡಲಾಗಿದೆ. ಈ ಚಿತ್ರದಲ್ಲಿ ಕೌಟುಂಬಿಕ ಕಥಾಹಂದರವಿದೆ ಎಂದು ಚಿತ್ರತಂಡ ಮಾಹಿತಿ ನೀಡಿದೆ.

ಗಣೇಶ್‌ ಅಭಿನಯದ ಸಿನಿಮಾಗಳು

ಗೋಲ್ಡನ್‌ ಸ್ಟಾರ್‌ ಗಣೇಶ್‌ ಮುಂಗಾರು ಮಳೆ ಸಿನಿಮಾದ ಮೂಲಕ ಸ್ಯಾಂಡಲ್‌ವುಡ್‌ನಲ್ಲಿ ಜನಪ್ರಿಯತೆ ಪಡೆದರು. 2006ರಲ್ಲಿ ಬಿಡುಗಡೆಯಾದ ಈ ಸಿನಿಮಾದ ನಟನೆಗೆ ಗಣೇಶ್‌ಗೆ 54ನೇ ಫಿಲ್ಮ್‌ಫೇರ್‌ ಅವಾರ್ಡ್‌ ಸೌತ್‌ನಲ್ಲಿ ಅತ್ಯುತ್ತಮ ನಟ ಪ್ರಶಸ್ತಿ ದೊರಕಿತ್ತು. ಇದಾದ ಬಳಿಕ ಚೆಲುವಿನ ಚಿತ್ತಾರ ಸಿನಿಮಾದಲ್ಲಿ ನಟಿಸಿದರು. ಗಾಳಿಪಟ ಸಿನಿಮಾವೂ ಚಿತ್ರಮಂದಿರಗಳಲ್ಲಿ ಯಶಸ್ವಿ ಪ್ರದರ್ಶನ ಕಂಡಿತು. ಮಳೆಯಲಿ ಜೊತೆಯಲಿ, ಶ್ರಾವಣಿ ಸುಬ್ರಹ್ಮಣ್ಯ, ಮುಗುಳು ನಗೆ, ಚಮಕ್‌, ಆರೇಂಜ್‌, ಸಖತ್‌ ಮುಂತಾದ ಸಿನಿಮಾಗಳಲ್ಲಿ ಗೋಲ್ಡನ್‌ ಸ್ಟಾರ್‌ ಗಣೇಶ್‌ ನಟಿಸಿದ್ದಾರೆ.

ಟಿ20 ವರ್ಲ್ಡ್‌ಕಪ್ 2024