ಕನ್ನಡ ಸುದ್ದಿ  /  ಮನರಂಜನೆ  /  Ramarasa Movie: ರಾಮನವಮಿ ನಿಮಿತ್ತ ‘ರಾಮರಸ’ ಹಂಚಿದ ‘ಜಟ್ಟ’ ಗಿರಿರಾಜ್‌; ಗುರು ದೇಶಪಾಂಡೆ ಚಿತ್ರಕ್ಕೆ ಧ್ರುವ ಸರ್ಜಾ ಸಾಥ್

Ramarasa Movie: ರಾಮನವಮಿ ನಿಮಿತ್ತ ‘ರಾಮರಸ’ ಹಂಚಿದ ‘ಜಟ್ಟ’ ಗಿರಿರಾಜ್‌; ಗುರು ದೇಶಪಾಂಡೆ ಚಿತ್ರಕ್ಕೆ ಧ್ರುವ ಸರ್ಜಾ ಸಾಥ್

ಕನ್ನಡದಲ್ಲಿ ಜಟ್ಟ, ಮೈತ್ರಿ ಚಿತ್ರಗಳನ್ನು ನಿರ್ದೇಶಿಸಿದ್ದ ನಿರ್ದೇಶಕ ಬಿ.ಎಂ ಗಿರಿರಾಜ್ ಈಗ ಹೊಸ ಸಿನಿಮಾ ಮೂಲಕ ಆಗಮಿಸಿದ್ದಾರೆ. ಚಿತ್ರಕ್ಕೆ ರಾಮರಸ ಎಂದು ಶೀರ್ಷಿಕೆ ಇಡಲಾಗಿದ್ದು, ಇತ್ತೀಚೆಗಷ್ಟೇ ಈ ಚಿತ್ರದ ಶೀರ್ಷಿಕೆ ಪೋಸ್ಟರ್‌ಅನ್ನು ಆಕ್ಷನ್ ಪ್ರಿನ್ಸ್ ಧ್ರುವ ಸರ್ಜಾ ಬಿಡುಗಡೆ ಮಾಡಿ ತಂಡಕ್ಕೆ ಶುಭಕೋರಿದ್ದಾರೆ.

Ramarasa Movie: ರಾಮನವಮಿ ಮಾರನೇ ದಿನ ರಾಮರಸ ಹಂಚಿದ ಜಟ್ಟ ಗಿರಿರಾಜ್‌; ಗುರು ದೇಶಪಾಂಡೆ ಚಿತ್ರಕ್ಕೆ ಧ್ರುವ ಸರ್ಜಾ ಸಾಥ್
Ramarasa Movie: ರಾಮನವಮಿ ಮಾರನೇ ದಿನ ರಾಮರಸ ಹಂಚಿದ ಜಟ್ಟ ಗಿರಿರಾಜ್‌; ಗುರು ದೇಶಪಾಂಡೆ ಚಿತ್ರಕ್ಕೆ ಧ್ರುವ ಸರ್ಜಾ ಸಾಥ್

Ramarasa Poster: ಸ್ಯಾಂಡಲ್‌ವುಡ್‌ನಲ್ಲಿ ಜಟ್ಟ, ಮೈತ್ರಿಯಂಥ ಒಂದಷ್ಟು ಪ್ರಯೋಗಾತ್ಮಕ  ಚಿತ್ರಗಳನ್ನು ನೀಡಿದ್ದ ನಿರ್ದೇಶಕ ಬಿ.ಎಂ ಗಿರಿರಾಜ್ ಈಗ ಹೊಸ ಸಿನಿಮಾ ಮೂಲಕ ಆಗಮಿಸಿದ್ದಾರೆ. ಚಿತ್ರಕ್ಕೆ ರಾಮರಸ ಎಂದು ಶೀರ್ಷಿಕೆ ಇಡಲಾಗಿದ್ದು, ಇತ್ತೀಚೆಗಷ್ಟೇ ಈ ಚಿತ್ರದ ಶೀರ್ಷಿಕೆ ಪೋಸ್ಟರ್‌ಅನ್ನು ಆಕ್ಷನ್ ಪ್ರಿನ್ಸ್ ಧ್ರುವ ಸರ್ಜಾ ಬಿಡುಗಡೆ ಮಾಡಿ ತಂಡಕ್ಕೆ ಶುಭಕೋರಿದ್ದಾರೆ. ಜಿ ಸಿನಿಮಾಸ್‌ ಬ್ಯಾನರ್‌ನಲ್ಲಿ ಗುರು ದೇಶಪಾಂಡೆ ಈ ಸಿನಿಮಾ ನಿರ್ಮಾಣ ಮಾಡುತ್ತಿದ್ದಾರೆ.

ಟ್ರೆಂಡಿಂಗ್​ ಸುದ್ದಿ

ಧ್ರುವ ಸರ್ಜಾ ಸಾಥ್‌

ಪೋಸ್ಟರ್‌ ರಿಲೀಸ್‌ ಮಾಡಿ ಮಾತನಾಡಿದ ಧ್ರುವ ಸರ್ಜಾ, ಶ್ರೀರಾಮನವಮಿಯ ದಿನದಂದೇ ರಾಮರಸ ಚಿತ್ರದ ಶೀರ್ಷಿಕೆ ಬಿಡುಗಡೆ ಸಮಾರಂಭ ನಡೆಯಬೇಕಿತ್ತು. ಆದರೆ ಕಾರಣಾಂತರದಿಂದ ಮಾರನೇ ದಿನ ಬಿಡುಗಡೆಯಾಗುತ್ತಿದೆ. ರಾಮರಸ ಟೈಟಲ್ ಚೆನ್ನಾಗಿದೆ. ಮೋಷನ್ ಪೋಸ್ಟರ್ ಕೂಡ ಅದ್ಭುತವಾಗಿದೆ. ಗುರು ದೇಶಪಾಂಡೆ ಅವರು ನಮ್ಮ ಅಣ್ಣನ ಎರಡು ಚಿತ್ರಗಳನ್ನು ನಿರ್ದೇಶಿಸಿದ್ದಾರೆ. ಈ ಚಿತ್ರದಲ್ಲಿ ಸಾಕಷ್ಟು ನೂತನ ಪ್ರತಿಭೆಗಳಿಗೆ ಅವಕಾಶ ನೀಡುತ್ತಿದ್ದಾರೆ‌. ನನ್ನ ಸ್ನೇಹಿತ ಕೂಡ ಈ ಚಿತ್ರದಲ್ಲಿ ನಟಸುತ್ತಿದ್ದಾನೆ. ಚಿತ್ರ ಭರ್ಜರಿ ಯಶಸ್ಸು ಕಾಣಲಿ ಎಂದು ಧ್ರುವ ಸರ್ಜಾ ಹಾರೈಸಿದರು.

ಹಾರರ್‌ ಕಾಮಿಡಿ ಶೈಲಿಯ ಸಿನಿಮಾ

ರಾಮರಸ, ಹಾರರ್ ಕಾಮಿಡಿ ಜಾನರ್‌ನ ಚಿತ್ರ. ಜಿ ಅಕಾಡೆಮಿಯ ಹದಿನಾರು ಜನ ಹೊಸ ಪ್ರತಿಭೆಗಳಿಗೆ ತರಬೇತಿ ನೀಡಿ ಈ ಚಿತ್ರದಲ್ಲಿ ನಟಿಸಲು ಅವಕಾಶ ನೀಡಲಾಗಿದೆ. ಗುರು ದೇಶಪಾಂಡೆ ಅವರು ಈ ಹಿಂದೆ ಸಾಂಗ್ ರೆಕಾರ್ಡಿಂಗ್ ಮಾಡುವ ಮೂಲಕ ಚಿತ್ರಕ್ಕೆ ಚಾಲನೆ ನೀಡಿದ್ದರು. ಇಂದು ಧ್ರುವ ಸರ್ಜಾ ಅವರಿಂದ ಶೀರ್ಷಿಕೆ ಅನಾವರಣ ಮಾಡಿಸಿದ್ದಾರೆ. ಇತ್ತೀಚಿನ ದಿನಗಳಲ್ಲಿ ಸಾಂಗ್ ರೆಕಾರ್ಡಿಂಗ್ ಪೂಜೆ ಮಾಡುವುದು ವಿರಳ. ಹಳೆಯ ಸಂಪ್ರದಾಯಗಳನ್ನು ಪುನಃ ಗುರು ದೇಶಪಾಂಡೆ ಅವರು ಚಿತ್ರರಂಗಕ್ಕೆ ತರುತ್ತಿದ್ದಾರೆ ಎಂದು ನಿರ್ದೇಶಕ ಬಿ.ಎಂ.ಗಿರಿರಾಜ್ ತಿಳಿಸಿದರು.

16 ಹೊಸ ಪ್ರತಿಭೆಗಳಿಗೆ ಅವಕಾಶ

2008 ರಲ್ಲಿ ಮೊದಲ ನಿರ್ದೇಶನದೊಂದಿಗೆ ನಿರ್ದೇಶಕನಾಗಿ ಚಿತ್ರರಂಗ ಪ್ರವೇಶಿಸಿದೆ. ಅಂದಿನಿಂದ ನನ್ನ ಹೆಚ್ಚು ಚಿತ್ರಗಳಲ್ಲಿ‌ ಹೊಸ ಕಲಾವಿದರಿಗೆ ಅವಕಾಶ ಕೊಡುತ್ತಾ ಬಂದಿದ್ದೇನೆ. ಇದು ನಮ್ಮ‌ ಜಿ ಸಿನಿಮಾಸ್ ಲಾಂಛನದಲ್ಲಿ ನಾನು ನಿರ್ಮಾಣ ಮಾಡುತ್ತಿರುವ ನಾಲ್ಕನೇ ಸಿನಿಮಾ.‌ ಈ ಚಿತ್ರದಲ್ಲೂ ಜಿ ಅಕಾಡೆಮಿಯ ಹದಿನಾರು ಜನ ನೂತನ ಪ್ರತಿಭೆಗಳು ಅಭಿನಯಿಸುತ್ತಿದ್ದಾರೆ. ಅವರಿಗೆ ಅಭಿನಯಕ್ಕೆ ಬೇಕಾದ ವರ್ಕ್ ಶಾಪ್ ನಡೆಸಲಾಗಿದೆ. ಇವರೊಂದಿಗೆ ಕನ್ನಡದ ಖ್ಯಾತ ನಟರೊಬ್ಬರು ನಟಿಸುತ್ತಿದ್ದು, ಮಾತುಕತೆ ಅಂತಿಮ ಹಂತದಲ್ಲಿದೆ ಎಂದರು ಗುರು ದೇಶಪಾಂಡೆ.

ಮುಂದುವರಿದು ಮಾತನಾಡಿದ ಅವರು, ಮೇ ಎರಡನೇ ವಾರದಿಂದ ಚಿತ್ರೀಕರಣ ಆರಂಭವಾಗಲಿದೆ. ರಾಜ್ಯ ಪ್ರಶಸ್ತಿ ಪುರಸ್ಕೃತ ನಿರ್ದೇಶಕ ಬಿ.ಎಂ.ಗಿರಿರಾಜ್ ಈ ಚಿತ್ರವನ್ನು ನಿರ್ದೇಶಿಸುತ್ತಿದ್ದಾರೆ. ಅವರ ಹಿಂದಿನ ಚಿತ್ರಗಳು ನನಗೆ ಬಹಳ ಇಷ್ಟವಾಗಿದ್ದವು. ಕನ್ನಡದಲ್ಲಷ್ಟೇ ಕಮರ್ಷಿಯಲ್, ಆರ್ಟ್ ಅಂತ ವಿಭಾಗಗಳಿದೆ. ಆದರೆ ಬೇರೆ ಭಾಷೆಗಳಲ್ಲಿ ಆ ಚಿತ್ರ ಪ್ರಶಸ್ತಿ ಪಡೆದುಕೊಂಡಿರುತ್ತದೆ ಹಾಗೂ ಗಳಿಕೆಯಲ್ಲೂ ಮುಂದಿರುತ್ತದೆ. ಈ ಚಿತ್ರ ಕೂಡ ಅಂತಹ ಚಿತ್ರವಾಗಬೇಕೆಂದು ನನ್ನ ಆಸೆ ಎಂದರು.

ಜಿ ಅಕಾಡೆಮಿಯಲ್ಲಿ ಅಭಿನಯ ಕಲಿತಿರುವ ಹದಿನಾರು ನೂತನ ಪ್ರತಿಭೆಗಳು ಹಾಗೂ ಸಹ ನಿರ್ದೇಶಕರಾಗಿ ಕಾರ್ಯ ನಿರ್ವಹಿಸಿಲಿರುವ ಮೂವರು ನವ ಸಹ ನಿರ್ದೇಶಕರು ಹಾಗೂ ನೂತನ ಸಹ ನಿರ್ಮಾಪಕರೊಬ್ಬರು ತಮ್ಮ ಪರಿಚಯ ಮಾಡಿಕೊಂಡರು. ಬಿ.ಜೆ.ಭರತ್ ಈಗಾಗಲೇ ರಾಮರಸದ ಎರಡು ಹಾಡುಗಳಿಗೆ ಸಂಗೀತ ಸಂಯೋಜನೆ ಮಾಡಿದ್ದಾರೆ. ಪುನೀತ್ ಆರ್ಯ ಹಾಡುಗಳನ್ನು ಬರೆದಿದ್ದಾರೆ. ಸುನೀಲ್ ಹೆಚ್ ಸಿ ಗೌಡ ಕಾರ್ಯಕಾರಿ ನಿರ್ಮಾಪಕರಾಗಿ ಕಾರ್ಯ‌ ನಿರ್ವಹಿಸುತ್ತಿದ್ದಾರೆ‌.

 

IPL_Entry_Point