ಮಲಯಾಳಂನ ARM ಚಿತ್ರವನ್ನು ಕರ್ನಾಟಕದಲ್ಲಿ ಬಿಡುಗಡೆ ಮಾಡುವ ಜವಾಬ್ದಾರಿ ಹೊತ್ತ ಹೊಂಬಾಳೆ ಫಿಲಂಸ್‌-sandalwood news hombale films to distribute tovino thomas starrer malayalam film arm in karnataka mnk ,ಮನರಂಜನೆ ಸುದ್ದಿ
ಕನ್ನಡ ಸುದ್ದಿ  /  ಮನರಂಜನೆ  /  ಮಲಯಾಳಂನ Arm ಚಿತ್ರವನ್ನು ಕರ್ನಾಟಕದಲ್ಲಿ ಬಿಡುಗಡೆ ಮಾಡುವ ಜವಾಬ್ದಾರಿ ಹೊತ್ತ ಹೊಂಬಾಳೆ ಫಿಲಂಸ್‌

ಮಲಯಾಳಂನ ARM ಚಿತ್ರವನ್ನು ಕರ್ನಾಟಕದಲ್ಲಿ ಬಿಡುಗಡೆ ಮಾಡುವ ಜವಾಬ್ದಾರಿ ಹೊತ್ತ ಹೊಂಬಾಳೆ ಫಿಲಂಸ್‌

ಪ್ಯಾನ್‌ ಇಂಡಿಯಾ ಮಟ್ಟದಲ್ಲಿ ತೆರೆಗೆ ಬರಲು ಸಜ್ಜಾಗಿರುವ ಮಲಯಾಳಂನ ಎಆರ್‌ಎಂ ಚಿತ್ರಕ್ಕೀಗ ಹೊಂಬಾಳೆ ಫಿಲಂಸ್‌ ಸಾಥ್‌ ನೀಡಿದೆ. ಕರ್ನಾಟಕದಲ್ಲಿ ಈ ಚಿತ್ರವನ್ನು ವಿತರಣೆ ಮಾಡಲಿದೆ. ಸೆ. 12ರಂದು ಟೊವಿನೋ ಥಾಮಸ್‌ ಅವರ ಎಆರ್‌ಎಂ ಸಿನಿಮಾ ಪ್ಯಾನ್‌ ಇಂಡಿಯಾ ಮಟ್ಟದಲ್ಲಿ ಬಿಡುಗಡೆ ಆಗಲಿದೆ.

ಮಲಯಾಳಂ ಎಆರ್‌ಎಂ ಸಿನಿಮಾವನ್ನು ಕರ್ನಾಟಕದಲ್ಲಿ ವಿತರಣೆ ಮಾಡಲಿದೆ ಹೊಂಬಾಳೆ ಫಿಲಂಸ್‌
ಮಲಯಾಳಂ ಎಆರ್‌ಎಂ ಸಿನಿಮಾವನ್ನು ಕರ್ನಾಟಕದಲ್ಲಿ ವಿತರಣೆ ಮಾಡಲಿದೆ ಹೊಂಬಾಳೆ ಫಿಲಂಸ್‌

Malayalam film ARM: ಮಲಯಾಳಂನ ಖ್ಯಾತ ನಟ ಟೊವಿನೋ ಥಾಮಸ್‌ ನಾಯಕನಾಗಿ ನಟಿಸಿರುವ ARM ಸಿನಿಮಾ ಇದೀಗ ಬಿಡುಗಡೆಯ ಸನಿಹ ಬಂದಿದೆ. ಇದೇ ಸೆಪ್ಟೆಂಬರ್‌ 12ರಂದು ಈ ಸಿನಿಮಾ ತೆರೆಗೆ ಬರಲಿದೆ. ಇತ್ತೀಚೆಗಷ್ಟೇ ಈ ಸಿನಿಮಾ ಬಗ್ಗೆ ಮಾತನಾಡಲು ಇಡೀ ತಂಡ ಬೆಂಗಳೂರಿಗೆ ಆಗಮಿಸಿತ್ತು. ಮೂಲ ಮಲಯಾಳಂನಲ್ಲಿ ನಿರ್ಮಾಣವಾದ ಈ ಸಿನಿಮಾ ಇದೀಗ ಪ್ಯಾನ್‌ ಇಂಡಿಯಾ ಮಟ್ಟದಲ್ಲಿ ತೆರೆಗೆ ಬರಲು ರೆಡಿಯಾಗಿದೆ. ಇದೀಗ ಇದೇ ಚಿತ್ರವನ್ನು ಕನ್ನಡದಲ್ಲಿ ಬಿಡುಗಡೆ ಮಾಡಲಿದೆ ಹೊಂಬಾಳೆ ಫಿಲಂಸ್‌ ಸಂಸ್ಥೆ.

ಮ್ಯಾಜಿಕ್ ಫ್ರೇಮ್ಸ್, ಲಿಸ್ಟಿನ್ ಸ್ಟೀಫನ್ ಮತ್ತು ಯುಜಿಎಮ್‌ ಮೂವೀಸ್ ಬ್ಯಾನರ್‌ನಲ್ಲಿ ಡಾ. ಜಕರಿಯಾ ಥಾಮಸ್ ಎಆರ್‌ಎಂ ಸಿನಿಮಾವನ್ನು ನಿರ್ಮಿಸಿದ್ದಾರೆ. ಟ್ರೇಲರ್‌ ಮೂಲಕ ನಿರೀಕ್ಷೆ ಮಟ್ಟ ಹೆಚ್ಚಿಸಿರುವ ಎಆರ್‌ಎಂ ಸಿನಿಮಾ, ಇದೀಗ 3D ಮೂಲಕ ಚಿತ್ರಮಂದಿರದತ್ತ ಆಗಮಿಸುತ್ತಿದೆ. ನಟ ಟೊವಿನೋ ಥಾಮಸ್‌ ಎರಡ್ಮೂರು ಶೇಡ್‌ಗಳಲ್ಲಿ ಕಾಣಿಸಿಕೊಂಡಿದ್ದಾರೆ. ಮೈಚಳಿ ಬಿಡಿಸೋ ಸಾಹಸವನ್ನೂ ಮೆರೆದಿದ್ದಾರೆ. ಕಳರಿಪಯಟ್ಟು ಕಲೆಯಲ್ಲಿಯೂ ಗಮನ ಸೆಳೆದಿದ್ದಾರೆ. ಮೂವರು ನಾಯಕಿಯರಿರುವ ಈ ಚಿತ್ರದಲ್ಲಿ ಕನ್ನಡದ ಪ್ರಮೋದ್‌ ಶೆಟ್ಟಿ ಸಹ ಪೊಲೀಸ್‌ ಅಧಿಕಾರಿಯಾಗಿ ನಟಿಸಿದ್ದಾರೆ.

ಎಎಂಆರ್‌ ಚಿತ್ರದಲ್ಲಿ ಮೂವರು ನಟಿಯರು

ತಮಿಳು, ತೆಲುಗು ಮತ್ತು ಮಲಯಾಳಂ ಚಿತ್ರರಂಗದಲ್ಲಿ ಮೋಡಿ ಮಾಡಿರುವ ನಟಿಯರಾದ ಕೃತಿ ಶೆಟ್ಟಿ, ಐಶ್ವರ್ಯ ರಾಜೇಶ್ ಮತ್ತು ಸುರಭಿ ಲಕ್ಷ್ಮಿ ಎಆರ್‌ಎಂ ಸಿನಿಮಾದಲ್ಲಿದ್ದಾರೆ. ಇನ್ನುಳಿದಂತೆ ಬೇಸಿಲ್ ಜೋಸೆಫ್, ಜಗದೀಶ್, ಹರೀಶ್ ಉತ್ತಮನ್, ಹರೀಶ್ ಪೆರಾಡಿ, ಕಬೀರ್ ಸಿಂಗ್ ಮತ್ತು ರೋಹಿಣಿ ಚಿತ್ರದಲ್ಲಿದ್ದಾರೆ.

ಎಆರ್‌ಎಂ ಒಟ್ಟು ಐದು ಭಾಷೆಗಳಲ್ಲಿ ಬಿಡುಗಡೆಯಾಗುತ್ತಿರುವ ಪ್ಯಾನ್ ಇಂಡಿಯನ್ ಸಿನಿಮಾ. ಮಲಯಾಳಂ ಚಿತ್ರರಂಗದಿಂದ ಬಾಲಿವುಡ್‌ನಲ್ಲೂ ಛಾಪು ಮೂಡಿಸಿರುವ ಜೋಮನ್ ಟಿ. ಜಾನ್ ಅವರ ಛಾಯಾಗ್ರಹಣ ಮತ್ತು ಶಮೀರ್ ಮುಹಮ್ಮದ್ ಅವರ ಸಂಕಲನ ಎಆರ್‌ಎಂ ಚಿತ್ರಕ್ಕಿದೆ. ದಿಬು ನೈನನ್ ಥಾಮಸ್ ಈ ಚಿತ್ರಕ್ಕೆ ಸಂಗೀತ ಸಂಯೋಜಿಸಿದ್ದಾರೆ. ಈ ಹಿಂದೆ ಕನಾ ಮತ್ತು ನಟ ಸಿದ್ಧಾರ್ಥ್‌ ಅವರ ಚಿತ್ತಾ ಸಿನಿಮಾಗಳಿಗೂ ಸಂಗೀತ ನೀಡಿದ್ದರು.

ಸೆಪ್ಟೆಂಬರ್‌ 12ರಂದು ತೆರೆಗೆ

ಸುಜಿತ್ ನಂಬಿಯಾರ್ ಎಆರ್‌ಎಂ ಚಿತ್ರಕ್ಕೆ ಕಥೆ ಬರೆದಿದ್ದಾರೆ. ಅವರ ಜತೆಗೆ ದೀಪು ಪ್ರದೀಪ್ ಸಾಥ್‌ ನೀಡಿದ್ದಾರೆ. ವಿಕ್ರಮ್ ಮೂರ್, ಫೀನಿಕ್ಸ್ ಪ್ರಭು ಚಿತ್ರಕ್ಕೆ ಸಾಹಸ ನಿರ್ದೇಶನ ಮಾಡಿದ್ದಾರೆ. ಅಂದಹಾಗೆ ಈ ಚಿತ್ರವೂ ಸೆಪ್ಟೆಂಬರ್ 12 ರಂದು ಬಿಡುಗಡೆಯಾಗಲು ಸಿದ್ಧವಾಗಿದೆ. ಕನ್ನಡದಲ್ಲಿ ಹೊಂಬಾಳೆ ಫಿಲಂಸ್‌, ತೆಲುಗಿನಲ್ಲಿ ಮೈತ್ರಿ ಮೂವಿ ಮೇಕರ್ಸ್‌ ಮತ್ತು ಹಿಂದಿಯಲ್ಲಿ ಅನಿಲ್ ಥಡಾನಿ ಚಿತ್ರವನ್ನು ವಿತರಣೆ ಮಾಡುತ್ತಿದ್ದಾರೆ.