ಕನ್ನಡ ಸುದ್ದಿ  /  ಮನರಂಜನೆ  /  ‘ಒಬ್ಬ ವ್ಯಕ್ತಿ ಮಾಡಿದ ತಪ್ಪಿಗೆ ಇಡೀ ಕೋಮಿನ ಮೇಲೆ ಅಪರಾಧ ಹೊರಿಸುವುದೆಷ್ಟು ಸರಿ?’ ನಟ ಕಿಶೋರ್‌

‘ಒಬ್ಬ ವ್ಯಕ್ತಿ ಮಾಡಿದ ತಪ್ಪಿಗೆ ಇಡೀ ಕೋಮಿನ ಮೇಲೆ ಅಪರಾಧ ಹೊರಿಸುವುದೆಷ್ಟು ಸರಿ?’ ನಟ ಕಿಶೋರ್‌

ನೇಹಾ ಹಿರೇಮಠ ಹತ್ಯೆ ಖಂಡಿಸಿ ಸಾಮಾಜಿಕ ಜಾಲತಾಣದಲ್ಲಿ ವ್ಯಾಪಕ ವಿರೋಧ ವ್ಯಕ್ತವಾಗುತ್ತಿದೆ. ಸಿನಿಮಾ ಮಂದಿಯೂ ಈ ಬಗ್ಗೆ ಮೌನ ಮುರಿಯುತ್ತಿದ್ದಾರೆ. ಕೊಲೆಗಾರನಿಗೆ ಅತ್ಯುಗ್ರ ಶಿಕ್ಷೆಗೆ ಆಗ್ರಹಿಸುತ್ತಿದ್ದಾರೆ. ಇದೆಲ್ಲದರ ನಡುವೆ ಬಹುಭಾಷಾ ನಟ ಕಿಶೋರ್‌ ಸಹ ತಮ್ಮ ಅಭಿಪ್ರಾಯವನ್ನು ಹಂಚಿಕೊಂಡಿದ್ದಾರೆ.

‘ಒಬ್ಬ ವ್ಯಕ್ತಿ ಮಾಡಿದ ತಪ್ಪಿಗೆ ಇಡೀ ಕೋಮಿನ ಮೇಲೆ ಅಪರಾಧ ಹೊರಿಸುವುದೆಷ್ಟು ಸರಿ?’ ನಟ ಕಿಶೋರ್‌
‘ಒಬ್ಬ ವ್ಯಕ್ತಿ ಮಾಡಿದ ತಪ್ಪಿಗೆ ಇಡೀ ಕೋಮಿನ ಮೇಲೆ ಅಪರಾಧ ಹೊರಿಸುವುದೆಷ್ಟು ಸರಿ?’ ನಟ ಕಿಶೋರ್‌

Neha Hiremath Murder Case: ಹುಬ್ಬಳ್ಳಿಯ ಬಿವಿಬಿ ಕಾಲೇಜಿನಲ್ಲಿ ಹಾಡಹಗಲೇ ನಡೆದ ಯುವತಿ ಹತ್ಯೆ ಪ್ರಕರಣ ಇಡೀ ರಾಜ್ಯವನ್ನೇ ಬೆಚ್ಚಿ ಬೀಳಿಸಿದೆ. ಹಂತಕ ಫಯಾಜ್‌ಗೆ ಉಗ್ರ ಶಿಕ್ಷೆಯಾಗಬೇಕು ಎಂದು ಎಲ್ಲರೂ ಆಗ್ರಹಿಸುತ್ತಿದ್ದಾರೆ. ಹುಬ್ಬಳ್ಳಿಯಲ್ಲಿ ಅನೇಕ ಸಂಘಟನೆಗಳು ಪ್ರತಿಭಟನೆಗೂ ಇಳಿದಿವೆ. ಸಾಮಾಜಿಕ ಜಾಲತಾಣದಲ್ಲೂ ವ್ಯಾಪಕ ವಿರೋಧ ವ್ಯಕ್ತವಾಗುತ್ತಿದೆ. ಸಿನಿಮಾ ಮಂದಿಯೂ ಈ ಬಗ್ಗೆ ಮೌನ ಮುರಿಯುತ್ತಿದ್ದಾರೆ. ಕೊಲೆಗಾರನಿಗೆ ಅತ್ಯುಗ್ರ ಶಿಕ್ಷೆಗೆ ಆಗ್ರಹಿಸುತ್ತಿದ್ದಾರೆ. ಇದೆಲ್ಲದರ ನಡುವೆ ಬಹುಭಾಷಾ ನಟ ಕಿಶೋರ್‌ ಸಹ ತಮ್ಮ ಅಭಿಪ್ರಾಯವನ್ನು ಹಂಚಿಕೊಂಡಿದ್ದಾರೆ.

ಬಿವಿಬಿ ಕಾಲೇಜಿನಲ್ಲಿ ನೇಹಾ ಹಿರೇಮಠ ಮೊದಲ ವರ್ಷದ ಎಂಸಿಎ ಓದುತ್ತಿದ್ದರೆ, ಅದೇ ಕಾಲೇಜಿನಲ್ಲಿ ಫಯಾಜ್ ಎರಡನೇ ವರ್ಷದ ವಿದ್ಯಾರ್ಥಿ. ಪ್ರೀತಿ ನಿರಾಕರಣೆ ಮಾಡಿದಳೆಂಬ ಕಾರಣಕ್ಕೆ ಕಾಲೇಜು ಕ್ಯಾಂಪಸ್‌ನಲ್ಲಿಯೇ ಚಾಕುವಿನಿಂದ ಇರಿದು ಹತ್ಯೆ ಮಾಡಿದ್ದ ಎಂಬ ಆರೋಪವಿದೆ. ಹತ್ಯೆಯ ವಿಡಿಯೋ ಸೋಷಿಯಲ್‌ ಮೀಡಿಯಾದಲ್ಲೂ ವೈರಲ್‌ ಆಗಿತ್ತು. ಈ ಹತ್ಯೆ ನಡೆದ ಕೆಲವೇ ಗಂಟೆಗಳಲ್ಲಿ ಆರೋಪಿ ಫಯಾಜ್‌ನನ್ನು ಬಂಧಿಸಿದ್ದಾರೆ ಪೊಲೀಸರು.

ಚಂದನವನದ ತಾರೆಯರೂ ಈ ಸಾವಿಗೆ ಮರುಕ ವ್ಯಕ್ತಪಡಿಸಿ ಸೋಷಿಯಲ್‌ ಮೀಡಿಯಾದಲ್ಲಿ ಪೋಸ್ಟ್‌ ಹಂಚಿಕೊಂಡಿದ್ದಾರೆ. ಇದೀಗ ಇದೇ ವಿಚಾರವಾಗಿ ಬಹುಭಾಷಾ ನಟ ಕಿಶೋರ್‌ ಸಹ ತಮ್ಮ ಅನಿಸಿಕೆಯನ್ನು ಇನ್‌ಸ್ಟಾಗ್ರಾಂ ಪುಟದಲ್ಲಿ ಪೋಸ್ಟ್‌ ಮಾಡಿದ್ದಾರೆ. ಒಬ್ಬ ವ್ಯಕ್ತಿಯ ತಪ್ಪಿಗೆ ಇಡೀ ಕೋಮಿನ ಮೇಲೆ ಅಪರಾಧ ಹೊರಿಸುವುದು ಎಷ್ಟು ಸರಿ?? ಎಂದು ತಮ್ಮ ಅಭಿಪ್ರಾಯವನ್ನು ಹೇಳಿಕೊಂಡಿದ್ದಾರೆ. ಹೀಗಿದೆ ಕಿಶೋರ್‌ ಅವರ ಮಾತು.

ಕಿಶೋರ್‌ ಏನಂದ್ರು?

"ಬಾಳಿ ಬದುಕಬೇಕಾದ ಜೀವ ನೇಹಾಗೆ ನಡೆದದ್ದು ನಿಜಕ್ಕೂ ಅಕ್ಷಮ್ಯ ಅಪರಾಧ. ಒಂದು ನಾಗರೀಕ ಸಮಾಜವಾಗಿ ಇದು ನಮ್ಮೆಲ್ಲರ ಸೋಲು. ಈಗಾಗಲೇ ಸಾಕ್ಷಿ ಸಮೇತ ಬಂಧಿತವಾಗಿರುವ ಅಪರಾಧಿಗೆ ಮತ್ಯಾರೂ ಈ ಥರದ ಕೃತ್ಯವೆಸಗದಂತೆ ತನಿಖೆ ಮತ್ತು ಅತಿ ಕಠಿಣ ಶಿಕ್ಷೆ ಆಗಬೇಕು. ಮಹಿಳೆಯರ ವಿರುದ್ಧ ದಿನೇದಿನೆ ಹೆಚ್ಚುತ್ತಿರುವ ಅಪರಾಧಗಳು, ಅದರ ಮೂಲ ಕಾರಣಗಳನ್ನು ನಿಯಂತ್ರಿಸಲು ಜಾಗೃತಿ ಹೆಚ್ಚಾಗಬೇಕು. ನಾವು ಮತ್ತು ಸರ್ಕಾರಗಳು ಸಾಧ್ಯ ಕ್ರಮಗಳೆಲ್ಲವನ್ನೂ ಕೈಗೊಳ್ಳಬೇಕು."

ಜಾತಿ ಬಣ್ಣ ಬಳಿಯುವುದೇಕೆ?

"ದುರಂತವೆಂದರೆ ಯಾವುದೇ ಶಿಕ್ಷೆ ನೇಹಾಳನ್ನು ತಿರುಗಿ ತರಲಾಗದು. ಆದರೆ ನಮ್ಮ ಕೈಲಿ ಸಾಧ್ಯವಾದದ್ದು ಮತ್ಯಾರೂ ನೇಹಾಳಂತೆ ಬಲಿಯಾಗದಿರುವಂಥ ಆರೋಗ್ಯವಂತ ಸಮಾಜ ನಿರ್ಮಾಣ ಮಾಡುವುದು. ಆದರೆ ಈ ನೋವಿನ ಕ್ಷಣದಲ್ಲೂ ಅದರಲ್ಲಿ ಹಿಂದೂ ಮುಸ್ಲಿಂ ಮಾಡುವುದು ಎಷ್ಟು ಸರಿ??? ಒಬ್ಬ ವ್ಯಕ್ತಿಯ ತಪ್ಪಿಗೆ ಇಡೀ ಕೋಮಿನ ಮೇಲೆ ಅಪರಾಧ ಹೊರಿಸುವುದು ಎಷ್ಟು ಸರಿ??"

"ದಿನಕ್ಕೆ 78 ಕೊಲೆಗಳಾಗುವ, ಮಹಿಳೆಯರ ವಿರುದ್ಧ ದಿನಕ್ಕೆ 1224 ಅಪರಾಧಗಳಾಗುವ ನಾಡಿನಲ್ಲಿ ಎಷ್ಟು ಹಿಂದೂ ಎಷ್ಟು ಕ್ರೈಸ್ತ ಅಪರಾಧಿಗಳು? ಹಾಗೆಂದರೆ ಆ ಧರ್ಮದ ನಾವೆಲ್ಲರೂ ಅಪರಾಧಿಗಳೇ? ಹಾಗೆ ನೋಡಿದರೆ ಎಷ್ಟು ಅಂತರ್ಧರ್ಮೀಯ ಜೋಡಿಗಳು ಅನ್ಯೊನ್ಯವಾಗಿ ಬಾಳುತ್ತಿಲ್? ಅದಕ್ಕೆ ಆ ಧರ್ಮಗಳೂ ಅದರ ಜನರೂ ಜವಾಬ್ದಾರಿಯೇ? ಹೇಗೆ?"

ರಾಜಕೀಯ ಸ್ವರೂಪ ಯಾಕೆ?

"ಅಪರಾಧಿಗೆ ನ್ಯಾಯ ಕೊಡಿಸಲು ಶ್ರಮಿಸಿವುದನ್ನು ವಿರೋಧ ಪಕ್ಷವಾಗಲೀ ಯಾರಾಗಲೀ ಮಾಡಿದರೆ ಒಪ್ಪಲೇಬೇಕು. ಅದು ಅವರ ಕರ್ತವ್ಯ. ಆದರೆ ಒಡೆದಾಳುವ ಈ ಧರ್ಮಾಂಧ ಜನ ನೇಹಾ ಸಾವನ್ನು ಕೋಮು ಬಣ್ಣ ಬಳಿದು ಜನರಲ್ಲಿ ದ್ವೇಷ ಹೆಚ್ಚಿಸಿ ರಾಜಕೀಯ ಉದ್ದೇಶಕ್ಕೆ ಬಳಸುವುದು ಕೊಲೆಯಷ್ಟೇ ಘೋರ ಅಪರಾಧ" ಎಂದಿದ್ದಾರೆ.

IPL_Entry_Point