ಕನ್ನಡ ಸುದ್ದಿ  /  Entertainment  /  Sandalwood News Kannada Actor Daali Dhananjay On Dare Devil Mustafa Movie Success Poorna Chandra Tejasvi Story Mnk

Dare Devil Mustafa: ಪೂರ್ಣಚಂದ್ರ ತೇಜಸ್ವಿಯವರನ್ನು ಸೆಲೆಬ್ರೇಟ್‌ ಮಾಡಲು ಸಿಕ್ಕ ಅವಕಾಶವೇ ಡೇರ್‌ ಡೆವಿಲ್‌ ಮುಸ್ತಾಫಾ; ಧನಂಜಯ್‌

ನಾನು ಇಲ್ಲಿ ಕುಳಿತು ಈ ಗೆಲುವಿನ ಸಂಭ್ರಮ ನೋಡಲು ಬಂದೆ. ನಾನು ಮಾತನಾಡುವುದು ಏನು ಇಲ್ಲ. ಎಲ್ಲಾ ಸಿನಿಮಾಗಳಲ್ಲಿಯೂ ದುಡ್ಡು ಇರುವುದಿಲ್ಲ. ಕಷ್ಟಪಟ್ಟು ಸಿನಿಮಾ ಮಾಡಿರುತ್ತಾರೆ. ಕಾಂಟ್ರಿಬ್ಯೂಷನ್‌ ಇಸ್‌ ದಿ ಗ್ರೇಟೆಸ್ಟ್‌ ಫಿಲಾಸಫಿ ಎಂಬುದನ್ನು ನಾನು ನಂಬಿದ್ದೇನೆ ಎಂದು ಡೇರ್‌ ಡೆವಿಲ್‌ ಮುಸ್ತಾಫಾ ಗೆಲುವಿನ ಬಗ್ಗೆ ಧನಂಜಯ್‌ ಮಾತನಾಡಿದ್ದಾರೆ.

ಪೂರ್ಣಚಂದ್ರ ತೇಜಸ್ವಿಯವರನ್ನು ಸೆಲೆಬ್ರೇಟ್‌ ಮಾಡಲು ಸಿಕ್ಕ ಅವಕಾಶವೇ ಡೇರ್‌ ಡೆವಿಲ್‌ ಮುಸ್ತಾಫಾ ಎಂದ ಧನಂಜಯ್‌
ಪೂರ್ಣಚಂದ್ರ ತೇಜಸ್ವಿಯವರನ್ನು ಸೆಲೆಬ್ರೇಟ್‌ ಮಾಡಲು ಸಿಕ್ಕ ಅವಕಾಶವೇ ಡೇರ್‌ ಡೆವಿಲ್‌ ಮುಸ್ತಾಫಾ ಎಂದ ಧನಂಜಯ್‌

Dare Devil Mustafa: ಸ್ಯಾಂಡಲ್‌ವುಡ್‌ನಲ್ಲಿ ಕಳೆದ ಎರಡು ವಾರದ ಹಿಂದೆ ತೆರೆಕಂಡಿದ್ದ ಪೂರ್ಣ ಚಂದ್ರ ತೇಜಸ್ವಿ ಅವರ ಕಥೆಯಾಧಾರಿತ ಡೇರ್‌ ಡೆವಿಲ್‌ ಮುಸ್ತಾಫಾ ಸಿನಿಮಾ, ಮೇಕಿಂಗ್‌ ಮತ್ತು ಗಟ್ಟಿ ಕಂಟೆಂಟ್‌ ಮೂಲಕವೇ ಎಲ್ಲರ ಗಮನ ಸೆಳೆದಿತ್ತು. ಕರ್ನಾಟಕ ಮಾತ್ರವಲ್ಲದೆ, ಪಕ್ಕದ ರಾಜ್ಯ ಮತ್ತು ವಿದೇಶಗಳಲ್ಲಿಯೂ ಮೋಡಿ ಮಾಡಿತ್ತು. ಎಲ್ಲ ಕಡೆಯಿಂದ ಸಿಕ್ಕ ಪ್ರತಿಕ್ರಿಯೆ ಕಂಡು ಚಿತ್ರತಂಡವೂ ಹಿರಿಹಿರಿ ಹಿಗ್ಗಿತ್ತು. ಇದೀಗ ತಮ್ಮ ಖುಷಿಯನ್ನು ಎಲ್ಲರ ಮುಂದೆ ಬಿಚ್ಚಿಟ್ಟಿದೆ. ಇಡೀ ತಂಡದ ಪೈಕಿ ಮೊದಲು ಮಾತನಾಡಿದ್ದು ಡಾಲಿ ಧನಂಜಯ್.‌

ನನ್ನ ಕಟೌಟ್‌ಗಿಂತ ಇವರ ಕಟೌಟ್‌ ಮುಂದೆ ಕುಣಿದಿದ್ದೇ ಖುಷಿ

"ನಾನು ಇಲ್ಲಿ ಕುಳಿತು ಈ ಗೆಲುವಿನ ಸಂಭ್ರಮ ನೋಡಲು ಬಂದೆ. ನಾನು ಮಾತನಾಡುವುದು ಏನು ಇಲ್ಲ. ಎಲ್ಲಾ ಸಿನಿಮಾಗಳಲ್ಲಿಯೂ ದುಡ್ಡು ಇರುವುದಿಲ್ಲ. ಕಷ್ಟಪಟ್ಟು ಸಿನಿಮಾ ಮಾಡಿರುತ್ತಾರೆ. ಮಾಧ್ಯಮದವರು ಸಿನಿಮಾ ಜೊತೆಗೆ ನಿಂತಿದ್ದೀರಾ. ಕಾಂಟ್ರಿಬ್ಯೂಷನ್‌ ಇಸ್‌ ದಿ ಗ್ರೇಟೆಸ್ಟ್‌ ಫಿಲಾಸಫಿ ಎಂಬುದನ್ನು ನಾನು ನಂಬಿದ್ದೇನೆ. ಒಳ್ಳೆದು ಏನೂ ಆಗುತ್ತಿದೆ ಎಂದಾಗ ನಾವು ಅದರ ಭಾಗವಾಗುವುದು ತುಂಬಾ ಮುಖ್ಯ. ಪೂರ್ಣಚಂದ್ರ ತೇಜಸ್ವಿ ಅವರನ್ನು ಸೆಲೆಬ್ರೆಟ್ ಮಾಡಲು ಸಿಕ್ಕ ಅವಕಾಶವಿದು. ನನ್ನ ಕಟೌಟ್ ಮುಂದೆ ಕುಣಿದಾಗಲು ನನಗೆ ಇಷ್ಟು ಖುಷಿ ಕೊಟ್ಟಿರಲಿಲ್ಲ. ಅಷ್ಟೊಂದು ಖುಷಿ ಪೂರ್ಣಚಂದ್ರ ತೇಜಸ್ವಿ ಕಟೌಟ್ ಮುಂದೆ ಕುಣಿದಾಗ ಸಿಕ್ಕಿದೆ" ಎಂದರು.

ಜನ ಮೆಚ್ಚಿದ್ದಾರೆ ಅದೇ ಖುಷಿ

ಒಳ್ಳೆ ಸಿನಿಮಾ ಮಾಡಬೇಕು ಅಂತಾ ಫೋಕಸ್ ಮಾಡಿದ್ದೆ. ಎಂಜನಿಯರಿಂಗ್ ಓದುವಾಗ ಕನ್ನಡ ಸಿನಿಮಾ ಹೋಗ್ತೀವೆ ಎಂದಾಗ ಬೇರೆ ರೀತಿ ನೋಡುತ್ತಿದ್ದರು. ಆಗ ತುಂಬಾ ಕೋಪ ಬರುವುದು. ಒಳ್ಳೆ ಸಿನಿಮಾ ಮಾಡಬೇಕು ಎಂಬ ಒಂದೆ ಉದ್ದೇಶವಿತ್ತು. ಮಾಡಿದ್ದೇನೋ ಇಲ್ವೋ ಗೊತ್ತಿಲ್ಲ. ಜನ ಸ್ವೀಕರಿಸಿದ್ದಾರೆ ಎಂದರೆ ಅದು ಒಳ್ಳೆ ಕೃತಿಯಾಗಿದೆ ಎಂದು ತಿಳಿದುಕೊಳ್ಳುತ್ತೇನೆ. ಆ ಒಂದೊಳ್ಳೆ ಉದ್ದೇಶದಿಂದ ಎಷ್ಟು ಒಳ್ಳೆ ಸ್ನೇಹಿತರು ಸಿಕ್ಕಿದ್ದಾರೆ. ಸಿನಿಮಾಗೆ ಎಲ್ಲೆಡೆಯಿಂದ ಒಳ್ಳೆಯ ಪ್ರತಿಕ್ರಿಯೆ ಸಿಗುತ್ತಿದೆ. ಧನಂಜಯ್ ಅವರು ನಮ್ಮ ಸಿನಿಮಾಗೆ ಬೆಂಬಲವಾಗಿ ನಿಂತಿದ್ದಾರೆ. ಜನಕ್ಕೆ ರೀಚ್ ಆಗುತ್ತಿರುವುದು ಖುಷಿಕೊಟ್ಟಿದೆ ಎಂಬುದು ನಿರ್ದೇಶಕ ಶಶಾಂಕ್‌ ಸೋಗಾಲ್‌ ಮಾತು.

ನಿಜಕ್ಕೂ ನಾವು ಅದೃಷ್ಟವಂತರು

"ಇಂತಹ ಒಳ್ಳೆ ತಂಡದ ಜೊತೆ ಸಿನಿಮಾ ಮಾಡಲು ಅದೃಷ್ಟ ಮಾಡಿದ್ದೇನೆ. ನನ್ನ ಮೊದಲ ಸಿನಿಮಾಗೆ ಈ ಮಟ್ಟದ ಪ್ರತಿಕ್ರಿಯೆ ಸಿಕ್ಕಿರುವುದು ಖುಷಿಕೊಟ್ಟಿದೆ. ಇಷ್ಟು ದೊಡ್ಡ ಮಟ್ಟದಲ್ಲಿ ಚಿತ್ರವನ್ನು ಜನ ಸ್ವೀಕರಿಸುತ್ತಾರೆ ಎಂದು ನಾನು ಅಂದುಕೊಂಡಿರಲಿಲ್ಲ. ಜನ ತುಂಬಾ ಪ್ರೀತಿ ಕೊಡ್ತಿದ್ದಾರೆ ಎಂದರು ಮುಸ್ತಾಫಾ ಪಾತ್ರಧಾರಿ ಶಿಶಿರ್‌ ಬೈಕಾಡಿ. ರಾಮಾನುಜ ಅಯ್ಯಂಗಾರಿ ಪಾತ್ರಧಾರಿ ಆದಿತ್ಯ ಅಶ್ರೀ, ರಾಮಾನುಜ ಅಯ್ಯಂಗಾರಿ ಪಾತ್ರದ ಮೇಲೆ ಪ್ರೀತಿ ಸಿಟ್ಟು ಎಲ್ಲದನ್ನೂ ಮಾಡಿಕೊಂಡಿದ್ದಾರೆ. 18 ವರ್ಷಕ್ಕೆ ಇಂಡಸ್ಟ್ರೀಗೆ ಬಂದೆ. ಎಷ್ಟೋ ಅವಮಾನ, ಕಾಯುವಿಕೆ ಬಳಿಕ ಒಂದೊಳ್ಳೆ ಪಾತ್ರ ಸಿಕ್ಕಿದೆ. ಜನ ಗುರುತಿಸುತ್ತಿದ್ದಾರೆ. ಈ ಸಿನಿಮಾದಿಂದ ಇನ್ನೊಂದು ಚಿತ್ರದಲ್ಲಿ ನಾಯಕ ನಟಿಸುವ ಅವಕಾಶ ಪಡೆದಿದ್ದೇನೆ ಎಂದು ಖುಷಿ ವ್ಯಕ್ತಪಡಿಸಿದರು ಆದಿತ್ಯ.

ಪೂರ್ಣಚಂದ್ರ ತೇಜಸ್ವಿಯವರ ಕಥೆಯಾಧಾರಿತ ಈ ಚಿತ್ರವನ್ನು ಶಶಾಂಕ್ ಸೋಗಾಲ್ ಚಿತ್ರಕಥೆ ಬರೆದು ಆಕ್ಷನ್ ಕಟ್ ಹೇಳಿದ್ದಾರೆ. ಅಂದಹಾಗೇ ಡೇರ್ ಡೆವಿಲ್ ಮುಸ್ತಾಫಾ ಸಿನಿಮಾವನ್ನು ಪೂರ್ಣಚಂದ್ರ ತೇಜಸ್ವಿ ಅಭಿಮಾನಿಗಳೇ ನಿರ್ಮಿಸಿದ್ದಾರೆ. ಸಿನಿಮಾಮರ ಬ್ಯಾನರ್‌ನಲ್ಲಿ ಡೇರ್ ಡೆವಿಲ್ ಮುಸ್ತಾಫಾ ನಿರ್ಮಾಣವಾಗಿದೆ. ಡಾಲಿ ಧನಂಜಯ್ ತಮ್ಮದೇ ಡಾಲಿ ಪಿಕ್ಚರ್ಸ್ ನಡಿ ಅರ್ಪಿಸಿದ್ದು, ಕೆ ಆರ್ ಜಿ ಸ್ಟುಡಿಯೊಸ್ ರಾಜ್ಯದೆಲ್ಲೆಡೆ ಚಿತ್ರವನ್ನು ವಿತರಿಸಿದೆ.

ರಾಹುಲ್‌ ರಾಯ್‌ ಛಾಯಾಗ್ರಹಣ, ಶಶಾಂಕ್ ಸೋಗಾಲ್, ಸಂಪತ್ ಸಿರಿಮನೆ, ಡಾಲಿ ಧನಂಜಯ್ ಸಾಹಿತ್ಯದ ಹಾಡುಗಳಿಗೆ ನವನೀತ್‌ ಶ್ಯಾಮ್‌ ಸಂಗೀತವಿದೆ. ಶಿಶಿರ್‌ ಬೈಕಾಡಿ, ಆದಿತ್ಯ ಅಶ್ರೀ, ಅಭಯ್‌, ಸುಪ್ರೀತ್‌ ಭಾರದ್ವಾಜ್‌, ಆಶಿತ್, ಶ್ರೀವತ್ಸ, ಪ್ರೇರಣಾ, ಎಂ.ಎಸ್‌. ಉಮೇಶ್‌, ಮಂಡ್ಯ ರಮೇಶ್‌, ಮೈಸೂರ್‌ ಆನಂದ್‌, ಸುಂದರ್‌ ವೀಣಾ, ನಾಗಭೂಷಣ್‌, ಪೂರ್ಣಚಂದ್ರ ಮೈಸೂರು ಸೇರಿ ಅನೇಕ ಕಲಾವಿದರು ಈ ಸಿನಿಮಾದ ಭಾಗವಾಗಿದ್ದಾರೆ.

IPL_Entry_Point