ಕನ್ನಡ ಸುದ್ದಿ  /  ಮನರಂಜನೆ  /  ಕನ್ನಡ ನಟ ದರ್ಶನ್‌ ಮೈಸೂರು ಫಾರ್ಮ್‌ ಹೌಸ್‌ನ ಮ್ಯಾನೇಜರ್‌ ಆತ್ಮಹತ್ಯೆ; ಡೆತ್‌ನೋಟ್‌ ಪತ್ತೆ

ಕನ್ನಡ ನಟ ದರ್ಶನ್‌ ಮೈಸೂರು ಫಾರ್ಮ್‌ ಹೌಸ್‌ನ ಮ್ಯಾನೇಜರ್‌ ಆತ್ಮಹತ್ಯೆ; ಡೆತ್‌ನೋಟ್‌ ಪತ್ತೆ

ಸ್ಯಾಂಡಲ್‌ವುಡ್‌ ನಟ ದರ್ಶನ್‌ ಅವರ ಮೈಸೂರಿನ ಫಾರ್ಮ್‌ಹೌಸ್‌ ಮ್ಯಾನೇಜರ್‌ ವಿಷ ಸೇವಿಸಿ ಆತ್ಮಹತ್ಯೆ ಮಾಡಿಕೊಂಡಿದ್ದಾರೆ. ಶ್ರೀಧರ್‌ (35) ವಿಷ ಸೇವಿಸಿ ಏಪ್ರಿಲ್‌ 17ರಂದು ಆತ್ಮಹತ್ಯೆ ಮಾಡಿಕೊಂಡಿದ್ದು, ಪೊಲೀಸರು ಪ್ರಕರಣ ದಾಖಲಿಸಿಕೊಂಡು ತನಿಖೆ ನಡೆಸುತ್ತಿದ್ದಾರೆ.

ಕನ್ನಡ ನಟ ದರ್ಶನ್‌ ಫಾರ್ಮ್‌ ಹೌಸ್‌ ಮ್ಯಾನೇಜರ್‌ ಆತ್ಮಹತ್ಯೆ; ಡೆತ್‌ನೋಟ್‌ ಪತ್ತೆ
ಕನ್ನಡ ನಟ ದರ್ಶನ್‌ ಫಾರ್ಮ್‌ ಹೌಸ್‌ ಮ್ಯಾನೇಜರ್‌ ಆತ್ಮಹತ್ಯೆ; ಡೆತ್‌ನೋಟ್‌ ಪತ್ತೆ

ಬೆಂಗಳೂರು: ಕನ್ನಡ ನಟ ದರ್ಶನ್‌ ಫಾರ್ಮ್‌ಹೌಸ್‌ ಮ್ಯಾನೇಜರ್‌ ವಿಷ ಸೇವಿಸಿ ಆತ್ಮಹತ್ಯೆ ಮಾಡಿಕೊಂಡಿದ್ದಾರೆ. ಶ್ರೀಧರ್‌ (35) ವಿಷ ಸೇವಿಸಿ ಏಪ್ರಿಲ್‌ 17ರಂದು ಆತ್ಮಹತ್ಯೆ ಮಾಡಿಕೊಂಡಿದ್ದು, ಪೊಲೀಸರು ಪ್ರಕರಣ ದಾಖಲಿಸಿಕೊಂಡು ತನಿಖೆ ನಡೆಸುತ್ತಿದ್ದಾರೆ. ಇವರು ಡೆತ್‌ನೋಟ್‌ ಬರೆದು ಆತ್ಮಹತ್ಯೆ ಮಾಡಿಕೊಂಡಿದ್ದಾರೆ ಎಂದು ವರದಿಗಳು ತಿಳಿಸಿವೆ.

ಸದ್ಯ ಕನ್ನಡ ನಟ ದರ್ಶನ್‌ ಅವರು ರೇಣುಕಾಸ್ವಾಮಿ ಕೊಲೆ ಪ್ರಕರಣದಲ್ಲಿ ಪೊಲೀಸ್‌ ಕಸ್ಟಡಿಯಲ್ಲಿದ್ದಾರೆ. ಇದೇ ಸಮಯದಲ್ಲಿ ಶ್ರೀಧರ್‌ ಆತ್ಮಹತ್ಯೆ ನಾನಾ ಸಂದೇಹಗಳಿಗೆ ಎಡೆ ಮಾಡಿದೆ. ಈತ ಕೀಟನಾಶಕ ಸೇವನೆ ಮಾಡಿ ಆತ್ಮಹತ್ಯೆ ಮಾಡಿಕೊಂಡಿದ್ದಾನೆ. ಡೆತ್‌ನೋಟ್‌ನಲ್ಲಿ ನನ್ನ ಸಾವಿಗೆ ನಾನೇ ಕಾರಣ ಎಂದು ಬರೆದಿಟ್ಟಿದ್ದಾನೆ. ಇಂದು ಪೊಲೀಸರು ಸ್ಥಳ ಮಹಜರಿಗಾಗಿ ದರ್ಶನ್‌ ಮತ್ತು ಇತರೆ ಆರೋಪಿಗಳನ್ನು ಮೈಸೂರಿಗೆ ಕರೆದುಕೊಂಡು ಹೋಗುತ್ತಿದ್ದಾರೆ.

ಗಮನಿಸಿ: ಆತ್ಮಹತ್ಯೆ ಯಾವುದೇ ಸಮಸ್ಯೆಗೆ ಪರಿಹಾರವಲ್ಲ. ನಿಮ್ಮನ್ನು ಪ್ರೀತಿಸುವ, ಬೆಂಬಲಿಸುವ ಆಪ್ತರು ಇದ್ದೇ ಇರುತ್ತಾರೆ. ನಿಮ್ಮ ಸಮಸ್ಯೆಗಳನ್ನು ಅಂಥವರೊಂದಿಗೆ ಹಂಚಿಕೊಂಡು ನೆರವು ಪಡೆಯಿರಿ. ಆತ್ಮಹತ್ಯೆಯ ಆಲೋಚನೆಗಳು ಮನಸ್ಸಿಗೆ ಪದೇಪದೆ ಬರುತ್ತಿದ್ದರೆ ಹಿಂಜರಿಕೆಯಿಲ್ಲದೆ ಆಪ್ತಸಮಾಲೋಚಕರ ಮಾರ್ಗದರ್ಶನ ಪಡೆದುಕೊಳ್ಳಿ. ತುರ್ತು ಸಂದರ್ಭದಲ್ಲಿ ಬೆಂಗಳೂರಿನ SAHAI ಸಹಾಯವಾಣಿ (080 - 25497777) ಅಥವಾ ನಿಮ್ಹಾನ್ಸ್‌ ಸಹಾಯವಾಣಿಯ (080 – 4611 0007) ನೆರವು ಪಡೆಯಿರಿ