ನಾನು ಧ್ವನಿ ಎತ್ತುವ ಸಮಯ ಬಂದಿದೆ, ಪವಿತ್ರಾ ಗೌಡ ವಿರುದ್ಧ ಕಾನೂನು ಕ್ರಮ; ಗುಡುಗಿದ ದರ್ಶನ್‌ ಪತ್ನಿ ವಿಜಯಲಕ್ಷ್ಮಿ
ಕನ್ನಡ ಸುದ್ದಿ  /  ಮನರಂಜನೆ  /  ನಾನು ಧ್ವನಿ ಎತ್ತುವ ಸಮಯ ಬಂದಿದೆ, ಪವಿತ್ರಾ ಗೌಡ ವಿರುದ್ಧ ಕಾನೂನು ಕ್ರಮ; ಗುಡುಗಿದ ದರ್ಶನ್‌ ಪತ್ನಿ ವಿಜಯಲಕ್ಷ್ಮಿ

ನಾನು ಧ್ವನಿ ಎತ್ತುವ ಸಮಯ ಬಂದಿದೆ, ಪವಿತ್ರಾ ಗೌಡ ವಿರುದ್ಧ ಕಾನೂನು ಕ್ರಮ; ಗುಡುಗಿದ ದರ್ಶನ್‌ ಪತ್ನಿ ವಿಜಯಲಕ್ಷ್ಮಿ

ಚಾಲೆಂಜಿಂಗ್‌ ಸ್ಟಾರ್‌ ದರ್ಶನ್‌ ಪತ್ನಿ ವಿಜಯಲಕ್ಷ್ಮಿ ಅವರು ಪವಿತ್ರಾ ಗೌಡ ವಿರುದ್ಧ ಸೋಷಿಯಲ್‌ ಮೀಡಿಯಾದಲ್ಲಿ ಪ್ರತಿಕ್ರಿಯೆ ನೀಡಿದ್ದಾರೆ. ದರ್ಶನ್‌ ಜತೆಗಿನ ಸಂಬಂಧಕ್ಕೆ 10 ವರ್ಷಗಳಾಗಿವೆ ಎಂದು ಪವಿತ್ರಾ ಗೌಡ ಸೋಷಿಯಲ್‌ ಮೀಡಿಯಾದಲ್ಲಿ ಫೋಟೋಗಳನ್ನು ಹಂಚಿಕೊಂಡಿದ್ದರು.

ಪವಿತ್ರಾ ಗೌಡ ವಿರುದ್ಧ ಕಾನೂನು ಕ್ರಮ- ದರ್ಶನ್‌ ಪತ್ನಿ ವಿಜಯಲಕ್ಷ್ಮಿ
ಪವಿತ್ರಾ ಗೌಡ ವಿರುದ್ಧ ಕಾನೂನು ಕ್ರಮ- ದರ್ಶನ್‌ ಪತ್ನಿ ವಿಜಯಲಕ್ಷ್ಮಿ

ಬೆಂಗಳೂರು: ಸ್ಯಾಂಡಲ್‌ವುಡ್‌ ನಟ ಚಾಲೆಂಜಿಂಗ್‌ ಸ್ಟಾರ್‌ ದರ್ಶನ್‌ ಪತ್ನಿ ವಿಜಯಲಕ್ಷ್ಮಿ ಅವರು ಪವಿತ್ರಾ ಗೌಡ ವಿರುದ್ಧ ಸೋಷಿಯಲ್‌ ಮೀಡಿಯಾದಲ್ಲಿ ಪ್ರತಿಕ್ರಿಯೆ ನೀಡಿದ್ದಾರೆ. ದರ್ಶನ್‌ ಜತೆಗಿನ ಸಂಬಂಧಕ್ಕೆ 10 ವರ್ಷಗಳಾಗಿವೆ ಎಂದು ಪವಿತ್ರಾ ಗೌಡ ಸೋಷಿಯಲ್‌ ಮೀಡಿಯಾದಲ್ಲಿ ಫೋಟೋಗಳನ್ನು ಹಂಚಿಕೊಂಡಿದ್ದರು. ಈಗ ಇದಕ್ಕೆ ವಿಜಯಲಕ್ಷ್ಮಿ ಅವರು ಪ್ರತಿಕ್ರಿಯೆ ನೀಡಿದ್ದಾರೆ. ಇದೇ ಸಮಯದಲ್ಲಿ ಪವಿತ್ರಾ ಗೌಡ ಅವರ ಹಲವು ಫೋಟೋಗಳನ್ನು ಹಂಚಿಕೊಂಡು "ಇದು ಇವರ ನೈಜ ಮುಖ" ಎಂದು ಹೇಳಿದ್ದಾರೆ.

ವಿಜಯಲಕ್ಷ್ಮಿ ಪ್ರತಿಕ್ರಿಯೆ

ಇನ್‌ಸ್ಟಾಗ್ರಾಂನಲ್ಲಿ ದರ್ಶನ್‌ ಪತ್ನಿ ವಿಜಯಲಕ್ಷ್ಮಿ ಅವರು ಸುದೀರ್ಘವಾಗಿ ಈ ವಿಚಾರಕ್ಕೆ ಸಂಬಂಧಪಟ್ಟಂತೆ ಸುದೀರ್ಘವಾಗಿ ಬರೆದಿದ್ದಾರೆ. "ಬೇರೊಬ್ಬರ ಗಂಡನ ಚಿತ್ರವನ್ನು ಪೋಸ್ಟ್ ಮಾಡುವ ಮೊದಲು ಈ ಮಹಿಳೆ ಪ್ರಜ್ಞೆ ಹೊಂದಿರಬೇಕು ಎಂದು ನಾನು ಭಾವಿಸುವೆ. ಈ ಚಿತ್ರಗಳು ಅವಳ ಪಾತ್ರ ಮತ್ತು ನೈತಿಕ ನಿಲುವಿನ ಕುರಿತು ಮಾತನಾಡುತ್ತದೆ. ವಿವಾಹಿತ ಪುರುಷನೆಂದು ತಿಳಿದರೂ ಅವಳು ಇನ್ನೂ ತನ್ನ ವೈಯಕ್ತಿಕ ಅಗತ್ಯಗಳಿಗೆ ಮತ್ತು ಕಾರ್ಯಸೂಚಿಗಾಗಿ ಬಂದು ಉಳಿಯಲು ಬಯಸುತ್ತಾಳೆ" ಎಂದು ವಿಜಯಲಕ್ಷ್ಮಿ ಅವರು ಪೋಸ್ಟ್‌ ಮಾಡಿದ್ದಾರೆ.

"ಈ ಚಿತ್ರಗಳು ಸ್ಪಷ್ಟವಾಗಿದೆ. ಖುಷಿ ಗೌಡ ಅವರು ಪವಿತ್ರಾ ಮತ್ತು ಸಂಜಯ್‌ ಸಿಂಗ್‌ ಅವರ ಮಗಳು. ನಾನು ಸಾಮಾನ್ಯವಾಗಿ ಯಾರ ವೈಯಕ್ತಿಕ ವಿಷಯಗಳ ಕುರಿತು ಮಾತನಾಡಲು ಸೋಷಿಯಲ್‌ ಮೀಡಿಯಾವನ್ನು ಆಯ್ಕೆ ಮಾಡಿಕೊಳ್ಳುವುದಿಲ್ಲ. ಆದರೆ ಈಗ ನನ್ನ ಕುಟುಂಬದ ಹಿತದೃಷ್ಟಿಯಿಂದ ಧ್ವನಿ ಎತ್ತುವ ಸಮಯ ಬಂದಿದೆ ಎಂದು ನಾನು ಭಾವಿಸುತ್ತೇನೆ. ಇಡೀ ಸಮಾಜಕ್ಕೆ ವಿಭಿನ್ನ ಚಿತ್ರಣ ನೀಡಲು ಯತ್ನಿಸುವವರ ವಿರುದ್ಧ ಕಠಿಣ ಕಾನೂನು ಕ್ರಮ ಕೈಗೊಳ್ಳಲಾಗುವುದು" ಎಂದು ವಿಜಯಲಕ್ಷ್ಮಿ ಅವರು ಪೋಸ್ಟ್‌ ಮಾಡಿದ್ದು, ಸಂಜಯ್‌ ಸಿಂಗ್‌ ಮತ್ತು ಖುಷಿ ಗೌಡರಿಗೆ ಟ್ಯಾಗ್‌ ಮಾಡಿದ್ದಾರೆ.

ಏನಿದು ಘಟನೆ?

ಚಾಲೆಂಜಿಂಗ್‌ ಸ್ಟಾರ್‌ ದರ್ಶನ್‌ ಜತೆಗಿನ ಹಲವು ಫೋಟೋಗಳನ್ನು ಜೋಡಿಸಿ ನಟಿ ಕಂ ಮಾಡೆಲ್‌ ಪವಿತ್ರಾ ಗೌಡ ವಿಡಿಯೋವೊಂದನ್ನು ಇನ್‌ಸ್ಟಾಗ್ರಾಂನಲ್ಲಿ ಹಂಚಿಕೊಂಡಿದ್ದರು. ನಮ್ಮ ರಿಲೇಷನ್‌ಶಿಪ್‌ಗೆ 10 ವರ್ಷವಾಗಿದೆ, ಫಾರ್‌ಎವರ್‌ ಟು ಗೋ ಎಂದು ಅವರು ಇನ್‌ಸ್ಟಾಗ್ರಾಂನಲ್ಲಿ ಪೋಸ್ಟ್‌ ಮಾಡಿದ್ದರು. "ಒಂದು ದಶಕವಾಗಿದೆ. ಪಾರೆವರ್‌ ಟು ಗೋ" ಎಂದು ಎರಡು ಕಪ್ಪು ಲವ್‌ ಇಮೋಜಿಯನ್ನು ಹಾಕಿದ್ದಾರೆ. ನಮ್ಮ ಸಂಬಂಧಕ್ಕೆ ಹತ್ತು ವರ್ಷಗಳಾಗಿವೆ. ಧನ್ಯವಾದಗಳು ಎಂದು ಅವರು ಬರೆದುಕೊಂಡಿದ್ದರು.

ಈ ಹಿಂದೆಯೂ ಹಲವು ಬಾರಿ ಚಾಲೆಂಜಿಂಗ್‌ ಸ್ಟಾರ್‌ ದರ್ಶನ್‌ ಮತ್ತು ಪವಿತ್ರಾ ಗೌಡ ಸಂಬಂಧದ ಕುರಿತು ಚರ್ಚೆಗಳಾಗಿವೆ. ಈ ವಿಷಯಕ್ಕೆ ಸಂಬಂಧಪಟ್ಟಂತೆ ದರ್ಶನ್‌ ಪತ್ನಿ ವಿಜಯ ಲಕ್ಷ್ಮಿ ಮತ್ತು ಪವಿತ್ರಾ ಗೌಡ ನಡುವೆ ಜಗಳವೂ ಆಗಿದೆ. ಮಗಳು ಖುಷಿ ಗೌಡ ಹುಟ್ಟುಹಬ್ಬದ ಸಂದರ್ಭದಲ್ಲಿಯೂ ಪವಿತ್ರಾ ಗೌಡ ಅವರು ದರ್ಶನ್‌ ಇರುವ ವಿಡಿಯೋವನ್ನು ಹಂಚಿಕೊಂಡಿದ್ದರು. ಆ ವಿಡಿಯೋದಲ್ಲೂ ದರ್ಶನ್‌ ಮತ್ತು ಖುಷಿ ಗೌಡ ಡ್ಯಾನ್ಸ್‌ ಮಾಡುವ ದೃಶ್ಯವಿತ್ತು. ಖುಷಿ ಗೌಡ ಜತೆಗೆ ದರ್ಶನ್‌ ಕೇಕ್‌ ಕಟ್‌ ಮಾಡಿದ್ದರು. ಈ ವಿಡಿಯೋವನ್ನು ಪವಿತ್ರಾ ಗೌಡ ಅವರು ದರ್ಶನ್‌ಗೆ ಟ್ಯಾಗ್‌ ಮಾಡಿದ್ದರು. ಇದೀಗ ಪವಿತ್ರಾ ಗೌಡ ಮತ್ತು ವಿಜಯಲಕ್ಷ್ಮಿ ಅವರು ಬಹಿರಂಗವಾಗಿಯೇ ಜಗಳ ಆರಂಭಿಸಿದ್ದಾರೆ.

Whats_app_banner