ಧ್ರುವ ಸರ್ಜಾ ನಟನೆಯ ಮಾರ್ಟಿನ್‌ ಸಿನಿಮಾದ ಆಡಿಯೋ ಹಕ್ಕು ಮಾರಾಟದಲ್ಲೂ ದಾಖಲೆ; ಪ್ಯಾನ್‌ ಇಂಡಿಯಾ ಚಿತ್ರದ ಕುರಿತು ಹೆಚ್ಚಾದ ನಿರೀಕ್ಷೆ-sandalwood news kannada actor dhruva sarja pan india movie martin audio rights sale record price pcp ,ಮನರಂಜನೆ ಸುದ್ದಿ
ಕನ್ನಡ ಸುದ್ದಿ  /  ಮನರಂಜನೆ  /  ಧ್ರುವ ಸರ್ಜಾ ನಟನೆಯ ಮಾರ್ಟಿನ್‌ ಸಿನಿಮಾದ ಆಡಿಯೋ ಹಕ್ಕು ಮಾರಾಟದಲ್ಲೂ ದಾಖಲೆ; ಪ್ಯಾನ್‌ ಇಂಡಿಯಾ ಚಿತ್ರದ ಕುರಿತು ಹೆಚ್ಚಾದ ನಿರೀಕ್ಷೆ

ಧ್ರುವ ಸರ್ಜಾ ನಟನೆಯ ಮಾರ್ಟಿನ್‌ ಸಿನಿಮಾದ ಆಡಿಯೋ ಹಕ್ಕು ಮಾರಾಟದಲ್ಲೂ ದಾಖಲೆ; ಪ್ಯಾನ್‌ ಇಂಡಿಯಾ ಚಿತ್ರದ ಕುರಿತು ಹೆಚ್ಚಾದ ನಿರೀಕ್ಷೆ

ಆಕ್ಷನ್ ಪ್ರಿನ್ಸ್ ಧ್ರುವ ಸರ್ಜಾ ಅವರು ನಾಯಕರಾಗಿ ನಟಿಸುತ್ತಿರುವ ಬಹು ನಿರೀಕ್ಷಿತ "ಮಾರ್ಟಿನ್" ಪ್ಯಾನ್ ಇಂಡಿಯಾ ಚಿತ್ರದ ಆಡಿಯೋ ಹಕ್ಕು ದಾಖಲೆ ಬೆಲೆಗೆ ಮಾರಾಟವಾಗಿದೆ. ಸದ್ಯ ಚಿತ್ರತಂಡ ಮಾರ್ಟಿನ್‌ ಸಿನಿಮಾದ ಪೋಸ್ಟ್‌ ಪ್ರೊಡಕ್ಷನ್‌ ಕೆಲಸದಲ್ಲಿ ನಿರತವಾಗಿದೆ.

ಧ್ರುವ ಸರ್ಜಾ ನಟನೆಯ ಮಾರ್ಟಿನ್‌ ಸಿನಿಮಾದ ಆಡಿಯೋ ಹಕ್ಕು ಮಾರಾಟದಲ್ಲೂ ದಾಖಲೆ
ಧ್ರುವ ಸರ್ಜಾ ನಟನೆಯ ಮಾರ್ಟಿನ್‌ ಸಿನಿಮಾದ ಆಡಿಯೋ ಹಕ್ಕು ಮಾರಾಟದಲ್ಲೂ ದಾಖಲೆ

ಬೆಂಗಳೂರು: ಧ್ರುವ ಸರ್ಜಾ ನಟನೆಯ ಪ್ಯಾನ್‌ ಇಂಡಿಯಾ ಸಿನಿಮಾದ ಬಹುತೇಕ ಶೂಟಿಂಗ್‌ ಈಗಾಗಲೇ ಮುಕ್ತಾಯಗೊಂಡಿದ್ದು, ಚಿತ್ರವು ಪೋಸ್ಟ್‌ ಪ್ರೊಡಕ್ಷನ್‌ ಹಂತದಲ್ಲಿದೆ. ಚಿತ್ರ ತಂಡ ಮಾಹಿತಿ ನೀಡಿರುವ ಪ್ರಕಾರ ಒಂದು ಹಾಡಿನ ಶೂಟಿಂಗ್‌ ಮಾತ್ರ ಬಾಕಿ ಇದೆ. ಇದೇ ಸಮಯದಲ್ಲಿ ಈ ಚಿತ್ರದ ಆಡಿಯೋ ಹಕ್ಕು ದಾಖಲೆ ಬೆಲೆಗೆ ಮಾರಾಟವಾಗಿರುವುದಾಗಿ ಚಿತ್ರತಂಡ ತಿಳಿಸಿದೆ. ಈ ವರ್ಷದ ಸ್ಯಾಂಡಲ್‌ವುಡ್‌ನ ಬಹುನಿರೀಕ್ಷಿತ ಸಿನಿಮಾಗಳಲ್ಲಿ ಒಂದಾದ ಮಾರ್ಟಿನ್‌ ಕನ್ನಡ ಮಾತ್ರವಲ್ಲದೆ ತೆಲುಗು, ತಮಿಳು, ಮಲಯಾಳಂ, ಹಿಂದಿ ಸೇರಿದಂತೆ ಪ್ಯಾನ್‌ ಇಂಡಿಯಾ ಮಟ್ಟದಲ್ಲಿ ಬಿಡುಗಡೆಯಾಗುತ್ತಿದೆ.

ವಾಸವಿ ಎಂಟರ್ ಪ್ರೈಸಸ್ ಲಾಂಛನದಲ್ಲಿ ಉದಯ್ ಕೆ ಮೆಹ್ತಾ ಅವರು ನಿರ್ಮಿಸುತ್ತಿರುವ, ಎ.ಪಿ.ಅರ್ಜುನ್ ನಿರ್ದೇಶನದಲ್ಲಿ ಆಕ್ಷನ್ ಪ್ರಿನ್ಸ್ ಧ್ರುವ ಸರ್ಜಾ ಅವರು ನಾಯಕರಾಗಿ ನಟಿಸುತ್ತಿರುವ ಬಹು ನಿರೀಕ್ಷಿತ "ಮಾರ್ಟಿನ್" ಪ್ಯಾನ್ ಇಂಡಿಯಾ ಚಿತ್ರದ ಆಡಿಯೋ ಹಕ್ಕು ಅಧಿಕ ಮೊತ್ತಕ್ಕೆ (9 ಕೋಟಿ ರೂಪಾಯಿ) ಮಾರಾಟವಾಗಿದೆ. ಜನಪ್ರಿಯ ಆಡಿಯೋ ಸಂಸ್ಥೆಯಾದ "ಸರೆಗಮ", " ಮಾರ್ಟಿನ್ " ಚಿತ್ರದ ಆಡಿಯೋ ಹಕ್ಕನ್ನು ಪಡೆದುಕೊಂಡಿದೆ.

"ನನಗೆ ತಿಳಿದ ಇಷ್ಟು ದೊಡ್ಡ ಮೊತ್ತಕ್ಕೆ ಯಾವುದೇ ಚಿತ್ರದ ಆಡಿಯೋ ಹಕ್ಕು ಇಷ್ಟು ದೊಡ್ಡ ಮೊತ್ತಕ್ಕೆ ಮಾರಾಟವಾಗಿಲ್ಲ. ನಮ್ಮ ಚಿತ್ರದ ಆಡಿಯೋ ರೈಟ್ಸ್ ಈ ಬಾರಿ ಮೊತ್ತಕ್ಕೆ ಮಾರಾಟವಾಗಿರುವುದು ತುಂಬಾ ಖುಷಿಯಾಗಿದೆ. ಮಣಿ ಶರ್ಮ ಅವರ ಸಂಗೀತ ನಿರ್ದೇಶನದಲ್ಲಿ ಎಲ್ಲಾ ಹಾಡುಗಳು ತುಂಬಾ ಚೆನ್ನಾಗಿ ಮೂಡಿಬಂದಿದೆ. ರವಿ ಬಸ್ರೂರ್ ಹಿನ್ನೆಲೆ ಸಂಗೀತ ನೀಡಿದ್ದಾರೆ. ಬಹುತೇಕ ಚಿತ್ರೀಕರಣ ಮುಕ್ತಾಯವಾಗಿದೆ. ಒಂದು ಹಾಡಿನ ಚಿತ್ರೀಕರಣ ಮಾತ್ರ ಬಾಕಿಯಿದೆ. ಪೋಸ್ಟ್ ಪ್ರೊಡಕ್ಷನ್ ವರ್ಕ್ ಬಿರುಸಿನಿಂದ ಸಾಗಿದೆ ಎಂದು ನಿರ್ಮಾಪಕ ಉದಯ್ ಕೆ ಮೆಹ್ತಾ ತಿಳಿಸಿದ್ದಾರೆ.

ಮಾರ್ಟಿನ್‌ ಸಿನಿಮಾದ ಟ್ರೈಲರ್‌ ನೋಡಿ

ಎ.ಪಿ.ಅರ್ಜುನ್ ಹಾಗೂ ಧ್ರುವ ಸರ್ಜಾ ಕಾಂಬಿನೇಶನ್ ನಲ್ಲಿ ಮೂಡಿಬರಿತ್ತಿರುವ ಬಹು ನಿರೀಕ್ಷಿತ "ಮಾರ್ಟಿನ್" ಚಿತ್ರದ ಬಿಡುಗಡೆಗೆ ಅಭಿಮಾನಿಗಳು ಕಾತುರದಿಂದ ಕಾಯುತ್ತಿದ್ದಾರೆ. ಸತ್ಯ ಹೆಗಡೆ ಛಾಯಾಗ್ರಹಣ ಹಾಗೂ ಕೆ.ಎಂ.ಪ್ರಕಾಶ್ ಅವರ ಸಂಕಲನವಿರುವ "ಮಾರ್ಟಿನ್" ಚಿತ್ರದ ತಾರಾಬಳಗದಲ್ಲಿ ಧ್ರುವ ಸರ್ಜಾ, ವೈಭವಿ ಶಾಂಡಿಲ್ಯ, ಅನ್ವೇಶಿ ಜೈನ್, ಚಿಕ್ಕಣ್ಣ, ಮಾಳವಿಕ ಅವಿನಾಶ್, ನಿಕ್ತಿನ್ ಧೀರ್, ನವಾಬ್ ಶಾ, ರೋಹಿತ್ ಮುಂತಾದವರಿದ್ದಾರೆ.

'ಮಾರ್ಟಿನ್‌' ಸಿನಿಮಾ ಪೋಸ್ಟ್‌ ಪ್ರೊಡಕ್ಷನ್‌ ಕೆಲಸಗಳು ನಡೆಯುತ್ತಿದೆ. ಸದ್ಯಕ್ಕೆ ಧ್ರುವ ಪ್ರೇಮ್‌ ಜೊತೆ 'ಕೆಡಿ' ಸಿನಿಮಾದಲ್ಲಿ ನಟಿಸುತ್ತಿದ್ದಾರೆ. ಇದೂ ಕೂಡಾ ಪ್ಯಾನ್‌ ಇಂಡಿಯಾ ಸಿನಿಮಾವಾಗಿದ್ದು ಬಾಲಿವುಡ್‌ನ ಸಂಜಯ್‌ ದತ್‌, ಶಿಲ್ಪಾ ಶೆಟ್ಟಿ ಕೂಡಾ ಚಿತ್ರದಲ್ಲಿ ನಟಿಸುತ್ತಿದ್ದಾರೆ. ಮಾರ್ಟಿನ್‌ ಮತ್ತು ಕೆಡಿ ಎಂಬೆರಡು ಪ್ಯಾನ್‌ ಇಂಡಿಯಾ ಸಿನಿಮಾಗಳ ಮೂಲಕ ಈ ವರ್ಷ ಧ್ರುವ ಸರ್ಜಾ ಅದೃಷ್ಟ ಪರೀಕ್ಷೆಗೆ ಇಳಿದಿದ್ದಾರೆ.