ಕನ್ನಡ ನಟ ಶಿವರಾಜ್ ಕುಮಾರ್‌ಗೆ ಅನಾರೋಗ್ಯ; ಬೆಂಗಳೂರಿನ ವೈದೇಹಿ ಆಸ್ಪತ್ರೆಗೆ ದಾಖಲು-sandalwood news kannada actor shiva rajkumar admited in bengaluru vydehi hospital pcp ,ಮನರಂಜನೆ ಸುದ್ದಿ
ಕನ್ನಡ ಸುದ್ದಿ  /  ಮನರಂಜನೆ  /  ಕನ್ನಡ ನಟ ಶಿವರಾಜ್ ಕುಮಾರ್‌ಗೆ ಅನಾರೋಗ್ಯ; ಬೆಂಗಳೂರಿನ ವೈದೇಹಿ ಆಸ್ಪತ್ರೆಗೆ ದಾಖಲು

ಕನ್ನಡ ನಟ ಶಿವರಾಜ್ ಕುಮಾರ್‌ಗೆ ಅನಾರೋಗ್ಯ; ಬೆಂಗಳೂರಿನ ವೈದೇಹಿ ಆಸ್ಪತ್ರೆಗೆ ದಾಖಲು

ಕನ್ನಡ ನಟ ಹ್ಯಾಟ್ರಿಕ್‌ ಹೀರೋ ಶಿವರಾಜ್‌ ಕುಮಾರ್‌ಗೆ ಆರೋಗ್ಯದಲ್ಲಿ ಏರುಪೇರಾಗಿದ್ದು, ಬೆಂಗಳೂರಿನ ವೈದೇಹಿ ಆಸ್ಪತ್ರೆಗೆ ದಾಖಲಿಸಲಾಗಿದೆ. ಸಂಜೆ ವೇಳೆ ಆಸ್ಪತ್ರೆಯಿಂದ ಡಿಸ್‌ಚಾರ್ಜ್‌ ಆಗುವ ಸಾಧ್ಯತೆಯಿದೆ.

ಶಿವರಾಜ್ ಕುಮಾರ್‌ ಆಸ್ಪತ್ರೆಗೆ ದಾಖಲು
ಶಿವರಾಜ್ ಕುಮಾರ್‌ ಆಸ್ಪತ್ರೆಗೆ ದಾಖಲು

ಬೆಂಗಳೂರು: ಕನ್ನಡ ನಟ ಹ್ಯಾಟ್ರಿಕ್‌ ಹೀರೋ ಶಿವರಾಜ್‌ ಕುಮಾರ್‌ಗೆ ಆರೋಗ್ಯದಲ್ಲಿ ಏರುಪೇರಾಗಿದ್ದು, ಬೆಂಗಳೂರಿನ ವೈದೇಹಿ ಆಸ್ಪತ್ರೆಗೆ ದಾಖಲು ಮಾಡಲಾಗಿದೆ ಎಂದು ವರದಿಗಳು ತಿಳಿಸಿವೆ. ಕಳೆದ ಹಲವು ದಿನಗಳಿಂದ ಲೋಕಾ ಸಭಾ ಚುನಾವಣೆ ಪ್ರಚಾರದಲ್ಲಿ ಬಿಝಿ ಇದ್ದ ಶಿವಣ್ಣರ ಆರೋಗ್ಯದಲ್ಲಿ ಏರುಪೇರಾಗಿದ್ದರಿಂದ ವೈದೇಹಿ ಆಸ್ಪತ್ರೆಗೆ ದಾಖಲಿಸಲಾಗಿದೆ. ಸಂಜೆಯ ವೇಳೆ ಆಸ್ಪತ್ರೆಯಿಂದ ಡಿಸ್‌ಚಾರ್ಜ್‌ ಆಗುವ ಸೂಚನೆ ಇದೆ ಎಂದು ವರದಿಗಳು ತಿಳಿಸಿವೆ.

ಅಪ್‌ಡೇಟ್‌: ನಟ ಶಿವರಾಜ್‌ ಕುಮಾರ್‌ ಅವರು ಆಸ್ಪತ್ರೆಯಿಂದ ಇಂದು ಡಿಸ್‌ಚಾರ್ಜ್‌ ಆಗಲಿದ್ದಾರೆ. ಅವರಿಗೆ ಕಿಡ್ನಿ  ಸ್ಟೋನ್‌ ಆಗಿತ್ತು ಎಂಬ ವಿವರ ಇದೀಗ ಲಭ್ಯವಾಗಿದೆ.

ಕಳೆದ ಹಲವು ದಿನಗಳಿಂದ ಶಿವರಾಜ್‌ ಕುಮಾರ್‌ ಅವರು ಚುನಾವಣಾ ಪ್ರಚಾರ ಕಾರ್ಯಕ್ರಮದಲ್ಲಿ ನಿರತರಾಗಿದ್ದಾರೆ. ಗೀತಾ ಶಿವರಾಜ್‌ ಕುಮಾರ್‌ಗೆ ಕಾಂಗ್ರೆಸ್‌ ಪಕ್ಷದಿಂದ ಶಿವಮೊಗ್ಗದಲ್ಲಿ ಟಿಕೆಟ್‌ ದೊರಕಿತ್ತು. ಶಿವರಾಜ್‌ ಕುಮಾರ್‌ ಅವರು ಹಲವು ದಿನಗಳಿಂದ ಪ್ರಚಾರ ಕಾರ್ಯಕ್ರಮಗಳಲ್ಲಿ ಭಾಗಿಯಾಗಿದ್ದರು. ಈ ಬೇಸಿಗೆ ಬಿಸಿಲಿನ ತಾಪ, ಸುತ್ತಾಟದಿಂದ ಶಿವಣ್ಣ ಅನಾರೋಗ್ಯಕ್ಕೆ ಈಡಾಗಿದ್ದಾರೆ ಎಂದು ಹೇಳಲಾಗಿದೆ.

ಹೆಚ್ಚಿನ ಮಾಹಿತಿ ನಿರೀಕ್ಷಿಸಲಾಗುತ್ತಿದೆ.

ಶಿವಣ್ಣನ ಜತೆ ಕೈ ಜೋಡಿಸಿದ ಆರ್‌ಸಿ ಚಂದ್ರು

ಆರ್‌ಸಿ ಸ್ಟುಡಿಯೋ ಆರಂಭಿಸಿದ ಬಳಿಕ ಆರ್‌ ಚಂದ್ರು ಅವರು ಐದು ಸಿನಿಮಾಗಳನ್ನು ಘೋಷಣೆ ಮಾಡಿದ್ದರು. ಇದೀಗ ಆರನೇ ಸಿನಿಮಾದ ಮಾಹಿತಿ ಹಂಚಿಕೊಂಡಿದ್ದಾರೆ. ಹ್ಯಾಟ್ರಿಕ್‌ಹೀರೋ ಶಿವರಾಜ್‌ ಕುಮಾರ್‌ ಜತೆ ಆರನೇ ಸಿನಿಮಾ ಘೋಷಿಸಿದ್ದಾರೆ. ಈ ಕುರಿತು ಆರ್‌ ಚಂದ್ರು ಎಕ್ಸ್‌ನಲ್ಲಿ ಮಾಹಿತಿ ಹಂಚಿಕೊಂಡಿದ್ದಾರೆ.

ಆರ್‌ ಚಂದ್ರು ನಿರ್ದೇಶನದ ಮೈಲಾರಿ ಸಿನಿಮಾ 2010ರಲ್ಲಿ ಬಿಡುಗಡೆಯಾಗಿತ್ತು. ಶಿವಣ್ಣ ನಾಯಕ ನಟನಾಗಿರುವ ಮೈಲಾರಿ ಸಿನಿಮಾ ಮುಹೂರ್ತವಾಗಿ ಹದಿನಾಲ್ಕು ವರ್ಷ ಕಳೆದ ಬಳಿಕ ಹೊಸ ಸಿನಿಮಾದ ಘೋಷಣೆ ಮಾಡಿದ್ದಾರೆ. "ಕನ್ನಡದ ಸೂಪರ್ ಹಿಟ್ ಚಿತ್ರ ಮೈಲಾರಿ ಮುಹೂರ್ತಕ್ಕೆ 14 ವರ್ಷಗಳು ತುಂಬಿದ ಈ ಶುಭ ಸಂದರ್ಭದಲ್ಲಿ, ಕರುನಾಡ ಚಕ್ರವರ್ತಿ ಡಾ. ಶಿವರಾಜ್ ಕುಮಾರ್ ರವರಿಗೆ ಹೊಸ ಚಿತ್ರ ಆರಂಭಿಸುತ್ತಿರುವುದು ಮತ್ತಷ್ಟು ಖುಷಿ ತಂದಿದೆ. ತಮ್ಮೆಲ್ಲರ ಆಶೀರ್ವಾದ ಇರಲಿ. ಧನ್ಯವಾದಗಳು. ಆರ್ ಸಿ ಸ್ಟುಡಿಯೋಸ್" ಎಂದು ಅವರು ಟ್ವೀಟ್‌ ಮಾಡಿದ್ದಾರೆ.

mysore-dasara_Entry_Point