ಯುವ ರಾಜ್‌ಕುಮಾರ್ ಶ್ರೀದೇವಿ ಭೈರಪ್ಪ ಡಿವೋರ್ಸ್; ವಿವಾಹ ವಿಚ್ಛೇದನ ಕೋರಿ ಕೋರ್ಟ್ ಮೆಟ್ಟಿಲೇರಿದ ಅಣ್ಣಾವ್ರ ಮೊಮ್ಮಗ
Yuva Rajkumar and wife Sridevi Byrappa divorce: ಕನ್ನಡ ನಟ ಯುವ ರಾಜ್‌ಕುಮಾರ್ ಮತ್ತು ಶ್ರೀದೇವಿ ಭೈರಪ್ಪ ವಿವಾಹ ವಿಚ್ಛೇದನಕ್ಕೆ ಮುಂದಾಗಿದ್ದಾರೆ ಎಂಬ ಸುದ್ದಿ ಬಂದಿದೆ. ಇವರಿಬ್ಬರು ಡಿವೋರ್ಸ್‌ಗೆ ಕೋರ್ಟ್ ಮೆಟ್ಟಿಲೇರಿದ್ದಾರೆ. ಇತ್ತೀಚೆಗೆ ಚಂದನ್ ಶೆಟ್ಟಿ ಮತ್ತು ನಿವೇದಿತಾ ಗೌಡ ಡಿವೋರ್ಸ್‌ನಿಂದ ಸ್ಯಾಂಡಲ್‌ವುಡ್‌ಗೆ ಆಘಾತ ನೀಡಿದ್ದರು.
ಬೆಂಗಳೂರು: ಕನ್ನಡ ನಟ ಯುವ ರಾಜ್‌ಕುಮಾರ್ ಮತ್ತು ಶ್ರೀದೇವಿ ಭೈರಪ್ಪ ವಿವಾಹ ವಿಚ್ಛೇದನಕ್ಕೆ ಮುಂದಾಗಿದ್ದಾರೆ ಎಂಬ ಸುದ್ದಿ ಬಂದಿದೆ. ಇವರಿಬ್ಬರು ಡಿವೋರ್ಸ್‌ಗೆ ಕೋರ್ಟ್ ಮೆಟ್ಟಿಲೇರಿದ್ದಾರೆ. ಇತ್ತೀಚೆಗೆ ಚಂದನ್ ಶೆಟ್ಟಿ ಮತ್ತು ನಿವೇದಿತಾ ಗೌಡ ಡಿವೋರ್ಸ್‌ನಿಂದ ಸ್ಯಾಂಡಲ್‌ವುಡ್‌ಗೆ ಆಘಾತ ನೀಡಿದ್ದರು. ಇದೀಗ ಯುವ ಸಿನಿಮಾದ ನಟ ಯುವ ರಾಜ್‌ಕುಮಾರ್ ದಂಪತಿಯೂ ಡಿವೋರ್ಸ್‌ಗೆ ಮುಂದಾಗಿರುವುದು ಅಚ್ಚರಿಗೆ ಕಾರಣವಾಗಿದೆ.
ದಿವಂಗತ ಡಾ. ರಾಜ್‌ಕುಮಾರ್ ಅವರ ಮೊಮ್ಮಗ ಮತ್ತು ನಟ ರಾಘವೇಂದ್ರ ರಾಜ್‌ಕುಮಾರ್ ಅವರ ಮಗ ಯುವ ರಾಜ್‌ಕುಮಾರ್ ತನ್ನ ಪತ್ನಿ ಶ್ರೀದೇವಿ ಬೈರಪ್ಪರಿಂದ ದೂರವಾಗಲು ಬಯಸಿದ್ದಾರೆ. ಇತ್ತೀಚಿನ ವರ್ಷಗಳಲ್ಲಿ ಇವರಿಬ್ಬರ ನಡುವಿನ ಸಂಬಂಧ ಉತ್ತಮವಾಗಿರಲಿಲ್ಲ. ಇದೇ ಕಾರಣಕ್ಕೆ ಇಬ್ಬರೂ ದೂರವಾಗಲು ಬಯಸಿದ್ದಾರೆ ಎಂದು ವರದಿಗಳು ತಿಳಿಸಿವೆ. ಮೇ 26, 2019ರಂದು ಯುವ ರಾಜ್‌ಕುಮಾರ್ ಮತ್ತು ಶ್ರೀದೇವಿ ಭೈರಪ್ಪ ವಿವಾಹವಾಗಿದ್ದರು. ಬೆಂಗಳೂರಿನ ಅರಮನೆ ಮೈದಾನದಲ್ಲಿ ಶ್ರೀದೇವಿ- ಯುವ ರಾಜ್‌ಕುಮಾರ್ ವಿವಾಹ ಅದ್ಧೂರಿಯಾಗಿ ನಡೆದಿತ್ತು. ಇವರಿಬ್ಬರದ್ದು ಲವ್ ಮ್ಯಾರೇಜ್ ಆಗಿತ್ತು.
ದಂಪತಿ ನಡುವೆ ಇತ್ತೀಚಿನ ದಿನಗಳಲ್ಲಿ ಸಂಬಂಧ ಹದಗೆಟ್ಟಿತ್ತು. ಎರಡು ಕಡೆಯ ಕುಟುಂಬದವರೂ ಸಮಸ್ಯೆಗಳನ್ನು ಸರಿಪಡಿಸಲು ಯತ್ನಿಸಿದ್ದರು. ಆದರೆ, ಇದರಿಂದ ಪ್ರಯೋಜನವಾಗಿಲ್ಲ. ವರದಿಗಳ ಪ್ರಕಾರ ಯುವ ರಾಜ್‌ಕುಮಾರ್ ವಿವಾಹ ವಿಚ್ಚೇದನಕ್ಕೆ ಅರ್ಜಿ ಸಲ್ಲಿಸಿದ್ದಾರೆ. ವಿವಾಹ ವಿಚ್ಚೇದನದ ಕುರಿತು ಶ್ರೀದೇವಿ ಭೈರಪ್ಪ ನಿರ್ಧಾರ ತಿಳಿದಿಲ್ಲ. ಯುವ ಸಿನಿಮಾದ ಮುಹೂರ್ತ ಸಮಯದಲ್ಲಿ ಯುವ ರಾಜ್‌ಕುಮಾರ್ ಮತ್ತು ಶ್ರೀದೇವಿ ಭೈರಪ್ಪ ಜತೆಯಾಗಿ ಕಾಣಿಸಿಕೊಂಡಿದ್ದರು. ಆದರೆ, ಯುವ ಸಿನಿಮಾದ ಬಿಡುಗಡೆ ಕಾರ್ಯಕ್ರಮದಲ್ಲಿ ಶ್ರೀದೇವಿ ಹಾಜರಿರಲಿಲ್ಲ. ಇತ್ತೀಚೆಗೆ ಇವರಿಬ್ಬರು ಎಲ್ಲೂ ಜತೆಯಾಗಿ ಕಾಣಿಸಿಕೊಂಡಿರಲಿಲ್ಲ.
ಯುವ ರಾಜ್‌ಕುಮಾರ್ ಮತ್ತು ಶ್ರೀದೇವಿ ಭೈರಪ್ಪ ಅವರದ್ದು ಪ್ರೇಮವಿವಾಹವಾಗಿತ್ತು. ಆರಂಭದಲ್ಲಿ ರಾಘವೇಂದ್ರ ದಂಪತಿ ಈ ವಿವಾಹಕ್ಕೆ ಒಪ್ಪಿರಲಿಲ್ಲ. ಆದರೆ, ಇವರ ಲವ್‌ಗೆ ಪುನೀತ್ ರಾಜ್‌ಕುಮಾರ್ ಬೆಂಬಲ ನೀಡಿದ್ದರು. ಬಳಿಕ ರಾಘವೇಂದ್ರ ರಾಜ್‌ಕುಮಾರ್ ಕುಟುಂಬ ಮದುವೆಗೆ ಒಪ್ಪಿತ್ತು.