ಲಾಪತಾ ಲೇಡೀಸ್‌ ಬರಹಗಾರನೊಂದಿಗೆ ಸ್ಯಾಂಡಲ್‌ವುಡ್‌ ನಿರ್ದೇಶಕ ಗುರುರಾಜ್‌ ಕುಲಕರ್ಣಿ ಹೊಸ ಚಿತ್ರ: ಇದು ಪ್ಯಾನ್‌ ಇಂಡಿಯಾ ಸಿನಿಮಾ
ಕನ್ನಡ ಸುದ್ದಿ  /  ಮನರಂಜನೆ  /  ಲಾಪತಾ ಲೇಡೀಸ್‌ ಬರಹಗಾರನೊಂದಿಗೆ ಸ್ಯಾಂಡಲ್‌ವುಡ್‌ ನಿರ್ದೇಶಕ ಗುರುರಾಜ್‌ ಕುಲಕರ್ಣಿ ಹೊಸ ಚಿತ್ರ: ಇದು ಪ್ಯಾನ್‌ ಇಂಡಿಯಾ ಸಿನಿಮಾ

ಲಾಪತಾ ಲೇಡೀಸ್‌ ಬರಹಗಾರನೊಂದಿಗೆ ಸ್ಯಾಂಡಲ್‌ವುಡ್‌ ನಿರ್ದೇಶಕ ಗುರುರಾಜ್‌ ಕುಲಕರ್ಣಿ ಹೊಸ ಚಿತ್ರ: ಇದು ಪ್ಯಾನ್‌ ಇಂಡಿಯಾ ಸಿನಿಮಾ

ಕನ್ನಡದಲ್ಲಿ ಅಮೃತ್ ಅಪಾರ್ಟ್‌ಮೆಂಟ್‌ , ದ ಜಡ್ಜ್ ಮೆಂಟ್ ಸಿನಿಮಾಗಳನ್ನು ನಿರ್ದೇಶಿಸಿರುವ ಗುರುರಾಜ್‌ ಕುಲಕರ್ಣಿ ನಾಡಗೌಡ್‌ ಈಗ ಪ್ಯಾನ್‌ ಇಂಡಿಯಾ ಮಟ್ಟದಲ್ಲಿ ಹೊಸ ಸಿನಿಮಾ ಮಾಡುತ್ತಿದ್ದಾರೆ. ಈ ಚಿತ್ರದ ಮೂಲಕ ಲಾಪತಾ ಲೇಡಿಸ್‌ ಬರಹಗಾರ ಸೋನು ಆನಂದ್‌ನಲ್ಲಿ ಕನ್ನಡಕ್ಕೆ ಕರೆ ಕರುತ್ತಿದ್ದಾರೆ. ದೀಪಾವಳಿ ವೇಳೆಗೆ ಸಿನಿಮಾ ಸೆಟ್ಟೇರಲಿದೆ.

ಲಾಪತಾ ಲೇಡೀಸ್‌ ಬರಹಗಾರನೊಂದಿಗೆ ಸ್ಯಾಂಡಲ್‌ವುಡ್‌ ನಿರ್ದೇಶಕ ಗುರುರಾಜ್‌ ಕುಲಕರ್ಣಿ ಹೊಸ ಚಿತ್ರ: ಇದು ಪ್ಯಾನ್‌ ಇಂಡಿಯಾ ಸಿನಿಮಾ
ಲಾಪತಾ ಲೇಡೀಸ್‌ ಬರಹಗಾರನೊಂದಿಗೆ ಸ್ಯಾಂಡಲ್‌ವುಡ್‌ ನಿರ್ದೇಶಕ ಗುರುರಾಜ್‌ ಕುಲಕರ್ಣಿ ಹೊಸ ಚಿತ್ರ: ಇದು ಪ್ಯಾನ್‌ ಇಂಡಿಯಾ ಸಿನಿಮಾ

ಆಮೀರ್‌ ಖಾನ್‌ ಪತ್ನಿ ಕಿರಣ್‌ ರಾವ್‌ ನಿರ್ದೇಶನದ ಲಾಪತಾ ಲೇಡಿಸ್‌ ಸಿನಿಮಾ ಆಸ್ಕರ್‌ ರೇಸ್‌ಗೆ ಎಂಟ್ರಿ ಕೊಟ್ಟಿದೆ. ಇತ್ತೀಚೆಗೆ ಚಿತ್ರತಂಡ ಈ ವಿಚಾರವನ್ನು ಹಂಚಿಕೊಂಡಿತ್ತು. ನಟ ಆಮೀರ್‌ ಖಾನ್‌ ಈ ಚಿತ್ರವನ್ನು ನಿರ್ಮಾಣ ಮಾಡಿದ್ದರು. ಈ ಚಿತ್ರದ ಸಂಭಾಷಣೆಕಾರ ಸೋನು ಆನಂದ್‌ ಈಗ ಕನ್ನಡ ಚಿತ್ರರಂಗಕ್ಕೂ ಎಂಟ್ರಿ ಕೊಟ್ಟಿದ್ದಾರೆ.

ದ ಜಡ್ಜ್‌ಮೆಂಟ್‌ ಸಿನಿಮಾ ನಿರ್ದೇಶಕ ಗುರುರಾಜ ಕುಲಕರ್ಣಿ

ಕನ್ನಡದಲ್ಲಿ ಅಮೃತ್ ಅಪಾರ್ಟ್‌ಮೆಂಟ್‌ , ದ ಜಡ್ಜ್ ಮೆಂಟ್ ಸಿನಿಮಾಗಳನ್ನು ನಿರ್ದೇಶಿಸಿರುವ ನಿರ್ಮಾಪಕ/ನಿರ್ದೇಶಕ ಗುರುರಾಜ ಕುಲಕರ್ಣಿ ನಾಡಗೌಡ್‌ ಹೊಸ ಸಿನಿಮಾಗೆ ತಯಾರಿ ನಡೆಸಿದ್ದಾರೆ. ಏಕ ಕಾಲಕ್ಕೆ ಬಹು ಭಾಷೆಗಳಲ್ಲಿ ನಿರ್ಮಾಣವಾಗುತ್ತಿರುವ ಈ ಸಿನಿಮಾದ ಪ್ರೀ ಪ್ರೊಡಕ್ಷನ್‌ ಕೆಲಸಗಳು ಮುಗಿದಿವೆ. ಇದೀಗ ಈ ಚಿತ್ರಕ್ಕೆ ಲಾಪತಾ ಲೇಡಿಸ್‌ ಖ್ಯಾತಿಯ ಸೋನು ಆನಂದ್ ಬರಹಗಾರರಾಗಿ ಎಂಟ್ರಿಯಾಗಿದ್ದಾರೆ.

ಇನ್ನೂ ಹೆಸರಿಡದ ಸಿನಿಮಾದ ಬಗ್ಗೆ ಮಾತನಾಡಿದ ಗುರುರಾಜ ಕುಲಕರ್ಣಿ ನಾನು ಕೆಲವು ಸಿನಿಮಾಗಳನ್ನು ನಿರ್ಮಿಸಿ, 2 ಚಿತ್ರಗಳನ್ನು ನಿರ್ದೇಶಿಸಿದ್ದೇನೆ. ಮುಂದೆ ಯಾವ ರೀತಿಯ ಚಿತ್ರಗಳನ್ನು ಮಾಡಬೇಕು ಎಂಬುದನ್ನು ತಿಳಿಯಲು ಆಡಿಯನ್ಸ್ ಸರ್ವೇ ಮಾಡಿದ್ದೆ. ಈ ಹಿಂದೆ ನಾನು ನಿರ್ದೇಶಿಸಿದ್ದ ಜಡ್ಜ್‌ಮೆಂಟ್‌ ಚಿತ್ರಕ್ಕೆ ಒಳ್ಳೆ ಪ್ರತಿಕ್ರಿಯೆ ದೊರೆತಿತ್ತು. ಆ ಚಿತ್ರದ ಬಳಿಕ ಆನ್‌ಲೈನ್ ಮತ್ತು ಆಫ್ ಲೈನ್ ಮೂಲಕ ನಡೆದ ಈ ಸರ್ವೆಯಲ್ಲಿ ಸುಮಾರು 65% ಕ್ಕೂ ಅಧಿಕ ಸಂಖ್ಯೆಯ ಜನರು ತಮಗೆ ಸಸ್ಪೆನ್ಸ್ ಕಂ ಕ್ರೈಂ-ಥ್ರಿಲ್ಲರ್‌ ಶೈಲಿಯ ಸಿನಿಮಾಗಳು ಇಷ್ಟವಾಗಿದ್ದು, ಅಂಥದ್ದೇ ಸಿನಿಮಾಗಳನ್ನು ಮಾಡುವಂತೆ ಅಭಿಪ್ರಾಯ ಹಂಚಿಕೊಂಡಿರುತ್ತಾರೆ. ಆದ್ದರಿಂದ ಪ್ರೇಕ್ಷಕರ ಆಸಕ್ತಿಯಂತೆ ಸಸ್ಪೆನ್ಸ್ ಕಂ ಕ್ರೈಂ-ಥ್ರಿಲ್ಲರ್‌ ಶೈಲಿಯಲ್ಲೇ ಸಿನಿಮಾ ಮಾಡಲು ಮುಂದಾಗಿದ್ದೇನೆ. ಇದು ಥ್ರಿಲ್ಲರ್‌ನೊಂದಿಗೆ ಭಾವನಾತ್ಮಕ ಕಥಾ ಹಂದರವುಳ್ಳ ಚಿತ್ರ ಎಂದರು.

ಪ್ಯಾನ್‌ ಇಂಡಿಯಾ ಮಟ್ಟದಲ್ಲಿ ತಯಾರಾಗುತ್ತಿರುವ ಸಿನಿಮಾ

ಗುರುರಾಜ್‌ ಕುಲಕರ್ಣಿ ಈ ಚಿತ್ರವನ್ನು ಪ್ಯಾನ್ ಇಂಡಿಯಾ ಮಟ್ಟದಲ್ಲಿ ತಯಾರಿಸಲು ಪ್ಲ್ಯಾನ್‌ ಮಾಡುತ್ತಿದ್ದಾರೆ. ವಿವಿಧ ಭಾಷೆಗಳ ಪ್ರತಿಭಾವಂತರೊಂದಿಗೆ ಆ ನೆಲಕ್ಕೆ ತಕ್ಕಂತೆ ಚಿತ್ರ ಮಾಡಲು ಎದುರು ನೋಡುತ್ತಿದ್ದಾರೆ. ಅವರೇ ಕಥೆ, ಚಿತ್ರಕಥೆ ಬರೆದಿದ್ದಾರೆ. ಕಿರಣ್ ರಾವ್ ನಿರ್ದೇಶನದ ಲಾಪತಾ ಲೇಡೀಸ್ ಸಂಭಾಷಣೆಗಾರ ಸೋನು ಆನಂದ್ ಸೇರಿದಂತೆ ವೈವಿಧ್ಯಮಯ ಬರಹಗಾರರ ತಂಡವನ್ನು ಅವರು ಒಟ್ಟುಗೂಡಿಸಿದ್ದಾರೆ. 'ಲಾಪತಾ ಲೇಡೀಸ್' ಮುಂದಿನ ವರ್ಷದ ಆರಂಭದಲ್ಲಿ ನಡೆಯಲಿರುವ 97 ನೇ ಅಕಾಡೆಮಿ ಪ್ರಶಸ್ತಿಗೆ ಆಯ್ಕೆಯಾಗಿದೆ. ಇದು ಭಾರತದಿಂದ ಆಯ್ಕೆಯಾಗಿರುವ ಏಕೈಕ ಸಿನಿಮಾ.

ನನಗೆ ಕಾಮನ್‌ ಫ್ರೆಂಡ್‌ ಮೂಲಕ ಸೋನು ಪರಿಚಯವಾಯಿತು. ಸದ್ಯ ಚಿತ್ರಕಥೆ ಬರೆಯಲಾಗುತ್ತಿದೆ. ಹಿಂದಿ, ಮರಾಠಿ ಮತ್ತು ಭೋಜ್‌ಪುರಿಯಲ್ಲಿ ಸೋನು ಹೆಚ್ಚಿನ ಪರಿಣಿತಿ ಹೊಂದಿದ್ದಾರೆ. ಸೋನು ಆನಂದ್ ಸಂಭಾಷಣೆಗಳ ಮೇಲೆ ಕೇಂದ್ರೀಕರಿಸುತ್ತಿದ್ದಾರೆ. ಅಲ್ಲದೆ ಅನುಭವಿ ಬರಹಗಾರರೊಂದಿಗೆ ಸಮರ್ಥವಾಗಿ ಸಹಕರಿಸುತ್ತಾರೆ ಎಂದು ಗುರುರಾಜ್ ಕುಲಕರ್ಣಿ ಹೇಳಿದ್ದಾರೆ.

ದೀಪಾವಳಿ ವೇಳೆಗೆ ಮುಹೂರ್ತ

ಗುರು ರಾಜ್‌ ನೀಡಿರುವ ಮಾಹಿತಿ ಪ್ರಕಾರ ಇದೇ ದೀಪಾವಳಿ ಹಬ್ಬದ ವೇಳೆಗೆ ಈ ಸಿನಿಮಾ ಮುಹೂರ್ತ ನಡೆಯಲಿದೆ. ತಮ್ಮ G9 ಕಮ್ಯುನಿಕೇಷನ್ ಮೀಡಿಯಾ ಮತ್ತು ಎಂಟರ್‌ಟೈನ್‌ಮೆಂಟ್ ಬ್ಯಾನರ್‌ ಮೂಲಕ ಗುರುರಾಜ್ ಅವರೇ ಸಿನಿಮಾ ನಿರ್ಮಿಸುತ್ತಿದ್ದಾರೆ. ಕನ್ನಡದ ಜೊತೆಗೆ ಹಿಂದಿ, ತಮಿಳು, ತೆಲುಗು ಮತ್ತು ಮಲಯಾಳಂ ಭಾಷೆಗಳಲ್ಲೂ ಏಕಕಾಲಕ್ಕೆ ಸಿನಿಮಾ ನಿರ್ಮಾಣವಾಗುತ್ತಿದ್ದು, ಭಾರತೀಯ ಚಿತ್ರರಂಗದ ಬೇರೆ ಬೇರೆ ಭಾಷೆಯ ಹಲವು ಕಲಾವಿದರು ಸಿನಿಮಾದಲ್ಲಿ ನಟಿಸಲಿದ್ದಾರೆ. ಶೀಘ್ರದಲ್ಲೇ ಸಿನಿಮಾ ಬಗ್ಗೆ ಇನ್ನಷ್ಟು ಮಾಹಿತಿ ನೀಡುವುದಾಗಿ ಗುರುರಾಜ್ ಹೇಳಿದ್ದಾರೆ.

Whats_app_banner