Kaiva Teaser: ಬೆಂಗಳೂರು ಕರಗದಲ್ಲಿ ಹುಟ್ಟಿದ ಪ್ರೇಮಕಥೆ; ಧನ್ವಿರ್‌ ನಟನೆಯ ಕೈವ ಚಿತ್ರದ ಟೀಸರ್‌ ಇಲ್ಲಿದೆ ನೋಡಿ
ಕನ್ನಡ ಸುದ್ದಿ  /  ಮನರಂಜನೆ  /  Kaiva Teaser: ಬೆಂಗಳೂರು ಕರಗದಲ್ಲಿ ಹುಟ್ಟಿದ ಪ್ರೇಮಕಥೆ; ಧನ್ವಿರ್‌ ನಟನೆಯ ಕೈವ ಚಿತ್ರದ ಟೀಸರ್‌ ಇಲ್ಲಿದೆ ನೋಡಿ

Kaiva Teaser: ಬೆಂಗಳೂರು ಕರಗದಲ್ಲಿ ಹುಟ್ಟಿದ ಪ್ರೇಮಕಥೆ; ಧನ್ವಿರ್‌ ನಟನೆಯ ಕೈವ ಚಿತ್ರದ ಟೀಸರ್‌ ಇಲ್ಲಿದೆ ನೋಡಿ

Kaiva Teaser: ಬೆಂಗಳೂರು ಕರಗದಲ್ಲಿ ಹುಟ್ಟಿದ ಪ್ರೇಮಕಥೆಯೊಂದನ್ನು ಕಥಾವಸ್ತುವಾಗಿರಿಸಿಕೊಂಡು ಕೈವಾ ಚಿತ್ರವನ್ನು ನಿರ್ಮಿಸಲಾಗುತ್ತಿದ್ದು, ಇದೀಗ ಕೈವಾ ಸಿನಿಮಾದ ಟೀಸರ್‌ ಬಿಡುಗಡೆಯಾಗಿದೆ. ಬನ್ನಿ ಕೈವಾ ಟೀಸರ್‌ ಹೇಗಿದೆ ನೋಡೋಣ.

Kaiva Teaser:  ಕರಗದಲ್ಲಿ ಹುಟ್ಟಿದ ಪ್ರೇಮಕಥೆ; ಧನ್ವಿರ್‌ ನಟನೆಯ ಕೈವ ಚಿತ್ರದ ಟೀಸರ್‌
Kaiva Teaser: ಕರಗದಲ್ಲಿ ಹುಟ್ಟಿದ ಪ್ರೇಮಕಥೆ; ಧನ್ವಿರ್‌ ನಟನೆಯ ಕೈವ ಚಿತ್ರದ ಟೀಸರ್‌

ಬೆಂಗಳೂರು: ಬೆಂಗಳೂರಿನ ತಿಗಳಪೇಟೆಯಲ್ಲಿ ನಡೆದ ನೈಜಘಟನೆ ಆಧರಿಸಿದ ಚಿತ್ರ ಕೈವಾದ ಟೀಸರ್‌ ಬಿಡುಗಡೆಯಾಗಿದೆ. ಈ ಚಿತ್ರವು ಡಿಸೆಂಬರ್‌ ತಿಂಗಳಲ್ಲಿ ಚಿತ್ರಮಂದಿರಗಳಲ್ಲಿ ಬಿಡುಗಡೆಯಾಗಿದೆ. ಒಳ್ಳೆ ಖಡಕ್‌ ಕತ್ತಿಯಂತೆ ಫೈಟಿಂಗ್‌ ಮಾಡುವ ದೃಶ್ಯಗಳ ಜತೆಗೆ ಪ್ರೇಮಕಥೆಯ ಎಳೆಯೂ ಟೀಸರ್‌ನಲ್ಲಿ ಕಾಣಿಸುತ್ತಿದೆ.

ರವೀಂದ್ರಕುಮಾರ್ ನಿರ್ಮಾಣದ, ಜಯತೀರ್ಥ ನಿರ್ದೇಶನದ ಹಾಗೂ ಧನ್ವೀರ್ ನಾಯಕರಾಗಿ ನಟಿಸಿರುವ " ಕೈವ" ಚಿತ್ರದ ಆಕ್ಷನ್ ಟೀಸರ್ ದೀಪಾವಳಿ ಹಬ್ಬದ ಶುಭ ಸಂದರ್ಭದಲ್ಲಿ ಬಿಡುಗಡೆಯಾಗಿದೆ. ಅಭಿಷೇಕ್ ಅಂಬರೀಶ್ ಹಾಗೂ ದಿನಕರ್ ತೂಗುದೀಪ ಈ ಚಿತ್ರದ ಆಕ್ಷನ್ ಟೀಸರ್ ಬಿಡುಗಡೆ ಮಾಡಿ ಶುಭ ಕೋರಿದರು. ನಿರ್ದೇಶಕ "ಮದಗಜ" ಮಹೇಶ್ ಕುಮಾರ್ ಮುಖ್ಯ ಅತಿಥಿಗಳಾಗಿ ಆಗಮಿಸಿದ್ದರು.

ಬೆಂಗಳೂರು ಕರಗದಲ್ಲಿ ಹುಟ್ಟಿದ ಪ್ರೇಮಕಥೆ

"ಕೈವ" ಇದು ಒಬ್ಬ ವ್ಯಕ್ತಿಯ ಹೆಸರು. 1983 ರಲ್ಲಿ ಬೆಂಗಳೂರಿನ ತಿಗಳಪೇಟೆಯಲ್ಲಿ ನಡೆದ ನೈಜಘಟನೆ ಆಧರಿಸಿದ ಚಿತ್ರ. ಬೆಂಗಳೂರು ಕರಗದಲ್ಲಿ ಹುಟ್ಟಿದ ಪ್ರೇಮಕಥೆಯೇ ಚಿತ್ರದ ಪ್ರಮುಖ ಕಥಾವಸ್ತು. ನನಗೆ ಮಾರ್ಚುರಿಯಲ್ಲಿ ಕೆಲಸ ಮಾಡುವವರಿಂದ ಈ ಕಥೆ ಸಿಕ್ಕಿತು. ಆನಂತರ ತಿಗಳರಪೇಟೆಗೆ ಹೋಗಿ ಅಲ್ಲಿ ಈ ಘಟನೆ ಬಗ್ಗೆ ಕುಲಂಕುಶವಾಗಿ ತಿಳಿದುಕೊಂಡೆ. ಈ ಘಟನೆ ಕಂಡಿದ್ದ ಅನೇಕರು ಈಗಲೂ ಇದ್ದಾರೆ. ಇದೇ ಇಸವಿಯಲ್ಲಿ ನಡೆದ ಗಂಗಾರಾಮ್ ಕಟ್ಡಡದ ದುರಂತಕ್ಕು ಹಾಗೂ ಈ ಚಿತ್ರದ ಕಥೆಗೂ ಸಂಬಂಧವಿದೆ. ಚಿತ್ರದ ನಾಯಕನಾಗಿ ಧನ್ವೀರ್ ಅಭಿನಯಿಸಿದ್ದಾರೆ. ನಾಯಕಿಯಾಗಿ ಮೇಘ ಶೆಟ್ಟಿ ನಟಿಸಿದ್ದಾರೆ. ದಿನಕರ್ ತೂಗುದೀಪ್ ಪ್ರಮುಖಪಾತ್ರದಲ್ಲಿ ಕಾಣಿಸಿಕೊಂಡಿದ್ದಾರೆ. ದಿನಕರ್ ತೂಗುದೀಪ, ರಾಘು ಶಿವಮೊಗ್ಗ ಸೇರಿದಂತೆ ಐದು ಜನ ನಿರ್ದೇಶಕರು ಈ ಚಿತ್ರದಲ್ಲಿ ನಟಿಸಿದ್ದಾರೆ. ಅಜನೀಶ್ ಲೋಕನಾಥ್ ಸಂಗೀತ ನೀಡಿದ್ದಾರೆ. ಶ್ವೇತಪ್ರಿಯ ಛಾಯಾಗ್ರಹಣ ಮಾಡಿದ್ದಾರೆ. ಮೈಸೂರಿನಲ್ಲಿ ನಲವತ್ತೆಂಟು ದಿನಗಳ ಚಿತ್ರೀಕರಣ ನಡೆದಿದೆ. ಕೆಲವು ಭಾಗಗಳನ್ನು ಬೆಂಗಳೂರಿನ ತಿಗಳರಪೇಟೆಯಲ್ಲಿ ಚಿತ್ರೀಕರಿಸಲಾಗಿದೆ. ಡಿಸೆಂಬರ್ ನಲ್ಲಿ ಚಿತ್ರ ತೆರೆಗೆ ಬರಲಿದೆ ಎಂದು ನಿರ್ದೇಶಕ ಜಯತೀರ್ಥ ತಿಳಿಸಿದ್ದಾರೆ.

ಕೈವ ಚಿತ್ರದ ಟೀಸರ್‌ ಇಲ್ಲಿದೆ ನೋಡಿ

ಧನ್ವೀರ್‌ ನಾಯಕ ನಟನೆಯ ಚಿತ್ರ

"ಕೈವ", ನಾನು ನಾಯಕನಾಗಿ ನಟಿಸಿರುವ ನಾಲ್ಕನೇ ಚಿತ್ರ. ಈ ಕಥೆ ಎಲ್ಲ ಕಡೆ ಸುತ್ತಿ ದ್ರೌಪದಿ ತಾಯಿ ಆಶೀರ್ವಾದದಿಂದ ನನ್ನ ಬಳಿ ಬಂತು. ಜಯತೀರ್ಥ ಅವರು ತುಂಬಾ ಅದ್ಛುತವಾಗಿ ನಿರ್ದೇಶನ ಮಾಡಿದ್ದಾರೆ. ಸಿನಿಮಾ ನೋಡಿದವರು ಚಿತ್ರ ಚೆನ್ನಾಗಿದೆ ಎನ್ನುತ್ತಿದ್ದಾರೆ. ನಿಮ್ಮ ಪ್ರೋತ್ಸಾಹವಿರಲಿ" ಎಂದು ನಾಯಕ ಧನ್ವೀರ್ ಹೇಳಿದರು.

ಕೈವ ಚಿತ್ರದ ನಾಯಕಿ ಮೇಘಾ ಶೆಟ್ಟಿ

ಧನ್ವಿರ್‌ ಜತೆ ನಾಯಕಿಯಾಗಿ ಮೇಘಾ ಶೆಟ್ಟಿ ನಟಿಸಿದ್ದಾರೆ. ನಾಯಕಿ ಮೇಘ ಶೆಟ್ಟಿ ತಮ್ಮ ಪಾತ್ರದ ಕುರಿತು ಮಾಹಿತಿ ನೀಡಿದರು. ನಟ ರಾಘು ಶಿವಮೊಗ್ಗ, ಸಂಭಾಷಣೆಕಾರ ರಘು ನಿಡವಳ್ಳಿ ಹಾಗೂ ಕಾರ್ಯಕಾರಿ ನಿರ್ಮಾಪಕರಾದ ಬಾಲಕೃಷ್ಣ ಹಾಗೂ ಕೃಷ್ಣ ಅವರು "ಕೈವ" ಚಿತ್ರದ ಕುರಿತು ಮಾತನಾಡಿದರು.

"ನನಗೆ ಸಂಭಾಷಣೆಕಾರ ರಘು ನಿಡವಳ್ಳಿ, ನಿರ್ದೇಶಕ ಜಯತೀರ್ಥ ಅವರು ಭೇಟಿಯಾಗಬೇಕಂತೆ ಅಂದರು. ಆಗ ಜಯತೀರ್ಥ ಅವರು ಈ ಪಾತ್ರದ ಬಗ್ಗೆ ಹೇಳಿದರು. ನನ್ನ ಪಾತ್ರ ನೋಡಿದವರು ನಮ್ಮ ತಂದೆ ತೂಗುದೀಪ ಶ್ರೀನಿವಾಸ್ ಅವರ ಹಾಗೆ ಕಾಣುತ್ತಿರಾ ಎನ್ನುತ್ತಿದ್ದಾರೆ. ಅದು ನಮ್ಮ ತಂದೆಯವರ ಆಶೀರ್ವಾದ. ನಮ್ಮ ಅಮ್ಮ ಕೂಡ ನನ್ನ ಪಾತ್ರ ನೋಡಿ ಸಂತೋಷಪಟ್ಟರು" ಎಂದು ದಿನಕರ್ ತೂಗುದೀಪ್ ಹೇಳಿದ್ದಾರೆ.

Whats_app_banner