Signal Man 1971 ಚಿತ್ರದಲ್ಲಿ ಮೊದಲನೇ ಮಹಾಯುದ್ಧ, ಭಾರತ- ಬಾಂಗ್ಲಾ ಕದನದ ರೋಚಕ; ರಾಜವಂಶಸ್ಥರಿಂದ ಮೊದಲ ಹಾಡು ಬಿಡುಗಡೆ-sandalwood news kannada movie signal man 1971 first single released by yaduveer krishnadatta chamaraja wadiyar mnk ,ಮನರಂಜನೆ ಸುದ್ದಿ
ಕನ್ನಡ ಸುದ್ದಿ  /  ಮನರಂಜನೆ  /  Signal Man 1971 ಚಿತ್ರದಲ್ಲಿ ಮೊದಲನೇ ಮಹಾಯುದ್ಧ, ಭಾರತ- ಬಾಂಗ್ಲಾ ಕದನದ ರೋಚಕ; ರಾಜವಂಶಸ್ಥರಿಂದ ಮೊದಲ ಹಾಡು ಬಿಡುಗಡೆ

Signal Man 1971 ಚಿತ್ರದಲ್ಲಿ ಮೊದಲನೇ ಮಹಾಯುದ್ಧ, ಭಾರತ- ಬಾಂಗ್ಲಾ ಕದನದ ರೋಚಕ; ರಾಜವಂಶಸ್ಥರಿಂದ ಮೊದಲ ಹಾಡು ಬಿಡುಗಡೆ

ʻಸಿಗ್ನಲ್‌ ಮ್ಯಾನ್‌ 1971ʼ ಚಿತ್ರ ಭಾರತ-ಬಾಂಗ್ಲಾ ನಡುವಿನ ಯುದ್ಧದ ಸಂದರ್ಭದಲ್ಲಿ ನಡೆಯುವ ಒಂದು ಕಥಾ ಭಾಗವಾಗಿದೆ. ಇದರಲ್ಲಿ ಎರಡೇ ಪ್ರಮುಖ ಪಾತ್ರಗಳಿವೆ. ಇದೀಗ ಇದೇ ಚಿತ್ರದ ಹಾಡು ಮೈಸೂರು ಅರಸ ಮತ್ತು ಸಂಸದ ಯದುವೀರ್‌ ಕೃಷ್ಣದತ್ತ ಚಾಮರಾಜ ಒಡೆಯರ್‌ ಅವರಿಂದ ಬಿಡುಗಡೆ ಆಗಿದೆ.

ಸಿಗ್ನಲ್‌ ಮ್ಯಾನ್‌ 1971 ಚಿತ್ರದ  ಹಾಡು ಮೈಸೂರು ಅರಸ ಮತ್ತು ಸಂಸದ ಯದುವೀರ್‌ ಕೃಷ್ಣದತ್ತ ಚಾಮರಾಜ ಒಡೆಯರ್‌ ಅವರಿಂದ ಬಿಡುಗಡೆ ಆಗಿದೆ.
ಸಿಗ್ನಲ್‌ ಮ್ಯಾನ್‌ 1971 ಚಿತ್ರದ ಹಾಡು ಮೈಸೂರು ಅರಸ ಮತ್ತು ಸಂಸದ ಯದುವೀರ್‌ ಕೃಷ್ಣದತ್ತ ಚಾಮರಾಜ ಒಡೆಯರ್‌ ಅವರಿಂದ ಬಿಡುಗಡೆ ಆಗಿದೆ.

Signal man 1971 Movie: ಇಂದಿನ ಕನ್ನಡ ಚಿತ್ರರಂಗಕ್ಕಿಂತಲೂ ರಂಗಭೂಮಿ ಚೆನ್ನಾಗಿದೆ, ಸುರಕ್ಷಿತವಾಗಿದೆ ಎಂದು ಹಿರಿಯ ನಟ, ಬರಹಗಾರ ಪ್ರಕಾಶ್‌ ಬೆಳವಾಡಿ ಅಭಿಪ್ರಾಯ ಪಟ್ಟರು. ನಗರದ ಖಾಸಗಿ ಹೋಟೆಲಿನಲ್ಲಿ ಆಯೋಜಿಸಿದ್ದ ʻಸಿಗ್ನಲ್‌ ಮ್ಯಾನ್‌ 1971ʼ ಚಿತ್ರದ ಹಾಡಿನ ಬಿಡುಗಡೆ ಕಾರ್ಯಕ್ರಮದಲ್ಲಿ ಭಾಗವಹಿಸಿ ಅಭಿಪ್ರಾಯ ತಿಳಿಸಿದರು. ಕನ್ನಡ ಚಿತ್ರಗಳನ್ನು ನೋಡಲು ಪ್ರೇಕ್ಷಕ ಚಿತ್ರಮಂದಿರಕ್ಕೆ ಬರುತ್ತಿಲ್ಲ. ಆದರೆ ರಂಗಭೂಮಿಯಲ್ಲಿ ಇಂದಿಗೂ ನಮ್ಮ ಕೆಲಸಕ್ಕೆ ಬೇಕಾದ ಬೆಂಬಲ ಸಿಗುತ್ತಿದೆ. ಚಿತ್ರರಂಗದಲ್ಲೂ ಇಂತಹ ವಾತಾವರಣ ಮತ್ತೆ ಬೇಗ ಬರಲಿ ಎಂದು ಆಶಿಸಿದರು.

ʻಸಿಗ್ನಲ್‌ ಮ್ಯಾನ್‌ 1971ʼ ಚಿತ್ರ ಭಾರತ-ಬಾಂಗ್ಲಾ ನಡುವಿನ ಯುದ್ಧದ ಸಂದರ್ಭದಲ್ಲಿ ನಡೆಯುವ ಒಂದು ಕಥಾ ಭಾಗವಾಗಿದೆ. ಇದರಲ್ಲಿ ಎರಡೇ ಪ್ರಮುಖ ಪಾತ್ರಗಳಿವೆ. ಚಿತ್ರವನ್ನು ಸಾಧ್ಯವಾದಷ್ಟು ನೈಜವಾಗಿ ಚಿತ್ರಿಸಲು ಪ್ರಯತ್ನಿಸಿದ್ದೇವೆ. ಚಿತ್ರಮಂದಿರಕ್ಕೆ ಬಂದು ಚಿತ್ರ ನೋಡಿ ಬೆಂಬಲಿಸಿ ಎಂದರು.

ಚಾರ್ಲ್ಸ್‌ ಡಿಕನ್ಸ್‌ ಕಾದಂಬರಿ ಆಧರಿತ ಕಥೆ

ಇದು ಚಾರ್ಲ್ಸ್‌ ಡಿಕನ್ಸ್‌ ಕಾದಂಬರಿ ಆಧಾರಿತ ಕಥೆ. ಮೊದಲನೇ ಮಹಾಯುದ್ಧದ ಸಂದರ್ಭದಲ್ಲಿ ಮೈಸೂರಿನ ಮಹಾರಾಜರು ಯೂರೋಪಿನ ಸೇನೆಗೆ ಬೆಂಬಲ ನೀಡಿ ಕಳುಹಿಸಿದ ಮೈಸೂರು ಲ್ಯಾನ್ಸರ್‌ ತಂಡ ಹೈಫಾ ಬಂದರು ಗೆದ್ದು ಬಂದಿದ್ದರು. ಅದನ್ನು ನೆನಪಿಸುವ ನಮ್ಮ ಸಿನಿಮಾದ ಹಾಡನ್ನು ಇದೀಗ ಮೈಸೂರಿನಲ್ಲಿಯೇ, ರಾಜವಂಶಸ್ಥರಿಂದ ಬಿಡುಗಡೆ ಮಾಡಿಸುವ ಉದ್ದೇಶ ಹೊಂದಿದ್ದೆವು. ಇಂದು ಆ ಉದ್ದೇಶ ಈಡೇರಿದೆ. ಅದನ್ನು ರಾಜವಂಶಸ್ಥರೇ ಬಿಡುಗಡೆ ಮಾಡಿರುವುದು ಮತ್ತಷ್ಟು ಸಂತೋಷ ಎಂದು ಹೇಳಿದರು ನಿರ್ದೇಶಕ ಕೆ.ಶಿವರುದ್ರಯ್ಯ .

ಊಟಿಯ ರೈಲ್ವೆ ಮಾರ್ಗದಲ್ಲಿ ರೈಲ್ವೆ ಸ್ಟೇಷನ್‌ ಸೆಟ್‌ ಹಾಕಿ ಚಿತ್ರೀಕರಣ ಮಾಡಿದ್ದೇವೆ. ಒಂದು ದಿನಕ್ಕೆ ರೈಲು 8 ಬಾರಿ ಈ ಮಾರ್ಗದಲ್ಲಿ ಬರುತ್ತಿತ್ತು. ಪ್ರತೀ ಬಾರಿ ಕ್ಯಾಮೆರಾ, ಲೈಟ್ಸ್‌ಗಳನ್ನು ಟ್ರ್ಯಾಕ್‌ ನಿಂದ ತೆಗೆದು ಪಕ್ಕಕ್ಕೆ ಇಟ್ಟುಕೊಳ್ಳ ಬೇಕಿತ್ತು. ಮಳೆ, ಚಳಿ ಎನ್ನದೆ ಚಿತ್ರೀಕರಣ ಮಾಡಿದ್ದೇವೆ. ಕನ್ನಡ ಪ್ರೇಕ್ಷಕರು ಚಿತ್ರ ನೋಡುವ ಮೂಲಕ ಪ್ರೋತ್ಸಾಹ ನೀಡಿ ಎಂದು ಕೇಳಿಕೊಂಡರು.

ಮೈಸೂರು ಅರಸರಿಂದಲೇ ಹಾಡು ಬಿಡುಗಡೆ

ಮಹಾರಾಜರು ಹಾಗೂ ಸಂಸದ ಯದುವೀರ್‌ ಕೃಷ್ಣದತ್ತ ಚಾಮರಾಜ ಒಡೆಯರ್‌ ಚಿತ್ರದ ಹಾಡನ್ನು ಬಿಡುಗಡೆ ಮಾಡಿ, ಶತಮಾನದ ಹಿಂದೆ ಮೈಸೂರು ಸಂಸ್ಥಾನದ ಮಹಾರಾಜರು ಮಾಡಿದ ಕಾರ್ಯಗಳನ್ನು ನೆನಪು ಮಾಡಿಕೊಂಡು ಹಾಡಿನ ಮೂಲಕ ತೋರಿಸಿದ್ದು ಸಂತೋಷವಾಗಿದೆ. ನಿಮ್ಮ ಸಿನಿಮಾವನ್ನು ಅರಮನೆಯವರು ನೋಡುತ್ತೇವೆ. ಶುಭವಾಗಲಿ ಎಂದು ಹಾರೈಸಿದರು.

ಡಾ. ಬರಗೂರು ರಾಮಚಂದ್ರಪ್ಪ ಅವರು ಬರೆದ ʻಮೈಸೂರು ನಮ್ಮ ಅರಸರ ಮೈಸೂರು...ʼ ಎಂಬ ಗೀತೆಗೆ ವಿಜಯಪ್ರಕಾಶ್‌ ಹಾಗೂ ಪಲ್ಲವಿ ಹಿನ್ನೆಲೆ ಗಾಯಕರಾಗಿ ಹಾಡಿದ್ದಾರೆ. ಔಸಿಪಚ್ಚನ್ ಸಂಗೀತ ನೀಡಿದ್ದಾರೆ. ಹಿಂದೂಸ್ತಾನ್‌ ಮುಕ್ತ ಮೀಡಿಯಾ ಎಂಟರ್‌ಟೈನರ್‌ ಬ್ಯಾನರ್‌ ಅಡಿಯಲ್ಲಿ ಬಿ.ವಿ. ಗಣೇಶ್‌ ಪ್ರಭು ನಿರ್ಮಾಣ ಮಾಡಿದ್ದಾರೆ. ಈ ಚಿತ್ರದಲ್ಲಿ ರಂಗಭೂಮಿ ನಟ ವೆಂಕಟೇಶ್‌ ಪ್ರಸಾದ್‌, ರಾಜೇಶ್‌ ನಟರಂಗ ಮುಂತಾದವರು ಅಭಿನಯಿಸಿದ್ದಾರೆ.